Breaking News

Daily Archives: ಫೆಬ್ರವರಿ 28, 2021

ಹೆವಿ ಬ್ಯಾಡ್ಜ್ ಡಿಎಲ್ ರಿನಿವಲ್​ಗೆ ಹರಸಾಹಸ: ಸಾರಿಗೆ ಇಲಾಖೆ ಹೊಸ ನಿಯಮದಿಂದ ಚಾಲಕರಿಗೆ ಸಂಕಷ್ಟ

ಕರೊನಾ ನಂತರ ವಾಹನ ಚಾಲಕರು ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಲೇ ಬಂದಿದ್ದಾರೆ. ಒಂದು ಕಡೆ ಕೆಲಸ ಇಲ್ಲ, ಮತ್ತೊಂದೆಡೆ ಬದುಕಿನ ಬವಣೆ. ಈ ನಡುವೆ ಡ್ರೖೆವಿಂಗ್ ಲೈಸೆನ್ಸ್ ಪರವಾನಗಿ ನವೀಕರಿಸಲು ದೂರದ ಬೆಂಗಳೂರು ಇಲ್ಲವೇ ಧಾರವಾಡಕ್ಕೆ ಹೋಗಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ. ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರುವ ಚಾಲಕರು ಈ ಹಿಂದೆ ಆಯಾ ಜಿಲ್ಲೆ ಇಲ್ಲವೇ ವಿಭಾಗೀಯ ಕೇಂದ್ರದಲ್ಲಿರುವ ಸಾರಿಗೆ ಇಲಾಖೆ ಕಚೇರಿಯಲ್ಲಿ ಚಾಲನಾ ಪರವಾನಗಿ ನವೀಕರಣ ಮಾಡಿಕೊಡಲಾಗುತ್ತಿತ್ತು. ಆದರೆ …

Read More »

ಪೊಲೀಸ್‌ ಠಾಣೆ ಬಳಿ ತುಕ್ಕು ಹಿಡಿಯುತ್ತಿವೆ ವಾಹನಗಳು

ಸುರತ್ಕಲ್: ಹಲವು ದಿನ, ತಿಂಗಳು, ವರ್ಷ ಕಳೆದರೂ ಮಾಲಕ ಬರುತ್ತಾನೋ ಇಲ್ಲವೋ. ಇನ್ನೊಬ್ಬರ ಕೈ ಸೇರಬೇಕಾ ಅಥವಾ ಹೀಗೆ ನಿಂತಲ್ಲಿಯೇ ಅವಶೇಷವಾಗಬೇಕಾ? ಸುರತ್ಕಲ್‌, ಪಣಂಬೂರು, ಕಾವೂರು ಪೊಲೀಸ್‌ ಠಾಣೆಗಳ ಮುಂದೆ, ಪಕ್ಕ ಇಲ್ಲವೇ ಠಾಣೆಗೆ ಸಮೀಪದಲ್ಲೇ ಮಾಲಕನ ಬರುವಿಕೆಗಾಗಿ ಕಾಯುತ್ತಿರುವ ನಾನಾ ರೀತಿಯ ವಾಹನಗಳ ವ್ಯಥೆಯಿದು. ಅಪಘಾತ, ಕಳ್ಳತನ, ರಸ್ತೆ ನಿಯಮ ಉಲ್ಲಂಘನೆ ಹೀಗೆ ವಿವಿಧ ಕಾರಣಗಳಿಂದ ಪೊಲೀಸರು ವಶಪಡಿಸಿಕೊಂಡ ದ್ವಿಚಕ್ರ ವಾಹನ, ಕಾರು, ಲಾರಿ, ದೋಣಿ ಇತ್ಯಾದಿಗಳು ಪೊಲೀಸ್‌ …

Read More »

ಸಿಹಿ ಕೊಟ್ಟು ಶುಭ ಕೋರಿದ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು. ಕೆಎಂಎಫ್ ಅಧ್ಯಕ್ಷ ಹಾಗೂ ಗೋಕಾಕ ತಾಲುಕಿನ‌ ಅರಭಾವಿ‌‌ ವಿಧಾನಸಭಾ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ನಿಮಿತ್ತ ಶುಭ ಕೋರಿದರು. ಕೆಎಂಎಫ್ನ ‌ಸಿಹಿ ಪದಾರ್ಥಗಳನ್ನು ತಿನ್ನಿಸುವ ಮೂಲಕ ಬಾಲಚಂದ್ರ ಜಾರಕಿಜೊಳಿ ಅವರು ಸಿಎಂ ಯಡಿಯೂರಪ್ಪ ಅವರಿಗೆ ಶತಾಯುಷಿ ಆಗಲೆಂದು ಹಾರೈಸಿದರು.

Read More »

ಮಾ.2ರಂದು ಅಂಗನವಾಡಿ ಕಾರ್ಯಕರ್ತರಿಂದ ‘ವಿಧಾನಸೌಧ ಚಲೋ

ಬೆಂಗಳೂರು, ಫೆ. 27: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸರಕಾರದ ‘ಸಿ’ ಮತ್ತು ‘ಡಿ’ ಗ್ರೂಪ್ ನೌಕರರೆಂದು ಪರಿಗಣಿಸಬೇಕು. ಇಲಾಖೆಯು ಈ ವೃಂದಗಳ ನೌಕರರಿಗೆ ನೀಡುವ ಎಲ್ಲ ಶಾಸನಬದ್ಧ ಸೌಕರ್ಯಗಳನ್ನು ನೀಡಬೇಕೆಂದು ಆಗ್ರಹಿಸಿ ಮಾ.2ರಂದು ಎಐಯುಟಿಯುಸಿ ‘ವಿಧಾನಸೌಧ ಚಲೋ’ ಹಮ್ಮಿಕೊಂಡಿದೆ. ಸರಕಾರಿ ನೌಕರರಿಗೆ ಸರಿಸಮನಾಗಿ ಮಾಸಿಕ ವೇತನ ಮತ್ತಿತರ ಸೌಕರ್ಯಗಳನ್ನು ನೀಡಬೇಕು ಅಥವಾ ಕಾರ್ಯಕರ್ತೆಯರಿಗೆ 25 ಸಾವಿರ ರೂ.ಹಾಗೂ ಸಹಾಯಕಿಯರಿಗೆ 21 ಸಾವಿರ ರೂ.ಮಾಸಿಕ ವೇತನ ನೀಡಬೇಕು. ಸೇವಾ ಹಿರಿತನ …

Read More »

ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯನಿರ್ವಹಿಸದಿರುವುದಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ನೂತನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಬಹುತೇಕ ಸಿಸಿಟಿವಿಗಳು ಕಾರ್ಯನಿರ್ವಹಿಸದಿರುವುದಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ನೂತನ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ. ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ಈ ಕುರಿತು ಪತ್ರ ಬರೆದಿರುವ ಹೊರಟ್ಟಿಯವರು, ಸಚಿವಾಲಯದಲ್ಲಿ ಅಳವಡಿಸಲಾಗಿರುವ ಹಲವು ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅವುಗಳನ್ನು ಉದ್ದೇಶಪೂರ್ವಕವಾಗಿ ಕೆಲವರು ಹಾಳು ಮಾಡುತ್ತಿರುವ ದೂರುಗಳು ಬರುತ್ತಿವೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆಂದು ತಿಳಿದುಬಂದಿದೆ. ವಿಧಾನಪರಿಷತ್ ಕಟ್ಟಡದಲ್ಲಿ ಒಟ್ಟಾರೆ 36 …

Read More »