Breaking News
Home / 2021 / ಜನವರಿ / 14 (page 3)

Daily Archives: ಜನವರಿ 14, 2021

ಅಸಮಾಧಾನ ಇರೋರು ವರಿಷ್ಠರ ಜೊತೆ ಮಾತಾಡಲಿ : ಸಿಎಂ

ಬೆಂಗಳೂರು : ಅಸಮಾಧಾನ ಇರೋರು ಬೇಕಾದ್ರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತನಾಡಲಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸಂಪುಟ ವಿಸ್ತರಣೆ ಬೆನ್ನಲ್ಲೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬಿಜೆಪಿಯ ಕೆಲ ಶಾಸಕರು ಬಹಿರಂಗವಾಗಿಯೇ ಪಕ್ಷದ ವಿರುದ್ಧ ಬೇಸರ ಹೊರಹಾಕುತ್ತಿದ್ದಾರೆ.ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ನಮ್ಮ ಯಾವುದೇ ಶಾಸಕರು ವಿರೋಧ ಇದ್ರೆ ದೆಹಲಿಗೆ ಹೋಗಲಿ. ವರಿಷ್ಠರಿಗೆ ದೆಹಲಿಗೆ ಹೋಗಿ ದೂರು ಕೊಡಲಿ. ಇಲ್ಲಿ ಬಹಿರಂಗವಾಗಿ ಮಾತನಾಡಿ ಪಕ್ಷದ …

Read More »

ದೆಹಲಿಯ ಜನತೆಗೆ ನಾವು ಕೋವಿಡ್ 19 ಲಸಿಕೆ ಉಚಿತವಾಗಿ ನೀಡುತ್ತೇವೆ: ಕೇಜ್ರಿವಾಲ್

                        ನವದೆಹಲಿ  : ಆಮ್ ಆದ್ಮಿ ಸರ್ಕಾರ ದೆಹಲಿ ಜನರಿಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಉಚಿತ ವ್ಯಾಕ್ಸಿನೇಷನ್ ಮಾಡಬೇಕೆಂದು ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರವು ಏನು ಮಾಡುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಅಗತ್ಯವಿದ್ದರೆ, ಕೇಂದ್ರವು ಲಸಿಕೆಯನ್ನು ಉಚಿತವಾಗಿ ನೀಡದಿದ್ದರೆ, ನಾವು ಲಸಿಕೆಯನ್ನು ದೆಹಲಿ …

Read More »

ಮಕ್ಕಳ ಎದುರೇ ಪತ್ನಿ, ಅತ್ತೆಯನ್ನು ಹತ್ಯೆ ಮಾಡಿದ ಭೂಪ

    ಗುವಾಹತಿ : ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಅತ್ತೆಯನ್ನು ಕೊಂದಿದ್ದಲ್ಲದೆ ಕೋಳಿ ಮಾಂಸ ಕಟ್ ಮಾಡುವ ಹಾಗೆ ಅವರಿಬ್ಬರನ್ನು ತುಂಡರಿಸಿದ್ದಾನೆ. ತ್ರಿಪುರಾದಧಲೈ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯ ಬಳಿಕ ಆತ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾವು ಆರೋಪಿಯನ್ನು ಬಂಧಿಸಿದ್ದೇವೆ. ಆತನಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದೇವೆ. ಆತನ ದೇಹದಲ್ಲಿ ವಿಷಾಂಶ ಪತ್ತೆಯಾಗಿದೆ. ಆತ ಅಪಾಯದಿಂದ ಪಾರಾಗಿದ್ದಾನೆ. ಆತನನ್ನು ವಿಚಾರಣೆಗೆ ಒಳಪಡಿಸಲು …

Read More »

ಸಚಿವ ಸ್ಥಾನ ಆಕಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದೆ

ಬೆಂಗಳೂರು : ಬಹುದಿನಗಳಿಂದ ಕಗ್ಗಂಟಾಗಿದ್ದ ಸಚಿವ ಸಂಪುಟ ವಿಸ್ತರಣೆ ಮುಕ್ತಾಯವಾಗಿದ್ದು, 7 ಜನರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಮತ್ತೊಂದೆಡೆ ಸಚಿವ ಸ್ಥಾನ ಆಕಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಮತ್ತೊಂದಷ್ಟು ಅಸಮಾಧಾನಗಳು ಸೃಷ್ಟಿಯಾಗಿವೆ. ಅವುಗಳನ್ನ ಸಮಾಧಾನಪಡಿಸುವ ಕಾರ್ಯವು ಸಹ ನಡೆದಿದೆ.   ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಐದಾರು ಗಂಟೆಯಲ್ಲೇ ನಾಗೇಶ್‌ಗೆ ಮಹತ್ವದ ಹುದ್ದೆ ಹೌದು…ಸಚಿವ ಸ್ಥಾನವನ್ನು ವಾಪಸ್ ಪಡೆದಿರುವುದಕ್ಕೆ ನಾಗೇಶ್ ಅಸಮಾಧಾನಗೊಂಡಿದ್ದಾರೆ. ಇನ್ನು ಹೇಳಿದಂತೆ ಸಚಿವ ಸ್ಥಾನ ಕೊಟ್ಟಿಲ್ಲವೆಂದು ಮುನಿರತ್ನ …

Read More »

ಪುಣೆಯಿಂದ ಹಳ್ಳಿಯಲ್ಲಿರುವ ಆರೋಗ್ಯ ಕೇಂದ್ರದವರೆಗೆ ಕೊವಿಶೀಲ್ಡ್ ಲಸಿಕೆ ತಲುಪಿದ್ದು ಹೇಗೆ

  ಬೆಂಗಳೂರು : ದೇಶಾದ್ಯಂತ ಕೊವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ದಿನಗಣನೆ ಶುರುವಾಗಿದೆ. ಡಿಸೆಂಬರ್.12ರಂದೇ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯಿಂದ ದೇಶದ 13 ರಾಜ್ಯಗಳಿಗೆ ಕೊವಿಶೀಲ್ಡ್ ಲಸಿಕೆಯನ್ನು ರವಾನಿಸಲಾಗಿದೆ. ಭಾರತದಲ್ಲಿ ಜನವರಿ.16ರಿಂದ ಕೊರೊನಾವೈರಸ್ ಲಸಿಕೆ ವಿತರಣೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ, 50 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಿಗೆ ಲಸಿಕೆ ನೀಡುವಲ್ಲಿ ಆದ್ಯತೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ ದೇಶದ 13 ಕಡೆಗಳಿಗೆ …

Read More »

ಹೈಕಮಾಂಡ್ ಗೆ ದೂರು ನೀಡಲು ಶಾಸಕ ರೇಣುಕಾಚಾರ್ಯ ದೆಹಲಿಗೆ ಪ್ರಯಾಣ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾಣ ಸ್ಪೋಟಗೊಂಡಿದ್ದು, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹೈಕಮಾಂಡ್ ಗೆ ದೂರು ನೀಡಲು ಇಂದು ಶಾಸಕ ರೇಣುಕಾಚಾರ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ 8.20 ರ ಸುಮಾರಿಗೆ ಶಾಸಕ ರೇಣುಕಾಚಾರ್ಯ ಅವರು ದೆಹಲಿಗೆ ಪ್ರಯಾಣ ಬೆಳಸಲಿದ್ದು, ಹೈಕಮಾಂಡ್ ಗೆ ದೂರು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಎಂಎಲ್ ಸಿಗಳಿಗೆ ಸಚಿವ ಸ್ಥಾನ ನೀಡಿದ್ದಾರೆ. ಗೆದ್ದವರನ್ನು ಬಿಟ್ಟು ಸೋತವರನ್ನು ಮಂತ್ರಿ …

Read More »

ಬೇಟಿ ಬಚಾವೊ’, ‘ಮಿಷನ್ ಶಕ್ತಿ’ ಪೊಳ್ಳು ಘೋಷಣೆ: ಪ್ರಿಯಾಂಕಾ ಗಾಂಧಿ ವಾದ್ರಾ

ಹೊಸದಿಲ್ಲಿ, : ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರಕಾರ ಮಹಿಳೆಯರ ಭದ್ರತೆ ಕುರಿತು ಪ್ರಚಾರ ನಡೆಸಲು ಕೋಟ್ಯಾಂತರ ರೂಪಾಯಿ ವೆಚ್ಚ ಮಾಡುತ್ತದೆ. ಆದರೆ, ತಳ ಮಟ್ಟದಲ್ಲಿ ಈ ವಿಷಯದ ಬಗ್ಗೆ ನಿರ್ಲಕ್ಷ್ಯದ ಮನೋಭಾವ ಹೊಂದಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಹಿಂದಿ ಪೋಸ್ಟ್‌ನಲ್ಲಿ ಪ್ರಿಯಾಂಕಾ ಗಾಂಧಿ, ಉತ್ತರಪ್ರದೇಶದಲ್ಲಿ ಮಹಿಳೆಯರ ಮೇಲೆ ನಡೆದ ಅಪರಾಧದ ಕುರಿತ ಇತ್ತೀಚೆಗಿನ ವರದಿಯನ್ನು ಉಲ್ಲೇಖಿಸಿದ್ದಾರೆ. ”ಬೇಟಿ ಬಚಾವೊ” …

Read More »

ಬೆಳಗಾವಿ: ₹14.74 ಕೋಟಿ ತೆರಿಗೆ ವಂಚನೆ ಬಯಲಿಗೆ

ಬೆಳಗಾವಿ: ಜಿಎಸ್‌ಟಿ ಪಾವತಿ ವಿಷಯದಲ್ಲಿ ₹ 14.74 ಕೋಟಿ ತೆರಿಗೆ ವಂಚಿಸಿದ ಆರೋಪದ ಮೇಲೆ ಸುವರ್ಣ ಬಿಲ್ಡ್‌ಕಾನ್‌ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಮನೋಜಕುಮಾರ್ ಪ್ರನ್ನಾಥ್ ಅಬ್ರೋಲ್ ಎನ್ನುವವರನ್ನು ಜಿಎಸ್‌ಟಿ ನಿರ್ದೇಶನಾಲಯದ ಜಾಗೃತ ದಳವು ಬೆಳಗಾವಿಯಲ್ಲಿ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ‘ವಿಚಾರಣೆ ನಡೆಸಿದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಆರೋಪಿಯನ್ನು ಜ. 25ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಂಗಳೂರಿನ ಆ ಕಂಪನಿಯು ಪುಣೆಯಲ್ಲಿ ಕಾರ್ಪೊರೇಟ್ ಕಚೇರಿ ಹೊಂದಿದೆ. ಕರ್ನಾಟಕ ಹಾಗೂ …

Read More »

ತೆರಿಗೆದಾರರಿಗೆ ಸಿಹಿ ಸುದ್ದಿ : ಕೇಂದ್ರ ಸರ್ಕಾರದಿಂದ ಆದಾಯ ತೆರಿಗೆ ರಿಟರ್ನ್ (ಐಟಿಆರ್) ವಿನಾಯಿತಿ ಮಿತಿ ಹೆಚ್ಚಳ?

ನವದೆಹಲಿ: 2021ರ ಕೇಂದ್ರ ಬಜೆಟ್ ಗೆ ಇನ್ನು ಕೆಲವೇ ದಿನಗಳು ಬಾಕಿ ಯಿದ್ದು, ಮುಂದಿನ ತಿಂಗಳು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಪ್ರಸ್ತಾವನೆಗಳಿಂದ ಮಧ್ಯಮ ವರ್ಗದವರಿಗೆ ಹಲವು ಗಿಫ್ಟ್‌ಗಳು ಕಾದಿದೆ ಎನ್ನಲಾಗಿದೆ. 2020-21ರ ಕೇಂದ್ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ವು ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಅಡಿಯಲ್ಲಿ , ವೈಯಕ್ತಿಕ ಆದಾಯ ತೆರಿಗೆ ಪಾವತಿದಾರರ ಮೂಲ ತೆರಿಗೆ ವಿನಾಯಿತಿ ಮಿತಿಯನ್ನು 2.50 ಲಕ್ಷ ರೂ.ಗಳಿಂದ 5 ಲಕ್ಷ …

Read More »

ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದು ಮತ್ತೆ ವಿವಾದ ಸೃಷ್ಟಿಸಿದ ಸಂಸದೆ ಪ್ರಜ್ಞಾ ಸಿಂಗ್

ಉಜ್ಜಯಿನಿ: ಪದೇ ಪದೇ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುತ್ತಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಈಗ ಮತ್ತೆ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ‘ದೇಶಭಕ್ತ’ ಎಂದು ಕರೆಯುವ ಮೂಲಕ ಮತ್ತೊಮ್ಮೆ ವಿವಾದ ಎಬ್ಬಿಸಿದ್ದಾರೆ. ಪ್ರಜ್ಞಾ ಠಾಕೂರ್ ಮಂಗಳವಾರ ಸಂಜೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ ‘ಆ ಪಕ್ಷದವರು ಯಾವಾಗಲೂ ನಿಜವಾದ ದೇಶಭಕ್ತರನ್ನು ನಿಂದಿಸುತ್ತಾರೆ’ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಗೋಡ್ಸೆಯನ್ನು ‘ಮೊದಲ ಭಯೋತ್ಪಾದಕ’ ಎಂದು …

Read More »