Breaking News

Daily Archives: ಫೆಬ್ರವರಿ 8, 2021

ಚಹಾ, ಯೋಗದ ಮೇಲೂ ಸಂಚು: ನರೇಂದ್ರ ಮೋದಿ ಟೀಕೆ

ಸೋನಿತ್‌ಪುರ : ಭಾರತದ ಹೆಸರಿಗೆ ಮಸಿ ಬಳಿಯುವುದಕ್ಕಾಗಿ ಹೊಂಚು ಹಾಕುತ್ತಿರುವ ಜಾಗತಿಕ ಸಂಚುಕೋರರು ನಮ್ಮ ಚಹಾ, ಯೋಗವನ್ನೂ ಬಿಟ್ಟಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದಾರೆ. ಈ ಮೂಲಕ ಸ್ವೀಡಿಶ್‌ ಹೋರಾಟಗಾರ್ತಿ ಗ್ರೆಟಾ ಥನ್ಬರ್ಗ್‌ ಟ್ವೀಟ್‌ ಮಾಡಿದ್ದ ವಿವಾದಿತ ಟೂಲ್‌ಕಿಟ್‌ ಬಗ್ಗೆ ಪ್ರಧಾನಿ ಇದೇ ಮೊದಲ ಬಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರದಲ್ಲಿ ಮಾತನಾಡಿ, ವಿವಾದಿತ ಟೂಲ್‌ಕಿಟ್‌ನಲ್ಲಿ ನಮ್ಮ ಚಹಾ, ಯೋಗಾ ವಿರುದ್ಧವೂ ಅಪಪ್ರಚಾರ ಮಾಡುವ ಸಂಚಿತ್ತು ಎನ್ನುವುದನ್ನು …

Read More »

ಚಿನ್ನಮ್ಮನ ಬೆಂಗಳೂರು ವಾಸ ಅಂತ್ಯ: ತಮಿಳುನಾಡಿನತ್ತ ಹೊರಟ ವಿ.ಕೆ. ಶಶಿಕಲಾ

ಬೆಂಗಳೂರು: ಜೈಲು ವಾಸ ಮುಗಿಸಿರುವ ತಮಿಳರ ಚಿನ್ನಮ್ಮ, ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ಇಂದು ತಮಿಳುನಾಡಿಗೆ ಹೊರಟಿದ್ದಾರೆ. ಇದರೊಂದಿಗೆ ಚಿನ್ನಮ್ಮನ ಕೆಲವು ವರ್ಷಗಳ ಬೆಂಗಳೂರು ವಾಸ ಇಂದಿಗೆ ಅಂತ್ಯವಾಗಿದೆ. ಕಳೆದೊಂದು ವಾರದಿಂದ ನಗರದ ಪ್ರೆಸ್ಟಿಜ್ ಗಾಲ್ಫ್ ಶೈರ್ ಕ್ಲಬ್ ನಲ್ಲಿ ಕಾಲ ಕಳೆದಿದ್ದ ಶಶಿಕಲಾ ಇಂದು ಬೆಳಗ್ಗೆ ತಮಿಳುನಾಡಿನತ್ತ ಹೊರಟಿದ್ದಾರೆ. ಅತ್ತಿಬೆಲೆ, ಹೊಸೂರು ಮಾರ್ಗವಾಗಿ ಶಶಿಕಲಾ ತಮಿಳುನಾಡಿಗೆ ಹೋಗಲಿದ್ದಾರೆ. ಮಾರ್ಗಮಧ್ಯೆ ಸಾವಿರಾರು ಮಂದಿ ಬೆಂಬಲಿಗರು ಸೇರಿದ್ದು, ಶಶಿಕಲಾ ಅವರನ್ನು …

Read More »

ಮತ್ತೆ ಕುಸಿತ ಕಂಡ ಬಂಗಾರದ ಬೆಲೆ

ನವದೆಹಲಿ : ಚಿನ್ನ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದೀರಾ? ಹಾಗಾದರೆ ನಿಮಗೊಂದು ಶುಭ ಸುದ್ದಿ. ಇಲ್ಲಿಯವರೆಗೆ ಗಗನಕ್ಕೇರುತ್ತಿದ್ದ ಚಿನ್ನದ ಬೆಲೆ ಈಗ ಕ್ರಮೇಣವಾಗಿ ಕುಸಿಯುತ್ತಿದೆ. ಇದರಿಂದಾಗಿ ಬಂಗಾರ ಕೊಳ್ಳಬೇಕೆಂದುಕೊಂಡಿದ್ದ ಆಭರಣ ಪ್ರಿಯರಿಗೆ ಇದೊಂದು ಸಮಾಧಾನಕರ ಸಂಗತಿ. ಈ ಹಿಂದೆ ಗರಿಷ್ಠ 56,000 ರೂಗಳನ್ನು ತಲುಪಿದ್ದು, ಪ್ರಸ್ತುತ 10 ಗ್ರಾಂ ಬೆಲೆ ಈಗ 48,000 ರೂ.ಗೆ ಕುಸಿದಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 48,000 ರೂ. 22 ಕ್ಯಾರೆಟ್ …

Read More »

ಮೇಘಾಲಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದೆ.

ಶಿಲ್ಲಾಂಗ್: ದೇಶದಲ್ಲಿ ತೈಲೋತ್ಪನ್ನಗಳ ದರಗಳು ಏರಿಕೆಯಾಗಿದ್ದು, ದೇಶಾದ್ಯಂತ ಜನರು ಈ ಬಗ್ಗೆ ಕಿಡಿ ಕಾರುತ್ತಿದ್ದಾರೆ. ಈ ನಡುವೆ ಮೇಘಾಲಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದೆ. ಹೌದು ಈ ಬಗ್ಗೆ ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಸಂಗ್ಮಾ ಮಾಹಿತಿ ನೀಡಿದ್ದು, ರಾಜ್ಯದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಸೋಮವಾರ ಮಧ್ಯರಾತ್ರಿಯಿಂದ 2 ರೂ.ಗೆ ಇಳಿಸಲು ಮೇಘಾಲಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ‘ಮೇಘಾಲಯದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ …

Read More »

ಖಾತೆ ಬಗ್ಗೆ ಅಸಮಾಧಾನ ಹೊರಹಾಕಿದ ಅರವಿಂದ ಲಿಂಬಾವಳಿ

ಚಾಮರಾಜನಗರ (ಫೆ.07)  ಸಚಿವ ಸಂಪುಟ ವಿಸ್ತರಣೆ ನಂತರ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಎಲ್ಲವು ಸರಿಯಿಲ್ಲ ಎಂಬುದು ಮತ್ತೊಮ್ಮೆ ಬಹಿರಂಗಗೊಂಡಿದೆ. ಅರಣ್ಯ ಖಾತೆ ನೀಡಿರುವುದಕ್ಕೆ ಸಚಿವ ಅರವಿಂದ ಲಿಂಬಾವಳಿ ಪರೋಕ್ಷವಾಗಿ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ.  ಚಾಮರಾಜನಗರದಲ್ಲಿ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಮುಖ್ಯಮಂತ್ರಿಗಳು ನನಗೆ ಎರಡು ಖಾತೆ ಕೊಟ್ಟಿದ್ದಾರೆ. ರಾತ್ರಿ ಹೊತ್ತು ಕಾಡಿನಲ್ಲಿ ಇರಬೇಕು, ಹಗಲು ವೇಳೆ ನಾಡಿಗೆ ಬರಬೇಕು, ಕಾಡು ನಾಡು ಎರಡನ್ನೂ …

Read More »

ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಕಂಬಳ

ಕೋವಿಡ್ ನಿಯಮಗಳ ನಡುವೆ ಕರಾವಳಿಯಲ್ಲಿ ಕಂಬಳ ಕ್ರೀಡೆ ಅದ್ಧೂರಿಯಾಗಿ ನಡೆಯುತ್ತಿದೆ. ಮಂಗಳೂರು ನಗರ ಹೊರವಲಯದ ಐಕಳದಲ್ಲಿ ಎರಡನೇ ಕಂಬಳ ಕ್ರೀಡೆ ಭಾರೀ ವಿಜೃಂಭಣೆಯಿಂದ ಜರುಗಿದೆ. ಈ ಕಂಬಳ ಕೂಟ ಐತಿಹಾಸಿಕ ದಾಖಲೆಯ ಜೊತೆ ಭಾವನಾತ್ಮಕ ಸನ್ನಿವೇಶಕ್ಕೂ ಸಾಕ್ಷಿಯಾಗಿದೆ. ಹೌದು..ಮಂಗಳೂರು ಹೊರವಲಯದ ಐಕಳ ಎಂಬಲ್ಲಿ ನಡೆದ ಕಂಬಳ ಎರಡು ಘಟನೆಗಳಿಗೆ ಸಾಕ್ಷಿಯಾಯಿತು. ಒಂದು 100 ಮೀ ದೂರವನ್ನು 9.15 ಸೆಕೆಂಡಲ್ಲಿ ಬೈಂದೂರಿನ ವಿಶ್ವನಾಥ್ ಕೋಣಗಳನ್ನು ಓಡಿಸಿ ನೂತನ ದಾಖಲೆ ಮಾಡಿದ್ರೆ, ಇನ್ನೊಂದು …

Read More »

ಪ್ರಧಾನ ಮಂತ್ರಿ ಗಳಿಗೆ ರೈತರ ಬಗ್ಗೆ ಗೌರವ್ ಇದೆಯಾ …?H.D.K.

ರಾಮನಗರ  :  ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ‌.ಕುಮಾರಸ್ವಾಮಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಉದ್ಘಾಟನಾ ಸಮಾರಂಭದಲ್ಲಿಯೂ ಭಾಗವಹಿಸಿದ್ದರು‌. ಈ  ಸಂದರ್ಭದಲ್ಲಿ ಮಾತನಾಡಿದ ಹೆಚ್ಡಿಕೆ ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ರಾಜಕೀಯ ವಿಚಾರಕ್ಕೆ ಪ್ರತಿಕ್ರಿಯಿಸಿ ನಾನು ಸೂಕ್ಷ್ಮವಾಗಿ ಎಲ್ಲವನ್ನು ಗಮನಿಸುತ್ತಿದ್ದೇನೆ, ಧಾರ್ಮಿಕ ಗುರುಗಳೇ ಸಮಾಜದ ಪರವಾಗಿ ಹೋರಾಟಕ್ಕಿಳಿದಿದ್ದಾರೆ. ಹಾಗಾಗಿ ಇದು ದಾರಿತಪ್ಪುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಬೇಕು‌.ಧಾರ್ಮಿಕ ಗುರುಗಳ ಭಾವನೆಗೂ ಸರ್ಕಾರ ಗೌರವ ಕೊಡಬೇಕು ಆ ನಿಟ್ಟಿನಲ್ಲಿ ಸರ್ಕಾರ ಸೂಕ್ತ …

Read More »

ಅಯೋಧ್ಯೆ ಆಯ್ತು, ಕಾಶಿ, ಮಥುರಾಗಳಲ್ಲಿನ್ನು ಮಂದಿರ ನಿರ್ಮಾಣ ಬಾಕಿ ಇದೆ; ಬಸನಗೌಡ ಯತ್ನಾಳ್

ವಿಜಯಪುರ (ಫೆ. 7): ರಾಮ ಮಂದಿರ ನಿರ್ಮಾಣದ ಕನಸು ಇದೀಗ ನನಸಾಗುತ್ತಿದೆ.  ಇನ್ನು ಕಾಶಿ ಮತ್ತು ಮಥುರಾಗಳಲ್ಲಿ ಮಂದಿರ ನಿರ್ಮಾಣ ಬಾಕಿ ಇದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಚ್ ಪರವಾಗಿ ಆಯೋಜಿಸಲಾಗಿದ್ದ ನಿಧಿ ಸಮರ್ಪಣಾ ಮಹಾ ಅಭಿಯಾನದ ಸಭೆಯಲ್ಲಿ ಅವರು ರಾಮ ಮಂದಿರ ನಿರ್ಮಾಣಕ್ಕೆ ರೂ. 5 ಲಕ್ಷ ದೇಣಿಗೆ ನೀಡಿ ಮಾತನಾಡಿದರು. ಎಲ್ಲವೂ …

Read More »

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತ

ಚಿಕ್ಕೋಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರವಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನು ಮೂವರಿಗೆ ಗಂಭೀರ ಗಾಯಗಳಾಗಿವೆ. ಲತಾ ರಾಜೇಂದ್ರ ಪಾಟೀಲ (38) ಹಾಗೂ ಆಕೆಯ ಪುತ್ರಿ ಅನಿಷಾ ರಾಜೇಂದ್ರ ಪಾಟೀಲ (16) ಮೃತ ದುರ್ದೈವಿಗಳು. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಸೌಂದಲಗಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಐದು ಜನರಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. …

Read More »

1 ಕೋಟಿ 23 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ

ಕಿತ್ತೂರು- ಕಿತ್ತೂರ ಮತ ಕ್ಷೇತ್ರದ ಶಾಸಕ ಮಹಾಂತೇಶ  ದೊಡ್ಡಗೌಡರ  ಸೋಮವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ  ಬೈಲಹೊಂಗಲ ಕಛೇರಿಯಲ್ಲಿ ಸಾರ್ವಜನಿಕ ಭೇಟಿ . 12:30ಕ್ಕೆ ಬೈಲೂರ  ಗ್ರಾಮದಲ್ಲಿ   ಜಲಮಿಷನ್ ಯೋಜನೆಯಡಿ  1 ಕೋಟಿ 23 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆಯ ಹಾಗೂ ಗಣಪತಿ ದೇವಸ್ಥಾನದ ಹತ್ತಿರ 5 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಯ  ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 1 ಗಂಟೆಗೆ ದೇಗಲೊಳ್ಳಿ  …

Read More »