Breaking News

Daily Archives: ಫೆಬ್ರವರಿ 26, 2021

ತೈಲ ಬೆಲೆ ಏರಿಕೆ ಖಂಡಿಸಿ ಇಂದು `ಭಾರತ್ ಬಂದ್’ : ಏನಿರುತ್ತೆ, ಏನಿರಲ್ಲ?

ನವದೆಹಲಿ: ಹೆಚ್ಚುತ್ತಿರುವ ಇಂಧನ ಬೆಲೆಗಳು, ಸರಕು ಮತ್ತು ಸೇವಾ ತೆರಿಗೆ, ಇ-ಬಿಲ್ ಇತ್ಯಾದಿಗಳನ್ನು ವಿರೋಧಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಶುಕ್ರವಾರ ಅಂದ್ರೆ ಇಂದು ಭಾರತ್ ಬಂದ್‌ಗೆ ಕರೆ ನೀಡಿದೆ. ಈ ನಡುವೆ ಅಖಿಲ ಭಾರತ ಸಾರಿಗೆ ಕಲ್ಯಾಣ ಸಂಘ ಕೂಡ (ಎಐಟಿಡಬ್ಲ್ಯೂಎ) ಭಾರತ್ ಕರೆಗೆ ಬೆಂಬಲ ನೀಡಿದ್ದು ಇಂದು ಚಕ್ಕಾ ಜಾಮ್ ನಡೆಸಲಿದ್ದಾರೆ. 8 ಕೋಟಿ ವರ್ತಕರನ್ನು ಪ್ರತಿನಿಧಿಸುವ 40 ಸಾವಿರ ವರ್ತಕರ ಸಂಘಟನೆಗಳು ಬಂದ್ ಬೆಂಬಲಿಸಿರುವ ಹಿನ್ನಲೆಯಲ್ಲಿ …

Read More »

ಕುತೂಹಲಕ್ಕೆ ಕಾರಣವಾಯ್ತು ಶಾಸಕ ಜಮೀರ್‌ ಮನೆಗೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ಭೇಟಿ

ಆಪಾರ ಅಭಿಮಾನಿ ಬಳಗವನ್ನು ಹೊಂದಿರುವ ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ಇತ್ತೀಚೆಗೆ ನವರಸ ನಾಯಕ ಜಗ್ಗೇಶ್‌ ಕೊಟ್ಟಿದ್ದಾರೆ ಎನ್ನಲಾದ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗಿದ್ದರು. ಬಳಿಕ ಈ ವಿವಾದ ಈಗ ಅಂತ್ಯಗೊಂಡಿದೆ. ಪ್ರಸ್ತುತ ದರ್ಶನ್‌ ತಮ್ಮ ಮುಂಬರುವ ಚಿತ್ರ ‘ರಾಬರ್ಟ್’ ಪ್ರಮೋಟ್ ಮಾಡುವಲ್ಲಿ ಬ್ಯುಸಿ ಆಗಿದ್ದಾರೆ. ಇದರ ನಡುವೆ ಶಾಸಕ ಜಮೀರ್‌ ಅಹ್ಮದ್‌ ಮನೆಗೆ ನಟ ದರ್ಶನ್‌ ಭೇಟಿ ನೀಡಿದ್ದಾರೆ. ಯಾವ ಕಾರಣಕ್ಕೆ ಜಮೀರ್‌ ಅಹ್ಮದ್‌ ಮನೆಗೆ ಚಾಲೆಂಜಿಂಗ್‌ ಸ್ಟಾರ್‌ ಭೇಟಿ ನೀಡಿದ್ದರು …

Read More »

ಎಂ.ಎಸ್.ಧೋನಿ ಟೆಸ್ಟ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ನವದೆಹಲಿ: ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಸೋಲಿಸಿದ ನಂತರ, ವಿರಾಟ್ ಕೊಹ್ಲಿ ಎಂ.ಎಸ್.ಧೋನಿ ಅವರನ್ನು ಹಿಂದಿಕ್ಕಿ ತವರು ನೆಲದಲ್ಲಿ ಹೆಚ್ಚು ಟೆಸ್ಟ್ ಗೆಲುವು ಸಾಧಿಸಿ ಭಾರತದ ನಾಯಕರಾದರು. ನಾಯಕನಾಗಿ 29 ಟೆಸ್ಟ್ ಪಂದ್ಯಗಳಲ್ಲಿ ಕೊಹ್ಲಿ ಈಗ 22 ಜಯಗಳಿಸಿದ್ದಾರೆ.   ಸ್ವದೇಶದಲ್ಲಿ 30 ಟೆಸ್ಟ್ ಪಂದ್ಯಗಳಲ್ಲಿ 21 ಜಯಗಳಿಸಿ ಧೋನಿ ತಮ್ಮ ವೃತ್ತಿಜೀವನವನ್ನು ಮುಗಿಸಿದರು. ಅಹಮದಾಬಾದ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನ 2 ನೇ ದಿನದಂದು ಭಾರತ 10 ವಿಕೆಟ್‌ಗಳಿಂದ …

Read More »

ಮೀನುಗಾರರ ಹೋರಾಟಕ್ಕೆ ಬೆಲೆ ಇಲ್ವಾ?

ಕಾರವಾರ: ಇತ್ತೀಚಿಗೆ ಕೇಂದ್ರ ಸರಕಾರದ ಖಾಸಗೀಕರಣ ನೀತಿ ವಿರುದ್ದ ಜನ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಬೆನ್ನಲ್ಲೆ ಎಲ್ಲವೂ ಗೊತ್ತು ಗೊತ್ತಿದ್ದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮೀನುಗಾರಿಕೆಗೆ ತೊಂದರೆ ಆಗುವ ಹಾಗೆ ಖಾಸಗಿ ಕಂಪನಿಯವರು ಪೋರ್ಟ್ ನಿರ್ಮಾಣ ಮಾಡಲು ಹೊರಟಿದ್ದು ಮೀನುಗಾರರ ಆಕ್ರೋಶದ ಕಟ್ಟೆ ಒಡೆದಿದ್ದು ಮೀನುಗಾರರ ಸಮಸ್ಯೆ ಕೇಳುವವರು ಯಾರು ಇಲ್ಲದಂತಾಗಿದೆ. ಹೊನ್ನಾವರದ ಕಾಸರಕೋಡಿನಲ್ಲಿ ಎಚ್.ಪಿ.ಪಿ.ಎಲ್ ಖಾಸಗಿ ಕಂಪನಿಯವರು ವಾಣಿಜ್ಯ ಬಂದರು ನಿರ್ಮಾಣ ಮಾಡಲು ಹೊರಟಿದ್ದಾರೆ. ಈಗಾಗಲೇ ಕೇಂದ್ರ ಸರಕಾರದ …

Read More »

ರಾಜ್ಯಾದ್ಯಂತ ಲಾರಿ ಮುಷ್ಕರ; ಡಿಸೇಲ್​ ಸೆಸ್ ದ​ರ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ

ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ,  ಒಂದು ಕಿಲೋಮೀಟರ್ ಗೆ ಲಾರಿ ಓಡಿಸಲು ಮಾಲೀಕರಿಗೆ 36 ರೂ. ವೆಚ್ಚವಾಗುತ್ತಿದೆ. ರಾಜ್ಯದಿಂದ 40 ಸಾವಿರ ಲಾರಿಗಳು ಬೇರೆ ರಾಜ್ಯಗಳಿಗೆ ಹೋಗುತ್ತಿವೆ. ಹೊರ ರಾಜ್ಯದಲ್ಲಿ ಡಿಸೇಲ್ ಕಡಿಮೆ ಇದೆ. ಕಡಿಮೆ ಇರುವ ರಾಜ್ಯಗಳಿಂದ ಮಾಲೀಕರು ಡಿಸೇಲ್ ಹಾಕಿಸಿಕೊಂಡು ಬರುತ್ತಿದ್ದಾರೆ. …

Read More »

ಮೂಲಭೂತ ಸೌಲಭ್ಯಗಳನ್ನು ನೀಡದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಅಲ್ಲೇ ಅಡುಗೆ, ಅಲ್ಲೇ ಊಟ,

ಖಾನಾಪುರ: ೨೦೧೯ರ ಅಗಸ್ಟ್ ತಿಂಗಳ ಮೊದಲ ವಾರದಲ್ಲಿ ಸುರಿದ ಭಾರೀ ಮಳೆಯಿಂದ ಮಲಪ್ರಭಾ ನದಿಗೆ ಉಂಟಾದ ಪ್ರವಾಹದಲ್ಲಿ ತಮ್ಮ ಮನೆ ಮತ್ತು ಆಸ್ತಿ-ಪಾಸ್ತಿ ಕಳೆದುಕೊಂಡಿರುವ ತಾಲೂಕಿನ ಹಿರೇಹಟ್ಟಿಹೊಳಿ ಗ್ರಾಮದ ೭೦ಕ್ಕೂ ಹೆಚ್ಚು ನೆರೆ ಸಂತ್ರಸ್ತರು ಗುರುವಾರ ತಮಗೆ ನಿವೇಶನ, ತಾತ್ಕಾಲಿಕ ವಸತಿ ವ್ಯವಸ್ಥೆ ಮತ್ತು ಇತರೆ ಮೂಲಭೂತ ಸೌಲಭ್ಯಗಳನ್ನು ನೀಡದ ತಹಸೀಲ್ದಾರ್ ಕ್ರಮವನ್ನು ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆಯನ್ನು ಕೈಗೊಂಡಿದ್ದಾರೆ. ಪ್ರತಿಭಟನೆಯ ಅಂಗವಾಗಿ ಪ್ರವಾಹ ಸಂತ್ರಸ್ತರು ತಹಸೀಲ್ದಾರ್ ಕಚೇರಿಯ …

Read More »

ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ 18 ಜನರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು: ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದ 18 ಜನರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಒದಗಿಸಿದ್ದಾರೆ. ಗ್ರಾಮೀಣ ಕ್ಷೇತ್ರದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಕೆಲವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರು. ಆಸ್ಪತ್ರೆಯ ವೆಚ್ಛವನ್ನು ಭರಿಸುವ ಸಾಮರ್ಥ್ಯವಿರಲಿಲ್ಲ. ಹಾಗಾಗಿ ಅವರಿಗೆಲ್ಲ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಿಸಿ, ಅವರವರ ಬ್ಯಾಂಕಿನ ಖಾತೆಗಳಿಗೆ ಹಣ ಜಮಾ ಮಾಡಿಸಲಾಗಿದೆ. ಈ ಕುರಿತ ದಾಖಲೆಗಳನ್ನು ಗುರುವಾರ ಬೆಳಗ್ಗೆ ಲಕ್ಷ್ಮಿ ಹೆಬ್ಬಾಳಕರ್ ಸಂಬಂಧಿಸಿದವರಿಗೆ …

Read More »

ಸರ್ಕಾರದಿಂದ ಲಭ್ಯವಿರುವ ಅನುದಾನ ಲ್ಯಾಪ್ಸ್ ಆದರೆ ತಾಪಂ ಸಿಇಒ ಹೊಣೆ

ಬೆಳಗಾವಿ:  ಈ ವರ್ಷದ ಅನುದಾನ ಯಾವುದೇ ಕಾರಣಕ್ಕೂ ವ್ಯಪಗತ(ಲ್ಯಾಪ್ಸ್) ಆಗಬಾರದು. ಒಂದು ವೇಳೆ ಅನುದಾನ ವ್ಯಪಗತವಾದರೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ‌.ಅತೀಕ್ ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಫೆ.24) ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು …

Read More »

ಸಚಿವ ರಮೇಶ್ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ‌ ಬೆಳಗ್ಗೆ 11 ಗಂಟೆಗೆ

ಬೆಂಗಳೂರು – ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ  (ಫೆ.26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ. ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ವಹಿಸಲಿದ್ದು, ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ಅಡ್ವೊಕೇಟ್ ಜನರಲ್ ಮತ್ತು …

Read More »