Daily Archives: ಜನವರಿ 9, 2021

ಜ.16ರಿಂದ ಭಾರತದಲ್ಲಿ ಕೋವಿಡ್ 19 ಲಸಿಕೆ ನೀಡಲು ಆರಂಭ; ಆರೋಗ್ಯ ಸಿಬ್ಬಂದಿಗೆ ಆದ್ಯತೆ

ನವದೆಹಲಿ:ಜಗತ್ತನ್ನೇ ಬೆಚ್ಚಿಬೀಳಿಸಿದ್ದ ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ದೇಶೀಯವಾಗಿ ವರ್ಷದೊಳಗೆ ಲಸಿಕೆ ತಯಾರಿಸಿರುವ ಭಾರತ ಜನವರಿ (2021) 16ರಿಂದ ದೇಶಾದ್ಯಂತ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ ಎಂದು ಕೇಂದ್ರ ಸರ್ಕಾರ ಶನಿವಾರ(ಜನವರಿ 09, 2021) ತಿಳಿಸಿದೆ. ದೇಶದಲ್ಲಿ ಜನವರಿ 16ರಿಂದ ಆರಂಭವಾಗಲಿರುವ ಲಸಿಕೆ ನೀಡಿಕೆ ಯೋಜನೆಯಲ್ಲಿ ಮೊದಲಿಗೆ ಆರೋಗ್ಯ ಸೇವೆ ನೀಡುವ ಸಿಬ್ಬಂದಿಗಳಿಗೆ, ಆಶಾ ಕಾರ್ಯಕರ್ತೆಯರಿಗೆ ನೀಡಲಿದ್ದು, ಅಂದಾಜು 3 ಕೋಟಿ ಜನರು ಇದ್ದಿರುವುದಾಗಿ ತಿಳಿಸಿದೆ. ನಂತರ 50 ವರ್ಷ ಮೀರಿದ …

Read More »

ಮಾಸ್ಕ್ ಹಾಕದೆ ಗಲ್ಲಿ ಕ್ರಿಕೆಟ್ ಆಡಿ ಟ್ರೋಲ್ ಆದ ಆಮೀರ್ ಖಾನ್

ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಸದ್ಯ ಲಾಲ್ ಸಿಂಗ್ ಚಡ್ಡಾ ಸಿನಿಮಾದ ಚಿತ್ರೀಕರಣ ಮುಕ್ತಾಯ ಗೊಳಿಸಿದ್ದಾರೆ. ಆಮೀರ್ ಖಾನ್ ಅವರನ್ನು ತೆರೆಮೇಲೆ ನೋಡದೆ ಎರಡು ವರ್ಷದ ಮೇಲಾಗಿದೆ. ಥಗ್ಸ್ ಆಫ್ ಹಿಂದೂಸ್ತಾನ್ ಸೋತ ಬಳಿಕ ಆಮೀರ್ ಖಾನ್ ಮತ್ತೆ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡಿಲ್ಲ. ಇದೀಗ ಲಾಲ್ ಸಿಂಗ್ ಚಡ್ಡಾ ಮೂಲಕ ಮತ್ತೆ ಅಭಿಮಾನಿಗಳನ್ನು ಮೋಡಿ ಮಾಡಲು ಆಮೀರ್ ಖಾನ್ ಸಿದ್ಧರಾಗಿದ್ದಾರೆ. ಲಾಕ್ ಡೌನ್ ಬಳಿಕ ಚಿತ್ರೀಕರಣ ಪ್ರಾರಂಭಮಾಡಿ …

Read More »

KGF 2 ಟೀಸರ್ ರಿಲೀಸ್ ಆದ ಕೂಡಲೆ ಟ್ರೆಂಡ್ ಆಯ್ತು RRR ಸಿನಿಮಾ

ರಾಕಿಂಗ್ ಸ್ಟಾರ್ ಅಭಿನಯದ ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾದ ಟೀಸರ್ ಕೊನೆಗೂ ರಿಲೀಸ್ ಆಗಿದೆ. ವರ್ಷದಿಂದ ಕಾಯುತ್ತಿದ್ದ ಅಭಿಮಾನಿಗಳು ಕೆಜಿಎಫ್-2 ಟೀಸರ್ ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಕನ್ನಡಿಗರು ಮಾತ್ರವಲ್ಲದೆ ಬೇರೆ ಬೇರೆ ಭಾಷೆಯ ಅಭಿಮಾನಿಗಳು ಸಹ ಕೆಜಿಎಫ್-2 ಟೀಸರ್ ನೋಡಿ ಸಂಭ್ರಮಿಸುತ್ತಿದ್ದಾರೆ. ಕನ್ನಡ ಸಿನಿಮಾವೊಂದಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಇಡೀ ಸ್ಯಾಂಡಲ್ ವುಡ್ ದಂಗಾಗಿದೆ.   ಇದೀಗ ಎಲ್ಲಾ ಕಡೆ ಕೆಜಿಎಫ್-2 ಟೀಸರ್ ದೆ ಹವಾ. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಯಶ್, …

Read More »

ಸತೀಶ್ ಜಾರಕಿಹೊಳಿ ಜೊತೆ ಹೆಲಿಕಾಪ್ಟರ್ ನಲ್ಲಿ ಸುತ್ತಲು ಆಯ್ಕೆಯಾದವರ ಪಟ್ಟಿ

ಗೋಕಾಕ:  ಇಲ್ಲಿನ ವಾಲ್ಮೀಕಿ ಕ್ರೀಡಾಂಗಣದಲ್ಲಿ  ಭಾನುವಾರ(ಜ.10) ರಂದು ಬೆಳಗ್ಗೆ 11 ಗಂಟೆಗೆ ಮಾನವ ಬಂಧುತ್ವ ವೇದಿಕೆ ವತಿಯಿಂದ ‘ಸಾವಿತ್ರಿಬಾಯಿ ಫುಲೆ ಜಯಂತಿ’ ಹಾಗೂ ‘ರಾಜ್ಯ ಮಟ್ಟದ ಪ್ರಬಂಧ’ ಹಾಗೂ ‘ಭಾಷಣ’ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕರು ಆದ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದು,  ಮುಖ್ಯ ಅತಿಥಿಗಳಾಗಿ ಸಾಹಿತಿ ಡಾ. ವಿನಯ ವಕ್ಕುಂದ, ಡಾ. ಯಲ್ಲಪ್ಪ ಹಿಮ್ಮಡಿ ಅವರು ಭಾಗವಹಿಸಲಿದ್ದಾರೆ. …

Read More »

ಯಶ್ ಗೆ ವಿಶ್ ಮಾಡಿದ ಹೃತಿಕ್ ರೋಷನ್

ರಾಕಿಂಗ್ ಸ್ಟಾರ್ ಯಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 34ನೇ ವಸಂತಕ್ಕೆ ಕಾಲಿಟ್ಟಿರುವ ಯಶ್ ಕುಟುಂಬದವರು ಮತ್ತು ಆಪ್ತರ ಜೊತೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ಹುಟ್ಟುಹಬ್ಬದ ಆಚರಣೆ ಸರಳವಾಗಿದ್ದರೂ, ಕೆಜಿಎಫ್-2 ಟೀಸರ್ ಅಭಿಮಾನಿಗಳ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ. KGF 2 ಟೀಸರ್ ನೋಡಿ ಫಿದಾ ಆದ್ರು ಪರಭಾಷೆಯ ಸ್ಟಾರ್ ಗಳು | Filmibeat Kannada ರಾಕಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆಯೇ ಹರಿದುಬರುತ್ತಿದೆ. ಅಭಿಮಾನಿಗಳು ಮಾತ್ರವಲ್ಲದೆ ಚಿತ್ರರಂಗದ …

Read More »

ಕೆಪಿಸಿಸಿ ಕಚೇರಿಯಲ್ಲಿ ನಡೆದ ಉಪಚುನಾವಣೆ ಸಮಿತಿ ಸಭೆ ಶಾಸಕರಿಂದ ಸಂಸದ ರಾಗತಾರ ಸತೀಶ್ ಜಾರಕಿಹೊಳಿ..

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಮೂವರ ಹೆಸರುಗಳನ್ನು ಹೈಕಮಾಂಡ್ ಗೆ ಕಳಿಸಲು ನಿರ್ಧರಿಸಲಾಗಿದೆ. ಶನಿವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಉಪಚುನಾವಣೆ ಸಮಿತಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಮಾಜಿ ಸಚಿವ, ಹಾಲಿ ಶಾಸಕ ಸತೀಶ್ ಜಾರಕಿಹೊಳಿ, ಮಾಜಿ ಸಚಿವರೂ ಮಾಜಿ ಸಂಸದರೂ ಆಗಿರುವ ಪ್ರಕಾಶ ಹುಕ್ಕೇರಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ …

Read More »

ಕುರುಬ ಸಮುದಾಯ ಜನರು ಜಾಗೃತರಾಗಿ ಹೋರಾಟ ನಡೆಸಿದಾಗ ಮಾತ್ರ ಎಸ್‌ಟಿ ಮೀಸಲಾತಿ ಕುರುಬ ಜನಾಂಗಕ್ಕೆ ದೊರೆಯುತ್ತದೆ

ಶಿಕಾರಿಪುರ: ಕುರುಬ ಸಮುದಾಯ ಜನರು ಜಾಗೃತರಾಗಿ ಹೋರಾಟ ನಡೆಸಿದಾಗ ಮಾತ್ರ ಎಸ್‌ಟಿ ಮೀಸಲಾತಿ ಕುರುಬ ಜನಾಂಗಕ್ಕೆ ದೊರೆಯುತ್ತದೆ ಎಂದು ಕಾಗಿನೆಲೆ ಕನಕ ಗುರುಪೀಠದ ಪೀಠಾಧ್ಯಕ್ಷ ನಿರಂಜನಾನಂದಪುರಿ ಸ್ವಾಮೀಜಿ ಸಲಹೆ ನೀಡಿದರು. ಪಟ್ಟಣದ ಹೊಸಸಂತೆ ಮೈದಾನದಲ್ಲಿ ಗುರುವಾರ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠ, ಕುರುಬರ ಎಸ್‌ಟಿ ಹೋರಾಟ ಸಮಿತಿ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿಗೆ ಒತ್ತಾಯಿಸಿ ಆಯೋಜಿಸಿದ್ದ ಶಿವಮೊಗ್ಗ-ಚಿಕ್ಕಮಗಳೂರು ವಿಭಾಗ ಮಟ್ಟದ ಬೃಹತ್ ಜಾಗೃತಿ ಸಮಾವೇಶವನ್ನು …

Read More »

ಗಣರಾಜ್ಯೋತ್ಸವ ಪರೇಡ್‍ನಲ್ಲಿ ರಂಗಾಯಣ ಕಲಾವಿದರು

ಶಿವಮೊಗ್ಗ: ಈ ಬಾರಿ ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‍ಗೆ ಶಿವಮೊಗ್ಗದ ರಂಗಾಯಣ ಕಲಾವಿದರು ಆಯ್ಕೆಯಾಗಿದ್ದಾರೆ. ವಿಜಯನಗರ ಸಂಸ್ಥಾನದ ಇತಿಹಾಸ ಬಿಂಬಿಸುವ ರಾಜ್ಯದ ಸ್ತಬ್ಧಚಿತ್ರದ ಪಾತ್ರಗಳಿಗೆ ಜೀವ ತುಂಬಲಿದ್ದಾರೆ. ಖ್ಯಾತ ಕಲಾ ನಿರ್ದೇಶಕ ಶಶಿಧರ ಅಡಪ ಸ್ತಬ್ಧಚಿತ್ರ ವಿನ್ಯಾಸ ಮಾಡಿದ್ದಾರೆ ಎಂದು ರಂಗಾಯಣ ನಿರ್ದೇಶಕ ಸಂದೇಶ ಜವಳಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ದೇಶದ 14 ರಾಜ್ಯಗಳ ಸ್ತಬ್ಧಚಿತ್ರಗಳು ಭಾಗವಹಿಸುತ್ತಿದ್ದು, ಅದರಲ್ಲಿ ರಾಜ್ಯದಿಂದ ವಿಜಯನಗರದ ಇತಿಹಾಸ ಸಾರುವ ಸ್ತಬ್ಧಚಿತ್ರ ಆಯ್ಕೆಯಾಗಿದೆ. ಇದೇ ಮೊದಲ ಬಾರಿಗೆ …

Read More »

ಜನೇವರಿ 17 ರಂದು ಬೆಳಗಾವಿಗೆ ಅಮೀತ ಶಾ

ಬೆಳಗಾವಿ- ಬಿಜೆಪಿಯ ಚಾಣಕ್ಯರಂದೇ ಪ್ರಸಿದ್ಧಿ ಪಡೆದಿರುವ ಕೇಂದ್ರದ ಗೃಹ ಸಚಿವ ಅಮೀತ ಶಾ ಅವರು ಜನೇವರಿ 17 ರಂದು ಬೆಳಗಾವಿಗೆ ಆಗಮಿಸುತ್ತಿದ್ದು,ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಆಕಾಂಕ್ಷಿಗಳಲ್ಲಿ ಹೊಸ ಹುರುಪು ಬಂದಿದೆ ಅಮೀತ ಶಾ ಅವರು ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಸಂಧರ್ಭದಲ್ಲಿ ಬೆಳಗಾವಿಗೆ ಆಗಮಿಸುತ್ತಿರುವದು ವಿಶೇಷವಾಗಿದ್ದು,ಅಂದು ಅವರು ಬೆಳಗಾವಿಯ ಬಿಜೆಪಿ ಅಭ್ಯರ್ಥಿಯನ್ನು ಫೈನಲ್ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಅಮೀತ ಶಾ ಅವರು ಬೆಳಗಾವಿಗೆ ಬಂದು ಹೋದ ಬಳಿಕ …

Read More »

ಜ.11ರಿಂದ ಆಕಾಶವಾಣಿ ಯಲ್ಲಿ ‘ಕಲಿಯುತ್ತಾ ನಲಿಯೋಣ’ ಕಾರ್ಯಕ್ರಮ

ಬೆಂಗಳೂರು, ಜ.9- ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಶಿಕ್ಷಣ ಇಲಾಖೆ ಜ.11ರಿಂದ ಆಕಾಶವಾಣಿ ಮೂಲಕ ಕಲಿಯುತ್ತಾ ನಲಿಯೋಣ ಎಂಬ ಹೊಸ ಕಾರ್ಯಕ್ರಮವನ್ನು ಬಿತ್ತರಿಸಲಿದೆ ಎಂದು ಶಿಕ್ಷಣ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ. ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಇರುವ (ಆದರೆ ಶಾಲೆಗೆ ಹೋಗಲಾರದ) ಮಕ್ಕಳಿಗಾಗಿ ಇರುವ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮಗಳನ್ನು ಜ.11ರಿಂದ ಏ.5ರವರೆಗೆ ಆಕಾಶವಾಣಿಯಲ್ಲಿ ಪ್ರಸಾರ ಮಾಡಲಾಗುವುದು ಎಂದು ಅವರು ಹೇಳಿದರು. ಸೋಮವಾರದಿಂದ ಶುಕ್ರವಾರದವರೆಗೂ ಪ್ರತಿ ನಿತ್ಯ ಬೆಳಿಗ್ಗೆ 10 …

Read More »