Breaking News

Daily Archives: ಫೆಬ್ರವರಿ 12, 2021

ರಾಮ ಮಂದಿರದ ಹೆಸರಲ್ಲಿ ವಂಚಿಸುತ್ತಿದ್ದ ದುಷ್ಕರ್ಮಿಗಳ ಬಂಧನ

ಕಾನಪುರ: ಒಳ್ಳೆಯ ಕೆಲಸದ ಹೆಸರಲ್ಲಿ ಜನರನ್ನು ವಂಚಿಸಲು ದುಷ್ಕರ್ಮಿಗಳು ಸದಾ ಸಿದ್ಧವಿರುತ್ತಾರೆ. ಇದೀಗ ಅಯೋಧ್ಯೆಯಲ್ಲಿ ಕಟ್ಟಲು ಯೋಜಿಸಲಾಗಿರುವ ಭವ್ಯ ರಾಮ ಮಂದಿರದ ಹೆಸರಲ್ಲಿ ಕೂಡ ವಂಚನೆಗೆ ತೊಡಗಿರುವುದು ಬೆಳಕಿಗೆ ಬಂದಿದೆ. ಈ ರೀತಿಯ ಎರಡು ಪ್ರಯತ್ನಗಳನ್ನು ಉತ್ತರ ಪ್ರದೇಶ ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಉತ್ತರಪ್ರದೇಶದ ಕಾನಪುರದಲ್ಲಿ ಚಂದ್ರಪ್ರಕಾಶ್ ತ್ರಿಪಾಠಿ ಮತ್ತು ಅಶೋಕ್ ರಾಜಪೂತ್ ಎಂಬುವರು ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿರುವುದಾಗಿ ಜನರಿಂದ ಹಣ ಪಡೆಯುತ್ತಿದ್ದರು. …

Read More »

ತುಳು ಚಿತ್ರ ನಿರ್ದೇಶಕನಿಗೆ ಕನ್ನಡ ನಟಿಯಿಂದ ಮೋಸ

ಮಂಗಳೂರು : ತುಳು ಚಿತ್ರ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಇವರಿಗೆ ನೀಡಿದ 40 ಲಕ್ಷ ರೂ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಪದ್ಮಜಾ ರಾವ್‌ಗೆ ಮಂಗಳೂರಿನ ಜೆಎಂಎಫ್‌ಸಿ ಐದನೇ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ ನೀಡಿದೆ. ವೀರೇಂದ್ರ ಶೆಟ್ಟಿ ಕಾವೂರು ಕನ್ನಡದ ಚಿತ್ರರಂಗದ ನಟಿ ಪದ್ಮಾಜಾ ರಾವ್ ವಿರುದ್ಧ ಮಂಗಳೂರಿನ ಕೋರ್ಟ್‌ನಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು. ಎರಡು ವರ್ಷಗಳ ಹಿಂದೆ ಪದ್ಮಜಾ ರಾವ್, …

Read More »

ದರ್ಶನ್ ಹುಟ್ಟುಹಬ್ಬದ ದಿನ ರಾಬರ್ಟ್ ಟ್ರೈಲರ್ ರಿಲೀಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷಿತ ಸಿನಿಮಾ ರೋಬೋಟ್ ಚಿತ್ರದ ಎಂದು ಅಧಿಕೃತ ಮಾಹಿತಿಯನ್ನು ಚಿತ್ರತಂಡ ಹೊರಡಿಸಿದೆ. ಫೆಬ್ರವರಿ 16 ದರ್ಶನ್ ಅವರ ಹುಟ್ಟಿದ ದಿನವಾಗಿದ್ದು ಅಂದೇ ಚಿತ್ರದ ಟ್ರೈಲರ್ ರಿಲೀಸ್ ಆಗುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ. ಈ ಟ್ರೈಲರ್ ನನ್ನ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿದೆ. ಮಾರ್ಚ್ 11ರಂದು ಈ ಸಿನಿಮಾ ರಿಲೀಸ್ ಆಗುತ್ತಿದ್ದು ಈ ಚಿತ್ರದ ಟ್ರೈಲರ್ ಗಾಗಿ ದರ್ಶನ್ …

Read More »

ಮೀಸಲಾತಿ ‘ಬಲೆ’ಯಲ್ಲಿ ಸಿಲುಕಿ ಯಡಿಯೂರಪ್ಪ ಸರ್ಕಾರ ವಿಲವಿಲ..!

ಬೆಂಗಳೂರು, ಫೆ.12- ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ಹೆಚ್ಚಳಕ್ಕಾಗಿ ಒತ್ತಾಯಿಸುತ್ತಿರುವುದು ಸರ್ಕಾರವನ್ನು ಅಕ್ಷರಶಃ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಒಂದೆಡೆ ಕುರುಬರು ಎಸ್ಟಿಗೆ ಸೇರಿಸಲು ಶಕ್ತಿ ಪ್ರದರ್ಶನ ತೋರುತ್ತಿದ್ದರೆ, ಇತ್ತ ಪಂಚಮಸಾಲಿ ಲಿಂಗಾಯತರು 2ಎ ಮೀಸಲಾತಿಗೆ ಪಟ್ಟು ಹಿಡಿದಿದ್ದಾರೆ. ಇನ್ನು ವಾಲ್ಮಿಕಿ ಸಮುದಾಯದವರು ಮೀಸಲಾತಿ ಹೆಚ್ಚಿಸುವಂತೆ ಪಟ್ಟು ಹಿಡಿದಿದ್ದಾರೆ.ಎಸ್ಟಿ ಮೀಸಲಾತಿ ಶೇ.7.5ರಷ್ಟು ಹೆಚ್ಚಿಸುವ ಸಂಬಂಧ ಸರ್ಕಾರದ ಮೇಲೆ ನಾನಾ ಸಮುದಾಯಗಳು ಒತ್ತಡ ಹೇರುತ್ತಿವೆ. ಪ್ರಸ್ತುತ ಕನಿಷ್ಠ 8 …

Read More »

ಈ ಬಾರಿಯ ಬಜೆಟ್‍ನಲ್ಲಿ ಇಲಾಖೆಗಳಿಗೆ ನೀಡುತ್ತಿದ್ದ ಅನುದಾನವನ್ನು ಶೇ.10ರಿಂದ 15ರಷ್ಟು ಕಡಿತಗೊಳಿಸಲು ತೀರ್ಮಾನ:B.S.Y.

ಬೆಂಗಳೂರು, ಫೆ.12- ರಾಜ್ಯದಲ್ಲಿ ಈ ಬಾರಿ ಕೋವಿಡ್-19 ಬಂದ ಹಿನ್ನೆಲೆ ಎಲ್ಲಾ ಚಟುವಟಿಕೆಗಳು ಸ್ತಬ್ಧಗೊಂಡು ಬೊಕ್ಕಸಕ್ಕೆ ಆದಾಯ ಕುಸಿತಗೊಂಡಿರುವ ಕಾರಣ ಈ ಬಾರಿಯ ಬಜೆಟ್ ಗಾತ್ರ ಹಾಗೂ ಇಲಾಖೆಗಳಿಗೆ ನೀಡುತ್ತಿದ್ದ ಅನುದಾನ ಕಡಿತವಾಗಲಿದೆ. ಮಾರ್ಚ್ 5ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಆದಾಯ ಸಂಪನ್ಮೂಲ ಕ್ರೂಢೀಕರಣವೇ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಲಾಕ್‍ಡೌನ್ ತೆರವುಗೊಳಿಸಿದ ನಂತರ ಸರ್ಕಾರದ ಬೊಕ್ಕಸಕ್ಕೆ ಆದಾಯ …

Read More »

ಪಡಿತರದಲ್ಲಿ ರಾಗಿ ಮತ್ತು ಜೋಳ ನೀಡುವಂತೆ ಕೇಂದ್ರ ಸಚಿವರಲ್ಲಿ ಕತ್ತಿ ಮನವಿ

ಬೆಂಗಳೂರು, ಫೆ.12- ಕಡಿತ ಮಾಡಲಾದ ಪಡಿತರಕ್ಕೆ ಪರ್ಯಾಯವಾಗಿ ರಾಗಿ ಮತ್ತು ಜೋಳವನ್ನು ವಿತರಿಸುವಂತೆ ಸಚಿವ ಉಮೇಶ್ ಕತ್ತಿ ಕೇಂದ್ರ ಆಹಾರ ಸಚಿವರಲ್ಲಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಅವರನ್ನು ಭೇಟಿ ಮಾಡಿದ ಅವರು ಭೇಟಿ ಮಾಡಿ ಚರ್ಚಿಸಿದ ಅವರು ಪ್ರಸ್ತುತ ಪಡಿತರ ಸರಬರಾಜು ವ್ಯವಸ್ಥೆಯಲ್ಲಿ ಅಕ್ಕಿ, ಗೋ ವಿತರಣೆ ಕಡಿತಗೊಳಿಸಿದ ಪ್ರಮಾಣಕ್ಕೆ ಪರ್ಯಾಯವಾಗಿ ರಾಗಿ, ಜೋಳ, ಸ್ಥಳೀಯ …

Read More »

ಯುವಕನ ಬರ್ಬರ ಕೊಲೆ!ತಲೆ ಮೇಲೆ ಕಲ್ಲು ಎತ್ತಿ ಹಾಕಿ ಶವ ಗುಂಡಿಗೆ ಹಾಕಿದ್ರು.

ಕಲಬುರಗಿ: ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇರಿದಿದ್ದಲ್ಲದೆ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊನೆಗೆ ಶವವನ್ನು ಗುಂಡಿಯೊಂದಕ್ಕೆ ಹಾಕಿ ಹೋಗಿದ್ದಾರೆ. ಕಲಬುರಗಿ ನಗರದ ದುಬೈ ಕಾಲನಿ ನಿವಾಸಿ ವೀರೇಶ್​ ಬೀಮಳ್ಳಿ (28) ಕೊಲೆಯಾದ ಯುವಕ. ನಗರದ ಸೂಪರ್ ಮಾರ್ಕೆಟ್​​ನ ಬಾಂಡೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವೀರೇಶ್​, ನಿನ್ನೆ ಮುಂಜಾನೆ ಎಂದಿನಂತೆ ಕೆಲಸಕ್ಕೆ ಹೋಗಿದ್ದ. ಆದರೆ ಸಂಜೆ ಮನೆಗೆ ಮರಳಿರಲಿಲ್ಲ. ನಿನ್ನೆ ಮಧ್ಯಾಹ್ನದಿಂದಲೇ ಆತ ನಾಪತ್ತೆಯಾಗಿದ್ದ ಎನ್ನಲಾಗಿದ್ದು, ಚೌಕ್ ಠಾಣಾ ಪೊಲೀಸರಿಗೆ …

Read More »

ಬಾಲಕಿಯ ಮನೆಯ ಮುಂದೆ ಚುಡಾಯಿಸಿದ ಪ್ರಕರಣಕ್ಕೆ ತಂದೆ ಮಗ ಸೇರಿ ಮೂವರಿಗೆ ಜೈಲು ಶಿಕ್ಷೆ

ಚಾಮರಾಜನಗರ: ಅಪ್ರಾಪ್ತ ಶಾಲಾ ಬಾಲಕಿಯನ್ನು ಹಿಂಬಾಲಿಸಿ ಬಾಲಕಿಯ ಮನೆಯ ಮುಂದೆ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಮಗ ಸೇರಿ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್‌ಸ್ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಜಿಲ್ಲೆಯ ರಾಮಾಪುರ ಠಾಣಾ ವ್ಯಾಪ್ತಿಯ ಗ್ರಾಮದ ಆನಂದ ಮತ್ತು ನಾಗೇಂದ್ರ ಅವರಿಗೆ 6 ತಿಂಗಳ ಜೈಲು ಶಿಕ್ಷೆ ಹಾಗೂ ಆನಂದನ ತಂದೆ ಮಾದಪ್ಪ ಅವರಿಗೆ 1 ವರ್ಷದ ಜೈಲು ಶಿಕ್ಷೆ …

Read More »

ಮೋದಿ ಏಳು ಸುತ್ತಿನ ಕೋಟೆ ಕಟ್ಟಿಕೊಂಡು ತನ್ನ ಪಾಡಿಗೆ ತಾನು ದೆಹಲಿಯಲ್ಲಿ ಇದ್ದಾರೆ. ಮೋದಿ ಇಲ್ಲಿಗೆ ಬಂದು ಕೆಲಸ ಮಾಡುತ್ತಾರಾ:. ಸಿದ್ದರಾಮಯ್ಯ

ಬಾಗಲಕೋಟೆ : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಬರಲಿದೆ. ಇದು ಶತಃಸಿದ್ದ. ನಾನು ಮತ್ತೆ ಈ ರಾಜ್ಯದ ಮುಖ್ಯಮಂತ್ರಿಯಾಗುವುದು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದು ಮಾಜಿ ಸಿಎಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿ ತಾಲೂಕು ಗೋವನಕೊಪ್ಪದಲ್ಲಿ 2 ಕೋಟಿ ವೆಚ್ಚದಲ್ಲಿ ಪ್ರವಾಹದಿಂದ ಹಾನಿಯಾದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮತ್ತೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ. …

Read More »

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ರಕ್ತದಲ್ಲಿ ಮುಖ್ಯಮಂತ್ರಿಗೆ ಪತ್ರ

ವಿಜಯಪುರ: ರಾಜ್ಯದಲ್ಲಿ ಪಂಚಮಸಾಲಿ ಸಮಾಜಕ್ಕೆ 2-ಎ ಮೀಸಲಾತಿ ನೀಡಲು ಸಮಾಜದ ಎರಡು ಪೀಠಗಳ ಜಗದ್ಗುರುಗಳು ಬೆಂಗಳೂರಿಗೆ ಪಾದಯಾತ್ರೆ ನಡೆಸಿದ್ದಾರೆ. ಈ ಹಂತದಲ್ಲೇ ವಿಜಯಪುರ ನಗರದ ಯುವಕನೊಬ್ಬ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಕ್ತದಲ್ಲಿ ಪತ್ರ ಬರೆದು, ಸಮಾಜದ ಜಗದ್ಗುರುಗಳ ಮೂಲಕ ಸರ್ಕಾರಕ್ಕೆ ರವಾನಿಸಿ ಗಮನ ಸೆಳೆದಿದ್ದಾನೆ. ನಗರದ ಗ್ಯಾಂಗ್‍ಬಾವಡಿ ನಿವಾಸಿ ಮಂಜುನಾಥ ನಿಡೋಣಿ ಎಂಬ ಯುಕನೇ ತಮ್ಮ ರಕ್ತದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ …

Read More »