Breaking News

Daily Archives: ಫೆಬ್ರವರಿ 16, 2021

ಗೋಕಾಕದಲ್ಲಿಂದು ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ …

Read More »

ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ

ಗದಗ: ಆರ್ ಎಂಪಿ ವೈದ್ಯರೊಬ್ಬರು ಮನಸೋಯಿಚ್ಛೆ ಬ್ಲೇಡ್ ನಿಂದ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ. ಗುರುರಾಜ್ ಜಾಗಿರದಾರ ಆತ್ಮಹತ್ಯೆ ಯತ್ನಿಸಿದ ವೈದ್ಯ. ನಗರದ ನಂದೀಶ್ವರ ಮಠದ ಹಿಂಭಾಗದಲ್ಲಿರುವ ತಮ್ಮ ಮನೆಯಲ್ಲಿ ಬ್ಲೇಡ್ ನಿಂದ ತಮ್ಮ ಎರಡೂ ಕಾಲುಗಳಿಗೆ ಗಾಯಪಡಿಸಿಕೊಂಡು, ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರು.   ಗುರುರಾಜ್ ಅವರು ನರಳಾಟವನ್ನು ಗಮನಿಸಿದ ಕುಟುಂಬಸ್ಥರು ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು …

Read More »

ಏರುತ್ತಿದೆ ಕೊರೊನಾ ಪ್ರಕರಣ; ಮುಂಬೈನಲ್ಲಿ ಮತ್ತೊಂದು ಲಾಕ್ ಡೌನ್?

ಮುಂಬೈ, ಫೆಬ್ರುವರಿ 16: ಮುಂಬೈನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಬೈನ ಕೆಲವು ಪ್ರದೇಶಗಳಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಕುರಿತು ಚರ್ಚೆ ನಡೆದಿದೆ. ಕೊರೊನಾ ಸೋಂಕಿನ ಪ್ರಕರಣಗಳು ಹೀಗೇ ಹೆಚ್ಚುತ್ತಿದ್ದರೆ, ರಾಜ್ಯದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಬಹುದು ಎಂದು ಎರಡು ದಿನಗಳ ಹಿಂದೆ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಬೃಹತ್ ಮುಂಬೈ ಮುನಿಸಿಪಾಲ್ ಕಾರ್ಪೊರೇಷನ್ ಮೇಯರ್ ಕಿಶೋರಿ ಪೆಡ್ನೇಕರ್, “ಜನರು …

Read More »

ಮೀಸಲಾತಿ ಹೋರಾಟಗಳು ಜಾತಿಗಳ ಮಧ್ಯೆ ಸಂಘರ್ಷಕ್ಕೆ ದಾರಿಯಾಗಬಹುದು: ಕುಮಾರಸ್ವಾಮಿ

ಶಿವಮೊಗ್ಗ: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮೀಸಲಾತಿ ಬೇಡಿಕೆ ಹೋರಾಟಗಳು ಭವಿಷ್ಯದಲ್ಲಿ ಜಾತಿಗಳ ಮಧ್ಯೆ ಸಂಘರ್ಷಕ್ಕೆ ದಾರಿಯಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಸಿದರು. ಮೀಸಲಾತಿಯ ವಾಸ್ತವಾಂಶ ಅಧಿಕಾರದಲ್ಲಿ ಇರುವ ಸರ್ಕಾರಕ್ಕೇ ಅರ್ಥವಾಗಿಲ್ಲ. ಅಂಬೇಡ್ಕರ್ ತಲತಲಾಂತದಿಂದ ಅಪಮಾನ, ತುಳಿತಕ್ಕೆ ಒಳಗಾದವರಿಗೆ, ಅವರು ಸಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ನೆರವಾಗಲು ಮೀಸಲಾತಿ ಬೇಕೆಂದರು. ಇಂದು ಸರ್ಕಾರದ ಸಚಿವರು, ಶಾಸಕರೇ ತಮ್ಮ ಜಾತಿಗಳ ಪರ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಸಂಪುಟ ಸಭೆಯಲ್ಲೇ ನಿರ್ಧರಿಸಬಹುದಾದ ವಿಷಯವನ್ನು ಬೀದಿಗೆ …

Read More »

ಶ್ರೀಮಂತ ರೈತ..! ಹೆಲಿಕಾಪ್ಟರ್ ಖರೀದಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ ಹಾಲು ಉತ್ಪಾದಕ..!!

ಭಿವಾಂಡಿ: ಮಹಾರಾಷ್ಟ್ರದ ಭಿವಾಂಡಿಯ ರೈತ ಮತ್ತು ಉದ್ಯಮಿ ಜನಾರ್ಧನ್ ಭೋಯಿರ್ ಅವರು 30 ಕೋಟಿ ರೂಪಾಯಿಯ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಹಾಲು ಉತ್ಪಾದಕರಾಗಿರುವ ಜನಾರ್ಧನ್ ಡೈರಿ ವ್ಯವಹಾರದಲ್ಲಿ ತೊಡಗಿಕೊಂಡಿದ್ದು, ದೇಶದ ವಿವಿಧ ನಗರಗಳಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಖರೀದಿಸಿದ್ದಾರೆ. ಇದರಿಂದ ತಮ್ಮ ಪ್ರವಾಸ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. ಡೈರಿ ವ್ಯವಹಾರಗಳಿಗೆ ಆಗಾಗ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್ ಗೆಪ್ರಯಾಣಿಸಬೇಕಿದೆ. ನಾನು ಭೇಟಿ ನೀಡಲಿರುವ ಎಲ್ಲಾ ನಗರಗಳಲ್ಲಿ ವಿಮಾನ ನಿಲ್ದಾಣಗಳು ಇರುವುದಿಲ್ಲ. …

Read More »

ಭತ್ತದ ಗದ್ದೆಗೆ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆ

ಗಂಗಾವತಿ: ಕೃಷಿಯಲ್ಲಿ ಆಧುನಿಕ ಪದ್ದತಿಯನ್ನು ರೈತರು ಅಳವಡಿಸಿಕೊಳ್ಳುತ್ತಿದ್ದು ಕೂಲಿಕಾರರ ಕೊರತೆಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ಭಾಗದಲ್ಲಿ ಭತ್ತದ ಗದ್ದೆಗೆ ಡ್ರೋಣ್ ಮೂಲಕ ಕ್ರಿಮಿನಾಶಕ ಸಿಂಪರಣೆಯ ಮೂಲಕ ಶೇ.50 ರಷ್ಟು ಖರ್ಚು ಉಳಿತಾಯ ಮಾಡಲಾಗುತ್ತಿದೆ. ಒಂದು ಎಕರೆ ಭತ್ತದ ಗದ್ದೆಗೆ ಕ್ರಿಮಿನಾಶಕ ಸಿಂಪರಣೆಗೆ ನಾಲ್ಕು ಕೂಲಿ ಕಾರ್ಮಿಕರು ಬೇಕಾಗುತ್ತದೆ. ಸಹಜವಾಗಿ ಒಂದು ಲೀಟರ್ ಕ್ರಿಮಿನಾಶಕ ಒಂದು ಎಕರೆಗೆ ಸಿಂಪರಣೆ ಮಾಡಲಾಗುತ್ತದೆ.‌ ಆದರೆ ಡ್ರೋಣ್ ಮೂಲಕ ಒಂದು ಲೀಟರ್ ನಲ್ಲಿ ಎರಡು ಎಕರೆ …

Read More »

‘ರಾಬರ್ಟ್’ ಸಿನಿಮಾದ ಟ್ರೈಲರ್ ಔಟ್..!

ಸಾರಥಿ, ದಾಸ, ಡಿ ಬಾಸ್, ಚಾಲೆಂಜಿಂಗ್ ಸ್ಟಾರ್ ಎಂದೆಲ್ಲಾ ಅಭಿಮಾನಿಗಳಿಂದ ಪ್ರೀತಿಯಿಂದ ಕರೆಯಲ್ಪಡುವ ದರ್ಶನ್ ಇಂದು 44ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದರ್ಶನ್ ಹುಟ್ಟುಹಬ್ಬದ ವಿಶೇಷವಾಗಿ ಇಂದು ‘ರಾಬರ್ಟ್’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಟ್ರೇಲರ್ ಬಿಡುಗಡೆಯಾಗಿ 20 ನಿಮಿಷಗಳ ಅವಧಿಯಲ್ಲಿ ಸುಮಾರು 3.50 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. 2:20 ನಿಮಿಷ ಅವಧಿಯ ಟ್ರೇಲರ್​​​ “ನನ್ನನ್ನು ಸಂಹಾರ ಮಾಡ್ತೀನಿ ಅಂತ ಬರೋನು ನನಗಿಂತ ದೊಡ್ಡ ಕ್ರಿಮಿನಲ್ ಆಗಿರಬೇಕು” ಎಂಬ ಧ್ವನಿಯಿಂದ …

Read More »

ಬಾಲಿವುಡ್​ಗೆ ರವಿ ಬಸ್ರೂರು

ಬೆಂಗಳೂರು: ರವಿ ಬಸ್ರೂರು ಈಗಾಗಲೇ ‘ಕೆಜಿಎಫ್’ ಚಿತ್ರಗಳ ಮೂಲಕ ಬೇರೆ ಭಾಷೆಯ ಚಿತ್ರರಂಗಗಳಿಗೂ ಪರಿಚಿತರಾಗಿದ್ದಾರೆ. ಇನ್ನು, ಈಗಾಗಲೇ ತೆಲುಗು, ಮಲಯಾಳಂ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಾಲಿವುಡ್​ಗೂ ಕಾಲಿಟ್ಟಿದ್ದಾರೆ. ಬಾಲಿವುಡ್​ನ ಜನಪ್ರಿಯ ನಟ-ನಿರ್ದೇಶಕ ಫರ್ಹಾನ್ ಅಖ್ತರ್, ‘ಯುದ್ರ’ ಎಂಬ ಚಿತ್ರವನ್ನು ನಿರ್ವಿುಸುತ್ತಿದ್ದು, ಈ ಚಿತ್ರಕ್ಕೆ ರವಿ ಬಸ್ರೂರು ಹಿನ್ನೆಲೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು, ಮತ್ತೊಬ್ಬ ಕನ್ನಡಿಗ ರವಿ ಉದ್ಯಾವರ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಸೋಮವಾರ ಸೋಷಿಯಲ್ ಮೀಡಿಯಾ …

Read More »

ಮಧ್ಯ ಪ್ರದೇಶ: ಬಸ್ ಕಾಲುವೆಗೆ ಬಿದ್ದು 35 ಮಂದಿ ಸಾವು, ಹಲವು ಪ್ರಯಾಣಿಕರು ನಾಪತ್ತೆ

ಸಿಧಿ/ರೇವಾ/ಭೋಪಾಲ್: ಮಧ್ಯ ಪ್ರದೇಶದ ಸಿಧಿ ಜಿಲ್ಲೆಯ ಪಾಟ್ನಾ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ಬಸ್ಸೊಂದು ಸೇತುವೆಯಿಂದ ಕಾಲುವೆಗೆ ಉರುಳಿ ಬಿದ್ದಿದ್ದು, ಏಳು ಮಹಿಳೆಯರು ಸೇರಿದಂತೆ ಕನಿಷ್ಠ 35 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇತರ ಹಲವು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ ಕಾಲುವೆಯಿಂದ 35ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದೆ. ಸಾವಿನ ಸಂಖ್ಯೆ 40 ದಾಟಬಹುದು ಎಂದು ಇನ್ಸ್‌ಪೆಕ್ಟರ್ ಜನರಲ್(ರೇವಾ ವಲಯ) ಉಮೇಶ್ ಜೋಗಾ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸುವ ದಿನಾಂಕ ವಿಸ್ತರಣೆ..!

ಬೆಂಗಳೂರು: 2021ನೇ ಜೂನ್ ತಿಂಗಳಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು. ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳು ಇವರ ಮಾಹಿತಿಯನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಹಾಗೂ ಅದರ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಣೆ ಮಾಡಲು ಹೊಸ ನಿಯಮವನ್ನು ತಿಳಿಸಲಾಗಿದೆ.

Read More »