Breaking News
Home / 2021 / ಜನವರಿ / 23 (page 3)

Daily Archives: ಜನವರಿ 23, 2021

ವಿಧಾನಪರಿಷತ್ ಗಲಾಟೆಗೆ ಮಾಧುಸ್ವಾಮಿ, ಅಶ್ವತ್ಥನಾರಾಯಣ ಕಾರಣ’

ಬೆಂಗಳೂರು: ‘ವಿಧಾನಪರಿಷತ್ತಿನಲ್ಲಿ ಡಿ.15 ರಂದು ನಡೆದ ಗಲಾಟೆಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಮತ್ತು ಸಚಿವ ಜೆ.ಸಿ ಮಾಧುಸ್ವಾಮಿ ಅವರೇ ಕಾರಣರು’ ಎಂದು ಗಲಾಟೆಯ ವಿಚಾರಣೆಗೆಂದು ನೇಮಿಸಿದ್ದ ಸದನ ಸಮಿತಿ ತನ್ನ ಮಧ್ಯಂತರ ವರದಿಯಲ್ಲಿ ತಿಳಿಸಿದೆ. ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ವಿಧಾನಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಅಧ್ಯಕ್ಷತೆಯಲ್ಲಿ ಸದನ ಸಮಿತಿಯನ್ನು ರಚಿಸಿದ್ದರು. ಸಮಿತಿ ಶುಕ್ರವಾರ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು, ಪೂರ್ಣ ವರದಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶವನ್ನು ಕೇಳಿದೆ. ಅಶ್ವತ್ಥನಾರಾಯಣ, ಮಾಧುಸ್ವಾಮಿ ಮತ್ತು …

Read More »

ಹುಣಸೋಡು ಜಿಲೆಟಿನ್ ಸ್ಫೋಟ ಪ್ರಕರಣ: ಮೂವರು ವಶಕ್ಕೆ, ಬಾಂಬ್ ನಿಷ್ಕ್ರಿಯ ದಳ ಭೇಟಿ

ಶಿವಮೊಗ್ಗ: ಹುಣಸೋಡು ಬಳಿಯ ಕ್ರಶರ್‌ನಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ ಶಾಂತರಾಜು ಪ್ರಜಾವಾಣಿಗೆ ತಿಳಿಸಿದ್ದಾರೆ. ಕಲ್ಲು ಗಣಿಗಾರಿಕೆಗೆ ಭೂಮಿ ನೀಡಿದ್ದ ಅವಿನಾಶ್ ಕುಲಕರ್ಣಿ, ನಿರ್ವಹಣೆ ಮಾಡುತ್ತಿದ್ದ ನರಸಿಂಹ ಗಂಧದಮನೆ, ಸುಧಾಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಳಿಗ್ಗೆ 11ರ ಸುಮಾರಿಗೆ ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. …

Read More »

ಅಪಾರ್ಟ್ ಮೆಂಟ್ ನಲ್ಲಿ ಜೂಜಾಟ 2 ಲಕ್ಷದ 10 ಸಾವಿರ ರೂಪಾಯಿ ಹಣ ವಶಕ್ಕೆ

ಬೆಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ಜೂಜಾಟ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 8 ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಕೃಷ್ಣ, ಮಹೇಶ್, ಮಂಜುನಾಥ್, ವಿಶ್ವನಾಥ್, ರಘು, ಪ್ರಸಾದ್, ಲಕ್ಷ್ಮಣ, ಹರೀಶ್ ಬಂಧಿತ ಆರೋಪಿಗಳು. ಅಪಾರ್ಟ್ ಮೆಂಟ್ ನ್ನೇ ತಮ್ಮ ಜೂಜಾಟ ಕೇಂದ್ರವನ್ನಾಗಿ ಆರೋಪಿಗಳು ಮಾಡಿಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 8 ಜನರನ್ನು ಬಂಧಿಸಿದ್ದು, 2 ಲಕ್ಷ 10 …

Read More »

ಶಿವಸೇನೆ ಪುಂಡರ ವಿರುದ್ಧ ಕಾಕತಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಬೆಳಗಾವಿ: ಮಹಾನಗರ ಪಾಲಿಕೆ ಬಳಿ ಇದ್ದ ಕನ್ನಡ ಧ್ವಜವನ್ನು ತೆರವು ಮಾಡಲು ಮುಂದಾಗಿದ್ದ ಶಿವಸೇನೆ ಪುಂಡರ ವಿರುದ್ಧ ಕಾಕತಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಬೆಳಗಾವಿ ಗಡಿ ಪ್ರವೇಶಿಸಿ ಪಾಲಿಕೆಯ ಬಳಿ ಸ್ಥಾಪಿಸಲಾಗಿದ್ದ ಕನ್ನಡ ಧ್ವಜವನ್ನು ತೆರವು ಮಾಡಲು ಯತ್ನಿಸಿದ್ದ ಶಿವಸೇನೆ ಅಧ್ಯಕ್ಷ ವಿಜಯ ದೇವಣೆ ಸೇರಿದಂತೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕದ ಗಡಿಯೊಳಗೆ ನುಗ್ಗಲು ಯತ್ನಿಸಿದ್ದ ಶಿವಸೇನೆ ಕಾರ್ಯಕರ್ತರನ್ನು ಜ.21ರಂದು ಪೊಲೀಸರು ಶಿನ್ನೊಳ್ಳಿ ಗಡಿಯಲ್ಲಿ ತಡೆದು …

Read More »

ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಪದ್ಮಶ್ರೀ ಪುರಸ್ಕೃತ ಡಾ.ದೊಡ್ಡರಂಗೇಗೌಡ ಆಯ್ಕೆ

ಹಾವೇರಿ: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಪದ್ಮಶ್ರೀ ಪುರಸ್ಕೃತ ಡಾ.ದೊಡ್ಡರಂಗೇಗೌಡ ಆಯ್ಕೆಯಾಗಿದ್ದಾರೆ. ಈ ಕುರಿತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನುಬಳಿಗಾರ್ ಮಾಹಿತಿ ನೀಡಿದ್ದು, ಹಾವೇರಿಯ ಗುದ್ದಲ್ಯಪ ಹಳ್ಳಿಕೇರಿ ಕಾಲೇಜಿನ ಪಕ್ಕದಲ್ಲಿರುವ ವಿಶಾಲ ಮೈದಾನದಲ್ಲಿ ಫೆ.26, 27 ಹಾಗೂ 28ರಂದು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕೋವಿಡ್ ನಿಯಮ ಸಡಿಲಿಸಿ ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಮೊದಲ ದಿನವೇ 1 …

Read More »

ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆ

ನವದೆಹಲಿ: ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆಯಾಗಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಕಾರಣ ಎನ್ನಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್-ಡೀಸೆಲ್ ದರ ಲೀಟರ್ ಗೆ 25 ಪೈಸೆ ಹೆಚ್ಚಳವಾಗಿದ್ದು, ಪೆಟ್ರೋಲ್ 85.70 ರೂಪಾಯಿ ಆಗಿದೆ. ಡೀಸೆಲ್ ದರ 75.88 ರೂಪಾಯಿ ತಲುಪಿದೆ. ಮಧ್ಯಪ್ರದೇಶ ಭೋಪಾಲ್ ನಲ್ಲಿ ಪೆಟ್ರೋಲ್-ಡೀಸೆಲ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಪೆಟ್ರೋಲ್ ಲೀಟರ್ ಗೆ …

Read More »

ಪಂಚಮಸಾಲಿ ಸಮಾಜ ೨ ಎ ಮೀಸಲಾತಿ ಪಟ್ಟಿಗೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಲಿಂಗಾಯತ ಪಂಚಮಸಾಲಿ ೨ಎ ಮೀಸಲಾತಿ ಸೇರಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಒತ್ತಾಯಿಸಿ, ಪಂಚಮಸಾಲಿ ಅಭಿವೃದ್ಧಿ ಸಮಿತಿ ವತಿಯಿಂದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೋಳಿ ಮನವಿಯನ್ನು ಸ್ವಿಕರಿಸಿ ಮಾತನಾಡಿ, ಪಂಚಮಸಾಲಿ ಸಮುದಾಯ ಬಂದುಗಳು ನಡೆಸುತ್ತಿರುವ ೨ಎ ಮೀಸಲಾತಿಯ ಪಡೆಯುವಲು ನಡೆಸುತ್ತಿರುವ ಪಾದಯಾತ್ರೆಗೆ ಸಂರ್ಪೂಣವಾಗಿ ಸಹಕಾರ ಇದೆ ಮತ್ತು ಅದು ಯಶಶ್ವಿಯಾಗುವುದು ಎಂದು ಹೇಳಿದರು. ರಾಜ್ಯ ಸಭಾ ಸಂಸದ ಈರಣ್ಣ ಕಡಾಡಿ …

Read More »

ಸಂಗಮೇಶ ಪ್ರಭಾಕರ ಎಸಿಎಫ್ ಆಗಿ ಬಡ್ತಿ

ಬೆಳಗಾವಿ‌ : ನಾಗರಗಾಳಿ ವಲಯ ಅರಣ್ಯಾಧಿಕಾರಿ (RFO) ಸಂಗಮೇಶ ಪ್ರಭಾಕರ ಅವರಿಗೆ ಸರ್ಕಾರ ಎಸಿಎಫ್ ಹುದ್ದೆಗೆ ಮುಂಬಡ್ತಿ ನೀಡಿದೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ(ACF) ಆಗಿ ಮುಂಬಡ್ತಿ ನೀಡಲಾಗಿದೆ. ಕೃಷಿ ಇಲಾಖೆಯಡಿ ಹಾವೇರಿ ಜಲಾನಯನ ಅಭಿವೃದ್ಧಿ ಇಲಾಖೆಯ ಎಸಿಎಫ್ ಆಗಿ ಸಂಗಮೇಶ ಅವರನ್ನು ನೇಮಕ ಮಾಡಿದೆ.

Read More »

ಬ್ರೆಜಿಲ್ ತಲುಪಿದ ಭಾರತದ ಕೋವಿಶೀಲ್ಡ್ : ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಬ್ರೆಜಿಲ್ ಅಧ್ಯಕ್ಷ

ನವದೆಹಲಿ: ಭಾರತ ವಿವಿಧ ದೇಶಗಳಿಗೆ ಕೊರೊನಾ ಲಸಿಕೆ ರಫ್ತು ಮಾಡುತ್ತಿದ್ದು, ಈಗಾಗಲೇ ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್​​, ನೇಪಾಳಗೆ ಲಸಿಕೆ ಕಳುಹಿಸಿಕೊಟ್ಟಿರುವ ಭಾರತ ಇದೀಗ ಬ್ರೆಜಿಲ್​ಗೂ ಕೊವಿಶೀಲ್ಡ್​ ವ್ಯಾಕ್ಸಿನ್ ರವಾನೆ ಮಾಡಿದೆ. ಕೊವಿಶೀಲ್ಡ್ ಲಸಿಕೆ ಬ್ರೆಜಿಲ್​ಗೆ ತಲುಪಿದ್ದು, ಅಲ್ಲಿನ ಅಧ್ಯಕ್ಷ ಜೈರ್​ ಎ ಬೋಲ್ಸನಾರೋ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಜಾಗತಿಕ ಸಮಸ್ಯೆ ನಿರಾರಣೆ ಮಾಡಲು ಉತ್ತಮ ಪಾಲುದಾರನಾಗಿರುವ ಭಾರತ ಬ್ರೆಜಿಲ್​ಗೆ ಲಸಿಕೆ ರಫ್ತು ಮಾಡಲು ನಮಗೆ …

Read More »

ಸರಕಾರ ಹೇಡಿ ಸರಕಾರವಾಗಬಾರದು: ಹೊರಟ್ಟಿ,

ಬೆಳಗಾವಿ –  ಪುಂಡಾಟಿಕೆ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯವರಿಗೆ ಕರ್ನಾಟಕದ ಪೋಲೀಸರು ಹಾಗೂ ಜಿಲ್ಲಾಡಳಿತ ಸಹ ಹೆದರುತ್ತಾರೆಯೇ? ಎದು ಪ್ರಶ್ನಿಸಿರುವ ವಿಧಾನಪರಿಷತ್ ಮಾಜಿ ಸಭಾಪತಿ, ಮಾಜಿ ಸಚಿವ, ಹಾಲಿ ಸದಸ್ಯ ಬಸವರಾಜ ಹೊರಟ್ಟಿ, ಕನ್ನಡದ ಮಣ್ಣಿನಲ್ಲಿದ್ದು ನಾಡು ನುಡಿಯ ವಿರುದ್ಧ ದ್ರೋಹ ಬಗೆಯುವ ನಾಡದ್ರೋಹಿ ಎಂಇಎಸ್.ನವರಿಗೆ ಯಾವುದೇ ಕಾರಣಕ್ಕೂ ಹೋರಾಟ ಮಾಡಲು ಅನುಮತಿ ನೀಡಬಾರದು. ಇಂತಹ ನಾಡದ್ರೋಹಿಗಳ ದೇಶದ್ರೋಹ ಕೆಲಸಕ್ಕೆ ರಾಜ್ಯ ಸರಕಾರ ಅವರ ಮೇಲೆ ಉಗ್ರ ಕ್ರಮ ತೆಗೆದುಕೊಳ್ಳಬೇಕು …

Read More »