Breaking News
Home / 2021 / ಜನವರಿ / 11 (page 2)

Daily Archives: ಜನವರಿ 11, 2021

ಗೋಹತ್ಯೆ ನಿಷೇಧಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆ ಸಿಂಧುವಲ್ಲ. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು: ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ

ಬೆಂಗಳೂರು: ‘ಗೋಹತ್ಯೆ ನಿಷೇಧಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಸುಗ್ರೀವಾಜ್ಞೆ ಸಿಂಧುವಲ್ಲ. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು’ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರು ಭಾನುವಾರ ಹೇಳಿದರು. ಕರ್ನಾಟಕ ರಾಜ್ಯ ರೈತ ಸಂಘ ಆಯೋಜಿಸಿದ್ದ ‘ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆ ರೈತರ ಪಾಲಿಗೆ ಮರಣ ಶಾಸನ ಆಗಲಿದೆಯೆ?’ ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ‘ಸಂವಿಧಾನದತ್ತವಾಗಿರುವ ಮೂಲಭೂತ ಹಕ್ಕುಗಳು, ನಿರ್ದೇಶಕ ತತ್ವಗಳ ವಿರುದ್ಧವಾಗಿ …

Read More »

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕ ಹುದ್ದೆ ಭರ್ತಿ ಮಾಡಿ’

ಬೆಂಗಳೂರು: ‘ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇದು ಹಿಂದುಳಿದ ಭಾಗವಾಗಿರುವುದರಿಂದ ಆರ್ಥಿಕ ಇಲಾಖೆಯ ನಿರ್ಬಂಧಗಳನ್ನು ಸಡಿಲಿಸಿ, ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಸರ್ಕಾರವನ್ನು ಒತ್ತಾಯಿಸಿದರು. ನಗರದ ಸದಾಶಿವನಗರದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಎಂಬುದನ್ನು ಬದಲಿಸಿ, ಕಲ್ಯಾಣ ಕರ್ನಾಟಕ ಎಂದು …

Read More »

ನೆಲಕ್ಕೆ ಬಿದ್ರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂಥವರು ಡಿಕೆಶಿ, ಸಿದ್ದರಾಮಯ್ಯ:ಜಗದೀಶ್ ಶೆಟ್ಟರ್,

ಹುಬ್ಬಳ್ಳಿ: ಇಲ್ಲಿಯ ಗೋಕುಲ ಗಾರ್ಡನ್​ನಲ್ಲಿ ನಿನ್ನೆ ಬಿಜೆಪಿಯಿಂದ ಜನಸೇವಕ ಸಮಾವೇಶ ನಡೆಯಿತು. ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ನೂತನ ಸದಸ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಧಾರವಾಡ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ನೂರಾರು ಗ್ರಾಮ ಪಂಚಾಯತಿ ಸದಸ್ಯರು ಸಮಾವೇಶದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದರು. ಬಿಜೆಪಿ ಮುಖಂಡರು ಗ್ರಾಮ ಪಂಚಾಯತಿ ನೂತನ ಸದಸ್ಯರಿಗೆ ಶಾಲು ಹೊದಿಸಿ, ಹೂಮಾಲೆ ಹಾಕಿ ಸನ್ಮಾನಿಸಿದ್ರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, …

Read More »

ಉತ್ತಮ ಕೆಲಸ‌ ಮಾಡಿದ್ರೆ ಒಬ್ಬ ಗ್ರಾಮ ಪಂಚಾಯತಿ ಸದಸ್ಯ ದೇಶದ ಪ್ರಧಾನಿಯಾಗಬಹುದು.:ನಮ್ಮ ಪಕ್ಷದಲ್ಲಿ ಮಾತ್ರ ಸಾಧ್ಯ.

ಹುಬ್ಬಳ್ಳಿ: ಬಿಜೆಪಿಯವರು ರಸ್ತೆಯಲ್ಲಿ ಹೊಡೆದಾಡಿ ಲೀಡರ್ ಆಗುತ್ತಾರೆ. ಕಾಂಗ್ರೆಸ್ ಪಕ್ಷದ ಇಬ್ಬರು ಲೀಡರ್‌ಗಳು ರೂ‌ಮಿನಲ್ಲಿ ಒಳಗಡೆ ಹೋದ್ರೆ ಒಬ್ಬ ಲೀಡರ್ ಹುಟ್ಟುತ್ತಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಲ್ಲಿ ನಿನ್ನೆ ಭಾನುವಾರ ನಡೆದ ಬಿಜೆಪಿ ಜನಸೇವಕ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಹಿಂದೆ ಪ್ರಿಯಾಂಕಾ ಗಾಂಧಿಗೆ ಗಂಡು ಮಗು ಹುಟ್ಟಿದಾಗ ಲೀಡರ್ ಹುಟ್ಟಿದ್ದಾನೆಂದು ಕಾಂಗ್ರೆಸ್ ಕಾರ್ಯಕರ್ತರು ಸ್ವೀಟ್ ಹಂಚಿದ್ರು ಎಂದು ಗಾಂಧಿ …

Read More »

2023ರಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಧ್ವಜ ಹಾರಿಸುತ್ತೇನೆ:ರಮೇಶ ಜಾರಕಿಹೊಳಿ

ಬೆಳಗಾವಿ – ಜಾರಕಿಹೊಳಿ ಕುಟುಂಬ ಜನಸಂಘದಿಂದ ಬಂದಿದ್ದು, ಅನಿವಾರ್ಯ ಕಾರಣದಿಂದ ನಾವು ಕಾಂಗ್ರೆಸ್ ಗೆ ಹೋಗಬೇಕಾಯಿತು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೊಸ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಧನಂಜಯ ಜಾಧವ ಮಿತ್ರ ಪರಿವಾರ ಸಂಘಟಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ನಾವು ಬಂದಿದ್ದು ಜನಸಂಘದಿಂದ, ಹಾಫ್ ಚಡ್ಡಿ ಹಾಕುತ್ತಿದ್ದೆವು. ಮೊದಲು ಜನಸಂಘದಲ್ಲಿ ದೀಪದ ಚಿತ್ರ ಇದ್ದ ಕರಿ ಟೋಪಿ ಹಾಕುತ್ತಿದ್ದೆವು. ಸಂಘಟನೆಗಾಗಿ ನಮ್ಮ …

Read More »

ಜನವರಿ 14ರಂದು ಬಿಡುಗಡೆಯಾಗುತ್ತಿದೆ ‘ಹೀರೋ’ ಚಿತ್ರದ ಟ್ರೈಲರ್

ಭರತ್ ರಾಜ್ ಎಂ ನಿರ್ದೇಶನದ ರಿಷಬ್ ಶೆಟ್ಟಿ ನಟನೆಯ ‘ಹೀರೋ’ ಚಿತ್ರದ ಟ್ರೈಲರ್ ಅನ್ನು ಜನವರಿ 14 ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಗಾನವಿ ಲಕ್ಷ್ಮಣ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ರಿಷಬ್ ಶೆಟ್ಟಿ ಫಿಲ್ಮ್ಸ್ ನಿಂದ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಇದೇ ತಿಂಗಳು 14ರಂದು ಟ್ರೈಲರ್ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.

Read More »

ಭಾರತದಲ್ಲಿ ಬ್ಯಾನ್​ಗೆ ಒಳಗಾದರೂ ಚೀನಾದ ಆಯಪ್ ಟಿಕ್​ಟಾಕ್ 2020ರಲ್ಲಿ ಅತೀಹೆಚ್ಚು ಆದಾಯ ಗಳಿಸಿದ ಆಯಪ್ ಎನ್ನಿಸಿಕೊಂಡಿದೆ. ಆಯಪ್ ​ಟೋಪಿಯಾ

ನವದೆಹಲಿ: ಭಾರತದಲ್ಲಿ ಬ್ಯಾನ್​ಗೆ ಒಳಗಾದರೂ ಚೀನಾದ ಆಯಪ್ ಟಿಕ್​ಟಾಕ್ 2020ರಲ್ಲಿ ಅತೀಹೆಚ್ಚು ಆದಾಯ ಗಳಿಸಿದ ಆಯಪ್ ಎನ್ನಿಸಿಕೊಂಡಿದೆ. ಆಯಪ್ ​ಟೋಪಿಯಾ ಬಿಡುಗಡೆ ಮಾಡಿರುವ ಅನಾಲಿಟಿಕ್ಸ್​ನಲ್ಲಿ ಟಿಕ್​ಟಾಕ್​ 540 ಮಿಲಿಯನ್ ಡಾಲರ್(₹39,62,43,36,000) ಆದಾಯ ಗಳಿಸುವ ಮೂಲಕ 2020ರಲ್ಲಿ ಅತೀಹೆಚ್ಚು ಆದಾಯ ಗಳಿಸಿದ ಪಟ್ಟಿಯಲ್ಲಿ ನಂಬರ್ 1 ಸ್ಥಾನ ಪಡೆದಿದೆ. ಇನ್ನು ಟಿಂಡರ್ ಆಯಪ್ 513 ಮಿಲಿಯನ್ ಡಾಲರ್(₹37,64,31,19,200) ಆದಾಯ ಗಳಿಸುವ ಮೂಲಕ ನಂಬರ್ 2 ಸ್ಥಾನ ಪಡೆದಿದೆ. ಆಯಪ್ ​ಟೋಪಿಯಾದ ಡೇಟಾ …

Read More »

ಗ್ರಾಹಕರಿಗೆ ಗುಡ್ ನ್ಯೂಸ್ : ಇಲ್ಲಿ ಸಿಲಿಂಡರ್ ಬುಕ್ ಮಾಡಿದ್ರೆ ನಿಮಗೆ ಸಿಗಲಿದೆ 50 ರೂ. ಕ್ಯಾಶ್ ಬ್ಯಾಕ್!

ನವದೆಹಲಿ : ಐಸಿಐಸಿಐ ಬ್ಯಾಂಕ್ ಎಲ್ ಪಿಜಿ ಗ್ರಾಹಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಐಸಿಐಸಿಐ ಬ್ಯಾಂಕ್ ನ ಪಾಕೆಟ್ಸ್ ವ್ಯಾಲೆಟ್ ಮೂಲಕ ಸಿಲೆಂಡರ್ ಕಾಯ್ದಿರಿಸಿದರೆ 50 ರೂ. ಕ್ಯಾಶ್ ಬ್ಯಾಕ್ ಪಡೆಯಬಹುದು. ಹೌದು, ಕ್ಯಾಶ್ ಬ್ಯಾಕ್ ಪಡೆಯಲು, ನೀವು PMRJAN2021 ಪ್ರೋಮೋ ಕೋಡ್ ಅನ್ನು ನಮೂದಿಸಬೇಕು. 10 ಪರ್ಸೆಂಟ್ ಗೆ ಗರಿಷ್ಠ 50 ರೂಪಾಯಿ ಕ್ಯಾಶ್ ಬ್ಯಾಕ್ ನೀಡ್ತಿದೆ. ಪಾಕೆಟ್ಸ್ ಪ್ರಕಾರ, ಈ ಆಫರ್ 2021ರ ಜನವರಿ 25ರವರೆಗೆ ಮಾನ್ಯವಾಗಿರುತ್ತದೆ. ಈ …

Read More »

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ : ಪ್ರತಿ ಗ್ರಾ.ಪಂಗೆ 20 ಮನೆ

ಹುಬ್ಬಳ್ಳಿ : ರಾಜ್ಯದ ಗ್ರಾಮೀಣಾ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲರಿಗೂ ಸೂರು ತಲುಪಿಸುವ ಉದ್ದೇಶದಿಂದ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ವಿವಿಧ ವಸತಿಯೋಜನೆಯಡಿ ತಲಾ 20 ಮನೆ ನೀಡಲಾಗುವುದು ಎಂದು ವಸತಿ ಸಚಿ ವಿ. ಸೋಮಣ್ಣ ಹೇಳಿದ್ದಾರೆ. ರಾಜ್ಯದ ಎಲ್ಲ ಗ್ರಾಮಪಂಚಾಯಿತಿಗಳಿಗೆ ವಿವಿಧ ಯೋಜನೆಯಡಿ ತಲಾ ಮನೆ ನೀಡಲಾಗುವುದು. ಈ ಸಂಬಂಧ ಬಜೆಟ್ ನಲ್ಲಿ ಘೋಷಣೆ ಮಾಡಲಾಗವುದು ಎಂದು ಹೇಳಿದ್ದಾರೆ. ಗ್ರಾಮಪಂಚಾಯಿತಿ ಸದಸ್ಯರು ಇದೀಗ ಚೆನ್ನಾಗಿ …

Read More »

ಹಾಲು ಉತ್ಪಾದಕರಿಗೆ ಭರ್ಜರಿ ಸಿಹಿಸುದ್ದಿ : ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಳ!

ಬೆಂಗಳೂರು : ಸಂಕ್ರಾಂತಿ ಹಬ್ಬಕ್ಕೆ ಹಾಲು ಉತ್ಪಾದಕರಿಗೆ ಭರ್ಜರಿ ಸಿಹಿಸುದ್ದಿ ಸಿಗುವ ಸಾಧ್ಯತೆ ಇದ್ದು, ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟವು ಪ್ರತಿ ಲೀಟರ್ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಬಮೂಲ್ ಹಾಲು ಒಕ್ಕೂಟವು ಪ್ರತಿ ಲೀಟರ್ ಹಾಲಿಗೆ 25.30 ರೂ. ನೀಡುತ್ತಿದೆ. ಅದರಲ್ಲಿ 24 ರೂ. ಹಾಲು ಉತ್ಪಾದಕರಿಗೆ ಮತ್ತು 1.30 ರೂ. ಸೊಸೈಟಿಗೆ ಸಿಗುತ್ತಿದೆ. ಬಮೂಲ್ ಸಂಕ್ರಾಂತಿ ಬಳಿಕ 1 ರೂ. …

Read More »