Breaking News

Daily Archives: ಫೆಬ್ರವರಿ 22, 2021

ನರೇಗಾ ಯೋಜನೆ ಲೇವಡಿ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು

ವಯನಾಡು: ಪ್ರಧಾನಿ ಮೋದಿ ಅವರು, 2014 ರಲ್ಲಿ ಅಧಿಕಾರ ವಹಿಸಿಕೊಂಡಾಗ ನರೇಗಾ ಯೋಜನೆಯನ್ನು ಅಪಹಾಸ್ಯ ಮಾಡಿದ್ದರು. ಯುಪಿಎ ಸರ್ಕಾರವು ಜಾರಿಗೆ ತಂದ ಮಹತ್ವಾಕಾಂಕ್ಷೆಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಕೋವಿಡ್ ಸಮಯದಲ್ಲಿ ದೇಶದ ಜನರ ‘ಸಂರಕ್ಷಕ’ ಪಾತ್ರವನ್ನು ವಹಿಸಿದೆ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ತಮ್ಮ ಕ್ಷೇತ್ರದಲ್ಲಿನ ಪುಥಡಿ ಗ್ರಾಮ ಪಂಚಾಯಿತಿಯಲ್ಲಿ ಕುಟುಂಬಶ್ರೀ ಸಂಗಮಮ್‌ ಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ …

Read More »

ಜಗ್ಗೇಶ್ ವಿರುದ್ಧ ಸಿಡಿದೆದ್ದ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು

ಮೈಸೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ನಟ ಜಗ್ಗೇಶ್ ಅಭಿನಯದ ತೋತಾಪುರಿ ಚಿತ್ರದ ಶೂಟಿಂಗ್ ಸ್ಪಾಟ್ ಗೆ ತೆರಳಿ, ಜಗ್ಗೇಶ್ ಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮೈಸೂರಿನ ಬನ್ನೂರು ಬಳಿಯ ಗ್ರಾಮದಲ್ಲಿ ಜಗ್ಗೇಶ್ ಅಭಿನಯದ ತೋತಾಪುರಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಶೂಟಿಂಗ್ ಸ್ಪಾಟ್ ಗೆ ಬಂದ ದರ್ಶನ್ ಅಭಿಮಾನಿಗಳು ಏಕಾಏಕಿ ಜಗ್ಗೇಶ್ ಗೆ ಘೇರಾವ್ ಹಾಕಿದ್ದಾರೆ. ದರ್ಶನ್ ಅಭಿಮಾನಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. …

Read More »

ಇಂಧನ ಬೆಲೆ ಗಗನಕ್ಕೆ: 108 ಕಿಮೀ ಕಾಲ್ನಡಿಗೆ ಜಾಥಾಗೆ ಸಿದ್ದರಾಮಯ್ಯ ಚಾಲನೆ

ಉಡುಪಿ: ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಾಥಾ ಹಮ್ಮಿಕೊಳ್ಳಲಾಗಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಾಥಗೆ ಚಾಲನೆ ನೀಡದರು. ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಿಂದ ಉತ್ತರ ಕನ್ನಡ ಜಿಲ್ಲೆಯ ಗಡಿಯವರೆಗೆ ಈ ಪಾದಯಾತ್ರೆ ನಡೆಯಲಿದೆ. ಒಟ್ಟು ಏಳು ದಿನಗಳ ಕಾಲ ಬರೋಬ್ಬರಿ 108 ಕಿಲೋಮೀಟರ್ ಪಾದಯಾತ್ರೆ ನಡೆಯಲಿದ್ದು, ಕಾಂಗ್ರೆಸ್‌ನ ರಾಜ್ಯ, ರಾಷ್ಟ್ರ ಮಟ್ಟದ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಮಾಜಿ …

Read More »

ಗಾಂಜಾ ಮಾರಾಟ : ಆರೋಪಿ ಬಂಧನ

ಬೆಳಗಾವಿ : ಮಹಾರಾಷ್ಟ್ರ ರಾಜ್ಯದಿಂದ ಬೆಳಗಾವಿ ನಗರಕ್ಕೆ ಗಾಂಜಾ ಮಾರಾಟ ಮಾಡಲು ಬಂದಿದ್ದ ಆರೋಪಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಮೀರಜದ ಶಬ್ಬೀರ ಇಬ್ರಾಹಿಂ ಪಠಾಣ (33) ಬಂಧಿತ ಆರೋಪಿ. ನಗರದ ಧರ್ಮನಾಥ ಸರ್ಕಲ್ ಬಳಿ ದಾಳಿ ಮಾಡಿ, ಆರೋಪಿ ಬಳಿ ಇದ್ದ ಒಟ್ಟು 5 ಕೆ.ಜಿ 400 ಗ್ರಾಂ, ಗಾಂಜಾ ಮಾದಕ ವಸ್ತು, ಅಂದಾಜು ಮೌಲ್ಯ ಒಟ್ಟು ರೂ. 1,50,000 ಹಾಗೂ ಒಂದು ಟಿವ್ಹಿಎಸ್ ಕಂಪನಿಯ ಸ್ಪೋರ್ಟ್ಸ್ ಮೋಟಾರು ಬೈಕ್ …

Read More »

ಯಮಕನಮರಡಿ : ವಿವಿಧ ಕಾಮಗಾರಿಗೆ ಗ್ರಾಪಂ.ಅಧ್ಯಕ್ಷೆ ಚಾಲನೆ

ಬೆಳಗಾವಿ : ಯಮಕನಮರಡಿ ಕ್ಷೇತ್ರದ ಮಾವನೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಶಿವಕುಮಾರ್ ಗುಡಗನಟ್ಟಿ ಇಂದು ಭೂಮಿ ಪೂಜೆ ನೆರವೇರಿಸಿದರು. ನರೇಗಾ ಯೋಜನೆಯಲ್ಲಿ ಬಿಡುಗಡೆಯಾದ 18 ಲಕ್ಷ ರೂಪಾಯಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಇದೇ ವೇಳೆ ಅಧ್ಯಕ್ಷೆ ಮಾತನಾಡಿ, ಯಮಕನಮರಡಿ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಶಾಸಕರು ಪಣ ತೊಟ್ಟಿದ್ದಾರೆ. ಅವರ ಆಸೆಯಂತೆ ಇಂದು ರಸ್ತೆ , ಶಾಲೆ ಕೊಠಡಿ ನಿರ್ಮಾಣ ಸೇರಿ ವಿವಿಧ …

Read More »

ಪಂಚಾಕ್ಷರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆ ಉದ್ಘಾಟಿಸಿದ ಮಹಾಂತೇಶ ಕವಟಗಿಮಠ

ಚಿಕ್ಕೋಡಿ: ಬಡ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ವಿತರಿಸುವ ಮುಖಾಂತರ ಸಾಮಾನ್ಯ ಜನರ ಆರ್ಥಿಕ ಪ್ರಗತಿಗೆ ಸಹಕಾರಿ ಸಂಸ್ಥೆಗಳು ನೆರವಾಗಬೇಕು ಎಂದು ವಿಧಾನ ಪರಿಷತ್‍ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ತಾಲೂಕಿನ ಮುಗಳಿ ಗ್ರಾಮದಲ್ಲಿ ನೂತನವಾಗಿ ಆರಂಭಿಸಿದ ಓಂ ಶ್ರೀ ಪಂಚಾಕ್ಷರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರಿ ಸಂಸ್ಥೆಗಳಲ್ಲಿ ಠೇವಣಿದಾರರಿಗೂ ಕಡಿಮೆ ಬಡ್ಡಿ ನೀಡುವ ಜತೆಗೆ ಸಾಲಗಾರರಿಗೂ ಕಡಿಮೆ …

Read More »

ಪ್ರತಿ ಹಳ್ಳಿಗೂ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ: ದುರ್ಯೋಧನ ಐಹೊಳೆ

ಚಿಕ್ಕೋಡಿ: ಹಿಂದಿನ ಸರ್ಕಾರಗಳು ಹಳ್ಳಿಯ ಜನರಿಗೆ ಶುದ್ದ ಕುಡಿಯುವ ನೀರು ಕೊಡುವಲ್ಲಿ ವಿಫಲವಾಗಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರಕಾರಗಳು ಗ್ರಾಮೀಣ ಪ್ರದೇಶದ ಎಲ್ಲ ಜನರಿಗೂ ಶುದ್ದ ಕುಡಿಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಶಾಸಕ ದುರ್ಯೋಧನ ಐಹೋಳೆ ಹೇಳಿದರು. ತಾಲೂಕಿನ ಕಮತೇನಹಟ್ಟಿ ಹಾಗೂ ಮುಗಳಿ ಗ್ರಾಮದಲ್ಲಿ ಜೀವಜಲ ಯೋಜನೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೀವಜಲ ಯೋಜನೆಯಡಿ ಶೀಘ್ರ ರಾಯಬಾಗ …

Read More »

ಕಾಂಗ್ರೆಸ್ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯ ಕೈಗೊಳ್ಳಿ: ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ : ‘ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಹಲವಾರು ವಿಚಾರಗಳನ್ನು ಮಾಡಲಾಗುತ್ತಿದೆ. ಕಿಸಾನ್ ಕಾಂಗ್ರೆಸ್ ನೂತನ ಪದಾಧಿಕಾರಿಗಳು ಸಹ ವಿಶೇಷ ಆಸಕ್ತಿ ಬೆಳೆಸಿಕೊಂಡು ಪಕ್ಷಕ್ಕೆ ಶಕ್ತಿ ತುಂಬವ ಕೆಲಸ ಮಾಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಬೆಳಗಾವಿ‌ ಜಿಲ್ಲಾ ಕಿಸಾನ್ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿದರು. ಬಳಿಕ ಮಾತನಾಡಿ, ‘ಕಾಂಗ್ರೆಸ್ ಪಕ್ಷವನ್ನು …

Read More »

ನೀನು ಮೊದಲು ರಾಜೀನಾಮೆ ನೀಡು : ಯತ್ನಾಳ್ ಗೆ ಸಚಿವ ನಿರಾಣಿ ಸವಾಲ್

ಬೆಂಗಳೂರು : ಶಾಸಕ ಬಸವರಾಜ್ ಯತ್ನಾಳ್ ಪಕ್ಷದ ವಿರುದ್ಧ ಕೆಲಸ ಮಾಡುತ್ತಿದ್ದೀಯಾ. ಮೊದಲು ನೀನು  ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡು ಅಂತಾ ಸಚಿವ ಮುರಗೇಶ್ ನಿರಾಣಿ ಕಿಡಿ ಕಾರಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೇ ನಡೆದ ಸಮಾವೇಶದಲ್ಲಿ ಬಹಿರಂಗವಾಗಿ ಯತ್ನಾಳ್ ಅವರು , ಸಚಿವರು ರಾಜೀನಾಮೆ ನೀಡಬೇಕು ಎಂದು ಹೇಳುತ್ತಾರೆ. ನಮಗೆ ರಾಜೀನಾಮೆ ನೀಡು ಎನ್ನುವುದಕ್ಕೆ ಇವರು ಯಾರು ಎಂದು ಪ್ರಶ್ನ ಮಾಡಿದ್ದಾರೆ. ಮೊದಲು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ …

Read More »

ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ಅವರ ಕ್ಷೇತ್ರಕ್ಕೆ ಅವರೇ ಬಾಸ್, ಸುಪ್ರೀಂ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಬಾಸ್!!

ಬೆಳಗಾವಿ:  ಕ್ಷೇತ್ರವಾರು ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಅವರವರ ಕ್ಷೇತ್ರದ  ವಿಚಾರ ಬಂದಾಗ ಅಲ್ಲಿನ ನಾಯಕರೇ ಸುಪ್ರೀಂ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದರು. ಕಾಂಗ್ರೆಸ್ ನಲ್ಲಿ  ಮೂರು ಗುಂಪುಗಳಿವೆ ಎಂದು ಮಾಧ್ಯಮದವರ ಪ್ರಶ್ನೆಗೆ  ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಲ್ಲರು ಒಂದೇ. ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಅವರು ಬಾಸ್, ಬೇರೆ ಬೇರೆ ವಿಷಯಗಳಿಗೆ ಮನಸ್ಥಾಪವಿರಬಹುದು ಆದ್ರೆ ಪಕ್ಷದಲ್ಲಿ …

Read More »