Breaking News

Monthly Archives: ಜನವರಿ 2021

ಪ್ರಧಾನಿ ಮೋದಿ ಘೋಷಿಸಿದ 20 ಲಕ್ಷ ಕೋಟಿ ಎಲ್ಲಿ ಹೋಯಿತು, ಒಬ್ಬರಿಗೂ ನಯಾಪೈಸೆ ಸಿಕ್ಕಿಲ್ಲ; ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಂಗಳೂರು; ಕಾಂಗ್ರೆಸ್ ಸಂಸ್ಥಾಪನ ದಿನ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದವು. ಸಂಕಲ್ಪ ಸಮಾವೇಶದ ಉದ್ದೇಶ ಕೂಡ ಅದೇ. ಹೋರಾಟ ರೂಪಿಸಲು ಸಮಾವೇಶ ಮಾಡುತ್ತಿದ್ದೇವೆ.  ಬ್ಲಾಕ್ ಮಟ್ಟದ ಅಧ್ಯಕ್ಷರ ಸಭೆ ಕರೆದಿದ್ದೇವೆ. ಸ್ಥಳೀಯ ಮಟ್ಟದ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುತ್ತೇವೆ. ನಾವೆಲ್ಲ ಕಾರ್ಯಕರ್ತರು. ಇಲ್ಲಿ ಯಾರು ನಾಯಕರಲ್ಲ. ಮೊನ್ನೆ ಮೈಸೂರು ವಿಭಾಗದ ಸಮಾವೇಶ ಮಾಡಿದ್ದೇವೆ. ಇವತ್ತು ಬೆಂಗಳೂರು ವಿಭಾಗದ ಸಭೆ ಮಾಡುತ್ತಿದ್ದೇವೆ. ಸ್ಥಳೀಯ ಮಟ್ಟದ ಸಮಸ್ಯೆಗಳ ಬಗ್ಗೆ ಗಮನ ಹರಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ಕೊರೋನ ಕಾಲದಲ್ಲಿ …

Read More »

ಬೀಫ್ ಮಾರ್ಕೆಟ್ ನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು ಕೂಡಲೇ ಇದರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯ

ಬೆಳಗಾವಿ-ಬೆಳಗಾವಿ ನಗರದ ಹೃದಯ ಭಾಗದಲ್ಲಿ ಭೀಫ್ ಮಾರ್ಕೆಟ್ ಇದ್ದು ಇದನ್ನು ಕೂಡಲೇ ನಗರ ಹೊರ ವಲಯದಲ್ಲಿ ಸ್ಥಳಾಂತರ ಮಾಡಬೇಕೆಂದು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಒತ್ತಾಯಿಸಿದ್ದಾರೆ. ಇಂದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರನ್ನು ಭೇಟಿಯಾದ ಡಾ.ಸೋನಾಲಿ ನಗರದ ಮದ್ಯಭಾಗದಲ್ಲಿ ಬೀಫ್ ಮಾರ್ಕೆಟ್ ಇರುವದರಿಂದ ಸಾರ್ವಜನಿಕರಿಗೆ ಇದರ ದುರ್ವಾಸನೆ ಸಹಿಸಲು ಆಗುತ್ತಿಲ್ಲ,ಬಸ್ ನಿಲ್ಧಾಣದ ಹತ್ತಿರದಲ್ಲೇ ಬೀಫ್ ಮಾರ್ಕೆಟ್ ಇರುವದರಿಂದ ಸಾರ್ವಜನಿಕರಿಗೆ ತೊಂದರೆ …

Read More »

C.C.B.ಪೊಲೀಸರ ಸಂಕೋಲೆಯಲ್ಲಿ ರಾಧಿಕಾ

ಬೆಂಗಳೂರು,ಜ.8- ತಮ್ಮ ಬ್ಯಾಂಕ್ ಖಾತೆಗೆ 75 ಲಕ್ಷ ಹಣ ಜಮಾವಣೆಯಾದ ಬಗ್ಗೆ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಇಂದು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಕೆಲ ದಿನಗಳ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿದ್ದ ಜ್ಯೋತಿಷಿ ಯುವರಾಜ್ ಮತ್ತು ನಿರ್ಮಾಪಕರೊಬ್ಬರಿಂದ ರಾಧಿಕಾ ಕುಮಾರಸ್ವಾಮಿ ಅವರ ಖಾತೆಗೆ ಒಟ್ಟು 75 ಲಕ್ಷ ರೂ. ಜಮಾವಣೆ ಯಾಗಿತ್ತು. ಈ ಕುರಿತಂತೆ ಸ್ಪಷ್ಟನೆ ನೀಡುವಂತೆ ಸಿಸಿಬಿ ಎಸಿಪಿ ನಾಗರಾಜ್ ಅವರು ರಾಧಿಕಾ ಕುಮಾರಸ್ವಾಮಿ ಅವರಿಗೆ …

Read More »

ಉದ್ಘಾಟನೆ ಭಾಗ್ಯ ಕಾಣದ ಬಸ್‌ ನಿಲ್ದಾಣ: ಸ್ಥಳಾವಕಾಶ ಇಲ್ಲದೇ ಎಲ್ಲೆಂದರಲ್ಲಿ ನಿಲ್ಲುವ ವಾಹನಗಳು

ನವಲಗುಂದ: ಸುಮಾರು 4 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡು ಮೂರು ವರ್ಷ ಕಳೆದರೂ ಹೈಟೆಕ್‌ ಬಸ್‌ ನಿಲ್ದಾಣ ಇನ್ನೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ನಿಲ್ದಾಣದಲ್ಲಿರುವ ವಾಣಿಜ್ಯ ಮಳಿಗೆಗಳು ಆರಂಭಗೊಂಡು ಸಂಸ್ಥೆಗೆ ಲಾಭವನ್ನೂ ನೀಡುತ್ತಿವೆ ಆದರೆ ಬಸ್‌ ನಿಲ್ದಾಣ ಲೋಕಾರ್ಪಣೆಗೆ ಮುಹೂರ್ತ ನಿಗದಿ ಮಾಡದಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಸ್‌ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಅರವಟಗಿ ಇದೆ ಆದರೆ ನೀರೇ ಇರಲ್ಲ. ಸ್ಥಳಾವಕಾಶ ಇಲ್ಲದ್ದರಿಂದ ಎಲ್ಲೆಂದರಲ್ಲಿ ದ್ವಿಚಕ್ರ ವಾಹನ, ಖಾಸಗಿ ವಾಹನ, …

Read More »

ದೇಶದ್ರೋಹ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ಕಂಗನಾ ರಣಾವತ್,ಸಹೋದರಿ ರಂಗೋಲಿ

ಮುಂಬೈ: ನಟಿ ಕಂಗನಾ ರಣಾವತ್ ಹಾಗೂ ಆಕೆಯ ಸಹೋದರಿ ತಮ್ಮ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಗೆ ತೆರಳಿ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಕಂಗನಾ ಹಾಗೂ ಆಕೆಯ ಸಹೋದರಿ ರಂಗೋಲಿ ಚಾಂದೇಲ್ ಗೆ ಬಂಧನದಿಂದ ಮಧ್ಯಂತರ ರಕ್ಷಣೆ ಜಾರಿ ಮಾಡಿರುವ ಬಾಂಬೆ ಹೈಕೋರ್ಟ್ ಶುಕ್ರವಾರ ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ರಣಾವತ್ ಗೆ ವೈ-ಪ್ಲಸ್ ಭದ್ರತೆಯನ್ನು ಒದಗಿಸಲಾಗಿದ್ದು, ಮಧ್ಯಾಹ್ನ 1 ಗಂಟೆ …

Read More »

BREAKING : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು

ಮಡಿಕೇರಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂಬುದಾಗಿ ಇತ್ತೀಚಿಗೆ ಹೇಳಿಕೆ ನೀಡಿದ್ದರು. ಇದರಿಂದಾಗಿ ಕೊಡವರ ಭಾವನೆಗೆ ಧಕ್ಕೆಯಾಗಿದೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬರು ದೂರು ನೀಡಿದ ಹಿನ್ನಲೆಯಲ್ಲಿ, ಅವರ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಕೊಡವರು ಗೋಮಾಂಸ ತಿನ್ನುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯಿಂದಾಗಿ ಕೊಡವರ ಭಾವನಗೆ ಧಕ್ಕೆಯಾಗಿದೆ ಎಂಬುದಾಗಿ …

Read More »

ಜ.22ರವರೆಗೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ ವಿಸ್ತರಣೆ

ಧಾರವಾಡ : ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ​ಗೌಡ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ, ಜೈಲು ಸೇರಿರುವಂತ ಮಾಜಿ ಸಚಿವ ವಿನಯ್​ ಕುಲಕರ್ಣಿ ಇಂದು ಜಾಮೀನು ದೊರೆತಿಲ್ಲ. ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 22ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ. ಇಂದು ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ …

Read More »

ಮಾನವಿಯತೆ ಮೆರೆದ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ..

  ಬೆಳಗಾವಿ: ಅಭಿವೃದ್ಧಿ ವಿಚಾರದಲ್ಲಿ ರಾಜ್ಯದಲ್ಲೆ ನಂಬರ್ ಒನ್ ಎನಿಸಿಕೊಂಡಿರುವ ಮಾಜಿ ಸಚಿವ ಪ್ರಕಾಶ್ ಹುಕ್ಕೆರಿಯವರು ಮಾನವಿಯತೆ ಮೆರೆಯುವ ಕೆಲಸ ಮಾಡಿದ್ದಾರೆ. ಹಿರೆಬಾಗೆವಾಡಿ ಬಳಿಯ ರಾಷ್ಟೀಯ ಹೆದ್ದಾರಿ 4 ರಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಅಪಘಾತ ಸಂಭವಿಸಿತ್ತು.. ಆ ಸಮಯದಲ್ಲಿ ಮಾಜಿ ಸಚಿವರಾದ ಪ್ರಕಾಶ್ ಹುಕ್ಕೇರಿ ಯವರು ಬೆಳಗಾವಿಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು.. ಅಪಘಾತ ಆಗಿದ್ದನ್ನು ಕಂಡು ಕೂಡಲೆ ಸ್ಥಳಿಯ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬ್ಯುಲೆನ್ಸ್ ಬರುವಂತೆ ಸೂಚಿಸಿದ್ರು.. …

Read More »

ನಿರಂತರ ನೀರು ಯೋಜನೆ ನಗರದ ಜನತೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ:ಮಹಾನಗರ ಪಾಲಿಕೆ ಕಾರ್ಯವೈಖರಿಗೆ ಶಾಸಕ ಅಭಯ ಪಾಟೀಲ ಗರಂ; ಸಚಿವರ ಸ್ಪಂದನೆ

ಬೆಳಗಾವಿ –: ನಿರಂತರ ನೀರು ಯೋಜನೆ ನಗರದ ಜನತೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆಯ ಅನುಷ್ಠಾನ ಕುರಿತು ವಿಶೇಷ ಕಾಳಜಿ ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. …

Read More »

ನಗರದಲ್ಲಿ ನಿಯಮಾವಳಿ ಮೀರಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ನಿಯಮಾವಳಿ ನೋಟಿಸ್ ನೀಡಿ

–ಬೆಳಗಾವಿ :ನಗರದಲ್ಲಿ ನಿಯಮಾವಳಿ ಮೀರಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ನಿಯಮಾವಳಿ ನೋಟಿಸ್ ನೀಡಿ ಅಂತಹ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಬಿ.ಎ.ಬಸವರಾಜ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೂರು ಅಂತಸ್ತುಗಳ ಕಟ್ಟಡ ನಿರ್ಮಾಣಕ್ಕೆ ಪಾಲಿಕೆಯ ವತಿಯಿಂದ ಅನುಮತಿ ಪಡೆದುಕೊಂಡು ಆರು ಅಂತಸ್ತುಗಳ …

Read More »