Breaking News

Daily Archives: ಫೆಬ್ರವರಿ 26, 2021

ಜಲ ವಿವಾದ ಇತ್ಯರ್ಥ. 26 ರಂದು ಉನ್ನತ ಮಟ್ಟದ ಸಭೆ

ಬೆಂಗಳೂರು. ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ ನಾಳೆ (ಫೆ.26) ಬೆಳಿಗ್ಗೆ ೧೧ ಕ್ಕೆ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ವಹಿಸವರು. ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ  ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ …

Read More »

ಗೋಕಾಕ ತಾಲೂಕಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಳ್ಳುತ್ತಿರುವ ರಂಗಕರ್ಮಿ

ಗೋಕಾಕ: ಇಲ್ಲಿಯ ಎನ್‍ಇಎಸ್ ಶಾಲಾ ಆವರಣದಲ್ಲಿ ಶನಿವಾರದಂದು ನಡೆಯಲಿರುವ     ಗೋಕಾಕ ತಾಲೂಕಾ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಳ್ಳುತ್ತಿರುವ ರಂಗಕರ್ಮಿ ಬಸವಣ್ಣೆಪ್ಪ ಹೊಸಮನಿ ವೇದಿಕೆ.

Read More »

ಗೋಕಾಕ: ನಗರದ ಶೂನ್ಯ ಸಂಪಾದನ ಮಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ ಉತ್ಸವ

ಗೋಕಾಕ: ನಗರದ ಶೂನ್ಯ ಸಂಪಾದನ ಮಠದಿಂದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 16ನೇ ಪುಣ್ಯಸ್ಮರಣೋತ್ಸವ ಹಾಗೂ 16ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭವು ಮಾ-1 ರಿಂದ 4ರವರೆಗೆ ಅತೀ ವಿಜೃಂಭನೆಯಿಂದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಜರುಗಲಿದೆ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಕಾರ್ಯದರ್ಶಿ ವಿವೇಕ ಜತ್ತಿ ಹೇಳಿದರು. ಅವರು ಶುಕ್ರವಾರದಂದು ನಗರದ ಶೂನ್ಯ ಸಂಪಾದನ ಮಠದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಬಿಸಿಎ ಕಾಲೇಜಿನಲ್ಲಿ 16ನೇ ಶರಣ ಸಂಸ್ಕೃತಿ …

Read More »

ಎಲ್‌ಪಿಜಿ ಗ್ರಾಹಕರಿಗೆ ಅವಳಿ ಆಘಾತ : ಸಬ್ಸಿಡಿಯೂ ರದ್ದು, ಸಿಲಿಂಡರ್ ಬೆಲೆ 25 ರೂ. ಏರಿಕೆ

ಬೆಂಗಳೂರು : ಕೇವಲ ಎರಡು ತಿಂಗಳುಗಳ ಅಂತರದಲ್ಲಿ ಅಡುಗೆ ಅನಿಲ ದರ ಸುಮಾರು 200 ರೂ. ಹೆಚ್ಚಳವಾಗಿದೆ. ಮತ್ತೂಂದೆಡೆ ಕೊರೊನಾ ಹಾವಳಿಯಿಂದಾಗಿ ಸಬ್ಸಿಡಿಯನ್ನೂ ಸರಕಾರ ಹಿಂಪಡೆದಿದ್ದು, ಅವಳಿ ಆಘಾತ ನೀಡಿದೆ. ಒಟ್ಟು 200 ರೂ. ಹೆಚ್ಚಳದಲ್ಲಿ ಫೆಬ್ರವರಿ ತಿಂಗಳಲ್ಲೇ 100 ರೂ. ಏರಿಕೆ ಆಗಿದೆ. ಡಿಸೆಂಬರ್‌ನಲ್ಲಿ ಕೂಡ 100 ರೂ. ಹೆಚ್ಚಳ ಆಗಿತ್ತು. ಈ ಮಧ್ಯೆ ಗ್ರಾಹಕರ ಖಾತೆಗೆ ನೇರವಾಗಿ ಬರುತ್ತಿದ್ದ ಸಬ್ಸಿಡಿ ಕೂಡ ಹಲವು ತಿಂಗಳುಗಳಿಂದ ಸ್ಥಗಿತಗೊಂಡಿದೆ. ಫೆ. 4ರಂದು …

Read More »

ಸುಧಾಕರ್ ಅವರ ಕಚೇರಿ ಮುಂದೆ ನಾನು ಪ್ರತಿಭಟನೆ ಮಾಡುತ್ತೇನೆ: ರೇಣುಕಾಚಾರ್ಯ

ಬೆಂಗಳೂರು (ಫೆ. 26): ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಂಪುಟ ವಿಸ್ತರಣೆಯ ಸಮಯದಿಂದಲೂ ತಮ್ಮ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಮತ್ತೊಮ್ಮೆ ಸರ್ಕಾರದ ಕೆಲವು ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು ತಮ್ಮದೇ ಸರ್ಕಾರದ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಚಿವರೆಂದರೆ ದೇವಲೋಕದಿಂದ ಇಳಿದು ಬಂದವರಾ? ನಾವೇನು ಬಿಟ್ಟಿ ಬಿದ್ದಿದ್ದೀವಾ? ಕೆಲವು ಸಚಿವರು ಕೈಗೇ ಸಿಗೋದಿಲ್ಲ. ಅವರ ಪಿ.ಎಗಳು, ಪಿ.ಎಸ್​ಗಳು ಫೋನೇ …

Read More »

ಮುಷ್ಕರ ಕೈಬಿಡಿ; ಸಚಿವ ಕೆ.ಎಸ್.ಈಶ್ವರಪ್ಪ ಮನವಿ

ಬೆಂಗಳೂರು: “ಡೀಸೆಲ್ ಬೆಲೆ ಇಳಿಕೆಗೆ 6 ತಿಂಗಳಿಂದ ಮನವಿ ಮಾಡುತ್ತಿದ್ದೇವೆ. ಆದರೂ ಸಿಎಂ ಬಿ.ಎಸ್.ಯಡಿಯೂರಪ್ಪ ಡೀಸೆಲ್ ಬೆಲೆಯನ್ನು ಏಕೆ ಇಳಿಸುತ್ತಿಲ್ಲ ಎಂಬುದು ತಿಳಿಯುತ್ತಿಲ್ಲ. ಇಂದು ನೈಸ್ ರಸ್ತೆಯಲ್ಲಿ ವಾಹನ ನಿಲ್ಲಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ,” ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಲಾರಿ ಮಾಲೀಕರ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿದೆ. ಈ ಮುನ್ನ ಹೇಳಿಕೆ ನೀಡಿದ ರಾಜ್ಯ ಲಾರಿ ಮಾಲೀಕರ …

Read More »

ಜಿಎಸ್ ಟಿ, ತೈಲ ಬೆಲೆ ಏರಿಕೆ ಖಂಡಿಸಿ ದೇಶವ್ಯಾಪಿ ಮಾರುಕಟ್ಟೆ ಬಂದ್, ಮಿಶ್ರ ಪ್ರತಿಕ್ರಿಯೆ

ನವದೆಹಲಿ:ಜಿಎಸ್ ಟಿಯಲ್ಲಿ ಕೆಲವು ವಿವಾದಾತ್ಮ ಅಂಶಗಳು ತೈಲ ಬೆಲೆ ಏರಿಕೆ ಖಂಡಿಸಿ ಅಖಿಲ ಭಾರತೀಯ ವ್ಯಾಪಾರಿಗಳ ಒಕ್ಕೂಟ ಶುಕ್ರವಾರ(ಫೆ.26, 2021) ಭಾರತ್ ಬಂದ್ ಗೆ ಕರೆ ಕೊಟ್ಟಿದ್ದು, ಇದರಲ್ಲಿ 40 ಸಾವಿರ ವ್ಯಾಪಾರಿಗಳ ಸಂಘಟನೆಯ 8 ಕೋಟಿ ವರ್ತಕರು ಭಾಗಿಯಾಗಿದ್ದು, ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಅತೀಯಾದ ‘ಮದ್ಯ’ ಸೇವನೆಯಿಂದ ‘ಸ್ತನ ಕ್ಯಾನ್ಸರ್’ ..ಮಹಿಳೆಯರೇ ಹುಷಾರ್ ಜಿಎಸ್ ಟಿ ವ್ಯವಸ್ಥೆಯಲ್ಲಿ ಇತ್ತೀಚೆಗೆ ಮಾಡಿರುವ ತಿದ್ದುಪಡಿಯನ್ನು ತೆಗೆದು ಹಾಕಬೇಕು, ತೆರಿಗೆ ಸ್ತರವನ್ನು ಇನ್ನಷ್ಟು ಸರಳೀಕರಣಗೊಳಿಸಬೇಕು, …

Read More »

ಸಿದ್ದರಾಮಯ್ಯನವರಿಗೆ ತಲೆ ಸರಿ ಇಲ್ಲ:ಈಶ್ವರಪ್ಪ ಟಾಂಗ್

ಚಿಕ್ಕೋಡಿ : ಸುಪ್ರೀಂ ಕೋರ್ಟ್​ ತೀರ್ಪಿನ ಬಳಿಕವೂ ಅಯೋಧ್ಯೆಯ ರಾಮ ಮಂದಿರ ವಿವಾದಿತ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದಲ್ಲಿ ಕರಿಯೋಗಸಿದ್ದೇಶ್ವರ ಕನ್ನಡ ಮಾಧ್ಯಮಿಕ ಶಾಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಬಳಿಕ ಅವರು ಮಾತನಾಡಿದರು. ಸಿದ್ದರಾಮಯ್ಯ ಒಬ್ಬ ವಕೀಲ ಎಂದು ಹೇಳಿಕೊಳ್ಳಲು ಅವರಿಗೆ ನಾಚಿಕೆಯಾಗಬೇಕು. ಸುಪ್ರೀಂ ತೀರ್ಪಿನ ಬಳಿಕವೂ ರಾಮ ಮಂದಿರದ ಜಾಗ ವಿವಾದಿತ ಎಂದು ಹೇಳುತ್ತಿದ್ದಾರೆ. ಹೀಗಾಗಿ ರಾಜ್ಯದ …

Read More »

ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ

ಮಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಕ್ಷ ಜೋಕರ್ ಇದ್ದ ಹಾಗೆ. ಯಾರ ಜತೆ ಬೇಕಾದರೂ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂದು ಪರಿಸರ, ಜೀವಿಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ವ್ಯಂಗ್ಯವಾಡಿದ್ದಾರೆ. ನಗರದ ಪಡೀಲ್ ಸಮೀಪದ ಬೈರಾಡಿ ಕೆರೆಯ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿಯವರಿಗೆ ರಾಜಕೀಯ ನೈತಿಕತೆ, ಸಿದ್ಧಾಂತ ಏನೂ ಇಲ್ಲ. ಎಲ್ಲಿ ಅವಕಾಶ ಸಿಗುತ್ತದೆಯೋ ಅಲ್ಲಿ ಹೋಗುತ್ತಾರೆ. ಅವಕಾಶವಾದಿ ರಾಜಕಾರಣ ಅವರು …

Read More »

ಚೆನ್ನೈ-ಮಂಗಳೂರು ರೈಲಿನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ, ಮಹಿಳೆ ಸೆರೆ

ಕೋಯಿಕ್ಕೋಡ್: ಚೆನ್ನೈ- ಮಂಗಳೂರು ರೈಲಿನಲ್ಲಿ ಆಗಮಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಬಳಿ ಶುಕ್ರವಾರ ಭಾರಿ ಪ್ರಮಾಣದಲ್ಲಿ ಸ್ಪೋಟಕಗಳು ಪತ್ತೆಯಾಗಿದ್ದು ರೈಲ್ವೆ ಸಂರಕ್ಷಣಾ ಪಡೆ ಇವನ್ನು ವಶಪಡಿಸಿಕೊಂಡಿದೆ. ಮುಂಬರುವ ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ವಿಭಾಗೀಯ ಭದ್ರತಾ ಆಯುಕ್ತ ಜಿತಿನ್‌ ಬಿ ರಾಜ್‌ ಅವರ ನೇತೃತ್ವದ ರೈಲ್ವೆ ಸಂರಕ್ಷಣಾ ಪಡೆಯು (ಆರ್‌ಪಿಎಫ್‌) ಶೋಧ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಅವರಿಗೆ ಮಹಿಳಾ ಪ್ರಯಣಿಕರೊಬ್ಬರ ಬಳಿ ಸ್ಫೋಟಕಗಳು ಸಿಕ್ಕಿವೆ. ‘ತಿರುವಣ್ಣಮಲೈ …

Read More »