Breaking News

Daily Archives: ಫೆಬ್ರವರಿ 23, 2021

ಪೆಟ್ರೋಲ್ ಮೇಲೆ ಕೇಂದ್ರ, ರಾಜ್ಯಗಳಿಗೆ ಕಟ್ಟುವ ತೆರಿಗೆ ಲೆಕ್ಕ ಇಲ್ಲಿದೆ

ಪೆಟ್ರೋಲ್-ಡೀಸೆಲ್ ದರ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ. ದೇಶದ ನಾನಾ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಈಗಿನ ಸನ್ನಿವೇಶಕ್ಕೆ ಹೊಣೆ ಎಂಬುದು ನಿಮಗೆ ಗೊತ್ತಿದೆಯಾ? ಅದು ಹೇಗೆ ಅಂತೀರಾ? ಪೆಟ್ರೋಲ್ ಮೂಲ ಬೆಲೆ ಎಷ್ಟು, ಅದಕ್ಕೆ ಏನೆಲ್ಲಾ ತೆರಿಗೆ- ವೆಚ್ಚ ಬಿದ್ದ ಮೇಲೆ ಇಷ್ಟು ದೊಡ್ಡ ಮೊತ್ತ ಬೀಳುತ್ತದೆ ಎಂಬ ಲೆಕ್ಕಾಚಾರ ನಿಮ್ಮ ಮುಂದಿದೆ. ಓದಿ, ನೋಡಿ… ಭಾರತದಲ್ಲಿ ತೈಲ ಮಾರ್ಕೆಟಿಂಗ್ ಕಂಪೆನಿಗಳು …

Read More »

ಬಜೆಟ್ ಅಧಿವೇಶನ ಮಾರ್ಚ್ 4ರಿಂದ ವಿಧಾನಸಭೆಯಲ್ಲಿ ಆರಂಭ

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನವು ಮಾರ್ಚ್ 4ರಿಂದ ಆರಂಭವಾಗಲಿದ್ದು, ಇದು ಮಾ.31ರ ತನಕ ಮುಂದುವರಿಯಲಿದೆ. ಮಾರ್ಚ್ 8ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಜೆಟ್ ಮಂಡಿಸಲಿರುವರು. ಈ ಬಗ್ಗೆ ಶಾಸಕಾಂಗದ ಕಾರ್ಯದರ್ಶಿ ಎಂ.ಕೆ. ವಿಜಯಲಕ್ಷ್ಮೀ ಅವರು ಅಧಿಸೂಚನೆ ಜಾರಿ ಮಾಡಿರುವರು. ಮಾ.4 ಮತ್ತು 5ರಂದು ಒಂದು ರಾಷ್ಟ್ರ ಒಂದು ಚುನಾವಣೆ ಬಗ್ಗೆ ವಿಶೇಷ ಚರ್ಚೆಯು ನಡೆಯಲಿದೆ. ಇದು ಈ ಬಜೆಟ್ ಅಧಿವೇಶನದ ಆಕರ್ಷಣೆಯಾಗಿರಲಿದೆ.

Read More »

ಅವಮಾನ ಮಾಡಿದವರ ವಿರುದ್ಧ ಆಕ್ರೋಶ ಹೊರಹಾಕಿದ ಹಿರಿಯ ನಟ ಜಗ್ಗೇಶ್..!

ಬೆಂಗಳೂರು, ಫೆ.23- ನನ್ನನ್ನು ಹೀಯಾಳಿಸುವ ಮೂಲಕ 40 ವರ್ಷದ ಕಲಾಸೇವೆಯನ್ನು ಅಪಮಾನ ಮಾಡಿದ್ದೀರಾ, ನಾನು ಏನೂ ತಪ್ಪು ಮಾಡಿಲ್ಲ, ಯಾರಿಗೂ ಹೆದರಿ ಓಡಿ ಹೋಗುವುದಿಲ್ಲ. ಚಿತ್ರರಂಗದಲ್ಲಿ ರೌಡಿಸಂ ಅನ್ನು ಪ್ರೋತ್ಸಾಹಿಸುವ ಕೆಲಸ ಬೇಡ ಎಂದು ಹಿರಿಯ ನಟ ನವರಸನಾಯಕ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸುಮಾರು 14 ನಿಮಿಷ 47 ಸೆಕೆಂಡ್‍ನ ವಿಡಿಯೋ ಮೂಲಕ ತಮಗಾದ ಅವಮಾನ, ನೋವುಗಳನ್ನು ಹೊರಹಾಕಿದ್ದಾರೆ.ಇಂದು ಬೆಳಗ್ಗೆ ತಮ್ಮ ಟ್ವಿಟ್ಟರ್ …

Read More »

ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲೆಗಳ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಬೃಹತ್ ರ‍್ಯಾಲಿ

ಬೆಂಗಳೂರು, ಜ.23- ಶುಲ್ಕ ಕಡಿತ ವಿರೋಧಿಸಿ ಖಾಸಗಿ ಶಾಲಾ ಆಡಳಿತ ಮಂಡಳಿಯವರು ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ಕ್ರಮವನ್ನು ಖಂಡಿಸಿದರು.ಶೇ.30ರಷ್ಟು ಶುಲ್ಕ ಕಡಿತ ಮಾಡಿರುವುದರಿಂದ ಖಾಸಗಿ ಶಾಲೆಗಳವರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಬೋಧಕ-ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ ವತಿಯಿಂದ ಮೆಜಸ್ಟಿಕ್ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ ಸಾವಿರಾರು ಶಾಲಾ ಶಿಕ್ಷಕರು, ಬೋಧಕೇತರ ಸಿಬ್ಬಂದಿ ಬೃಹತ್ ರ್ಯಾಲಿ ನಡೆಸಿ ಸರ್ಕಾರ ಈ ಕ್ರಮವನ್ನು …

Read More »

ತನ್ನ ಪ್ರಾಣ ಪಣಕ್ಕಿಟ್ಟು ಚಿರತೆಯೊಂದಿಗೆ ಸೆಣಸಾಡಿ ಅಮ್ಮನ ಪ್ರಾಣ ಕಾಪಾಡಿದ ‘ಸಾಹಸಿ ಯುವಕ’

ಹಾಸನ : ಮಲೆನಾಡಿನಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಸಾಹಸಿ ಯುವಕನೊಬ್ಬ ತನ್ನ ಜೀವ ಲೆಕ್ಕಿಸದೇ ಚಿರತೆಯೊಂದಿಗೆ ಸೆಣಸಾಡಿ ತನ್ನ ತಾಯಿಯ ಪ್ರಾಣ ಉಳಿಸಿದ್ದಾನೆ. ಹೌದು, ಹಾಸನ ಜಿಲ್ಲೆಯ ಅರಸೀಕೆರೆಯ ಬೈರಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಚಿರತೆ ದಾಳಿಯಲ್ಲಿ ಗಾಯಗೊಂಡ ಮಗ ಹಾಗೂ ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಹಿನ್ನೆಲೆ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಕಿರಣ್ ಹಾಗೂ ಆತನ ತಾಯಿ ಚಂದ್ರಮ್ಮ ತಮ್ಮ ಜಮೀನಿಗೆ ಹೋಗುತ್ತಿದ್ದರು. ಈ …

Read More »

ಮಹಿಳಾ ಸಿಬ್ಬಂದಿ ಬಟ್ಟೆ ಬದಲಾವಣೆ ಮಾಡುವುದನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ, ನಂತರ ಅದನ್ನು ಮನೆಗೆ ಹೋಗಿ ನೋಡುತ್ತಿದ್ದ ಕಾಮುಕ ಅಂದರ್

ಬೆಂಗಳೂರು : ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾವಣೆ ಮಾಡುವುದನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ, ನಂತರ ಅದನ್ನು ಮನೆಗೆ ಹೋಗಿ ನೋಡುತ್ತಿದ್ದ ಕಾಮುಕನೋರ್ವ ಕೊನೆಗೂ ಅಂದರ್ ಆಗಿದ್ದಾನೆ. ಹೌದು, ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಕಳೆದ 6 ವರ್ಷಗಳಿಂದ ಲ್ಯಾಬ್ ಟೆಕ್ನಿಶಿಯನ್ ಆಗಿರುವ 29 ವರ್ಷದ ಮಾಲತೇಶ್ ಎಂಬುವವನೇ ಈ ಕೆಲಸ ಮಾಡಿದ್ದು.. ಮಾಲತೇಶ್ ಆಸ್ಪತ್ರೆಯ ಆಪರೇಷನ್ ರೂಂ ನಲ್ಲಿ ಮಹಿಳೆ ಬಟ್ಟೆ ಬದಲಾಯಿಸುವ ಸಮಯಕ್ಕಾಗಿ ಕಾಯುತ್ತಿರುತ್ತಿದ್ದನಂತೆ. ಆ …

Read More »

ಪ್ರತಿ ಕ್ಷೇತ್ರದಲ್ಲೂ ಜಾತಿ, ಧರ್ಮ, ಹಣ ಕಾಲಿಟ್ಟಿದೆ: ಸತೀಶ್ ಜಾರಕಿಹೊಳಿ

ಬೆಳಗಾವಿ, : ದೇಶದ ಎಲ್ಲ ಕ್ಷೇತ್ರಗಳಲ್ಲೂ ಜಾತಿ, ಧರ್ಮ, ಹಣ ಕಾಲಿಟ್ಟಿದ್ದು, ಪ್ರಸ್ತುತ ದಿನದಲ್ಲಿ ಪ್ರಾಮಾಣಿಕರನ್ನು ಪತ್ತೆ ಹಚ್ಚುವುದು ಕಷ್ಟ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಅಧಿಕಾರ ನಡೆಸುತ್ತಿರುವ ಆಡಳಿತ ಪಕ್ಷದ ವೈಫಲ್ಯ ಎತ್ತಿ ತೋರಿಸುವ ಬದಲು ಕಾಂಗ್ರೆಸ್ ಪಕ್ಷದ ತಪ್ಪನ್ನೇ ಹುಡುಕುತ್ತಾರೆ. ಹೀಗಾಗಿ, ಕಾಂಗ್ರೆಸ್ ಸಣ್ಣ ತಪ್ಪು ಮಾಡಿದರೂ ಅದನ್ನೇ ದೊಡ್ಡದು ಮಾಡಲಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲೂ ಜಾತಿ, …

Read More »

ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ಅನುದಾನ ಕೊಡ್ತೇನೆ :ಸಿದ್ದರಾಮಯ್ಯ

ಮಂಗಳೂರು: ಈ ದೇಶದ ಸಂಪತ್ತಿನಲ್ಲಿ ಮುಸ್ಲಿಂರಿಗೂ ಪಾಲು ಕೊಡಬೇಕು. ಅಲ್ಪಸಂಖ್ಯಾತರಿಗೆ ಮೂರುಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ನೀಡಿದ್ದೇನೆ. ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಹತ್ತು ಸಾವಿರ ಕೋಟಿ ರೂಪಾಯಿ ನೀಡುತ್ತೇನೆ ಎಂದು ಮಾಜಿ ಸಿಎಂ‌ ಸಿದ್ಧರಾಮಯ್ಯ ಹೇಳಿದ್ದಾರೆ. ಮಂಗಳೂರಿನ ಪುರಭವನದಲ್ಲಿ ನಡೆದ ಭಾವೈಕ್ಯತಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಿಜೆಪಿಯವರು ಅಲ್ಪಸಂಖ್ಯಾತರಿಗೆ ಇದ್ದ ಅನುದಾನದಲ್ಲೂ ಕಡಿಮೆ ಮಾಡಿದ್ದಾರೆ. ಬಿಜೆಪಿಯವರು ಸಂವಿಧಾನ ವಿರೋಧಿಗಳು. ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಣೆ ಮಾಡುತ್ತಿಲ್ಲ. ಸಂವಿಧಾನದ …

Read More »

ಸೋನು ಸೂದ್ ಢಾಬಾದಲ್ಲಿ ತಯಾರಾಗ್ತಿದೆ ಬಿಸಿಬಿಸಿ ತಂದೂರಿ ರೋಟಿ: ವಿಡಿಯೊ ವೈರಲ್

ಮುಂಬೈ: ಲಾಕ್ ಡೌನ್ ವೇಳೆ ವಲಸೆ ಕಾರ್ಮಿಕರ ಕಷ್ಟಗಳಿಗೆ ಸ್ಪಂದಿಸಿ ಅವರಿಗೆ ಸಹಾಯ ಮಾಡುವ ಮೂಲಕ ಬಾಲಿವುಡ್ ನಟ ಸೋನು ಸೂದ್ ಜನರ ಮನಸ್ಸು ಗೆದ್ದಿದ್ದರು. ಸಿನಿಮಾಗಳಲ್ಲಿ ವಿಲನ್ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಸೋನು ಸೂದ್, ನಿಜ ಜೀವನದಲ್ಲಿ ಹೀರೊ ಆಗಿದ್ದರು. ಕೋವಿಡ್ ಸಂಕಷ್ಟ ಮತ್ತು ಲಾಕ್​ಡೌನ್ ಇವೆರಡರ ಮಧ್ಯೆ ಜನರು ಒದ್ದಾಡುತ್ತಿದ್ದಾಗ ಅವರ ನೆರವಿಗಾಗಿ ಧಾವಿಸಿದ್ದ ಸೋನು, ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲು ಬಸ್ ವ್ಯವಸ್ಥೆ ಮಾಡಿದ್ದರು. ಯಾರೊಬ್ಬರೂ …

Read More »

ನಾನೀಗ BSY ಸ್ಥಾನದಲ್ಲಿದ್ದಿದ್ರೆ ನನ್ನ ರಕ್ತ ಹೀರೋರು, ಚರ್ಮ ಸುಲಿಯೋರು: ಕುಮಾರಸ್ವಾಮಿ

ತುಮಕೂರು: ಇತ್ತೀಚೆಗೆ ರಾಜ್ಯದಲ್ಲಿ ಸಾಕಷ್ಟು ಹೋರಾಟಗಳು ನಡೆಯುತ್ತಿವೆ. ಇಂದಿನ ಪರಿಸ್ಥಿತಿ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಾನು ಸಿಎಂ ಸ್ಥಾನದಿಂದ ಇಳಿಯುತ್ತಿದ್ದಂತೆ ಪ್ರವಾಹ ಬಂತು, ಕೊರೊನಾ ಬಂತು. ಇದೆಲ್ಲವನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಆದರೂ ಈ ಸರ್ಕಾರನೇ ಗ್ರೇಟ್ ಅಂತ ಸರ್ಟಿಫಿಕೇಟ್ ಕೊಡ್ತಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಾನು ಎಷ್ಟೇ ಒಳ್ಳೆ ಕೆಲಸ ಮಾಡಿದ್ರು ಯಾರು ನನ್ನ ಪರ ನಿಂತಿಲ್ಲ. ಕೆಟ್ಟ ಕೆಲಸ ಮಾಡಿದವರನ್ನೇ, …

Read More »