Breaking News

Daily Archives: ಫೆಬ್ರವರಿ 2, 2021

ಒಂದು ರಾತ್ರಿ ಜೊತೆ ಮಲಗು, ಬಿಡುತ್ತೇನೆ: ಫೇಸ್​ಬುಕ್​ನಲ್ಲಿ ಪರಿಚಯವಾದ ಯುವತಿಗೆ ಟಾರ್ಚರ್

ಬೆಂಗಳೂರು(ಫೆ. 02): ಫೇಸ್​ಬುಕ್​ನಲ್ಲಿ ಯುವತಿಯ ಪರಿಚಯ ಮಾಡಿಕೊಂಡು ಸಾವಿನ ನಾಟಕವಾಡಿ ಮೊಬೈಲ್ ನಂಬರ್ ಪಡೆದು ಇನ್ನಿಲ್ಲದಂತೆ ಪೀಡಿಸಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಶ್ರವಣ್ ಕುಮಾರ್ ಎಂಬ ಆರೋಪಿಯನ್ನ ಬಂಧಿಸಿದ್ದಾರೆ. ತನ್ನ ಮೇಲೆ ಈತನಿಂದ ಲೈಂಗಿಕ ಹಲ್ಲೆ, ಮಾನಸಿಕ ಕಾಟ ಆಗಿದೆ ಎಂದು ಯುವತಿ ಜನವರಿ 29ರಂದು ನೀಡಿದ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ. ಘಟನೆ ಏನು? ಯುವತಿ ನೀಡಿರುವ ದೂರಿನ …

Read More »

ಶೂಟಿಂಗ್ ಶುರುವಾದ ಮೊದಲ ದಿನವೇ ಆದಿಪುರುಷ್ ಸೆಟ್‌ನಲ್ಲಿ ಬೆಂಕಿ ಅವಘಡ

ಪ್ರಭಾಸ್ ನಟನೆಯ ಪೌರಾಣಿಕ ಚಿತ್ರ ಆದಿಪುರುಷ್ ಅಧಿಕೃತವಾಗಿ ಸೆಟ್ಟೇರಿದೆ. ಸಿನಿಮಾ ಆರಂಭವಾದ ಮೊದಲ ದಿನವೇ ಚಿತ್ರಕ್ಕೆ ವಿಘ್ನ ಎದುರಾಗಿದೆ. ಚಿತ್ರದ ಸೆಟ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಮುಂಬೈನ ಗೋರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್‌ನ ಹಿಂಭಾಗದಲ್ಲಿರುವ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾದ ಚಿತ್ರೀಕರಣ ನಡೆಸಲು ಸಿದ್ಧತೆ ನಡೆದಿತ್ತು. ಸೆಟ್‌ನಲ್ಲಿ ಸುಮಾರು ಐವತ್ತರಿಂದ ಅರವತ್ತು ಜನರು ಹಾಜರಿದ್ದರು. ಸಂಜೆ 4: 13ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಬಾಲಿವುಡ್‌ …

Read More »

ರಾಜ್ಯದಲ್ಲಿ ಗಣಿ ವಿಶ್ವವಿದ್ಯಾಲಯ: ಸಚಿವ ಮುರುಗೇಶ ನಿರಾಣಿ

ಬೆಂಗಳೂರು: ‘ಗಣಿಗಾರಿಕೆಯನ್ನು ವೈಜ್ಞಾನಿಕವಾಗಿ ನಡೆಸುವಂತೆ ಸಾಧ್ಯವಾಗಲು ರಾಜ್ಯದಲ್ಲಿ ಗಣಿ ವಿಶ್ವವಿದ್ಯಾಲಯ ಸ್ಥಾಪಿಸುವ ಚಿಂತನೆ ಇದೆ. ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು. ವಿಧಾನ ಪರಿಷತ್‌ನಲ್ಲಿ ಮಂಗಳವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಜಾರ್ಖಂಡ್ ಮಾದರಿಯಲ್ಲಿ ಈ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು’ ಎಂದರು. ‘ಖನಿಜ ಅಭಿವೃದ್ಧಿ ನಿಧಿ ಮತ್ತು ಗಣಿಗಳಿಂದ ಬರುವ ಬಡ್ಡಿ ಹಣವನ್ನು ಬಳಸಿ ಈ …

Read More »

ಫೆ. 28ಕ್ಕೆ F.D.A. ಪರೀಕ್ಷೆ…

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆಯ ಪರೀಕ್ಷೆಯನ್ನು ಫೆ. 28ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ತೀರ್ಮಾನಿಸಿದೆ. ಕೆಪಿಎಸ್‍ಸಿ ಕಚೇರಿಯಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಜ. 24ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪರೀಕ್ಷೆಯ ಹಿಂದಿನ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ, ಪರೀಕ್ಷೆಯನ್ನು ದಿಢೀರ್ ಮುಂದೂಡಲಾಗಿತ್ತು.  ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ …

Read More »

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ

ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ರಾಜನಾಥ ಸಿಂಗ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ‌, ಕಿತ್ತೂರು ರಾಣಿ …

Read More »

ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ಕೇಂದ್ರದ ವಿರುದ್ಧ ಕುಹಕವಾಡಿದ ಬಿಜೆಪಿ ಸಂಸದ

ನವದೆಹಲಿ: ದಿನದಿಂದ ದಿನಕ್ಕೆ ತೈಲ ಬೆಲೆ ಗಗನಮುಖಿಯಾಗುತ್ತಿದ್ದು, ಇದರ ಬೆನ್ನಲ್ಲೇ ಇದೀಗ ಕೇಂದ್ರ ಬಿಜೆಪಿ ಸರ್ಕಾರ ಸೆಸ್ ವಿಧಿಸಿ ಇನ್ನಷ್ಟು ಬೆಲೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಸುಬ್ರಹ್ಮಣ್ಯಂ ಸ್ವಾಮಿ, ರಾಮಾಯಣದ ಸಾದೃಶ ಉದಾಹರಣೆ ಮೂಲಕ ಕೇಂದ್ರದ ನಡೆಯನ್ನು ಟೀಕಿಸಿದ್ದಾರೆ. ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ. ಸೀತೆಯ ನೇಪಾಳದಲ್ಲಿ ಪೆಟ್ರೋಲ್ ಬೆಲೆ 53 ರೂ. ಆದರೆ …

Read More »

ಎಟಿಎಂ ನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ಪ್ರಕರಣಅಪರಾಧಿಗೆ 12 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್

ಬೆಂಗಳೂರು: ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ನಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಅಪರಾಧಿ ಮಧುಕರ್ ರೆಡ್ಡಿಗೆ ಬೆಂಗಳೂರಿನ 65ನೇ ಸಿಸಿಹೆಚ್ ನ್ಯಾಯಾಲಯ 12 ವರ್ಷಗಳ ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. 2013ರ ನವೆಂಬರ್ 19ರಂದು ಬೆಳಿಗ್ಗೆ 7:10ಕ್ಕೆ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಜ್ಯೋತಿ ಉದಯ್, ಹಣ ಡ್ರಾ ಮಾಡಲೆಂದು ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್ ನಲ್ಲಿರುವ ಎಟಿಎಂಗೆ ಹೋಗಿದ್ದರು. ಈ ವೇಳೆ ಎಟಿಎಂ ನೊಳಗೆ ನುಗ್ಗಿದ್ದ ಮಧುಕರ್ ರೆಡ್ದಿ …

Read More »

ಬೆಳಗಾವಿಗೆ ರೈಲ್ವೆ ಸೌಲಭ್ಯಕ್ಕೆ ವಿಶೇಷ ಗಮನ ನೀಡಬೇಕೆಂದು ಮನವಿ

ಮೂಡಲಗಿ: ಕುಂದಾನಗರಿ ಬೆಳಗಾವಿ ಜಿಲ್ಲೆ ಹಾಗೂ ಸುತ್ತಲಿನ ವಿವಿಧ ಜಿಲ್ಲೆಗಳ ಸಾರ್ವಜನಿಕರ ಅನುಕೂಲಕ್ಕಾಗಿ ಗೋವಾ-ಮಂಗಳೂರ ಮತ್ತು ಮೈಸೂರ ಈ ಮೂರು ನಗರಗಳಿಗೆ ರೈಲು ಓಡಾಟ ಶೀಘ್ರ ಆರಂಭಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಷ ಗೊಯಲ್ ಅವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಮಂಗಳವಾರ (ಫೆ.೨) ದಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೊಯಲ್ ಅವರ ನವದೆಹಲಿ ಕಛೇರಿಗೆ ಭೇಟಿ ನೀಡಿದ ಅವರು, …

Read More »

ಬಡ ಮಹಿಳೆಯಿಂದ 15 ಸಾವಿರ ರೂ ಡಿಸೇಲ್ ಹಾಕಿಸಿಕೊಂಡ ಯುಪಿ ಪೊಲೀಸರು

ಉತ್ತರಪ್ರದೇಶ : ಮಗಳನ್ನ ಹುಡುಕಿಕೊಡಿ ಎಂದು ಠಾಣೆಗೆ ಬಂದ ಮಹಿಳೆಯಿಂದ ಪೊಲೀಸರು 15 ಸಾವಿರ ರೂಪಾಯಿ ಮೌಲ್ಯದಷ್ಟು ಡಿಸೇಲ್ ತುಂಬಿಸಿಕೊಂಡಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. ಈ ಕುರಿತು ನೊಂದ ಮಹಿಳೆ ಎಸ್ ಪಿ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ. ಏನಿದು ಘಟನೆ..? ತಿಂಗಳ ಹಿಂದೆ ಅಂಗವಿಕಲೆ ಗುಡಿಯಾ ಎಂಬುವರ ಮಗಳು ನಾಪತ್ತೆಯಾಗಿದ್ದರು. ಈ ಕುರಿತು ಗುಡಿಯಾ, ತನ್ನ ಅಪ್ರಾಪ್ತ ಮಗಳನ್ನ ಠಾಕೂರ್ ಎಂಬಾತ ಅಪಹರಿಸಿದ್ದಾನೆ ಎಂದು ಠಾಣೆಯಲ್ಲಿ ದೂರು …

Read More »

ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಸಿಬಿಐ ʼಆರೋಪ ಪಟ್ಟಿʼ ನ್ಯಾಯಾಲಯಕ್ಕೆ ಸಲ್ಲಿಕೆ..!

ನವದೆಹಲಿ: ಧಾರವಾಡದಲ್ಲಿರುವ ವಿಶೇಷ ಕೋರ್ಟ್ʼನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಮತ್ತು ಇತರ ಇಬ್ಬರ ವಿರುದ್ಧ ಆರೋಪ ಪಟ್ಟಿಯನ್ನ ಸಲ್ಲಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ, ವಿನಯ ಕುಲಕರ್ಣಿ ಚಂದ್ರಶೇಖರ ಇಂಡಿ ಮತ್ತು ಶಿವಾನಂದ ಬಿರಾದಾರ್ ವಿರುದ್ಧ ಆರೋಪಪ‌ಟ್ಟಿ ದಾಖಲಿಸಲಾಗಿದೆ. 2016ರಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿ ಆರೋಪಿಗಳು ಮೃತನ ಜೊತೆಗೆ ರಾಜಕೀಯ ಮತ್ತು …

Read More »