Breaking News

Daily Archives: ಫೆಬ್ರವರಿ 18, 2021

ಐಪಿಎಲ್ ಹರಾಜು: ದುಬಾರಿ ಮೊತ್ತಕ್ಕೆ ಆರ್ ಸಿಬಿಗೆ ಮಾರಾಟವಾದ ಮ್ಯಾಕ್ಸ್ ವೆಲ್

ಚೆನ್ನೈ: 14ನೇ ಆವೃತ್ತಿಯ ಐಪಿಎಲ್ ಗಾಗಿ ಚೆನ್ನೈನ ಖಾಸಗಿ ಹೋಟೆಲ್ ನಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ತಂಡದಲ್ಲಿ ಖಾಲಿ ಇರುವ ಕೆಲ ಸ್ಥಾನಗಳಿಗಾಗಿ ಎಂಟು ತಂಡಗಳು ಆಟಗಾರರನ್ನು ಆಯ್ಕೆ ಮಾಡುತ್ತಿವೆ. ಕಳೆದ ಕೆಲವು ಸೀಸನ್ ನಲ್ಲಿ ಪಂಜಾಬ್ ವಿರುದ್ಧ ಆಡಿದ್ದ ಗ್ಲೆನ್ ಮ್ಯಾಕ್ಸ್ ವೆಲ್ ಭಾರಿ ಮೊತ್ತಕ್ಕೆ ಹರಾಜಾದರು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರಂಭದಲ್ಲಿ ಬಿಡ್ಡಿಂಗ್ ಆರಂಭಿಸಿತು. ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ …

Read More »

ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ”

ಬೆಂಗಳೂರು,ಫೆ.18-ಕಾನೂನು ತಜ್ಞರ ಜೊತೆ ಚರ್ಚಿಸಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಆಶ್ವಾಸನೆ ನೀಡಿದ್ದಾರೆಂದು ಶಾಸಕ ರಾಜುಗೌಡ ನಾಯಕ್ ಹೇಳಿದ್ದಾರೆ. ಸಿಎಂ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಮ್ಮ ಸಮುದಾಯದ ಮುಖಂಡರು, ಯಡಿಯೂರಪ್ಪನವರೊಂದಿಗೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಚರ್ಚೆ ಮಾಡಿದ್ದೇವೆ. ನಮ್ಮ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ನಮ್ಮ ಸಮುದಾಯ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ …

Read More »

ಶಾಸಕ ಯತ್ನಾಳ್ ಮೇಲೆ ಯಾವ ಆಸಕ್ತಿಯೂ ಇಲ್ಲ: ಅರುಣ್ ಸಿಂಗ್

ಹಾಸನ: ನನಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮೇಲೆ ಯಾವ ಆಸಕ್ತಿಯೂ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಹಾಸನದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ನನಗೆ ಗಮನವಿದೆ. ಯತ್ನಾಳ್ ಬಗ್ಗೆ ಯಾವ ಆಸಕ್ತಿಯೂ ಇಲ್ಲ, ನಿಮ್ಮ ಬಗ್ಗೆಯೂ ನನಗೆ ಆಸಕ್ತಿಯಿಲ್ಲ‌. ನಿಮಗೆ ಯತ್ನಾಳ್ ಮೇಲೆ ಯಾಕೆ ಗಮನ‌ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.‌ ನಿಗಮ ಮಂಡಳಿ ಹಂಚಿಕೆ ವಿಚಾರದ ಬಗ್ಗೆ ನನಗೆ …

Read More »

‘ಗೋಕಾಕ್ ಕ್ಷೇತ್ರ ಟಾರ್ಗೆಟ್ ಮಾಡ್ತೀನಿ’ ಎಂದ ಹೆಬ್ಬಾಳ್ಕರ್​​ಗೆ ಸತೀಶ್ ಜಾರಕಿಹೊಳಿ ಮಾಸ್ಟರ್​​ ಸ್ಟ್ರೋಕ್

ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ. ಸರ್ಕಾರವನ್ನು ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ. ಎಂಎಲ್ಎಗಳನ್ನೇ ಎಸ್ಕೇಪ್ ಮಾಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ. ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಲಕ್ಷ್ಮಿ ಹೆಬ್ಬಾಳ್ಕರ್‌, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಮೊನ್ನೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ ಈ ಒಂದು ಮಾತು ಬೆಳಗಾವಿಯಲ್ಲಿ ಹೊಸ ಚರ್ಚೆ ಹುಟ್ಟು …

Read More »

ಜೀವನಪೂರ್ತಿ ಜತೆಯಿರುವ ಕನಸು ಕಂಡವರು ಒಟ್ಟಿಗೇ ಜಲಸಮಾಧಿಯಾದರು.! ಕಣ್ಣೀರು ತರಿಸುವ ಕಥೆಯಿದು

ಭೋಪಾಲ್​: ಇತ್ತೀಚೆಗೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬಸ್​ ಒಂದು ಕಾಲುವೆಗೆ ಬಿದ್ದು 51 ಜನರು ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಮೃತರಾದವರ ಜತೆ ಅದೆಷ್ಟೋ ಕನಸುಗಳು, ಅದೆಷ್ಟೋ ಕುಟುಂಬಗಳ ಸಂತಸವೂ ನೀರಿನ ಪಾಲಾಗಿ ಹೋಗಿದೆ. ಅದೇ ಅಪಘಾತದಲ್ಲಿ ಜಲ ಸಮಾಧಿಯಾದ ದಂಪತಿಯ ಕಥೆ ಇದು.. ಸಿಧಿ ಜಿಲ್ಲೆಯ ನಿವಾಸಿ ಅಜಯ್​ಗೆ ಇನ್ನೂ 25 ವರ್ಷ. ಕಳೆದ ವರ್ಷ ಜೂನ್ ​8ರಂದು ಆತ ತಪಸ್ಯಾ (23) ಹೆಸರಿನ ಯುವತಿಯನ್ನು ಮದುವೆಯಾಗಿದ್ದು. …

Read More »

3 ದಿನ ಹೆಂಡ್ತಿ, ಇನ್ಮೂರು ದಿನ ಲವರ್ ನೊಂದಿಗೆ ಇರಲು ವ್ಯಕ್ತಿಗೆ ಸೂಚನೆ..!ಪೊಲೀಸರ ವಿಚಿತ್ರ ಪರಿಹಾರ ಸೂತ್ರ..!

ರಾಂಚಿ : ಪ್ರೇಯಸಿ – ಹೆಂಡತಿ ವಿಚಾರವಾಗಿ ಉದ್ಭವವಾಗಿದ್ದ ಸಮಸ್ಯೆವೊಂದಕ್ಕೆ ಜಾರ್ಖಂಡ್​ ಪೊಲೀಸರು ವಿಚಿತ್ರವಾದ ಪರಿಹಾರ ನೀಡಿದ್ದು, ಮೂರು ದಿನ ಹೆಂಡತಿ ಹಾಗೂ ಇನ್ಮೂರು ದಿನ ಲವರ್​ನೊಂದಿಗೆ ಕಾಲ ಕಳೆಯುವಂತೆ ಪರಿಹಾರ ನೀಡಿದ್ದಾರೆ. ರಾಂಚಿಯ ಕೊಕಾರ್​​ನ ತಿರ್ಲಿ ರೋಡ್​ನಲ್ಲಿ ರಾಜೇಶ್ ಮೆಹ್ತಾ ವಾಸವಾಗಿದ್ದು, ಮದುವೆಯಾದ ನಂತರವೂ ಈತ ಬೇರೆ ಯುವತಿ ಜತೆ ಸಂಪರ್ಕವಿಟ್ಟುಕೊಂಡಿದ್ದ. ಅಷ್ಟೇ ಏಕೆ ಆಕೆ ಜತೆ ಓಡಿ ಹೋಗಿದ್ದ. ಹೀಗಾಗಿ ಹೆಂಡತಿ ಹಾಗೂ ಮಗು ಅನಾಥವಾಗಿದ್ದವು. ಗಂಡ …

Read More »

ಗಾಳಿಯಿಂದ ಗರ್ಭ ಧರಿಸಿ ಹೆಣ್ಣು ಮಗುವಿಗೆ ಜನ್ಮ ನೀಡಿದೆ…!; ಇಂಡೋನೇಷ್ಯಾ ಮಹಿಳೆಯ ಮಾತು

ಇಂಡೋನೇಷ್ಯಾ(ಫೆ.18): ಯುವತಿಯೊಬ್ಬಳು ಇಂಡೋನೇಷ್ಯಾದಲ್ಲಿ ಮುದ್ದಾದ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮಗು ಹುಟ್ಟುವುದಕ್ಕೆ ಆಕೆ ನೀಡಿದ ಕಾರಣ ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ. ಗಾಳಿಯು ನನ್ನ ಜನನಾಂಗದ ಮೂಲಕ ನನ್ನ ದೇಹ ಸೇರಿತು. ಆದ್ದರಿಂದ ನಾನು ಗರ್ಭ ಧರಿಸಿ ಮಗುವಿಗೆ ಜನ್ಮ ನೀಡಿದ್ದು, ಲೈಂಗಿಕ ಕ್ರಿಯೆಯಿಂದ ಅಲ್ಲ ಎಂದು ಯುವತಿ ಹೇಳುತ್ತಿದ್ದಾಳೆ. ಇದನ್ನು ಕೇಳಿದ ಪೊಲೀಸರೇ ಶಾಕ್ ಆಗಿದ್ದಾರೆ. ಈ ಘಟನೆ ಇಂಡೋನೇಷ್ಯಾದ ಸಿಯಾಂಜುರ್​​ ಸಿಟಿಯ ವೆಸ್ಟ್​ ಜಾವಾದಲ್ಲಿ ನಡೆದಿದೆ. …

Read More »

ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್​ನಲ್ಲಿ ಆಗಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ!

ಅಹ್ಮದ್​ನಗರ (ಮಹಾರಾಷ್ಟ್ರ): ಚುನಾವಣೆಗು ಮುನ್ನ ಮತದಾರರನ್ನು ಸೆಳೆಯಲು ಜನಪ್ರತಿನಿಧಿಗಳು ನಾನಾ ಪ್ರಯತ್ನ ಮಾಡುತ್ತಾರೆ. ಗೆಲುವು ಸಾಧಿಸಿದ ಬಳಿಕವು ಡಿಜೆ ಸೌಂಡ್, ಮೆರವಣಿಗೆಯಂತಹ ಸಂಭ್ರಮಾಚರಣೆ ಮಾಡುತ್ತಾರೆ. ಈ ರೀತಿ ಶಾಸಕ ಅಥವಾ ಸಂಸದರ ಚುನಾವಣೆಯಲ್ಲಿ ಸಾಮಾನ್ಯವಾಗಿ ನೋಡಿರುತ್ತೇವೆ. ಆದರೆ, ಇಲ್ಲೊಬ್ಬ ಗ್ರಾಮ ಪಂಚಾಯಿತಿ ಸದಸ್ಯ ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್​ನಲ್ಲಿ ಬರುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ. ಮಹಾರಾಷ್ಟ್ರದ ಅಹ್ಮದ್​ನಗರ ಜಿಲ್ಲೆಯ ಅಂಬಿ-ದುಮಾಲಾ ಗ್ರಾಮದಲ್ಲಿ ಹೊಸದಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಪ್ರಮಾಣ …

Read More »

ಪಂಜಾಬ್, ಹರ್ಯಾಣದಲ್ಲಿ ರೈತರಿಂದ ರೈಲು ತಡೆದು ಪ್ರತಿಭಟನೆ, ಬಿಗಿ ಬಂದೋಬಸ್ತ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಗುರುವಾರ ಕರೆ ನೀಡಿದ್ದ ರೈಲು ತಡೆ ಚಳವಳಿಗೆ ಪಂಜಾಬ್, ಹರ್ಯಾಣ, ಉತ್ತರಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಬೆಂಬಲ ವ್ಯಕ್ತವಾಗಿದ್ದು, ಕೆಲಗಂಟೆಗಳ ಕಾಲ ರೈಲು ತಡೆದು ಪ್ರತಿಭಟಿಸಿದರು. 12ಗಂಟೆಯಿಂದ ರೈಲು ತಡೆ ಚಳವಳಿ ಆರಂಭಗೊಂಡಿದ್ದು, 4ಗಂಟೆವರೆಗೆ ಶಾಂತಿಯುತವಾಗಿ ಮುಂದುವರಿಯಲಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ. ಮುಂಜಾಗ್ರತಾ ಕ್ರಮವಾಗಿ ಹಲವೆಡೆ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು …

Read More »

ಬಸ್ ಪ್ರಯಾಣ ದರದಲ್ಲಿ ಹೆಚ್ಚಳವಿಲ್ಲ: ಡಿಸಿಎಂ ಲಕ್ಷ್ಮಣ ಸವದಿ

ಕಲಬುರಗಿ: ಡೀಸೆಲ್ ಬೆಲೆ ಹೆಚ್ಚಳವಾಗಿದ್ದರೂ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಪ್ರಸ್ತಾಪ ಸಂಸ್ಥೆ ಮುಂದಿಲ್ಲ ಎಂದು ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ದಿ.‌ಚಂದ್ರಶೇಖರ ಪಾಟೀಲ ರೇವೂರ ಫೌಂಡೇಶನ್ ದ ಉಚಿತ ಡಯಾಲಿಸಿಸ್ ಕೇಂದ್ರದ ವೈದ್ಯಕೀಯ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಡೀಸೆಲ್ ದರ ಹೆಚ್ಚಳ ಅವಲೋಕಿಸಿದರೆ ದರ ಹೆಚ್ಚಿಸಬೇಕು. ಆದರೆ ಸಂಸ್ಥೆಯ ಬಸ್ ಗಳಲ್ಲಿ‌ ಸಂಚರಿಸುವರು ಬಡ ಹಾಗೂ ಮಧ್ಯಮ ವರ್ಗದವರಿರುತ್ತಾರೆ. ಕೊರೊನಾದಿಂದ …

Read More »