Breaking News
Home / 2021 / ಜನವರಿ / 02 (page 3)

Daily Archives: ಜನವರಿ 2, 2021

ಭಾರತೀಯ ಸೇನೆಯಲ್ಲಿ ಭಾರೀ ಬದಲಾವಣೆ

ನವದೆಹಲಿ: ಭಾರತೀಯ ಸೇನೆಯ ಉನ್ನತ ಮಟ್ಟದ ಅಧಿಕಾರಿಗಳ ವಲಯದಲ್ಲಿ ಪ್ರಮುಖ ಪುನರ್ರಚನೆಯಾಗಿದೆ. ಹೊಸ ವರ್ಷದ ಆರಂಭ ದಿನವಾದ ನಿನ್ನೆ ನೂತನ ಸೇನಾ ಉಪ ಮುಖ್ಯಸ್ಥ(ಡಿಸಿಒಎಎಸ್)ಅಧಿಕಾರ ವಹಿಸಿಕೊಂಡಿದ್ದಾರೆ. ಕಾರ್ಪ್ಸ್ ಕಮಾಂಡರ್ಸ್, ಆಡಳಿತಾತ್ಮಕ ಮತ್ತು ತರಬೇತಿ ಸಂಸ್ಥೆಗಳಲ್ಲಿ ಪ್ರಮುಖ ಬದಲಾವಣೆಯಾಗಿದೆ. ಜನವರಿ 1, 2021ರಂದು ನೂತನ ಡಿಸಿಒಎಎಸ್ ಆಗಿ ಲೆಫ್ಟಿನೆಂಟ್ ಜನರಲ್ ಶಂತನು ದಯಾಳ್ ಅಧಿಕಾರ ವಹಿಸಿಕೊಂಡಿದ್ದಾರೆ. ತೇಜ್ ಪುರ್ ಮೂಲದ 4 ಕಾರ್ಪ್ಸ್ ನ ಕಾರ್ಪ್ಸ್ ಕಮಾಂಡರ್ ಆಗಿದ್ದರು ಲೆಫ್ಟಿನೆಂಟ್ ಜನರಲ್ ದಯಾಳ್, …

Read More »

ಇಂದಿನಿಂದ ದೇಶಾದ್ಯಂತ ಕೊರೋನಾ ವೈರಸ್ ಲಸಿಕೆ ವಿತರಣೆಗೆ ‘ಡ್ರೈ ರನ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ಸಿಕ್ಕಿದೆ. ಇದರ ಬೆನ್ನಲ್ಲೇ ಶನಿವಾರ ದೇಶಾದ್ಯಂತ ‘ಡ್ರೈ ರನ್‌’ಗೆ ಭಾರತ ಸಜ್ಜುಗೊಂಡಿದೆ. ಉದ್ದೇಶಿತ ಲಸಿಕೆ ನೀಡುವಿಕೆ ಕಾರ್ಯಕ್ರಮವನ್ನು ಎಲೆಕ್ಷನ್‌ ಪ್ರಕ್ರಿಯೆಯಂತೆಯೇ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ‘ಡ್ರೈರನ್‌’ ಇದಕ್ಕೆ ಆರಂಭಿಕ ಹೆಜ್ಜೆಯಾಗಿದೆ ಎಂದು ತಿಳಿಸಿದೆ. ‘ಲಸಿಕೆ ನೀಡುವಿಕೆ ಕಾರ್ಯಕ್ರಮವನ್ನು ಒಂದು ಸೂತ್ರದಲ್ಲಿ ಪರಿಶೀಲಿಸಲು ಡ್ರೈರನ್‌ ಅನುಕೂಲ ಕಲ್ಪಿಸಲಿದೆ. ಚುನಾವಣೆ ಮಾದರಿಯಲ್ಲಿ ಈ ಸಿದ್ಧತೆಗಳನ್ನು ನಡೆಸಿದ್ದೇವೆ. ಅಲ್ಲೂ ಪ್ರತಿ ಸಿಬ್ಬಂದಿಗೆ …

Read More »

ಸಿಎಂ B.S.Y.ಗೆ ಸ್ವತಃ ತಮ್ಮ ಕುರ್ಚಿ ಮೇಲೆ ಅನುಮಾನ – ಡಿಕೆಶಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಇನ್ನೂ ಎರಡು ವರ್ಷ ನಾನೇ ಮುಂದುವರೆಯುವೆ ಎಂದು ಪದೇಪದೆ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳುತ್ತಲೇ ಇದ್ದು, ಈ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಶಾಸಕರೇ ಬೇರೆ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುವ ಸ್ಥಿತಿ ಎದುರಾಗಿದೆ ಎಂದರೆ ಎಲ್ಲೋ ಏನೋ ಎಡವಟ್ಟಾಗಿದ್ದು, ಅಪಾಯ ಎದುರಾಗಿದೆ ಎಂಬ ಅನುಮಾನ ಮೂಡುತ್ತದೆ. ಸಿಎಂ ಆದವರು ನಾನೇ ಇನ್ನೂ ೨ …

Read More »

ಎಲ್ಲೋ ಏನೋ ಎಡವಟ್ಟಾಗಿದೆ, ಅಪಾಯ ಎದುರಾಗಿದೆ. ಸಿಎಂ ಕುರ್ಚಿ ಮೇಲೆ ಅನುಮಾನ ಮೂಡಿದೆ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಇನ್ನೂ ಎರಡು ವರ್ಷ ನಾನೇ ಇರುವೆ ಎಂದು ಪದೇಪದೆ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳುತ್ತಲೇ ಇದ್ದಾರೆ. ಆದರೆ ಈ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅನುಮಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಡಿಕೆಶಿ, ಬಿಜೆಪಿ ಶಾಸಕರೇ ಬೇರೆ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುವ ಸ್ಥಿತಿ ಎದುರಾಗಿದೆ ಎಂದರೆ ಎಲ್ಲೋ ಏನೋ ಎಡವಟ್ಟಾಗಿದೆ, ಅಪಾಯ ಎದುರಾಗಿದೆ ಎಂಬ ಅನುಮಾನ ಮೂಡುತ್ತದೆ …

Read More »

ಬ್ಯಾಡಗಿ ಮೆಣಸಿನಕಾಯಿಯನ್ನು ರಾಜಕೀಯ ದ್ವೇಷದ ಹಿನ್ನೆಲೆ ಜಮೀನಿನಲ್ಲೇ ಕಿಡಿಗೇಡಿಗಳು ನಾಶ ಮಾಡಿದ್ದಾರೆ.

ರಾಯಚೂರು: ಕೊಯ್ಲಿಗೆ ಬಂದಿದ್ದ ಬ್ಯಾಡಗಿ ಮೆಣಸಿನಕಾಯಿಯನ್ನು ರಾಜಕೀಯ ದ್ವೇಷದ ಹಿನ್ನೆಲೆ ಜಮೀನಿನಲ್ಲೇ ಕಿಡಿಗೇಡಿಗಳು ನಾಶ ಮಾಡಿದ್ದಾರೆ. ದೇವದುರ್ಗ ತಾಲೂಕಿನ ಹೊನ್ನಕಾಟಮಳ್ಳಿ ಗ್ರಾಮದಲ್ಲಿ ರೈತ ಕಾಸಿಂಸಾಬ್ ಪಿಲಿಗುಂದ ಎಂಬುವವರು ಎರಡು ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆದಿದ್ದರು. ಮೆಣಸಿನಕಾಯಿಗೆ ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ದರ ಇದೆ. ಲಾಭದ ನಿರೀಕ್ಷೆಯಲ್ಲಿ ರಾತ್ರಿ ಮಲಗಿದ್ದ ರೈತ ಬೆಳಗ್ಗೆ ಎದ್ದೇಳುವಷ್ಟರಲ್ಲಿ ಬೆಳೆ ನೆಲಸಮವಾಗಿತ್ತು! ಇಷ್ಟೆಲ್ಲ ಅವಾಂತರಕ್ಕೆ ಕಾರಣ ಗ್ರಾಪಂ ಚುನಾವಣೆ. ಕಾಸಿಂಸಾಬ್ ಅವರ ಮಾವ ಬಾಬು ಸೈಯದ್ ಖಾನ್ …

Read More »

ಬಿಜೆಪಿ ಮುಖಂಡ ರಾಜು ಚಿಕ್ಕನಗೌಡರ್ ನಿಧನ

ಬೆಳಗಾವಿ: ಜಿಲ್ಲಾ ಬಿಜೆಪಿ ಮುಖಂಡ ರಾಜು ಚಿಕ್ಕನಗೌಡರ್ ಶುಕ್ರವಾರ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಎಬಿವಿಪಿ ನಾಯಕರಾಗಿ ಬಿಜೆಪಿ ಮೂಲಕ ರಾಜಕೀಯ ಪ್ರವೇಶಿಸಿದ್ದ ರಾಜು ಚಿಕ್ಕನಗೌಡರ್, ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರ ಪಾರ್ಥೀವ ಶರೀರವನ್ನು ಶನಿವಾರ ಬೆಳಗಾವಿಗೆ ತರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. 

Read More »

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ,ಗ್ರಾ.ಪಂ. ಸದಸ್ಯರು ಕಾಂಗ್ರೆಸ್‌ಗೆ ಸೇರ್ಪಡೆ

ಬೆಳಗಾವಿ: ‘ಬಿಜೆಪಿಯ ಮೂವರು ಸಚಿವರಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರಿಂದ ಬಿಜೆಪಿಗೆ ಭಾರಿ ಮುಖಭಂಗವಾಗಿದೆ’ ಎಂದು ಕಾಂಗ್ರೆಸ್ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿಕ್ಕೋಡಿ, ಅಥಣಿ ಸೇರಿ ಎಂಟು ವಿಧಾನಸಭಾ ಕ್ಷೇತ್ರದಲ್ಲಿ 218 ಗ್ರಾಮ ಪಂಚಾಯಿತಿಗಳಿವೆ. ಅವುಗಳಲ್ಲಿ ಕಾಂಗ್ರೆಸ್ ಬೆಂಬಲಿತರು 113 ಪಂಚಾಯಿತಿಯಲ್ಲಿ …

Read More »

ಜನತಾ ದರ್ಶನ ನಡೆಸಿದ ಜೊಲ್ಲೆ ದಂಪತಿ:

ನಿಪ್ಪಾಣಿ –  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ತಮ್ಮ ಭಿವಶಿ ಗ್ರಾಮದ ಗೃಹ ಕಛೇರಿಯಲ್ಲಿ ಜನತಾ ದರ್ಶನ ನಡೆಸಿದರು.           ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ಮಹಿಳೆಯರು, ಹಿರಿಯ ನಾಗರಿಕರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ರೈತರ ಹಾಗೂ ಗ್ರಾಮದ ಮುಖಂಡರುಗಳ ಸಮಸ್ಯೆಗಳನ್ನು ಆಲಿಸಿ ಅವರ ಮನವಿ ಪತ್ರಗಳನ್ನು ಸ್ವೀಕರಿಸಿದರು. …

Read More »

3 ದಿನಗಳ ಕಾಲ ಉತ್ತರ ಕರ್ನಾಟಕದ 3 ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. B.S.Y.

ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ 9ರಿಂದ 3 ದಿನಗಳ ಕಾಲ ಉತ್ತರ ಕರ್ನಾಟಕದ 3 ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಬೆಳಗಾವಿ, ಬೀದರ್ ಹಾಗೂ ರಾಯಚೂರು ಜಿಲ್ಲೆಗಳಿಗೆ ಯಡಿಯೂರಪ್ಪ ಪ್ರವಾಸ ಮಾಡಲಿದ್ದಾರೆ. ರಾಜ್ಯದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದರಿಂದ ಯಡಿಯೂರಪ್ಪ ಪ್ರವಾಸ ಹಮ್ಮಿಕೊಂಡಿದ್ದಾರೆ. ಇದೇ ವೇಳೆ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಯಾವುದೇ ಸಂದರ್ಭದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಬಹುದೆಂಬ ಹಿನ್ನೆಲೆಯಲ್ಲಿ …

Read More »

ವಿದ್ಯುತ್ ಬಿಲ್ ಕಟ್ಟಲಾಗದೆ ರೈತ ಆತ್ಮಹತ್ಯೆಗೆ ಶರಣು

ವಿದ್ಯುತ್‌ ಬಿಲ್ ಪಾವತಿ ಮಾಡದೇ ಇದ್ದ ಕಾರಣ ವಿದ್ಯಾತ್‌ ಸರಬರಾಜು ಇಲಾಖೆ, ತನ್ನ ಗೋಧಿ ಗಿರಣಿ ಹಾಗೂ ಮೋಟರ್‌ ಬೈಕ್‌ ಅನ್ನು ವಶಕ್ಕೆ ಪಡೆದ ಕಾರಣ ಮಧ್ಯ ಪ್ರದೇಶದ ಛತ್ತರ್‌ಪುರ ಜಿಲ್ಲೆಯ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುನೇಂದ್ರ ರಜಪೂತ್‌ ಹೆಸರಿನ 35 ವರ್ಷದ ಈತ ಆತ್ಮಹತ್ಯಾ ನೋಟ್ ಬರೆದಿಟ್ಟಿದ್ದು, ತನ್ನ ದೇಹದ ಭಾಗಗಳನ್ನು ಸರ್ಕಾರಕ್ಕೆ ಕೊಟ್ಟು, ಅವುಗಳನ್ನು ಮಾರಿ ಬಾಕಿ ಪಾವತಿ ಮಾಡಿಸಿಕೊಳ್ಳುವಂತೆ ಕೋರಿದ್ದಾರೆ. ರಜಪೂತ್‌ 87 ಸಾವಿರ ರೂ.ಗಳಷ್ಟು …

Read More »