Breaking News

Daily Archives: ಜನವರಿ 18, 2021

ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಬಹಳ ಆಪ್ತರು.: ಯತ್ನಾಳ್

ಹಾವೇರಿ: ಬಿಎಸ್ ವೈ ಅವರ ಸಿಡಿ ಬಗ್ಗೆ ನಾನು ಹೇಳಿಲ್ಲ. ಆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದನ್ನು ನಾನು ಹೇಳಿದ್ದೇನೆ. ನಾನು ಶರಣರ‌ ವಚನಗಳ ಸಿಡಿ ನೋಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಯಡಿಯೂರಪ್ಪ ಸಿಎಂ ಆಗಿರುವರೆಗೂ ನಾನು ಮಂತ್ರಿ ಆಗುವುದಿಲ್ಲ ಎಂದರು. ನಾನು ಸಚಿವ ಸ್ಥಾನ ಕೇಳಿಲ್ಲ. ಯಾವ್ಯಾವ ಜಿಲ್ಲೆಗೆ …

Read More »

ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಯಾಗಬಹುದು: ಸದಸ್ಯರಿಗೆ ರಜನಿ ಅಭಿಮಾನಿಗಳ ಸಂಘ!

ಚೆನ್ನೈ: ನಟ ರಜನಿಕಾಂತ್ ಅಭಿಮಾನಿಗಳ ಸಂಘದ ಸದಸ್ಯರು ಇತರ ಯಾವುದೇ ರಾಜಕೀಯ ಪಕ್ಷಗಳಿಗೆ ಸೇರ್ಪಡೆಗೊಳ್ಳಲು ಮುಕ್ತರಾಗಿದ್ದಾರೆ ಎಂದು ರಜನಿಕಾಂತ್ ಅಭಿಮಾನಿಗಳ ಸಂಘ ಸೋಮವಾರ(ಜನವರಿ 18, 2021) ತಿಳಿಸಿದೆ. ರಜಿನಿ ಮಕ್ಕಳ್ ಮಂಡ್ರಮ್(ಆರ್ ಎಂಎಂ) ಗೆ ತಮ್ಮ ರಾಜೀನಾಮೆ ಸಲ್ಲಿಸಿದ ನಂತರ ಸದಸ್ಯರು ತಮ್ಮ ಆಯ್ಕೆಯಂತೆ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಕೊಳ್ಳಬಹುದಾಗಿದೆ ಎಂದು ಸ್ಪಷ್ಟಪಡಿಸಿರುವುದಾಗಿ ವರದಿ ವಿವರಿಸಿದೆ. ಇತ್ತೀಚೆಗೆ ರಜಿನಿ ಮಕ್ಕಳ್ ಮಂಡ್ರಮ್ ನ ಕೆಲವು ಮುಖಂಡರು ಡಿಎಂಕೆಗೆ ಸೇರ್ಪಡೆಗೊಂಡ ನಂತರ …

Read More »

ಕರೊನಾ ಲಸಿಕೆ ಪಡೆದಿದ್ದ ಆಸ್ಪತ್ರೆ ಸಿಬ್ಬಂದಿ 3 ದಿನದ ಬಳಿಕ ಸಾವು!

ಬಳ್ಳಾರಿ: ಕರೊನಾ ಲಸಿಕೆ ತೆಗೆದುಕೊಂಡ ಮೂರು ದಿನಗಳ ಬಳಿಕ ಡಿ ಗ್ರೂಪ್ ನೌಕರರೊಬ್ಬರು ಸಂಡೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಂಡೂರು ಸರ್ಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರ ನಾಗರಾಜ್ (43) ಮೃತ. ಲಸಿಕೆ ಪಡೆದ ಬಳಿಕ ಆರಾಮಾಗಿದ್ದ ನಾಗರಾಜ್ ನಿನ್ನೆ(ಭಾನುವಾರ) ಮತ್ತು ಇಂದು(ಸೋಮವಾರ) ಕೆಲಸಕ್ಕೆ ಹಾಜರಾಗಿದ್ದರು. ಆದರೆ, ಇಂದು ಹೃದಯಾಘಾತವಾಗಿದ್ದು, ಕೊನೆಯುಸಿರೆಳೆದಿದ್ದಾರೆ. ನಾಗರಾಜ್ ಸಾವಿಗೆ ಕರೊನಾ ಲಸಿಕೆ ಕಾರಣ ಅಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ನಾಗರಾಜ್ ಮೃತದೇಹವನ್ನು ಪರೀಕ್ಷೆ ಮಾಡಲಾಗುತ್ತಿದ್ದು, ವರದಿ …

Read More »

ಸಿಆರ್‌ಪಿಎಫ್‌ಗೆ ಡಿಅರ್‌ಡಿಒ ಅಭಿವೃದ್ಧಿಪಡಿಸಿದ 21 ಬೈಕ್‌ ಆಯಂಬುಲೆನ್ಸ್‌

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ 21 ಬೈಕ್‌ ಆಂಬುಲೆನ್ಸ್‌ಗಳನ್ನು ಕೇಂದ್ರೀಯ ಮೀಸಲು ಪೊಲೀಸ್‌ ಪಡೆಗೆ (ಸಿಆರ್‌ಪಿಎಫ್‌) ಸೋಮವಾರ ಹಸ್ತಾಂತರಿಸಲಾಯಿತು. ನಕ್ಸಲ್‌ ಪೀಡಿತ ಮತ್ತು ಹಿಂಸಾಚಾರ ಪ್ರದೇಶಗಳಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಒದಗಿಸಲು ಮತ್ತು ಆಸ್ಪತ್ರೆಗೆ ದಾಖಲಿಸಲು ಈ ಬೈಕ್‌ ಆಂಬುಲೆನ್ಸ್‌ಗಳನ್ನು ಬಳಸಲು ಉದ್ದೇಶಿಸಲಾಗಿದೆ. ‘ರಕ್ಷಿತಾ’ ಹೆಸರಿನಲ್ಲಿ 350 ಸಿಸಿ ರಾಯಲ್‌ ಎನ್‌ಫಿಲ್ಡ್‌ ಕ್ಲಾಸಿಕ್‌ ಬೈಕ್‌ನಲ್ಲಿ ಡಿಆರ್‌ಡಿಒದ ವೈಜ್ಞಾನಿಕ ಸಂಶೋಧಗೆ ಸಂಬಂಧಿಸಿದ ‘ಅಣು ವೈದ್ಯಕೀಯ ಮತ್ತು …

Read More »

ಮಹಾನಗರಪಾಲಿಕೆ: ಮೀಸಲಾತಿ ಪ್ರಕಟ

ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ. 2018ರ ಆ.10ರಂದು ಹೊರಡಿಸಲಾಗಿದ್ದ ಅಧಿಸೂಚನೆ ರದ್ದುಪಡಿಸಲಾಗಿದೆ. ಈಗ ಕರಡು ಮೀಸಲಾತಿಯನ್ನು ಸಾರ್ವಜನಿಕರ ಗಮನಕ್ಕೆ ತರಲಾಗಿದೆ. ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ ಲಿಖಿತವಾಗಿ ಕಾರಣಸಹಿತ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನಗರಪಾಲಿಕೆಗೆ ಚುನಾವಣೆ ನಡೆಸಲು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್‌ಇಸಿ) ಹೈಕೋರ್ಟ್ ಈಚೆಗೆ ನಿರ್ದೇಶನ …

Read More »

ಡಬಲ್ ಎಂಜಿನ್ ಸರ್ಕಾರಕ್ಕೆ ಡಿಕೆಶಿ ಸವಾಲು

ಕಲಬುರಗಿ,ಜ.18- ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬ್ಬಲ್ ಎಂಜಿನ್ ಸರ್ಕಾರ ಮಹದಾಯಿ ಯೋಜನೆಯನ್ನು ಜಾರಿಗೊಳಿಸಲಿ. ಕೃಷ್ಣಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ. ಕಲಬುರಗಿ ವಿಭಾಗೀಯ ಮಟ್ಟದ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು   ನಿನ್ನೆ ಬೆಳಗಾವಿಯ ಜನಸೇವಕ್ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಡಬ್ಬಲ್ ಎಂಜಿನ್ …

Read More »

ಇಂದಿನಿಂದ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ

ಬೆಂಗಳೂರು,ಜ.18- ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯದಲ್ಲಿ ಇಂದಿನಿಂದ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದ್ದು, ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಣಿಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಪಶುಸಂಗೋಪನಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎನ್.ಪ್ರವೀಣ್ ಈ ಆದೇಶ ಹೊರಡಿಸಿದ್ದು, ರಾಜ್ಯಪತ್ರ ಪ್ರಕಟಿಸಲಾಗಿದೆ. ಕೂಡಲೇ ನಿಯಮಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ರೈತರು, ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಣೆ ಮಾಡುವವರು ಯಾವುದೇ ಕಾರಣಕ್ಕೂ ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆಒಂದು ಕಡೆಯಿಂದ ಮತ್ತೊಂದು ಕಡೆಗೆ …

Read More »

ಪದೇ ಪದೇ ಹೇಳಿಕೆ ನೀಡಿದ್ರೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಲ್ಲ; ಠಾಕ್ರೆ ಹೇಳಿಕೆಗೆ ಡಿಕೆಶಿ, ಕಿಡಿ

ಕಲಬುರ್ಗಿ (ಜನವರಿ 18); ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಗಡಿ ವಿಚಾರದಲ್ಲಿ ನೀಡಿರೋ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ. ಕಾಂಗ್ರೆಸ್ ನಾಯಕರೂ ಠಾಕ್ರೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಠಾಕ್ರೆ ನೂರು ಬಾರಿ ಹೇಳಿಕೆ ನೀಡಿದ್ರೂ ಬೆಳಗಾವಿ ಮಾತ್ರ ನಮ್ಮದೇ ಆಗಿರುತ್ತದೆಯೇ ಹೊರತು, ಮಹಾರಷ್ಟ್ರಕ್ಕೆ ಸೇರಲ್ಲ. ಠಾಕ್ರೆ ಹೇಳಿಕೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳೋ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಕಲಬುರ್ಗಿಗೆ ಆಗಮಿಸಿದ …

Read More »

ಉತ್ತಮ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡಿದ ಲಕ್ಷ್ಮಣ ಸವದಿ,

ದಾವಣಗೆರೆ: ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ಬಸ್ ನಿಲ್ದಾಣದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ, ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ, ಸಂಸದರಾದ ಜಿ.ಎಮ್.ಸಿದ್ದೇಶ್ವರ ನೆರವೇರಿಸಿದರು. ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ನಿಗಮದ ಬಸ್ಸುಗಳ ಉತ್ತಮ ಚಾಲಕರಿಗೆ ಬೆಳ್ಳಿ ಪದಕ ವಿತರಣೆ …

Read More »

ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ :ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಕಳೆದೊಂದು ವರ್ಷದಿಂದ ವಿಶ್ವವ್ಯಾಪಿಯಾಗಿ ಕಾಡುತ್ತಿರುವ ಕೊರೋನಾ ಮಹಾಮಾರಿ ನಿರ್ಮೂಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತೀ ದೊಡ್ಡ ಲಸಿಕೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇಡೀ ವಿಶ್ವವೇ ನಮ್ಮ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆ ಬಗ್ಗೆ ಹೆಮ್ಮೆಪಡುತ್ತಿದೆ, ಕೋವಿಡ್-೧೯ನ್ನು ಯಶಸ್ವಿಯಾಗಿ ನಿಭಾಯಿಸಿರುವ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ …

Read More »