Breaking News

Daily Archives: ಫೆಬ್ರವರಿ 8, 2021

ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ.. ಪುತ್ರಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಸತೀಶ್ ಜಾರಕಿಹೊಳಿ?

ದಾವಣಗೆರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮಗಳಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ ಜಾರಕಿಹೊಳಿ.. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ನಡೆಯುತ್ತಿರುವ 3ನೇ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ ಅವರು ಆಗಮಿಸಿ, ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಕೆಲವು ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಹ ಹೆಚ್ಚು …

Read More »

ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದ ವಾಟಾಳ್

ಬೆಂಗಳೂರು, ಫೆ.8- ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳೆಂಬ ಬೇಧವಿಲ್ಲದೆ ಸಾರ್ವತ್ರಿಕವಾಗಿ ಅಂಬ್ಯುಲೆನ್ಸ್ ಸೇವೆ ಒದಗಿಸುತ್ತಾ ಬಂದಿರುವ ನಮ್ಮ ರಾಜ್ಯದವರನ್ನು ಕಡೆಗಣಿಸಿ ಕಮಿಷನ್ ಆಸೆಗಾಗಿ ಅನ್ಯ ರಾಜ್ಯದ ಆಂಬ್ಯುಲೆನ್ಸ್‍ಗಳಿಗೆ ಆದ್ಯತೆ ನೀಡುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಮುಖಂಡರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಶಿವರಾಮೇಗೌಡ ಮುಂತಾದವರು ಪ್ರತಿಭಟನೆ ನಡೆಸಿ ಅನ್ಯ ರಾಜ್ಯಗಳ ಅಂಬ್ಯುಲೆನ್ಸ್‍ಗೆ ಆದ್ಯತೆ …

Read More »

ಇಂದಿರಾ ಕ್ಯಾಂಟಿನ್ ರದ್ದಾದರೆ ಜನ ಶಾಪ ಹಾಕುತ್ತಾರೆ. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರ

ಬೆಂಗಳೂರು, ಫೆ.8- ಬಡವರ ಹಸಿವು ನೀಗಿಸುವ ಉದ್ದೇಶದಿಂದ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟಿನ್‍ಗಳಿಗೆ ಬೀಗ ಜಡಿಯುವ ಕಾಲ ಸನ್ನಿಹಿತವಾಗಿದೆ. ಕಳೆದ ಏಪ್ರಿಲ್ 2020 ರಿಂದ ಈವರೆಗೂ ಇಂದಿರಾ ಕ್ಯಾಂಟಿನ್‍ಗಳಿಗೆ ಬಿಡುಗಡೆ ಮಾಡಬೇಕಾದ 22 ಕೋಟಿ ಅನುದಾನವನ್ನು ಬಿಬಿಎಂಪಿ ತಡೆ ಹಿಡಿದಿರುವುದರಿಂದ ಕೆಲವೇ ದಿನಗಳಲ್ಲಿ ಕ್ಯಾಂಟಿನ್‍ಗಳನ್ನು ರದ್ದುಗೊಳಿಸಲು ಗುತ್ತಿಗೆದಾರರು ತೀರ್ಮಾನಿಸಿದ್ದಾರೆ.198 ವಾರ್ಡ್‍ಗಳಲ್ಲಿ ಸ್ಥಾಪಿಸಲಾಗಿದ್ದ ಇಂದಿರಾ ಕ್ಯಾಂಟಿನ್‍ಗಳು ಹಾಗೂ ಮೊಬೈಲ್ ಕ್ಯಾಂಟಿನ್‍ಗಳಲ್ಲಿ ಸಾರ್ವಜನಿಕರಿಗೆ 5ರೂ.ಗೆ ಬೆಳಗಿನ ತಿಂಡಿ ಹಾಗೂ 10ರೂ.ಗೆ …

Read More »

ವಿಷಯದ ಕಲಿಯಲ್ಲಿ ವಿದ್ಯಾರ್ಥಿಗಳ ದೌರ್ಬಲ್ಯವನ್ನು ಗಮನಿಸಿ ಉತ್ತಮ ರೀತಿಯ ಶಿಕ್ಷಣ ನೀಡಬೇಕು.: ಸುರೇಶ್ ಕುಮಾರ್

ಖಾನಾಪುರ -: ವಿಷಯದ ಕಲಿಯಲ್ಲಿ ವಿದ್ಯಾರ್ಥಿಗಳ ದೌರ್ಬಲ್ಯವನ್ನು ಗಮನಿಸಿ ಉತ್ತಮ ರೀತಿಯ ಶಿಕ್ಷಣ ನೀಡಬೇಕು. ಯಾವುದೇ ವಿಷಯದಲ್ಲಿ ಅವರ ಜ್ಞಾನ ಕುಂಠಿತವಾಗಬಾರದು. ಹಾಗಾಗಿ ಶಿಕ್ಷಕರು ಪೂರ್ವ ತಯಾರಿ ಮಾಡಿಕೊಂಡು ಸಮಪರ್ಕವಾಗಿ ಬೋಧನಾ ವಿಧಾನ ಅಳವಡಿಸಿಕೊಳ್ಳಬೇಕು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದರು. ಖಾನಾಪುರ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಸೋಮವಾರ (ಫೆ.೮) ಭೇಟಿ ನೀಡಿದ ಬಳಿಕ ಖಾನಾಪುರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವರ್ಷ ಹಲವು ಹೊಸ ಯೋಜನೆಗಳ …

Read More »

ಮೀಸಲಾತಿ ನೀಡದಿದ್ದರೆ ವಿಧಾನಸೌದಕ್ಕೆ ಮುತ್ತಿಗೆ: ಬಸವ ಮೃತ್ಯುಂಜಯ ಸ್ವಾಮೀಜಿ

ಶಿರಾ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆ ಬೆಂಗಳೂರು ತಲುಪುವುದರೊಳಗೆ ಮೀಸಲಾತಿ ನೀಡದಿದ್ದರೆ ವಿಧಾನಸೌದಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಲಿಂಗಾಯಿತ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದ ಹೊರವಲಯದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಭೆ ನಡೆಸಿ ಮಾತನಾಡಿದರು. 2 ಎ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತು ನೀಡಿದ್ದರು. ಈಗ ಅವರು ಮಾತು ಉಳಿಸಿಕೊಂಡು ಮೀಸಲಾತಿ ನೀಡಿದರೆ …

Read More »

ಡಿಕೆ ಶಿವಕುಮಾರ್ ಪುತ್ರಿ ವಿವಾಹ: ದೆಹಲಿಯಿಂದ ಹಲವು ಗಣ್ಯರ ಆಗಮನ ಸಾಧ್ಯತೆ

ಬೆಂಗಳೂರು,ಫೆಬ್ರವರಿ 08:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರಿ ವಿವಾಹ ಫೆಬ್ರವರಿ 14 ರಂದು ನಡೆಯಲಿದ್ದು, ದೆಹಲಿಯಿಂದ ಹಲವು ರಾಜಕೀಯ ನಾಯಕರು ಬರಲಿದ್ದಾರೆ. ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ರಣದೀಪ್ ಸುರ್ಜೇವಾವಾಲಾ ಸೇರಿದಂತೆ ಹಲವು ಕೇಂದ್ರ ನಾಯಕರು ಆಗಮಿಸುವ ಸಾಧ್ಯತೆಯಿದೆ, ಇನ್ನೂ ರಾಜ್ಯದ ಸಿಎಂ ಬಿಎಸ್ ಡಿಯೂರಪ್ಪ, ಡಿಸಿಎಂಗಳು ಹಾಗೂ ಸಚಿವರು ಕೂಡ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಬ್ಬರು ರಾಜಕೀಯ ನಾಯಕರುಗಳ ಕುಟುಂಬದ ಕಡೆಯಿಂದ ಎಲ್ಲಾ ಪ್ರತಿಷ್ಠಿತ ರಾಜಕಾರಣಿಗಳಿಗೆ ಆಹ್ವಾನ ನೀಡಲಾಗಿದೆ, …

Read More »

ಕೌಟುಂಬಿಕ ಸಮಸ್ಯೆಗಳನ್ನು ಕಂಡು, ಕೇಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅಕ್ಷರಶಃ ಕಣ್ಣೀರಾದರು.

ಬೆಳಗಾವಿ – ನರೇಗಾ ಯೋಜನೆ ಹಾಗೂ ಇಟ್ಟಿಗೆ ಬಟ್ಟಿಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು ಪಡುತ್ತಿರುವ ಕಷ್ಟ ಮತ್ತು ಅವರ ಕೌಟುಂಬಿಕ ಸಮಸ್ಯೆಗಳನ್ನು ಕಂಡು, ಕೇಳಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅಕ್ಷರಶಃ ಕಣ್ಣೀರಾದರು.  ​ದೇಸೂರ್ ಪ್ರದೇಶಕ್ಕೆ ಭೇಟಿ ನೀಡಿದ ಲಕ್ಷ್ಮಿ ಹೆಬ್ಬಾಳಕರ್, ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಸುಮಾರು 350ಕ್ಕೂ ಹೆಚ್ಚಿನ ​ ಮಹಿಳೆಯರನ್ನು ಭೇಟಿಮಾಡಿ ಸಂವಾದ ನಡೆಸಿದರು. ಅವರ ಆರೋಗ್ಯದ ಬಗ್ಗೆ ವಿಚಾರಿಸಿ, ಕೌಟುಂಬಿಕ ಪರಿಸ್ಥಿತಿಗಳನ್ನು ಆಲಿಸಿದರು. ಕೆಲಸ ಸ್ಥಳದಲ್ಲಿ ಅವರಿಗೆ …

Read More »

ರಸ್ತೆ ಸಂಚಾರ ನಿಯಮಗಳು ಹಾಗು ಸುರಕ್ಷಾ ಜಾಗೃತಿ ಬಿ.ವಿ.ಬೆಲ್ಲದ ಲಾ ಕಾಲೇಜಿನ ವಿದ್ಯಾರ್ಥಿಗಳಿಂದ ಜಾಥಾ

ಬೆಳಗಾವಿ : ಬೆಳಗಾವಿ ನಗರದಲ್ಲಿ ಬಿ.ವಿ.ಬೆಲ್ಲದ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪ್ರೊಫೆಸರ್ ಅವರ ನೇತೃತ್ವದಲ್ಲಿ ಸಂಚಾರ ನಿಯಮಗಳ ಹಾಗೂ ರಸ್ತೆ ಸುರಕ್ಷಾ ಜಾಗೃತಿ ಜಾತಾವನ್ನು ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಹಮಿಕೊಳ್ಳಲಾಗಿತ್ತು. ಹೌದು ಬೆಳಗಾವಿಯಲ್ಲಿ ಇತ್ತೀಚಿಗೆ ಪೊಲೀಸ್ ಸಿಬ್ಬಂದಿಗಳಿಂದ ಜಾಥಾ ಕಾರ್ಯಕ್ರಮ ನಡೆಸಲಾಗಿತ್ತು ಈಗ ಬಿ.ವಿ.ಬೆಲ್ಲದ ಲಾ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ಸಂಚಾರ ನಿಯಮಗಳು ಹಾಗು ಸುರಕ್ಷಾ ಜಾಗೃತಿ ಜಾತಾ ನಡೆಸಿದರು. ಹಾಗೆಯೇ ಪ್ರತಿ …

Read More »

ಮಾರುಕಟ್ಟೆಗೆ ಬರಲಿದೆ ಜಾಗ್ವಾರ್ ಐ ಪೇಸ್

ನವ ದೆಹಲಿ : ಜಾಗ್ವಾರ್ ಲ್ಯಾಂಡ್ ರೋವರ್ ನ, ಜಾಗ್ವಾರ್ ಐ ಪೇಸ್ ಎಲೆಕ್ಟ್ರಿಕ್ ಎಸ್ ಯು ವಿ ಕಾರು ಭಾರತದ ಮಾರುಕಟ್ಟೆಯನ್ನು ಪ್ರವೇಶಿಸುತ್ತಿದೆ ಎಂಬ ಸುದ್ದಿಯನ್ನು ಕಂಪೆನಿ ಈಗ ಬಹಿರಂಗ ಪಡಿಸಿದೆ., ಹೌದು, ಬರುವ ಮಾರ್ಚ್ 9ರಂದು ಭಾರತದಲ್ಲಿ ಬಿಡುಗಡೆಗೊಳ್ಳಲಿದೆ ಜಾಗ್ವಾರ್ ಐ ಪೇಸ್. ಜಾಗ್ವಾರ್ ಐ ಪೇಸ್ ಎಲೆಕ್ಟ್ರಿಕ್ ಎಸ್ ಯು ವಿ ನ ಪ್ರಾಥಮಿಕ ಮಾಡೆಲ್ ಜನವರಿಯಲ್ಲಿ ಭಾರತಕ್ಕೆ ಬಿಡುಗಡೆಗೊಂಡಿತ್ತು. ಮಾತ್ರವಲ್ಲದೇ, ದೇಶದ ಮೊದಲ ಎಲೆಕ್ಟ್ರಿಕ್ …

Read More »

ಹುಕ್ಕೇರಿ ನೂತನ ತಹಶೀಲ್ದಾರ್ ಡಿ.ಎಚ್. ಹೂಗಾರ ಅಧಿಕಾರ ಸ್ವೀಕಾರ

ಹುಕ್ಕೇರಿ: ತಾಲೂಕಿನ ನೂತನ ತಹಶೀಲ್ದಾರ ಆಗಿ ಡಿ.ಎಚ್. ಹೂಗಾರ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ತಹಶೀಲ್ದಾರರನ್ನು ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಹೂಗಾರ ಅವರು ಶಾಸಕ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.

Read More »