Breaking News
Home / 2021 / ಜನವರಿ / 27 (page 3)

Daily Archives: ಜನವರಿ 27, 2021

ಬೆಳಗಾವಿ ಜಿ.ಪಂನಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ: ಅಧಿಕಾರಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಸಲಹೆ, ಸೂಚನೆ

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಸಚಿವ ರಮೇಶ ಜಾರಕಿಹೊಳಿ ನೇತೃತ್ವ ವಹಿಸಿದ್ದರು. ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಮಹೇಶ ಕುಮಟಳ್ಳಿ, ಅನಿಲ ಬೆನಕೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಬುಧವಾರ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ನಡೆಯಿತು. ಈ ವೇಳೆ …

Read More »

ಕರ್ನಾಟಕ-ಮಹಾರಾಷ್ಟ್ರ ಗಡಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿ: ಠಾಕ್ರೆ

ಮುಂಬೈ ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ‘ನಿರ್ಧಿಷ್ಟ ಚೌಕಟ್ಟಿನ’ ಅಡಿಯಲ್ಲಿ ಕೆಲಸ ಮಾಡಬೇಕೆಂದು ಕರೆ ನೀಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡುವವರೆಗೂ ಗಡಿಯಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸುವಂತೆ ಪುನರುಚ್ಚರಿಸಿದ್ದಾರೆ. ‘ಈವರೆಗೆ ಏನಾಗಿದೆಯೋ ಅದೆಲ್ಲ ಆಗಿಹೋಯಿತು. ಈಗ ನಾವು ಗೆಲ್ಲಲು ಹೋರಾಡಬೇಕಿದೆ. ದೀರ್ಘ ಕಾಲದಿಂದಲೂ ಉಳಿದಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಿಷ್ಟ ಸಮಯದಲ್ಲಿ ಪರಿಹರಿಸಿಕೊಳ್ಳುವತ್ತ ನಾವು …

Read More »

ಸಚಿವರು ಜವಾಬ್ದಾರಿಯುತ ಹೇಳಿಕೆ ನೀಡಲಿ: ಸತೀಶ ಜಾರಕಿಹೊಳಿ ಟಾಂಗ್

ಗೋಕಾಕ: “ರೈತರ ಪ್ರತಿಭಟನೆಯ ಕುರಿತು ಸಚಿವರು ಹಾದಿ-ಬೀದಿಯಲ್ಲಿ ಹೋಗುವವರ ರೀತಿ ಮಾತನಾಡಬಾರದು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜವಾಬ್ದಾರಿಯುತ ಹೇಳಿಕೆ ನೀಡಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿಕೆಗೆ ಟಾಂಗ್ ನೀಡಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರು ಹಕ್ಕು. ಆದರೆ, ಹಿಂಸಾತ್ಮಕ ಹೋರಾಟ ನಡೆಸುವುದು ತಪ್ಪು. ರೈತರ ಪ್ರತಿಭಟನೆ ಪಕ್ಷಾತೀತವಾಗಿದ್ದು, ಈ ಬಗ್ಗೆ ಯಾರೂ ಕೂಡ ಹಗುರವಾಗಿ ಮಾತನಾಡಬಾರದರು” ಎಂದರು. …

Read More »

ದೆಹಲಿಯಲ್ಲಿ ರೈತ ಹಿಂಚಾಚಾರದ ತನಿಖೆಯಾಗಲಿ, ಸತ್ಯ ಹೊರಬರಲಿ: ಸಚಿವ ರಮೇಶ ಜಾರಕಿಹೊಳಿ

ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಲವರು ಕೆಂಪುಕೋಟೆಗೆ ನುಗ್ಗಿ ಧ್ವಜ ಹಾರಿಸಿದ್ದಾರೆ. ಇಂಥದರ ಹಿಂದೆ ಹಲವರ ಕೈವಾಡ ಇರುವ ಶಂಕೆ ವ್ಯಕ್ತವಾಗುತ್ತಿದೆ. ವೈರಿ ದೇಶಗಳು ಇಂಥದ್ದಕ್ಕೆ ಕುಮ್ಮಕ್ಕು ಕೊಡುವ ಬಗ್ಗೆ ಮಾತನಾಡುತ್ತಿವೆ. ಹಿಂಸಾಚಾರದಲ್ಲಿ ಪಾಲ್ಗೊಂಡವರು ನಿಜವಾದ ರೈತರೇ ಹೇಗೆಂಬುದು ತನಿಖೆಯಾಗಲಿ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಸಚಿವ ರಮೇಶ ಜಾರಕಿಹೊಳಿ ಬುಧವಾರ ಮಾತನಾಡಿ, ದೆಹಲಿ ಹಿಂಸಾಚಾರ ದುರದೃಷ್ಟಕರ, …

Read More »

ಕೆಂಪುಕೋಟೆಯ ಮೇಲೆ ಧ್ವಜ್ ಹಾರಿಸಿದ್ದು ಬಿಜೆಪಿ ಕಾರ್ಯಕರ್ತ !! ರೈತ ಸಂಘಟನೆಗಳ ಆರೋಪ, ತನಿಖೆಗೆ ಒತ್ತಾಯ

ಹೊಸದಿಲ್ಲಿ: ದೆಹಲಿಯಲ್ಲಿ ಮಂಗಳವಾರ ನಡೆದ ಗಲಭೆ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲೆ ಸಿಖ್ ಧ್ವಜ್ ಹಾರಿಸಿದ್ದು ಪಂಜಾಬಿ ಚಿತ್ರನಟ ಹಾಗೂ ಬಿಜೆಪಿ ಕಾರ್ಯಕರ್ತ ದೀಪ್ ಸಿಧು ಹಾಗೂ ಬೆಂಬಲಿಗರು ಎಂದು ರೈತ ಸಂಘಟನೆಗಳು ಆರೋಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ದೀಪ್ ಸಿಧು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಫೋಟೊಗಳು ಹಾಗೂ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಿಧು ತೆಗೆಸಿಕೊಂಡ ಫೋಟೊಗಳು ವೈರಲ್ ಆಗಿವೆ. ಈ ಹಿಂದೆ ದೆಹಲಿ ಗಡಿಯಲ್ಲಿ ನಡೆದ …

Read More »

ನಾಳೆಯಿಂದ ವಿಧಾನಮಂಡಲ ಅಧಿವೇಶನ

ಬೆಂಗಳೂರು: ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಾಳೆಯಿಂದ ಫೆ.5 ರವರೆಗೆ ನಡೆಯಲಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಅಧಿವೇಶನ ವೇದಿಕೆಯಾಗಲಿದೆ. ಗುರುವಾರ ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯಿ ವಾಲಾ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜ.29ರಿಂದ ಸರ್ಕಾರದ ಅಧಿಕೃತ ಕಾರ್ಯಕಲಾಪಗಳು, ಅಧಿವೇಶನ ನಡೆಯಲಿದ್ದು, ಅನುದಾನ ವಿಳಂಬದ ಬಗ್ಗೆ ಶಾಸಕರ ಅಪಸ್ವರ, ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಎರಡೂ ಸದನಗಳಲ್ಲಿ ಪ್ರತಿಧ್ವನಿಸಲಿದೆ. …

Read More »

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ಪೆರಿಂಥಲಮನ್ನ ಪಟ್ಟಣದಲ್ಲಿ ಮಹಿಳೆಯೊಬ್ಬಳು ಮೊದಲ ಪ್ರಸವದಲ್ಲೇ ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಪಲಕ್ಕಾಡ್​ನ ಛಲಾವರ ಮೂಲದ ದಂಪತಿ ಮುಸ್ತಫಾ ಮತ್ತು ಮುಬೀನಾ ಕಳೆದ ವರ್ಷ ಮದುವೆಯಾಗಿದ್ದರು. ಗರ್ಭಾವಸ್ಥೆಯ ಆರಂಭದಲ್ಲೇ ಮುಬೀನಾ ನಾಲ್ಕು ಮಕ್ಕಳ ತಾಯಿ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಪೆರಿಂಥಲ್​ಮನ್ನದ ಮೌಲಾನಾ ಆಸ್ಪತ್ರೆಯ ಸ್ತ್ರೀರೋಗ ತಜ್ಞರಾದ ಡಾ. ಅಬ್ದುಲ್​ ವಾಹಾಬ್​ ಅವರ ಬಳಿ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದರು. ಗರ್ಭಾವತಿಯಾಗಿ 8 ತಿಂಗಳು …

Read More »

ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2019-20 ನೇ ಸಾಲಿನಲ್ಲಿ ವಿಶೇಷ ಚೇತನರಿಗೆ ಮಂಜೂರಾದ ತ್ರಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಸಚಿವ ರಮೇಶ ಜಾರಕಿಹೊಳಿ ಹಂಚಿಕೆ ಮಾಡಿದರು. ಇಲ್ಲಿನ ತಮ್ಮ ಗೃಹ ಕಚೇರಿ ಆವರಣದಲ್ಲಿ 15 ವ ವಿಶೇಷಚೇತನ ಫಲಾನುಭವಿಗಳಿಗೆ ವಾಹನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಟಿ.ಆರ್ ಕಾಗಲ ಮಡ್ಡಪ್ಪ ತೋಳಿನವರ.ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಸೇರಿದಂತೆ ಇಲಾಖೆ ಅಧಿಕಾರಿಗಳು,ಮುಖಂಡರು ಉಪಸ್ಥಿತರಿದ್ದರು.

Read More »

ವಿವಾದಾತ್ಮಕ ಪುಸ್ತಕ ಬಿಡುಗಡೆ; ಮಹಾ ಸರ್ಕಾರದ ವಿರುದ್ಧ ಕರವೇ ಪ್ರತಿಭಟನೆ

ಗೋಕಾಕ- ಕನಾ೯ಟಕ ಸೀಮಾವಾದ ಸಂಘಷ೯ ಸಂಕಲ್ಪ ಎಂಬ ವಿವಾದಾತ್ಮಕ ಪುಸ್ತಕವನ್ನು ಇಂದು ಮಹಾರಾಷ್ಟ್ರ ಸರ್ಕಾರ ಬಿಡುಗಡೆಗೊಳ್ಳಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಗೋಕಾಕ ತಾಲೂಕಾ ಘಟಕದ ಕಾರ್ಯಕರ್ತರು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ವಾಲ್ಮೀಕಿ ವೃತ್ತದಲ್ಲಿ ಸೇರಿ ಮಹಾ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪುಸ್ತಕದ ಮುಖ ಪುಟವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆಯಲ್ಲಿ ಕೃಷ್ಣಾ ಖಾನಪ್ಪನವರ, ದೀಪಕ ಹಂಜಿ, ಮುಗುಟ ಪೈಲ್ವಾನ್, ರಮೇಶ ಕಮತಿ, ಶೆಟ್ಟೆಪ್ಪಾ ಗಾಡಿವಡ್ಡರ, …

Read More »

ಏ. 1 ರಿಂದ ಪಡಿತರ ಚೀಟಿದಾರರಿಗೆ ಜೋಳ, ತೊಗರಿ, ರಾಗಿ: ಉಮೇಶ ಕತ್ತಿ

ಕಲಬುರ್ಗಿ: ‘ಉತ್ತರ ‌ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ‌ಕರ್ನಾಟಕ ದಲ್ಲಿ ಬೆಳೆಯುವ ರಾಗಿಯನ್ನು ಪಡಿತರ ಚೀಟಿದಾರರಿಗೆ ನೀಡಲು ನಿರ್ಧರಿಸಲಾಗಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಮಂಗಳವಾರ ಪ್ರಕಟಿಸಿದರು. ನಗರದ ಡಿಎಆರ್ ಮೈದಾನದಲ್ಲಿ ‌ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜೋಳ, ತೊಗರಿ, ರಾಗಿ ನೀಡ ಬೇಕು ಎಂಬುದು ಬಹಳ ದಿನಗಳ …

Read More »