Breaking News
Home / 2021 / ಜನವರಿ / 30 (page 2)

Daily Archives: ಜನವರಿ 30, 2021

ಮಹಾ ಸಿಎಂ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳ ಭುಗಿಲೆದ್ದ ಆಕ್ರೋಶ: 1 ಲಕ್ಷ ಕನ್ನಡಿಗರೊಂದಿಗೆ ಮಹಾರಾಷ್ಟ್ರ ಗಡಿಗೆ ನುಗ್ಗಲು ಸಜ್ಜು

ಬೆಂಗಳೂರು: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಕನ್ನಡ ಚಳುವಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಬಳಿ ಬೃಹತ್ ಪ್ರತಿಭಟನೆ ನಡೆಸಿದ್ದು, ರೈಲ್ವೆ ಚಳುವಳಿ ಆರಂಭಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಬೆಳಗಾವಿ ನಮ್ಮದು, ರಾಜ್ಯದ ಒಂದಿಂಚು ಜಾಗವನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಎಂಇಎಸ್ ನಿಷೇಧ ಮಾಡಬೇಕು. …

Read More »

ಗಡಿ ಉಸ್ತುವಾರಿ ಸಚಿವರನ್ನಾಗಿ  ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು

ಬೆಳಗಾವಿ –  ಗಡಿ ಉಸ್ತುವಾರಿ ಸಚಿವರನ್ನಾಗಿ  ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ, ಮಹಾರಾಷ್ಟ್ರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ. ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಈ ಪತ್ರ ಬರೆದಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರಕಾರ ಪದೇ ಪದೇ ಕೆಣಕುತ್ತಿದೆ. ಅಲ್ಲಿಯ ಮುಖ್ಯಮಂತ್ರಿಗಳು ಸಾಧ್ಯವಿರುವ ಎಲ್ಲ …

Read More »

ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು: ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ

Read More »

“ಕರ್ನಾಟಕಕ್ಕೆ ಮಹಾದಾಯಿ ನದಿಯ 1 ಹನಿ ನೀರನ್ನೂ ಕೊಡಲ್ಲ”

ಪಣಜಿ,ಜ.30- ನನ್ನ ಪಕ್ಷದವರೇ ಇರಲಿ ಅಥವಾ ಬೇರೆ ಯಾರೇ ಇರಲಿ ರಾಜ್ಯದ ಹಿತ ಕಡೆಗಣಿಸಿ ಮಹಾದಾಯಿ ನದಿಯಿಂದ ಒಂದೂ ಹನಿಯನ್ನೂ ಕರ್ನಾಟಕಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತೆ ಕ್ಯಾತೆ ತೆಗೆದಿದ್ದಾರೆ. ವಿರೋಧ ಪಕ್ಷಗಳು ವಿಧಾನಸಭೆಯಲ್ಲಿ ಮಂಡಿಸಿದ್ದ ನಿಲುವಳಿ ಸೂಚನೆ ಮೇಲೆ ಉತ್ತರಿಸಿರುವ ಪ್ರಮೋದ್ ಸಾವಂತ್, ಮಹದಾಯಿಯಿಂದ ನೀರು ಹರಿಸುವಂತೆ ನನ್ನ ಪಕ್ಷವೇ ನನ್ನ ಮೇಲೆ ಒತ್ತಡ ಹಾಕಿದರೂ ನಾನು ಭಾಗುವುದಿಲ್ಲ ಎಂದು …

Read More »

ಕೊಲೆ ಮಾಡಿ ಸಿನಿಮಾ ಸ್ಟೈಲಲ್ಲಿಆರೋಪಿಗಳು ಎಸ್ಕೇಪ್..!

ತುಮಕೂರು,ಜ.30-ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ನಂತರ ಅಪಘಾತವೆಂದು ಬಿಂಬಿಸಲು ಆತನ ಕಾರನ್ನು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಸಿ ಆರೋಪಿಗಳು ಅಲ್ಲಿಂದ ಪರಾರಿಯಾಗಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಅಕ್ಮಲ್ ಅಹಮದ್ (35) ಕೊಲೆಯಾಗಿರುವ ವ್ಯಕ್ತಿ. ಕೊರಟಗೆರೆ-ಮಧುಗಿರಿ ಮಾರ್ಗದ ತುಂಬಾಡಿಯಲ್ಲಿ ಎಡಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಗುದ್ದಿ ಅಪಘಾತದಲ್ಲಿ ಮೃತಪಟ್ಟಿದ್ದಾನೆಂದು ಸೀನಿಮಿಯ ರೀತಿ ಬಿಂಬಿಸಿದ್ದಾರೆ. ಕೊಲೆ ಮಾಡಿದ ನಂತರ ಅಪಘಾತವೆಂದು ಬಿಂಬಿಸಲು ಆರೋಪಿಗಳು ಅಕ್ಮಲ್ …

Read More »

ಪಂಚಾಯಿತಿ ವ್ಯವಸ್ಥೆ ಅಧ್ಯಯನಕ್ಕೆ ಕೇರಳ ಪ್ರವಾಸ: ಕೆ.ಎಸ್‌. ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿನ ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಆಯ್ಕೆಯಾಗಿರುವ ವಿಧಾನ ಪರಿಷತ್‌ನ 25 ಸದಸ್ಯರನ್ನು ಶೀಘ್ರದಲ್ಲಿ ಕೇರಳ ಪ್ರವಾಸಕ್ಕೆ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್‌. ಈಶ್ವರಪ್ಪ ಭರವಸೆ ನೀಡಿದರು. ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸದಸ್ಯ ಕೆ. ಹರೀಶ್‌ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸುವಾಗ ಈ ವಿಷಯ ತಿಳಿಸಿದ …

Read More »

‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು.: B.S.Y

ಬೆಂಗಳೂರು: ‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು. ಗಾಂಧೀಜಿ ಸ್ವಾವಲಂಬನೆ ಜೀವನ ತೋರಿಸಿಕೊಟ್ಟವರು. ದೇಶವನ್ನು ರಾಜಕೀಯ ದಾಸ್ಯದಿಂದ ಮುಕ್ತಿಗೊಳಿಸಿದವರು. ಅವರು ಪ್ರತಿಪಾದಿಸಿದ ಸಿದ್ಧಾಂತ ಪಾಲಿಸುವುದೇ ನಮ್ಮ ಜೀವನದ ಗುರಿಯಾಗಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಶಿಸಿದರು. ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಶನಿವಾರ ಎರಡು ನಿಮಿಷಗಳ ಕಾಲ ಮೌನಾಚರಣೆ ಬಳಿಕ ಅವರು ಮಾತನಾಡಿದರು. ‘ದೇಶದಾದ್ಯಂತ ಇಂದು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡಿಕೊಳ್ಳುವ ಕಾರ್ಯಕ್ರಮ. ನಮ್ಮೆಲ್ಲ …

Read More »

5 ಸಾವಿರ ಡೋಸ್‌ ಲಸಿಕೆ ವೇಸ್ಟ್‌!

ನವದೆಹಲಿ: ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಅಭಿಯಾನ ಆರಂಭವಾ ದಾಗಿನಿಂದ ಈವರೆಗೆ ಅಂದರೆ ಜ.16ರಿಂದ 29ರವರೆಗೆ 5 ರಾಜ್ಯಗಳಲ್ಲಿ ಸುಮಾರು 5 ಸಾವಿರ ಡೋಸ್ ಗಳಷ್ಟು ಲಸಿಕೆ ವ್ಯರ್ಥವಾಗಿ ಹೋಗಿದೆ. ಈ ಪೈಕಿ ತ್ರಿಪುರಾ ಮೊದಲ ಸ್ಥಾನದಲ್ಲಿದ್ದು ಇಲ್ಲಿ ಶೇ.11ರಷ್ಟು ಲಸಿಕೆ ವೇಸ್ಟ್‌ ಆಗಿದೆ ಎಂದು ಹಿಂದುಸ್ತಾನ್‌ ಟೈಮ್ಸ್‌ನ ವರದಿ ತಿಳಿಸಿದೆ. ಲಸಿಕೆಯ ಒಂದು ಸೀಸೆ ತೆರೆದರೆ, ಅದನ್ನು 4 ಗಂಟೆಗಳ ಒಳಗಾಗಿ ಬಳಸಬೇಕು. ತದ ನಂತರ ಬಳಸುವಂತಿಲ್ಲ. ಆದರೆ, ಲಸಿಕೆ …

Read More »

ಕೋವಿಡ್‌ ಮೊದಲ ಪ್ರಕರಣಕ್ಕೆ ವರ್ಷ, ಇನ್ನೂ ಇದೆ ಯುದ್ಧ

ದೇಶದಲ್ಲಿ ಕೋವಿಡ್‌ನ‌ ಮೊದಲ ಪ್ರಕರಣ ಪತ್ತೆಯಾಗಿ ಇಂದಿಗೆ ಒಂದು ವರ್ಷ. ಮೊದಲ ಪ್ರಕರಣ ದೇಶಾದ್ಯಂತ ಹುಟ್ಟುಹಾಕಿದ ಆತಂಕ ಅಷ್ಟಿಷ್ಟಲ್ಲ. 138 ಕೋಟಿ ಜನಸಂಖ್ಯೆಯಿರುವ ಭಾರತದಲ್ಲಿ ಪ್ರಕರಣ, ಸಾವುಗಳ ಸಂಖ್ಯೆ ಮಿತಿಮೀರಲಿದೆ ಎಂದು ಜಾಗತಿಕ ತಜ್ಞರು ಎಚ್ಚರಿಸಿದ್ದರು. ಲಾಕ್‌ಡೌನ್‌, ಹಲವು ಕಠಿನ ನಿರ್ಬಂಧಗಳಿಲ್ಲದೇ ನಿಯಂತ್ರಣ ಸಾಧಿಸುವುದು ಗಂಭೀರ ಸವಾಲೇ ಆಗಿತ್ತು. ಆದರೆ ಹಲವಾರು ನಿರ್ಬಂಧ ಗಳ ಹೊರತಾಗಿಯೂ ಒಂದು ವರ್ಷದಲ್ಲಿ ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖೆ 1.72 ಕೋಟಿಗೆ ತಲುಪಿದೆ. ಇದು ವರೆಗೂ 1.52 …

Read More »

ನೂತನ ಕೃಷಿ ಕಾಯ್ದೆ; ಹೋರಾಟದಿಂದ ಹಿಂದೆ ಸರಿದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ

ಪುಣೆ: ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ನೂತನ ಕೃಷಿ ಕಾಯ್ದೆ ವಿರುದ್ಧ ಶನಿವಾರ(ಜನವರಿ 30)ದಿಂದ ಧರಣಿ ನಡೆಸಲು ಮುಂದಾಗಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ದಿಢೀರ್ ಯೂಟರ್ನ್ ಹೊಡೆದಿದ್ದು, ಧರಣಿಯಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ.   ಬಿಜೆಪಿ ಹಿರಿಯ ಮುಖಂಡ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಮ್ಮುಖದಲ್ಲಿ ತಮ್ಮ ನಿರ್ಧಾರವನ್ನು ಘೋಷಿಸಿದ್ದಾರೆ.ನಾನು ತುಂಬಾ ದೀರ್ಘಕಾಲದಿಂದ ಹಲವಾರು ಸಮಸ್ಯೆಗಳ ಬಗ್ಗೆ ಚಳವಳಿ …

Read More »