Breaking News
Home / 2021 / ಜನವರಿ (page 9)

Monthly Archives: ಜನವರಿ 2021

ರಾಜಕೀಯ ವೈರಿ ಡಿಕೆಶಿ ಕೊಠಡಿಗೆ ಯೋಗೇಶ್ವರ್ ಪ್ರವೇಶ: ಇಲ್ಲೂ ಇದೆಯಾ ಸಾಹುಕಾರ್ ಪಾತ್ರ?

ಬೆಂಗಳೂರು: ಇತ್ತೀಚೆಗಷ್ಟೇ ಸಚಿವ ಸ್ಥಾನ ಪಡೆದಿರುವ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಇದೀಗ ಕೊಠಡಿ ರಾಜಕೀಯ ಆರಂಭಿಸಿದ್ದಾರೆ. ತಮ್ಮ ರಾಜಕೀಯ ಬದ್ಧವೈರಿ ಡಿ ಕೆ ಶಿವಕುಮಾರ್ ಅವರು ಸಚಿವರಾಗಿದ್ದ ಪಡೆದಿದ್ದ ಕೊಠಡಿಯನ್ನೇ ಪಡೆದಿದ್ದಾರೆ. ಹೌದು. ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಡಿ ಕೆ ಶಿವಕುಮಾರ್ ಪಡೆದಿದ್ದ ಕೊಠಡಿಗೆ ಇಂದು ಸಿ.ಪಿ ಯೋಗೇಶ್ವರ್ ಪ್ರವೇಶಿಸಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 336, 337 ಪಡೆದಿರುವ ಸಿ.ಪಿ.ಯೋಗೇಶ್ವರ್, ಇಂದು …

Read More »

ಬೆಳಗಾವಿಯಲ್ಲಿ ಅಧಿವೇಶನ ನಡೆಸದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ:ಭಿತ್ತಿಪತ್ರ ಪ್ರದರ್ಶನ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದು ಪ್ರಾರಂಭವಾಗಿದೆ. ಆದರೆ ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ, ಬೆಂಗಳೂರಿನಲ್ಲಿಯೇ ಆರಂಭಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತು. ಬೆಳಗಾವಿಯಲ್ಲಿ ಅಧಿವೇಶನ ನಡೆಸದಿರುವ ಸರ್ಕಾರದ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಸದನದಲ್ಲಿ ಭಿತ್ತಿ ಪತ್ರ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿತು. ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದಕ್ಕೆ ಧಿಕ್ಕಾರ ಎಂದು ಬರೆದಿರುವ ಭಿತ್ತಿ ಪತ್ರವನ್ನು ರಾಜ್ಯಪಾಲರ ಭಾಷಣದ ವೇಳೆ ಪ್ರದರ್ಶಿಸಿ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. …

Read More »

ಮರಾಠ ಸಮಾಜದ ಎಲ್ಲಾ ನನ್ನ ಬಾಂಧವರು ಕರ್ನಾಟಕದಲ್ಲಿ ಬಹಳ ಖುಷಿಯಾಗಿದ್ದಾರೆ :

ಬೆಂಗಳೂರು: ಬೆಳಗಾವಿ ಗಡಿ ಭಾಗ, ಬೆಳಗಾವಿ ನೆಲ ಕರ್ನಾಟಕದ ಒಂದು ಅಂಗ. ಮರಾಠ ಸಮಾಜದ ಎಲ್ಲಾ ನನ್ನ ಬಾಂಧವರು ಕರ್ನಾಟಕದಲ್ಲಿ ಬಹಳ ಖುಷಿಯಾಗಿದ್ದಾರೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮಹಾರಾಷ್ಟ್ರ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿನಾಡಿನಲ್ಲಿ ಕನ್ನಡಿಗರೂ ಇದ್ದಾರೆ. ಇತ್ತೀಚೆಗೆ ಮರಾಠಿಗರು ಸಹ ಕರ್ನಾಟಕದ ಶಾಲೆಗಳಲ್ಲಿ ಕಲಿಯಲು ಇಷ್ಟ ಪಡುತ್ತಿದ್ದಾರೆ ಎಂದರು. ಯಾವ ಮರಾಠಿಗರು ಸಹ ನಾವು ಮಹಾರಾಷ್ಟ್ರಕ್ಕೆ ಹೋಗುತ್ತೇವೆ ಎಂದು ಯಾವತ್ತು ಹೇಳಿಲ್ಲ …

Read More »

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: ಹೋಳಿ ಹಬ್ಬಕ್ಕೂ ಮುನ್ನ ಡಿಎ ಹೆಚ್ಚಳಕ್ಕೆ ಸಿದ್ದತೆ

50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಸರ್ಕಾರ ಖುಷಿ ಸುದ್ದಿ ನೀಡುವ ಸಾಧ್ಯತೆ ದಟ್ಟವಾಗಿದೆ. ಸರ್ಕಾರ, ಹೋಳಿಗೂ ಮುನ್ನ ಡಿಎಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಸರ್ಕಾರಿ ನೌಕರರ ಡಿಎ ಶೇಕಡಾ 4ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದಲ್ಲದೆ ಕೊರೊನಾ ಹಿನ್ನಲೆಯಲ್ಲಿ ನಿಲ್ಲಿಸಲಾಗಿದ್ದ ಪ್ರಿಯ ಭತ್ಯೆಯನ್ನು ಮತ್ತೆ ಸರ್ಕಾರ ನೀಡುವ ಸಾಧ್ಯತೆ ಹೆಚ್ಚಿದೆ. ಆದ್ರೆ ಈ ಬಗ್ಗೆ ಸರ್ಕಾರ ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. …

Read More »

ಲಕ್ಷ್ಮಣ್ ಸವದಿ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕು: ಮುಂಬೈ ಕುರಿತ ಹೇಳಿಕೆಗೆ ಸಂಜಯ್ ರಾವತ್ ಟೀಕೆ

ಮುಂಬೈ: ಮುಂಬೈಯನ್ನು ಕರ್ನಾಟಕಕ್ಕೆ ಸೇರಿಸಬೇಕೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ನೀಡಿರುವ ಹೇಳಿಕೆಯನ್ನು ಶಿವಸೇನಾ ಮುಖಂಡ ಸಂಜಯ್ ರಾವತ್ ಖಂಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ವಾಸಿಸುತ್ತಿರುವ ಕನ್ನಡ ಭಾಷಿಕರು ಕರ್ನಾಟಕದಲ್ಲಿನ ಮರಾಠಿ ಪ್ರಾಬಲ್ಯದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಬಯಸಿದ್ದಾರೆ. ಲಕ್ಷ್ಮಣ್ ಸವದಿ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ರಾವತ್ ಹೇಳಿದ್ದಾರೆ. ಮುಂಬೈಯನ್ನು ಕರ್ನಾಟಕದ ಭಾಗವಾಗಿ ಮಾಡುವವರೆಗೂ ಅದನ್ನು ಕೇಂದ್ರಾಡಳಿತ ಪ್ರದೇಶವಾಗಿ ಕೇಂದ್ರ ಸರ್ಕಾರ ಘೋಷಿಸಬೇಕೆಂದು ಸವದಿ ಬುಧವಾರ ಹೇಳಿಕೆ ನೀಡಿದ್ದರು. ಈ ಕುರಿತಂತೆ ಇಂದು …

Read More »

ಗಣರಾಜ್ಯೋತ್ಸವ ದಿನದ ಘಟನೆಯಿಂದ ರೈತರ ಹೋರಾಟ ಕೊನೆಯಾಗದು: ಅರವಿಂದ್‌ ಕೇಜ್ರಿವಾಲ್‌

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಒತ್ತಾಯಿಸಿದ್ದಾರೆ. ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ‘ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಯು ದುರದೃಷ್ಟಕರವಾಗಿದೆ. ಹಿಂಸಾಚಾರದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆಯಾಗಲಿ. ಆದರೆ, ಈ ಘಟನೆಯಿಂದ ಕೃಷಿ ಕಾಯ್ದೆಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವು ಕೊನೆಯಾಗುವುದಿಲ್ಲ. ರೈತರ ಬಗ್ಗೆ ನಮಗಿರುವ ಕಾಳಜಿಯು ಮುಂದುವರೆಯಲಿದೆ. ಪ್ರತಿಭಟನೆ ನಡೆಸುತ್ತಿರುವ …

Read More »

B.J.P.ಜಿಲ್ಲಾ ಕಾರ್ಯಾಲಯದಲ್ಲಿ ಎಸ್ ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆ

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ದಿನಾಂಕ 27/01/2021 ರಂದು ಎಸ್ ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆ ಮಾಡಲಾಯಿತು . ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಶ್ರೀ ಅನಿಲ ಬೆನಕೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು ಹಾಗೂ ಸಭೆಯ ಅಧ್ಯಕ್ಷತೆಯನ್ನು ಭಾಜಪಾ ಬೆಳಗಾವಿ ಮಹಾನಗರ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಮಂಜುನಾಥ ಪಮ್ಮಾರ ವಹಿಸಿದ್ದರು . ವಿಶೇಷ ಆಹ್ವಾನಿತರಾಗಿ SC ಮೋರ್ಚಾ ರಾಜ್ಯ ಕಾರ್ಯದರ್ಶಿಗಳಾದ …

Read More »

ಸಚಿವ ಸ್ಥಾನ ಭಗ್ನಗೊಂಡ ಬೆನ್ನಲ್ಲೇ ಮತ್ತೊಂದು ಹುದ್ದೆಗೆ ಕರ್ಚಿಫ್ ಹಾಕಿದ ಹೆಚ್. ವಿಶ್ವನಾಥ್

ಬೆಂಗಳೂರು: ಎಂ.ಎಲ್.ಸಿ. ಹೆಚ್. ವಿಶ್ವನಾಥ್ ವಿರುದ್ಧ ಹೈಕೋರ್ಟ್ ನೀಡಿದ್ದ ಅನರ್ಹತೆ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದ್ದು, ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಇದೀಗ ಹೆಚ್. ವಿಶ್ವನಾಥ್ ಮತ್ತೊಂದು ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ನಾನು ಒಂಟಿಯಲ್ಲ ಎಂದು ಹೇಳಿದ್ದಕ್ಕೆ ಧನ್ಯವಾದ. ಆದರೆ ನನಗೆ ಸಚಿವರ ಸಹಾನುಭೂತಿ ಬೇಕಿಲ್ಲ. ನಮ್ಮ 17 ಜನರ ಟೀಂ ಸಿಎಂ ಯಡಿಯೂರಪ್ಪ ಜೊತೆ …

Read More »

ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಬಸವರಾಜ ಹೊರಟ್ಟಿ

ಬೆಂಗಳೂರು, ಜ.28- ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ತಮ್ಮ ಹೆಸರು ಘೋಷಣೆ ಮಾಡಿದ್ದಕ್ಕೆ ಹಿರಿಯ ನಾಯಕ ಬಸವರಾಜ ಹೊರಟ್ಟಿ ಅವರು ಇಂದು ಬೆಳಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಆಗಮಿಸಿದ ಬಸವರಾಜ ಹೊರಟ್ಟಿ ಅವರು ಹೂಗುಚ್ಛ ನೀಡಿ ಗೌಡರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೋನರೆಡ್ಡಿ ಉಪಸ್ಥಿತರಿದ್ದರು. ಬಿಜೆಪಿ ಸಭಾಪತಿ ಸ್ಥಾನವನ್ನು ಜೆಡಿಎಸ್‍ಗೆ …

Read More »

2022ರೊಳಗೆ 75 ಕಿ.ಮೀ. ಮೆಟ್ರೋ ಮಾರ್ಗ ನಿರ್ಮಿಸುವ ಗುರಿ ರಾಜ್ಯ ಸರ್ಕಾರ ಹೊಂದಿದೆ:

ಬೆಂಗಳೂರು,ಜ.28- ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 2022ರೊಳಗೆ 75 ಕಿ.ಮೀ. ಮೆಟ್ರೋ ಮಾರ್ಗ ನಿರ್ಮಿಸುವ ಗುರಿ ರಾಜ್ಯ ಸರ್ಕಾರ ಹೊಂದಿದೆ ಎಂದು ರಾಜ್ಯಪಾಲ ವಿ.ಆರ್.ವಾಲ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಇಂದಿನಿಂದ ಆರಂಭವಾದ ಪ್ರಸಕ್ತ ಸಾಲಿನ ಜಂಟಿ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಹಂತ-2 …

Read More »