Breaking News

Daily Archives: ಜನವರಿ 11, 2021

ಬೆಳಗಾವಿ : ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಬೆಳಗಾವಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ರೈತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.   ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ನೂತನ ಕೃಷಿ ಕಾಯ್ದೆ ಗಳು ರೈತರಿಗೆ ಮಾರಕವಾಗಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ …

Read More »

ಭೀಕರ ಅಪಘಾತ : 18 ವರ್ಷದ ಯುವತಿ ಸೇರಿ ಮೂವರು ಸಾವು

ಕಲಬುರಗಿ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ರಾವೂರ್ ಗ್ರಾಮದ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಭೀಮಾಶಂಕರ್ ಪ್ಯಾಟಿ, ಅಕ್ಬರ್ ಪಟೇಲ್ ಮತ್ತು 18 ವರ್ಷದ ಯುವತಿ ಜವರಾಯನ ಅಟ್ಟಹಾಸಕ್ಕೆ ಕೊನೆಯುಸಿರೆಳೆದಿದ್ದಾರೆ. ಈ ಮೂವರು ಒಂದೆ ದ್ವಿ ಚಕ್ರದ ಮೇಲೆ ಹೊಗುತ್ತಿರುವ ವೇಳೆ ದುರ್ಘಟನೆ ನಡೆದಿದೆ. ಮೃತದೇಹಗಳು ರಕ್ತಸಿಕ್ತವಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬೈಕ್​ ನಜ್ಜುಗುಜ್ಜಾಗಿದೆ. ಈ …

Read More »

ಸಂಪುಟ ವಿಸ್ತರಣೆಯೋ,ಪುನರ್ ರಚನೆಯೋ ಇಂದೇ ಗೊತ್ತಾಗತ್ತೆ: ಸಿಎಂ ಸಚಿವ ಆಕಾಂಕ್ಷಿಗಳಲ್ಲಿ ಹೆಚ್ಚಿದ ಟೆನ್ಸನ್!!

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಏನೆಂಬುದು ಇಂದೇ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಆ ಮೂಲಕ ಸಚಿವರು ಹಾಗೂ ಆಕಾಂಕ್ಷಿಗಳಲ್ಲಿ ಎದೆಬಡಿತ ಹೆಚ್ಚಿಸಿದ್ದಾರೆ. ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ‌ 54ನೇ ಪುಣ್ಯತಿಥಿ ನಿಮಿತ್ತ ವಿಧಾನಸೌಧದ ಬಳಿ ಅವರ ಭಾವಚಿತ್ರಕ್ಕೆ ಸೋಮವಾರ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು. ಖಾಲಿಯಿರುವ 7 ಸ್ಥಾನಗಳನ್ನು ತುಂಬುವುದು ಖಚಿತ. ಬುಧವಾರ ಇಲ್ಲವೇ ಗುರುವಾರ ನೂತನ …

Read More »

ಶಾಸಕ ಎಂ.ಸಿ. ಮನಗೂಳಿ ಏರ್ ಲಿಫ್ಟ್ ಮೂಲಕ ಆಸ್ಪತ್ರೆಗೆ ದಾಖಲು

ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಸಿಂದಗಿ ಶಾಸಕ ಎಂ.ಸಿ. ಮನಗೂಳಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳ ಹಿಂದೆ ಕಲಬುರಗಿಯಿಂದ ಏರ್​ಲಿಫ್ಟ್ ಮೂಲಕ ಶಾಸಕರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಫ ಕಟ್ಟಿದ ಹಿನ್ನೆಲೆಯಲ್ಲಿ ಶಾಸಕ ಮನಗೂಳಿ ತೀವ್ರ ಅಸ್ವಸ್ಥರಾಗಿದ್ದರು. ಸದ್ಯ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More »

ಕನ್ನಡದ ಹಿರಿಯ ಸಂಗೀತ ನಿರ್ದೇಶಕ ಜೀವರತ್ನ ನಿಧನ

ಕನ್ನಡ ಚಿತ್ರರಂಗದ ಅತ್ಯಂತ ಹಿರಿಯ ಸಂಗೀತ ನಿರ್ದೇಶಕ ಆರ್.ರತ್ನ ನಿನ್ನೆ (ಜನವರಿ 09) ರಂದು ಚೆನ್ನೈನಲ್ಲಿ ನಿಧನಹೊಂದಿದ್ದಾರೆ. ಆರ್.ರತ್ನ ಅವರಿಗೆ 97 ವರ್ಷ ವಯಸ್ಸಾಗಿತ್ತು. ಆರ್.ರತ್ನ ನಿಜವಾದ ಹೆಸರು ಜೀವನರತ್ನ. ಮೊದಲಿಗೆ ನಟನಾಗಿ ವೃತ್ತಿ ಆರಂಭಿಸಿದ ರತ್ನ, ತಮಿಳಿನ ‘ದಾನಶೂರ ಕರ್ಣ’ ಸಿನಿಮಾದಲ್ಲಿ ಋಷಿ ಕೇತು ಪಾತ್ರದಲ್ಲಿ ನಟಿಸಿದ್ದರು. ನಂತರ 1961ರಲ್ಲಿ ಬಿಡುಗಡೆ ಆದ ‘ಚಕ್ರವರ್ತಿ ತಿರುಮಗಲ’ ಮೂಲಕ ಸ್ವತಂತ್ರ್ಯ ಸಂಗೀತ ನಿರ್ದೇಶಕರಾದ ಜೀವರತ್ನ. 1963 ‘ಮನೆ ಕಟ್ಟಿ ನೋಡು’ …

Read More »

ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ನ ಎಡವಟ್ಟು: ಮೌನಿ ರಾಯ್ ಫೋಟೋ ಶೇರ್ ಮಾಡಿ ಕ್ಷಮೆ ಕೇಳಿದ NSE

ಬಾಲಿವುಡ್ ನ ಹಾಟ್ ನಟಿ, ಕೆಜಿಎಫ್ ಸಿನಿಮಾದ ‘ಗಲಿ ಗಲಿ..’ ಹಾಡಿಗೆ ಹೆಜ್ಜೆ ಹಾಕಿದ್ದ ಮೌನಿ ರಾಯ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮೌನಿ ರಾಯ್ ಶನಿವಾರದಿಂದ ಸಾಮಾಜಿಕ ಜಾಲತಾಣದಲ್ಲಿ ದಿಢೀರ್ ಸದ್ದು ಮಾಡುತ್ತಿದ್ದಾರೆ. ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ಎಡವಟ್ಟಿನಿಂದ ಮೌನಿ ಸುದ್ದಿಯಲ್ಲಿದ್ದಾರೆ. ಹೌದು, ಎನ್ ಎಸ್ ಇ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮೌನಿ ರಾಯ್ ಫೋಟೋಗಳನ್ನು ಶೇರ್ ಮಾಡಿದೆ. ಮೌನಿ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಕ್ಷಣಾರ್ಧದಲ್ಲಿ …

Read More »

ಸಂಕ್ರಾಂತಿ ಹಬ್ಬಕ್ಕೆ ಕಬ್ಜ ಚಿತ್ರತಂಡ ಕೊಡಲಿದೆ ಬಿಗ್ ಸರ್ಪ್ರೈಸ್, ಏನಿರಬಹುದು?

ರಿಯಲ್ ಸ್ಟಾರ್ ಉಪೇಂದ್ರ ಮತ್ತು ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ತಯಾರಾಗುಲಿರುವ ಕಬ್ಜ ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಕೆಜಿಎಫ್ ನಂತರ ಅಷ್ಟು ದೊಡ್ಡ ಮಟ್ಟಕ್ಕೆ ಅಥವಾ ಅದನ್ನು ಮೀರಿಸುವಂತಹ ಸಿನಿಮಾ ಇದಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಭಾರತದ ಏಳು ಪ್ರಮುಖ ಭಾಷೆಗಳಲ್ಲಿ ಕಬ್ಜ ಸಿನಿಮಾ ಬಿಡುಗಡೆಯಾಗಲಿದೆ. ಸ್ಯಾಂಡಲ್‌ವುಡ್ ಇಂಡಸ್ಟ್ರಿ ಪಾಲಿಗೆ ಇದು ಅತಿ ದೊಡ್ಡ ಬಜೆಟ್ ಚಿತ್ರ. ಇದೀಗ, ಸಂಕ್ರಾಂತಿ ಹಬ್ಬಕ್ಕೆ ಕಬ್ಜ ಚಿತ್ರತಂಡ ದೊಡ್ಡ …

Read More »

ಮೊದಲ ಬಾರಿಗೆ ನಟ ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ಒಟ್ಟಿಗೆ ನಟಿಸಲಿದ್ದಾರೆ.

 ಮೊದಲ ಬಾರಿಗೆ ನಟ ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ಒಟ್ಟಿಗೆ ನಟಿಸಲಿದ್ದಾರೆ. ಇಬ್ಬರು ಸ್ಟಾರ್ ನಟರು ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವ ಕಾರಣ ನಿರೀಕ್ಷೆಗಳು ಹೆಚ್ಚಿಗೆ ಇವೆ. ಇಂದು ಹೃತಿಕ್ ರೋಷನ್ ಹುಟ್ಟುಹಬ್ಬವಿದ್ದು, ಇದೇ ದಿನ ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿಗೆ ಒಟ್ಟಿಗೆ ನಟಿಸುತ್ತಿರುವ ಸಿನಿಮಾದ ಹೆಸರು ಘೋಷಣೆ ಮಾಡಲಾಗಿದೆ. ದೀಪಿಕಾ ಪಡುಕೋಣೆ ಬರ್ತ್‌ಡೇ ಪಾರ್ಟಿಯಲ್ಲಿ ತಾರೆಯರ ಹಿಂಡು ಹೃತಿಕ್-ದೀಪಿಕಾ ನಟಿಸುತ್ತಿರುವ ಈ ಹೊಸ …

Read More »

ಡಾರ್ಲಿಂಗ್ ಕೃಷ್ಣಗೆ ಜೋಡಿಯಾದ ರಚಿತಾ ರಾಮ್; ಯಾವ ಸಿನಿಮಾ?

ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ರಚಿತಾ ರಾಮ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಮಾತ್ರ ವಲ್ಲದೇ ತೆಲುಗು ಚಿತ್ರರಂಗದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ಈ ನಡುವೆ ರಚಿತಾ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಲವ್ ಮಾಕ್ ಟೇಲ್ ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಲವ್ ಮಾಕ್ ಟೇಲ್ ಬಳಿಕ ಕೃಷ್ಣಗೆ ಬೇಡಿಕೆ ಜಾಸ್ತಿ ಆಗಿದ್ದು, ಸಾಲು ಸಾಲು …

Read More »

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ಮುಂದುವರೆದ ನಿರಾಸೆ

ಬೆಂಗಳೂರು: ಶಿಕ್ಷಕರ ಬಹು ದಿನಗಳ ಬೇಡಿಕೆಯಾಗಿದ್ದ ವರ್ಗಾವಣೆಗೆ ಕಾಲ ಕೂಡಿ ಬಂದಂತಿಲ್ಲ. ಹೆಚ್ಚುವರಿ ಮತ್ತು ಕಡ್ಡಾಯ ವರ್ಗಾವಣೆಯಾಗಿದ್ದ ಶಿಕ್ಷಕರ ವರ್ಗಾವಣೆಗೆ ಕೆಎಟಿ ತಡೆ ನೀಡಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ) ಅಧಿನಿಯಮ -2020 ರ ಅನ್ವಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಕೆಎಟಿ ಆದೇಶ ಹೊರಡಿಸಿದೆ. ಇದರಿಂದಾಗಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಯಾಗಿದ್ದ ಶಿಕ್ಷಕರಿಗೆ ವರ್ಗಾವಣೆ ನೀಡಲು ಮುಂದಾಗಿದ್ದ ಶಿಕ್ಷಣ ಇಲಾಖೆಗೆ ಹಿನ್ನಡೆಯಾದಂತಾಗಿದೆ. ಫೆಬ್ರವರಿ 17 ರವರೆಗೆ ವರ್ಗಾವಣೆ ಪ್ರಕ್ರಿಯೆ …

Read More »