Breaking News
Home / 2021 / ಜನವರಿ / 24 (page 2)

Daily Archives: ಜನವರಿ 24, 2021

ಧಾರವಾಡ ಬಳಿ ಮಿನಿಬಸ್ ಗೆ ಟಿಪ್ಪರ್ ಡಿಕ್ಕಿ ಪ್ರಕರಣ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಮಹಿಳೆ ಸಾವು

ದಾವಣಗೆರೆ : ಧಾರವಾಡದ ಇಟ್ಟಿಗಟ್ಟಿ ಗ್ರಾಮದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಂತ ಮತ್ತೋರ್ವ ಮಹಿಳೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಧಾರವಾಡದ ಇಟ್ಟಿಗಟ್ಟಿ ಗ್ರಾಮದ ಬೈಪಾಸ್ ಬಳಿ ನಡೆದ ಮಿನಿ ಬಸ್ ಗೆ ಟಿಪ್ಪರ್ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.ಜನವರಿ 15ರಂದು ಗೋವಾಗೆ ಪ್ರವಾಸಕ್ಕೆಂದು ತೆರಳುತ್ತಿದ್ದಂತ ಮಹಿಳಾ ಕ್ಲಬ್ ಸದಸ್ಯರಿದ್ದಂತ ಮಿನಿ ಬಸ್ ಗೆ ಧಾರವಾಡದ ಇಟ್ಟಿಗಟ್ಟಿ ಬಳಿ …

Read More »

ದೆಹಲಿ ಗಣರಾಜ್ಯೋತ್ಸವ ಪೆರೇಡೆಗೆ ಬೈಲಹೊಂಗಲದ ಕೃಷ್ಣಾ ಬಡಿಗೇರ ಆಯ್ಕೆ

ಬೈಲಹೊಂಗಲ : ಪಟ್ಟಣದ ಮೂರುಸಾವಿರ ಮಠದ ಎಸ್.ಜಿ.ವಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕದ ವಿದ್ಯಾರ್ಥಿ ಕೃಷ್ಣಾ ಬಡಿಗೇರ ಇದೇ ಜ.26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಗೆ ಆಯ್ಕೆಯಾಗಿದ್ದಾನೆ. ಬಿಕಾಂ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಎನ್.ಸಿ.ಸಿ ಘಟಕದಲ್ಲಿ ಸೀನಿಯರ್ ಅಂಡರ್ ಆಫೀಸರ ಇದ್ದಾನೆ. ರಾಜ್ಯದಿಂದ ಒಟ್ಟು 26 ಕೆಡೆಟಗಳು ದೆಹಲಿಯ ಗಣರಾಜ್ಯೋತ್ಸವ ಪರೇಡನಲ್ಲಿ ಭಾಗವಹಿಸುತ್ತಿದ್ದು, ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಅವಕಾಶ ಸಿಕ್ಕಿದ್ದು . 25 ನೇ …

Read More »

ಜ.26ರಂದು ಬೆಂಗಳೂರಲ್ಲಿ ದೆಹಲಿ ಮಾದರಿಯ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ..!

ಬೆಂಗಳೂರು,ಜ.24-ಕೃಷಿ ಕಾಯ್ದೆಗಳನ್ನು ವಿರೋಸಿ ದೆಹಲಿಯಲ್ಲಿ ನಡೆಸುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಜ.26ರಂದು ರಾಜ್ಯದಲ್ಲಿ ರೈತ ಸಂಘಟನೆಗಳು ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿವೆ. ಬೆಂಗಳೂರು ನಗರದಲ್ಲಿ ಸಾವಿರಾರು ಟ್ರ್ಯಾಕ್ಟರ್‍ಗಳ ರ್ಯಾಲಿ ನಡೆಸುವ ಮೂಲಕ ದೆಹಲಿ ರೈತ ಚಳುವಳಿಗೆ ಬೆಂಬಲ ನೀಡಲಾಗುವುದು ಎಂದು ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ವೀರಸಂಗಯ್ಯ ಹೇಳಿದರು.   ರಾಜ್ಯ ರೈತ ಸಂಘ, ಹಸಿರುಸೇನೆ, ಕಬ್ಬು ಬೆಳೆಗಾರರ ಸಂಘ, ಪ್ರಾಂತರೈತ ಸಂಘ, ಐಕ್ಯ ಹೋರಾಟ ಸಮಿತಿ ಸೇರಿದಂತೆ 4 …

Read More »

ಬೆಳಗಾವಿಯಲ್ಲಿ KSRTC ಬಸ್- ಕಾರು ನಡುವೆ ಭೀಕರ ಅಪಘಾತ : ನಾಲ್ವರು ಸಾವು

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಬೆಳಗಾವಿಯಿಂದ ಇಲಕಲ್ ಗೆ ಹೊರಟ ಬಸ್ ಹಾಗೂ ಯರಗಟ್ಟಿಯಿಂದ ಬೆಳಗಾವಿಗೆ ಬರುತ್ತಿದ್ದ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಬಸ್ ನಡುವೆ ಸಿಲುಕಿ ನುಜ್ಜುಗುಜ್ಜಾಗಿದೆ. ಮುರಗೋಡ …

Read More »

ಗೋಕಾಕದಲ್ಲಿ ಟ್ರಾಫಿಕ್ ಸ್ಟೇಷನ್ ಚಾಲನೆಯನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ನೀಡಿದರು

ಗೋಕಾಕ:  ಗೋಕಾಕ ತಾಲೂಕು ಕೇಂದ್ರಗಳಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಅವಶ್ಯಕತೆ ಇದೆ. ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕನಲ್ಲಿ ಟ್ರಾಫಿಕ್ ಠಾಣೆಗೆ ಬೇಡಿಕೆ ಇಟ್ಟಿದ್ದೇವೆ. ಸರ್ಕಾರದಿಂದ ಅನುಮತಿ ಪಡೆದು ಮುಂದಿನ ದಿನಗಳಲ್ಲಿ ಈ ಎರಡು ತಾಲೂಕು ಕೇಂದ್ರಗಳಲ್ಲಿ ಟ್ರಾಫಿಕ್ ಠಾಣೆ ಆರಂಭಿಸಲಾಗತ್ತೆ ಎಂದು ಹೇಳಿದರು.

Read More »

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ : ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ : ಹೆಣ್ಣು ಮಕ್ಕಳ ಸಬಲೀಕರಣ, ಉತ್ತಮ ಆರೋಗ್ಯ ಆರೈಕೆ, ಲಿಂಗ ಸೂಕ್ಷ್ಮತೆ ಸುಧಾರಣೆ ಸೇರಿದಂತೆ ಹಲವು ಉಪಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಭಾನುವಾರ ತಿಳಿಸಿದರು. ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ನಾವು ನಮ್ಮ #DeshKiBeti ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ …

Read More »

ಕಿಸಾನ್ ಸಂಸದ್ ಸಭೆಗೆ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ: ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಕಿಸಾನ್ ಸಂಸದ್ ಸಭೆಗೆ ವೈಯಕ್ತಿಕ ಕಾರಣದಿಂದ ಸಭೆಗೆ ಹಾಜರಾಗುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ. ಹಿರಿಯ ವಕೀಲ ಪ್ರಶಾಂತ್ ಭೂಷಣ ಅವರಿಗೆ ಪತ್ರ ಬರೆದಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ಕಿಸಾನ್ ಸಂಸದ್ ಸಭೆಗೆ ವೈದ್ಯಕೀಯ ಕಾರಣಗಳಿಂದಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ದೈಹಿಕವಾಗಿ ಹಾಜರಾಗದಿದ್ದರೂ ನಾನು ರೈತರ ಪರವಾಗಿದ್ದೇನೆಂದು ಹೇಳಿದ್ದಾರೆ. ಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು. ರೈತರ ಮತ್ತು ಸ್ನೇಹಿತರ …

Read More »

ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮತ್ತೆ ಟೀಕೆ

ನವದೆಹಲಿ : ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮತ್ತೆ ಟೀಕೆ ಮಾಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ಬಗ್ಗೆ ಸಾರ್ವಜನಿಕರು ಹಣದುಬ್ಬರದಿಂದ ಬಳಲುತ್ತಿರುವಾಗ ಸರ್ಕಾರ ತೆರಿಗೆ ಸಂಗ್ರಹ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ಮೋದಿ ಜಿ ಅವರು ‘ಜಿಡಿಪಿ’ಯಲ್ಲಿ ಭಾರಿ ಬೆಳವಣಿಗೆಯನ್ನು ತೋರಿಸಿದ್ದಾರೆ, ಅಂದರೆ ಗ್ಯಾಸ್-ಡೀಸೆಲ್-ಪೆಟ್ರೋಲ್ ಬೆಲೆಗಳು! ಸಾರ್ವಜನಿಕರು ಹಣದುಬ್ಬರದಿಂದ ಕಷ್ಟ ಅನುಭವಿಸುತ್ತಿದ್ದಾರೆ, ಮೋದಿ ಸರ್ಕಾರ ತೆರಿಗೆ ಸಂಗ್ರಹದಲ್ಲಿ ನಿರತವಾಗಿದೆ” ಎಂದು …

Read More »

ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ:

ಹೊಸದಿಲ್ಲಿ: ಆರ್ ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ಏರ್ ಲಿಫ್ಟ್ ಮೂಲಕ ಕರೆದೊಯ್ಯಲಾಗಿದೆ. ಲಾಲೂ ಪ್ರಸಾದ್ ಯಾದವ್ ಅವರನ್ನು ಶುಕ್ರವಾರ ರಾಂಚಿಯ ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಏರ್‌ಲಿಫ್ಟ್‌ ಮೂಲಕ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಾಜಿ ಉಪ ಸಿಎಂ ತೇಜಶ್ವಿ ಯಾದವ್, …

Read More »

ಹಿಂದಿ ರಾಷ್ಟ್ರ ಭಾಷೆ ಅಲ್ಲ:ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದನ್ನು ಶಾಲಾ ಹಂತದಿಂದಲೇ ತಿಳಿಸಬೇಕಿದೆ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ‌ನಿಯೋಜಿತ ಅಧ್ಯಕ್ಷರಾದ ಸಾಹಿತಿ ದೊಡ್ಡರಂಗೇಗೌಡರು ‘ಹಿಂದಿ ರಾಷ್ಟ್ರ ಭಾಷೆ’ ಎಂದು ಶುಕ್ರವಾರ ಹೇಳಿಕೆ ನೀಡಿದ್ದರು. ಆ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನಿಖಿಲ್‌ ಕುಮಾರಸ್ವಾಮಿ ಶನಿವಾರ ಟ್ವೀಟ್‌ ಮಾಡಿದ್ದಾರೆ. ‘ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು …

Read More »