ಮುಂಬೈ, ಜ.11- ಬಾಲಿವುಡ್ ನಟಿ ಮತ್ತು ಐಪಿಎಲ್ ಕಿಂಗ್ಸ್ 11 ಪಂಜಾಬ್ ತಂಡದ ಒಡತಿ ಪ್ರೀತಿ ಜಿಂಟಾ ಕುಟುಂಬದ ಸದಸ್ಯರೆಲ್ಲರಿಗೂ ಕೊರೊನಾ ಸೋಂಕು ಪಾಸಿಟೀವ್ ಎಂದು ತಿಳಿದು ಬಂದಿದೆ. ಜಿಂಟಾ ಅವರ ತಾಯಿ, ಸಹೋದರ, ಅತ್ತಿಗೆ ಅವರ ಮಕ್ಕಳು ಮತ್ತು ಚಿಕ್ಕಪ್ಪ ಅವರು ಕೋವಿಡ್-19 ಪರೀಕ್ಷೆಗೊಳಗಾಗಿದ್ದು, ಪ್ರಯೋಗಾಲದ ವರದಿ ಪ್ರಕಾರ ಎಲ್ಲರಿಗೂ ಕೊರೊನಾ ಸೋಂಕು ತಗುಲಿದೆ. ಪ್ರಸ್ತುತ ಅಮೆರಿಕದಲ್ಲಿರುವ ಪ್ರೀತಿ ಜಿಂಟಾ ಇನ್‍ಸ್ಟಾ ಗ್ರಾಂನಲ್ಲಿ ಕುಟುಂಬದ ಎಲ್ಲ ಸದಸ್ಯರಿಗೂ ಕೋವಿಡ್-19 …
Read More »Monthly Archives: ಜನವರಿ 2021
ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೇಸ್ಬುಕ್ ಲೈವ್ ಬಂದಿದ್ದೇಕೆ..?
ಬೆಂಗಳೂರು, ಜ.10- ಕಳೆದೆರಡು ದಿನಗಳ ಹಿಂದೆಯೇ ಫೇಸ್‍ಬುಕ್ ಲೈವ್‍ಗೆ ಬರುವುದಾಗಿ ಡಿ ಬಾಸ್ ದರ್ಶನ್ ಅವರು ಹೇಳಿದ್ದರಿಂದ ಇಂದು (ಜ.10) ಅಭಿಮಾನಿಗಳು ಅವರ ಮಾತುಗಳನ್ನು ಕೇಳಲು ಕಾತರರಾಗಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ದರ್ಶನ್ ಫೇಸ್ಬುಕ್ ಲೈವ್ ಬಂದಾಗ ಈ ಬಾರಿ ನಮ್ಮ ನೆಚ್ಚಿನ ನಟ ಯಾವ ಕುತೂಹಲ ಅಂಶದ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾರೆ, ರಾಬರ್ಟ್ ಸಿನಿಮಾದ ಬಿಡುಗಡೆಯ ಕುರಿತು ಏನಾದರೂ ವಿಷಯ ತಿಳಿಸುತ್ತಾರೋ, ಅಥವಾ ತಮ್ಮ ಹುಟ್ಟುಹಬ್ಬದ ಬಗ್ಗೆ …
Read More »ಅದ್ಯಕ್ಷ,ಉಪಾದ್ಯಕ್ಷರ ಮೀಸಲಾತಿ ನಿಗದಿ ಮಾಡುವ ವೇಳಾಪಟ್ಟಿ
ಬೆಳಗಾವಿ- ಬೆಳಗಾವಿ ಜಿಲ್ಲೆಯ 14 ತಾಲ್ಲೂಕುಗಳ ಎಲ್ಲ ಗ್ರಾಮ ಪಂಚಾಯತಿ ಅದ್ಯಕ್ಷ,ಉಪಾದ್ಯಕ್ಷರ ಮೀಸಲಾತಿ ನಿಗದಿ ಮಾಡುವ ವೇಳಾಪಟ್ಟಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಕಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ 14 ತಾಲ್ಲೂಕುಗಳ ತಹಶೀಲ್ದಾರರು ಕೂಡಲೇ ತಾಲ್ಲೂಕಾ ಕೇಂದ್ರಗಳಲ್ಲಿ ಮೀಸಲಾತಿ ನಿಗದಿ ಮಾಡಲು ಸ್ಥಳ ನಿಗದಿ ಮಾಡಿ,ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವ ದಿನಾಂಕದಂದು ಯಾವ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ,ಮೀಸಲಾತಿ ನಿಗದಿಮಾಡವ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿಗಳು ಹೊರಡೊಸಿದ್ದು,ಈ ಸಂಧರ್ಭದಲ್ಲಿ ಕಡ್ಡಾಯವಾಗಿ ಕೋವೀಡ್ …
Read More »ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕೇಂದ್ರ ಆಯುಷ್ ಖಾತೆ ರಾಜ್ ಸಚಿವ ಶ್ರೀಪಾದ ನಾಯಕ ಅವರನ್ನು ಪಣಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅಂಕೋಲಾ – ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕೇಂದ್ರ ಆಯುಷ್ ಖಾತೆ ರಾಜ್ ಸಚಿವ ಶ್ರೀಪಾದ ನಾಯಕ ಅವರನ್ನು ಪಣಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಂಕೋಲಾದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಅಂಬುಲೆನ್ಸ್ ಮೂಲಕ ಗೋವಾಕ್ಕೆ ಕರೆದೊಯ್ಯಲಾಗಿದೆ. ಸೋಮವಾರ ಸಂಜೆ ಅಂಕೋಲಾ ಬಳಿ ಸಚಿವರ ಕಾರು ಪಲ್ಟಿಯಾಗಿ ಪತ್ನಿ ವಿಜಯಾ ಮತ್ತು ಆಪ್ತಸಹಾಯಕ ದೀಪಕ್ ಸಾವಿಗೀಡಾಗಿದ್ದಾರೆ. ಸಚಿವರು ಗಾಯಗೊಂಡಿದ್ದಾರೆ. ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಅಪಘಾತವಾಗಿದೆ.
Read More »ಬೆಳಗಾವಿ : ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಬೆಳಗಾವಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ರೈತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ನೂತನ ಕೃಷಿ ಕಾಯ್ದೆ ಗಳು ರೈತರಿಗೆ ಮಾರಕವಾಗಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ …
Read More »ಭೀಕರ ಅಪಘಾತ : 18 ವರ್ಷದ ಯುವತಿ ಸೇರಿ ಮೂವರು ಸಾವು
ಕಲಬುರಗಿ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ರಾವೂರ್ ಗ್ರಾಮದ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಭೀಮಾಶಂಕರ್ ಪ್ಯಾಟಿ, ಅಕ್ಬರ್ ಪಟೇಲ್ ಮತ್ತು 18 ವರ್ಷದ ಯುವತಿ ಜವರಾಯನ ಅಟ್ಟಹಾಸಕ್ಕೆ ಕೊನೆಯುಸಿರೆಳೆದಿದ್ದಾರೆ. ಈ ಮೂವರು ಒಂದೆ ದ್ವಿ ಚಕ್ರದ ಮೇಲೆ ಹೊಗುತ್ತಿರುವ ವೇಳೆ ದುರ್ಘಟನೆ ನಡೆದಿದೆ. ಮೃತದೇಹಗಳು ರಕ್ತಸಿಕ್ತವಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬೈಕ್ ನಜ್ಜುಗುಜ್ಜಾಗಿದೆ. ಈ …
Read More »ಸಂಪುಟ ವಿಸ್ತರಣೆಯೋ,ಪುನರ್ ರಚನೆಯೋ ಇಂದೇ ಗೊತ್ತಾಗತ್ತೆ: ಸಿಎಂ ಸಚಿವ ಆಕಾಂಕ್ಷಿಗಳಲ್ಲಿ ಹೆಚ್ಚಿದ ಟೆನ್ಸನ್!!
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಏನೆಂಬುದು ಇಂದೇ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಆ ಮೂಲಕ ಸಚಿವರು ಹಾಗೂ ಆಕಾಂಕ್ಷಿಗಳಲ್ಲಿ ಎದೆಬಡಿತ ಹೆಚ್ಚಿಸಿದ್ದಾರೆ. ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ 54ನೇ ಪುಣ್ಯತಿಥಿ ನಿಮಿತ್ತ ವಿಧಾನಸೌಧದ ಬಳಿ ಅವರ ಭಾವಚಿತ್ರಕ್ಕೆ ಸೋಮವಾರ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು. ಖಾಲಿಯಿರುವ 7 ಸ್ಥಾನಗಳನ್ನು ತುಂಬುವುದು ಖಚಿತ. ಬುಧವಾರ ಇಲ್ಲವೇ ಗುರುವಾರ ನೂತನ …
Read More »ಶಾಸಕ ಎಂ.ಸಿ. ಮನಗೂಳಿ ಏರ್ ಲಿಫ್ಟ್ ಮೂಲಕ ಆಸ್ಪತ್ರೆಗೆ ದಾಖಲು
ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿರುವ ಸಿಂದಗಿ ಶಾಸಕ ಎಂ.ಸಿ. ಮನಗೂಳಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳ ಹಿಂದೆ ಕಲಬುರಗಿಯಿಂದ ಏರ್ಲಿಫ್ಟ್ ಮೂಲಕ ಶಾಸಕರನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಫ ಕಟ್ಟಿದ ಹಿನ್ನೆಲೆಯಲ್ಲಿ ಶಾಸಕ ಮನಗೂಳಿ ತೀವ್ರ ಅಸ್ವಸ್ಥರಾಗಿದ್ದರು. ಸದ್ಯ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Read More »ಕನ್ನಡದ ಹಿರಿಯ ಸಂಗೀತ ನಿರ್ದೇಶಕ ಜೀವರತ್ನ ನಿಧನ
ಕನ್ನಡ ಚಿತ್ರರಂಗದ ಅತ್ಯಂತ ಹಿರಿಯ ಸಂಗೀತ ನಿರ್ದೇಶಕ ಆರ್.ರತ್ನ ನಿನ್ನೆ (ಜನವರಿ 09) ರಂದು ಚೆನ್ನೈನಲ್ಲಿ ನಿಧನಹೊಂದಿದ್ದಾರೆ. ಆರ್.ರತ್ನ ಅವರಿಗೆ 97 ವರ್ಷ ವಯಸ್ಸಾಗಿತ್ತು. ಆರ್.ರತ್ನ ನಿಜವಾದ ಹೆಸರು ಜೀವನರತ್ನ. ಮೊದಲಿಗೆ ನಟನಾಗಿ ವೃತ್ತಿ ಆರಂಭಿಸಿದ ರತ್ನ, ತಮಿಳಿನ ‘ದಾನಶೂರ ಕರ್ಣ’ ಸಿನಿಮಾದಲ್ಲಿ ಋಷಿ ಕೇತು ಪಾತ್ರದಲ್ಲಿ ನಟಿಸಿದ್ದರು. ನಂತರ 1961ರಲ್ಲಿ ಬಿಡುಗಡೆ ಆದ ‘ಚಕ್ರವರ್ತಿ ತಿರುಮಗಲ’ ಮೂಲಕ ಸ್ವತಂತ್ರ್ಯ ಸಂಗೀತ ನಿರ್ದೇಶಕರಾದ ಜೀವರತ್ನ. 1963 ‘ಮನೆ ಕಟ್ಟಿ ನೋಡು’ …
Read More »ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ನ ಎಡವಟ್ಟು: ಮೌನಿ ರಾಯ್ ಫೋಟೋ ಶೇರ್ ಮಾಡಿ ಕ್ಷಮೆ ಕೇಳಿದ NSE
ಬಾಲಿವುಡ್ ನ ಹಾಟ್ ನಟಿ, ಕೆಜಿಎಫ್ ಸಿನಿಮಾದ ‘ಗಲಿ ಗಲಿ..’ ಹಾಡಿಗೆ ಹೆಜ್ಜೆ ಹಾಕಿದ್ದ ಮೌನಿ ರಾಯ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮೌನಿ ರಾಯ್ ಶನಿವಾರದಿಂದ ಸಾಮಾಜಿಕ ಜಾಲತಾಣದಲ್ಲಿ ದಿಢೀರ್ ಸದ್ದು ಮಾಡುತ್ತಿದ್ದಾರೆ. ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ಎಡವಟ್ಟಿನಿಂದ ಮೌನಿ ಸುದ್ದಿಯಲ್ಲಿದ್ದಾರೆ. ಹೌದು, ಎನ್ ಎಸ್ ಇ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮೌನಿ ರಾಯ್ ಫೋಟೋಗಳನ್ನು ಶೇರ್ ಮಾಡಿದೆ. ಮೌನಿ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಕ್ಷಣಾರ್ಧದಲ್ಲಿ …
Read More »