Breaking News

Daily Archives: ಫೆಬ್ರವರಿ 24, 2021

ಅಂತರ ತಾಲೂಕಾ ಹಾಗೂ ಗೋಕಾಕ ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ

ಗೋಕಾಕ: ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ ವತಿಯಿಂದ ದಿ. 26 ರಂದು ಸಂಜೆ 5 ಗಂಟೆಗೆ ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅಂತರ ತಾಲೂಕಾ ಹಾಗೂ ಗೋಕಾಕ ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಅಸೋಸಿಯೇಷನ ಕಾರ್ಯದರ್ಶಿ ರಮೇಶ ಕಳ್ಳಿಮನಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಈ ಸ್ಪರ್ಧೆಯಲ್ಲಿ 55, 60, 65, ಹಾಗೂ 65+ ಕೆಜಿ ದೇಹ ತೂಕದ ಸ್ಪರ್ಧಾಳುಗಳಿಗೆ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು …

Read More »

ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಅವರೊಂದಿಗೆ ಚರ್ಚಿಸುತ್ತಿರುವ ರೈತ ಸಂಘದ ಮುಖಂಡರು.

ಗೋಕಾಕ: ಕಳೆದ ಎರಡು ವರ್ಷಗಳಿಂದ ನೆರೆ, ಅತಿವೃಷ್ಟಿ ಹಾಗೂ ಕೊರೋನಾ ಮಹಾಮಾರಿಯಿಂದ ಆರ್ಥಿಕವಾಗಿ ತತ್ತರಿಸಿರುವ ರೈತರಿಗೆ ಈಗ ಸಾಲ ತುಂಬುವಂತೆ ನೋಟಿಸು ನೀಡುತ್ತಿರುವ ಬ್ಯಾಂಕ್‍ನವರು ತಮ್ಮ ಕಾರ್ಯವನ್ನು ಕೂಡಲೇ ನಿಲ್ಲಿಸಬೇಕೆಂದು ರೈತ ಸಂಘದ ರಾಜ್ಯ ಕಾರ್ಯದರ್ಶಿ ಭೀಮಶಿ ಗದಾಡಿ ಒತ್ತಾಯಿಸಿದ್ದಾರೆ. ನಗರದ ತಹಶೀಲದಾರ ಕಾರ್ಯಾಲಯದಲ್ಲಿ ಸಾಲ ತುಂಬಲು ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕಿನವರು ರೈತರಿಗೆ ನೀಡುತ್ತಿರುವ ನೋಟಿಸ್‍ನ್ನು ತಹಶೀಲ್ದಾರರ ಗಮನಕ್ಕೆ ತಂದು ಅವರೊಂದಿಗೆ ಚರ್ಚಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, …

Read More »

ಹುಟ್ಟುಹಬ್ಬದ ಸಂಭ್ರಮದಲ್ಲಿ ಭೂಮಿ ಶೆಟ್ಟಿ

ನಟಿ ಭೂಮಿ ಶೆಟ್ಟಿ ಇಂದು ತಮ್ಮ 22ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಭೂಮಿ ಶೆಟ್ಟಿ 2018ರಲ್ಲಿ ಪ್ರಸಾರವಾಗುತ್ತಿದ್ದ ‘ಕಿನ್ನರಿ’ ಧಾರಾವಾಹಿಯಲ್ಲಿ ನಟಿಸುವ ಮೂಲಕ ಎಲ್ಲರ ಮನೆಮಾತಾದರು. ಇವರು ಕನ್ನಡ ಅಲ್ಲದೇ ತೆಲುಗು ಧಾರಾವಾಹಿಯಲ್ಲೂ ಅಭಿನಯಿಸಿದ್ದಾರೆ.   2019 ರ ಬಿಗ್ ಬಾಸ್ ಸೀಸನ್ 7ರಲ್ಲಿ ಸ್ಪರ್ಧಿಸುವ ಮೂಲಕ ಭೂಮಿ ಶೆಟ್ಟಿ ಇನ್ನಷ್ಟು ಜನಪ್ರಿಯತೆ ಪಡೆದರು. ಭೂಮಿ ಶೆಟ್ಟಿ 1998 ಫೆಬ್ರವರಿ 19ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Read More »

ಮುಂದುವರೆದ ʼಮಹಾʼ ಸಿಎಂ ಉದ್ಧಟತನ

ಮುಂಬೈ: ಗಡಿ ವಿಚಾರದ ಬೆನ್ನಲ್ಲೇ ಇದೀಗ ಭಾಷೆ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತೆ ಕ್ಯಾತೆ ತೆಗೆದಿದ್ದು, ಕನ್ನಡ ಪ್ರಾಬಲ್ಯವಿರುವ ಗಡಿ ಭಾಗದಲ್ಲಿನ ಗ್ರಾಮಗಳಲ್ಲಿ ಮರಾಠಿ ಪ್ರಚಾರ ನಡೆಸುವಂತೆ ಆದೇಶ ನೀಡಿದ್ದಾರೆ. ಗಡಿ ಭಾಗದಲ್ಲಿ ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಕನ್ನಡ ಪ್ರಾಬಲ್ಯವಿರುವ ಹಳ್ಳಿಗಳಲ್ಲಿ ಮರಾಠಿ ಭಾಷೆಯ ಪ್ರಚಾರ ಮಾಡಬೇಕು. ಶೇ.50 ರಷ್ಟು ಮರಾಠಿ ಮಾತನಾಡುವಂತಾಗಬೇಕು ಎಂದು ಪತ್ರದ ಮೂಲಕ ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಜತ್, ಅಕ್ಕಲಕೋಟ …

Read More »

ರನ್ ಫಾರ್ ಹೋಪ್, ರನ್ ಫಾರ್ ಬೆಟರ್ ಹೆಲ್ತ್ ಕಾರ್ಯಕ್ರಮ

ಬೆಳಗಾವಿ – ಇಲ್ಲಿಯ ರೋಟರಿ ಕ್ಲಬ್ ಆಫ್ ಸೆಂಟ್ರಲ್ ಫೆ.28ರಂದು ರನ್ನೋತ್ಸವ ಕಾರ್ಯಕ್ರಮ ಆಯೋಜಿಸಿದೆ.   ಅಂದು ಬೆಳಗ್ಗೆ 5.30ಕ್ಕೆ ಸಿಪಿಎಡ್ ಮೈದಾನದಿಂದ ರನ್ನೋತ್ಸವ ಆರಂಭವಾಗಲಿದೆ. 21 ಕಿಮೀ, 10 ಕಿಮೀ ಮತ್ತು 5 ಕಿಮೀ ದೂರದ ಓಟ ಆಯೋಜಿಸಲಾಗಿದೆ. ರನ್ ಫಾರ್ ಹೋಪ್, ರನ್ ಫಾರ್ ಬೆಟರ್ ಹೆಲ್ತ್ ಎನ್ನುವ ಸಂದೇಷದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

Read More »

ಐವರು ಮಹಾರಾಷ್ಟ್ರದ ಸಚಿವರಿಗೆ ಕೋವಿಡ್ ದೃಢ..!

ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ಹರಡುತ್ತಿರುವ ನಡುವೆ ಮಹಾರಾಷ್ಟ್ರದ ಐವರು ಸಚಿವರಿಗೆ ಸೋಂಕು ದೃಢವಾಗಿರುವುದು ಈಗ ವರದಿಯಾಗಿದೆ. ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ Chhagan Bhujbal ಈಗ ಕೋವಿಡ್ ಪಾಸಿಟಿವ್ ದೃಢಗೊಂಡಿರುವವರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. “ನಾನು ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಎರಡು ಮೂರು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಿ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಇತ್ತೀಚೆಗೆ, ಜಲ …

Read More »

ಡಿಸಿಎಂ ಸವದಿ ನೇತೃತ್ವದಲ್ಲಿ ಬಸವಕಲ್ಯಾಣ ಉಪಚುನಾವಣೆಗೆ ರಣತಂತ್ರ

ಬೆಂಗಳೂರು : ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿದ್ದು, ಆ ಕ್ಷೇತ್ರದ ಚುನಾವಣಾ ಉಸ್ತುವಾರಿಗಳು ಹಾಗೂ ಉಪ ಮುಖ್ಯಮಂತ್ರಿಯವರಾದ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಬುಧವಾರ ಸ್ಥಳೀಯ ಟಿಕೆಟ್ ಆಕಾಂಕ್ಷಿಗಳ ಮತ್ತು ಬಿಜೆಪಿ ಮುಖಂಡರ ಸಭೆ ನಡೆಯಿತು. ಉಪ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಬಯಸಿದ 18ಕ್ಕೂ ಹೆಚ್ಚಿನ ಆಕಾಂಕ್ಷಿಗಳು ಈ ಸಭೆಯಲ್ಲಿ ಭಾಗವಹಿಸಿ ಚುನಾವಣಾ ಉಸ್ತುವಾರಿಗಳೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. …

Read More »

‘ಪ್ರಮುಖವಾಗಿ ಗೋಕಾಕ ಹಾಗೂ ಸತ್ತಿಗೇರಿ ಗ್ರಾಮದಲ್ಲಿ ಕಾನೂನುಬಾಹಿರ ಕ್ವಾರಿಗಳು ತಲೆ ಎತ್ತಿದೆ.: ಅಕ್ರಮ ಕ್ವಾರಿ: ವಾರದೊಳಗೆ ಸಮೀಕ್ಷೆ

ಬೆಳಗಾವಿ: ‘ಶಿವಮೊಗ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಜಿಲೆಟಿನ್‌ ಸ್ಫೋಟ ದುರಂತದ ಘಟನೆಗಳು ನಮ್ಮ ಜಿಲ್ಲೆಯಲ್ಲಿ ಆಗದಂತೆ ಎಚ್ಚರ ವಹಿಸಬೇಕು. ಅಕ್ರಮ ಕ್ವಾರಿ ಹಾಗೂ ಸ್ಫೋಟಕಗಳ ಅಕ್ರಮ ಸಂಗ್ರಹ ಮತ್ತು ಸಾಗಾಣಿಕೆ ಮೇಲೆ ನಿಗಾ ವಹಿಸಬೇಕು’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಾರ್ಯಾಲಯದಲ್ಲಿ ಬುಧವಾರ ಕರೆದಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ತುರ್ತು ಸಭೆ ನಡೆಸಿ ಅವರು ಮಾತನಾಡಿದರು. ‘ನಮ್ಮ ಮೂಲ ಉದ್ದೇಶವು ಅಕ್ರಮ ಕ್ವಾರಿಗಳು ಹಾಗೂ …

Read More »

ರಾಜ್ಯದ ಅಂಗನವಾಡಿಗಳ ಸ್ಥಿತಿಗತಿ ಬಗ್ಗೆ ವರದಿ ಕೇಳಿದ ಹೈಕೋರ್ಟ್‌

ಬೆಂಗಳೂರು: ರಾಜ್ಯದಲ್ಲಿನ ಅಂಗನವಾಡಿ ಕೇಂದ್ರಗಳ ಸ್ಥಿತಿಗತಿ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಗಳು ಸಲ್ಲಿಸಿರುವ ವರದಿ ಬಗ್ಗೆ ಪ್ರತಿಕ್ರಿಯೆ ನೀಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ವಿಚಾರವಾಗಿ ಬೆಳಗಾವಿ ಜಿಲ್ಲೆ ಅಥಣಿಯ “ವಿಮೋಚನಾ ಸಂಘ’ ಎಂಬ ಸ್ವಯಂಸೇವಾ ಸಂಸ್ಥೆಯ ಅಧ್ಯಕ್ಷ ಬಿ.ಎಲ್‌. ಪಾಟೀಲ್‌ ಎಂಬುವರು 2011ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ …

Read More »

ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂದಿಸಿದಂತೆ ಪಿಎಸ್ಐ ಅಮಾನತು

ಚಿಕ್ಕಬಳ್ಳಾಪುರ – ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂದಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆ ಪಿಎಸ್ ಐ ಆರ್ ಗೋಪಾಲ ರೆಡ್ಡಿ ಅಮಾನತುಗೊಳಿಸಲಾಗಿದೆ.   ಗೃಹ ಇಲಾಖೆಯಿಂದ ಈ ಕುರಿತು ಆದೇಶ ಹೊರಬಿದ್ದಿದೆ. ಕ್ವಾರಿಯ ಮೇಲೆ ದಾಳಿ ನಡೆದ ನಂತರ ಆರೋಪಿಗಳನ್ನು ದಸ್ತಗಿರಿ  ಮಾಡಲು  ಪಿಎಸ್ಐ ಗೋಪಾಲ ರೆಡ್ಡಿ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಪ್ರಕರಣ ದಾಖಲಿಸಿದ ಬಗ್ಗೆ ಪೊಲೀಸ್ ಐಟಿ ತಂತ್ರಾಂಶದಲ್ಲಿ ನಮೂದಿಸಿಲ್ಲ. ಪ್ರಕರಣದ ತನಿಖೆ ನಡೆಸದೇ ಫೆ. ೨೧ ಮತ್ತು …

Read More »