Breaking News

Daily Archives: ಫೆಬ್ರವರಿ 27, 2021

ಸಾಲಬಾಧೆಯಿಂದ ಶಿಕ್ಷಣ ಸಂಸ್ಥೆ ಮಾಲೀಕ ಆತ್ಮಹತ್ಯೆ; ಪ್ರತಿಭಟನೆಗೆ ಬಂದ ಮತ್ತೋರ್ವ ಮಾಲೀಕನಿಂದ ಆತ್ಮಹತ್ಯೆಗೆ ಯತ್ನ

ಕಲಬುರ್ಗಿ: ಕೊರೋನಾದಿಂದಾಗಿ ಜನಸಾಮಾನ್ಯರ ಬದುಕೇ ದುರ್ಭರ ಎನ್ನುವಂತಾಗಿದೆ. ಅದರಲ್ಲಿಯೂ ಖಾಸಗಿ ಶಾಲೆಗಳ ಪರಿಸ್ಥಿತಿ ಅಧೋಗತಿಗೆ ತಳ್ಳಲ್ಪಟ್ಟಿದೆ. ಕೊರೋನಾ ಕಾರಣದಿಂದಾಗಿ ಕೆಲ ತರಗತಿಗಳ ಆರಂಭಕ್ಕೆ ಮಾತ್ರ ಅನುಮತಿ ಸಿಕ್ಕಿದೆ. ಆದರೆ ಎಲ್.ಕೆ.ಜಿ., ಯುಕೆಜಿ, ಒಂದನೇ ತರಗತಿಯಿಂದ ತರಗತಿಗಳು ಆರಂಭಗೊಂಡಿಲ್ಲ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್ಥಿಕ ಮುಗ್ಗಟ್ಟು ಎದುರಿಸುವಂತಾಗಿದೆ. ಸಾಲಬಾಧೆ ತಾಳಲಾರದೆ ಖಾಸಗಿ ಶಿಕ್ಷಣ ಸಂಸ್ಥೆಯ ಮಾಲೀಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸರ್ಕಾರದ …

Read More »

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮತ್ತೆ ಒಂದು ತಿಂಗಳವರೆಗೆ ವಿಸ್ತರಿಸಲಾಗಿದೆ. ಕೆಎಸ್‌ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳು 2019 – 20 ನೇ ಸಾಲಿನ ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಫೆಬ್ರವರಿ 28 ರ ವರೆಗೆ ಕಳೆದ ಶೈಕ್ಷಣಿಕ ಸಾಲಿನ ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಇದನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಪಾಸ್ ಹಾಗೂ …

Read More »

ಬೆಳಗಾವಿಗೆ ಬಂದ ಮೂರು ಸಿಂಹ

ಬೆಳಗಾವಿ(ಫೆ.27): ಕೊರೊನಾ ಸೋಂಕಿನ ಕಾರಣದಿಂದಗಾಗಿ ಜನರಿಗೆ ಕ್ವಾರಂಟೈನ್ ಮಾಡೋದು ಸಾಮಾನ್ಯವಾಗಿದೆ. ಬೇರೆ ಊರಿಂದ ಬಂದ್ರೆ ಅಥವಾ ರೋಗದ ಲಕ್ಷಣ ಇದ್ದವರಿಗೆ ಕ್ವಾರಂಟೈನ್ ಮಾಡುವುದು ಸಹಜ. ಆದರೆ ಬೆಳಗಾವಿಗೆ ಬಂದಿರೋ ಮೂರು ಕಾಡಿನ ರಾಜಗಳಿಗೆ ಅರಣ್ಯಾಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ. ಸದ್ಯ ಅವರನ್ನು ನೋಡಲು ಯಾರಿಗೂ ಅವಕಾಶ ಇಲ್ಲ. ಕೇವಲ ಆಹಾರ ನೀಡುವ ಸಿಬ್ಬಂದಿಗೆ ಮಾತ್ರ ಅಲ್ಲಿಗೆ ಪ್ರವೇಶವಿದೆ. ಆದರೆ ಈ ಕಾಡಿನ ರಾಜಗಳನ್ನು ನೋಡಲು ಜನ  ಕಾಯುತ್ತಿದ್ದಾರೆ. ಬೆಳಗಾವಿಯ ಭೂತರಾಮನಹಟ್ಟಿ ಗ್ರಾಮದ …

Read More »

ರಸ್ತೆಗಿಳಿಯದ ಲಾರಿ, ಟ್ರಕ್: ಮತ್ತೆ ಮುಷ್ಕರದ ಎಚ್ಚರಿಕೆ

ಬೆಂಗಳೂರು: ತೈಲ ದರ ಇಳಿಕೆ, ಇ-ವೇ ಬಿಲ್ ನಿಯಮಾವಳಿ ರದ್ದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮತ್ತು ಟ್ರಕ್ ಸೇರಿದಂತೆ ಸರಕು ಸಾಗಾಣಿಕೆ ವಾಹನ ಮಾಲೀಕರು ದೇಶವ್ಯಾಪಿ ಶುಕ್ರವಾರ ಹಮ್ಮಿಕೊಂಡಿದ್ದ ಮುಷ್ಕರ ಬೆಂಬಲಿಸಿ ನಗರದಲ್ಲೂ ಲಾರಿ ಹಾಗೂ ಟ್ರಕ್‌ಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದವು. ಬೆಂಗಳೂರು-ತುಮಕೂರು ಹೆದ್ದಾರಿಯ ಮಾದನಾಯಕನಹಳ್ಳಿ ನೈಸ್ ರಸ್ತೆ ಜಂಕ್ಷನ್‍ನಲ್ಲಿ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘಗಳ ಒಕ್ಕೂಟದ ವತಿಯಿಂದ ಲಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಲಾಯಿತು. …

Read More »

ಜಾನುವಾರು ಹತ್ಯೆ: ಸದ್ಯಕ್ಕೆ ಕಠಿಣ ಕ್ರಮ ಇಲ್ಲ

ಬೆಂಗಳೂರು: ‘ಜಾನುವಾರು ಸಾಗಣೆ ಮಾಡುವವರ ವಿರುದ್ಧ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಕಾಯ್ದೆ-2020 ಅನ್ನು ಸದ್ಯಕ್ಕೆ ಕಠಿಣವಾಗಿ ಅನ್ವಯ ಮಾಡುವುದಿಲ್ಲ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ನೀಡಿರುವ ತನ್ನ ಭರವಸೆ ಮುಂದುವರಿಸಿದೆ. ಈ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿರುವುದನ್ನು ಗಮನದಲ್ಲಿ ಇಟ್ಟುಕೊಂಡು ತಿದ್ದುಪಡಿ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಮುಖ್ಯ ನ್ಯಾಯಮುರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸಮಯ ನೀಡಿತು. ಇದೇ ವೇಳೆ ಆಕ್ಷೇಪಣೆ ಸಲ್ಲಿಸಲು ಹೆಚ್ಚಿನ ಸಮಯ ಬೇಕು …

Read More »

ಯುಪಿಎಸ್‌ಸಿ ಮಾದರಿಯಲ್ಲಿಯೇ ಕೆಪಿಎಸ್‌ಸಿ ಪರೀಕ್ಷೆ!

ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆಯಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ), ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ಇದೇ ಮೊದಲ ಬಾರಿಗೆ ಯುಪಿಎಸ್‌ಸಿ ಪರೀಕ್ಷೆಗಳ ಮಾದರಿಯ ಭದ್ರತಾ ವ್ಯವಸ್ಥೆ ಮಾಡಿಕೊಂಡಿದೆ! ಜ. 24ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣಕ್ಕೆ ಮುಂದೂಡಲಾಗಿದ್ದು, ಭಾನುವಾರ (ಫೆ. 28) ನಡೆಯಲಿದೆ. 1,253 ಎಫ್‌ಡಿಎ ಹುದ್ದೆಗಳಿಗೆ 3.74 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ರಾಜ್ಯದಾದ್ಯಂತ 1,057 ಕೇಂದ್ರಗಳಲ್ಲಿ ಪರೀಕ್ಷೆ …

Read More »