Breaking News
Home / 2021 / ಫೆಬ್ರವರಿ (page 21)

Monthly Archives: ಫೆಬ್ರವರಿ 2021

3000 ರೂ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ

ಬೆಳಗಾವಿ: ಚಿಕ್ಕೋಡಿಯ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ನೌಕರ ಚೇತನ್ ಹಂಜಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಥಣಿಯ ಬಾಳಪ್ಪ ಸಿದ್ದಪ್ಪ ಬನ್ನಟ್ಟಿ ಎಂಬುವವರಿಗೆ ಅಥಣಿ ತಾಲೂಕಿನ ಶಿವನೂರ ಹಾಲು ಉತ್ಪಾದಕರ ಸಹಕಾರಿ ಸಂಘ ನಿ. ನೇದ್ದರ ಹೊಸ ಬೈಲಾ ಅನುಮೋದನೆ ಮಾಡಿ ಸ್ವೀಕೃತಿ ನೀಡಲು ಚೇತನ್ 3000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬಾಳಪ್ಪ ಎಂಬುವವರು ಎಸಿಬಿಗೆ …

Read More »

ಯತ್ನಾಳ್ ಕಾಂಗ್ರೆಸ್ ನ `ಬಿ’ ಟೀಂ : ನಿರಾಣಿ, ಪಾಟೀಲ್ ವಾಗ್ದಾಳಿ

ಬೆಂಗಳೂರು,ಫೆ.22- ಪಂಚಮಸಾಲಿ ಹೋರಾಟ ವನ್ನು ಕೆಲವರು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಸಮಾಜದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್, ಮುಗಿಬಿದ್ದರು. ಪಂಚಮಸಾಲಿ ಐತಿಹಾಸಿಕ ಹೋರಾಟ, ಸ್ವಾರ್ಥಕ್ಕೆ ಬಳಕೆಯಾಗುತ್ತಿದ್ದು, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್‍ನ ಬಿ ಟೀಮ್‍ನಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿಂದು ಮಾತನಾಡಿದ ಸಚಿವರುಗಳು, 2ಎ ಮೀಸಲಾತಿಗಾಗಿ ಆಗ್ರಹಿಸಿ ಶ್ರೀ …

Read More »

ಕುಲಗೋಡ ಬಲಭೀಮ ದೇವರ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮುಂದಿನ ವರ್ಷ ನಡೆಯಲಿರುವ ಇಲ್ಲಿಯ ಪ್ರಸಿದ್ಧ ಬಲಭೀಮ ದೇವಸ್ಥಾನದ ಕಾರ್ತಿಕೋತ್ಸವ ನಿಮಿತ್ಯ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಳೆದ ಶನಿವಾರದಂದು ಚಾಲನೆ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡದ ಸುಪ್ರಸಿದ್ಧ ಬಲಭೀಮ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಕಾರ್ತಿಕೋತ್ಸವದ ಅಂಗವಾಗಿ 2022 ರಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುಲಗೋಡ ಭಾಗದ ಬಲಭೀಮ ದೇವಸ್ಥಾನವು …

Read More »

ಸುಮಾರು 15ಕ್ಕೂ ಹೆಚ್ಚು ಬುಕ್ಕಿಗಳನ್ನು ಕರೆದು ಗೋಕಾಕ್ DYSP ಖಡಕ್ ವಾರ್ನಿಂಗ್

ಗೋಕಾಕ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರನ್ನು ಹೆಡಮುರಿ ಕಟ್ಟಲು ಪೊಲೀಸರು ರೆಡಿಯಾಗಿದ್ದಾರೆ, ಮತ್ತೊಂದೆಡೆ ಬೀಸೋ ದೊಣ್ಣೆಯಿಂದ ಪಾರಾಗಲು ಹರಸಾಹಸ ನಡೆಸಿದ್ದಾರೆ.   ಪ್ರಕಟವಾಗುತ್ತಿರುವ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಗೋಕಾಕ ಪೊಲೀಸರು ಈಗ ದಂಧೆಕೋರರ ಉದ್ದನೆಯ ಪಟ್ಟಿ ಹಿಡಿದುಕೊಂಡು ನಗರದಲ್ಲಿ ಸಂಚರಿಸತೊಡಗಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಬುಕ್ಕಿಗಳ ಪೈಕಿ 15 ಬುಕ್ಕಿಗಳನ್ನು ಗೋಕಾಕ ಡಿಎಸ್ಪಿಯವರು ಎಲ್ಲರನ್ನು ಕರೆಯಿಸಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.   ಪೊಲೀಸರ ಕ್ರಮದಿಂದ ಬೆಚ್ಚಿಬಿದ್ದ ಇನ್ನೂ …

Read More »

ನರೇಗಾ ಯೋಜನೆ ಲೇವಡಿ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು

ವಯನಾಡು: ಪ್ರಧಾನಿ ಮೋದಿ ಅವರು, 2014 ರಲ್ಲಿ ಅಧಿಕಾರ ವಹಿಸಿಕೊಂಡಾಗ ನರೇಗಾ ಯೋಜನೆಯನ್ನು ಅಪಹಾಸ್ಯ ಮಾಡಿದ್ದರು. ಯುಪಿಎ ಸರ್ಕಾರವು ಜಾರಿಗೆ ತಂದ ಮಹತ್ವಾಕಾಂಕ್ಷೆಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ಕೋವಿಡ್ ಸಮಯದಲ್ಲಿ ದೇಶದ ಜನರ ‘ಸಂರಕ್ಷಕ’ ಪಾತ್ರವನ್ನು ವಹಿಸಿದೆ ಎಂಬುದನ್ನು ಒಪ್ಪಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ತಮ್ಮ ಕ್ಷೇತ್ರದಲ್ಲಿನ ಪುಥಡಿ ಗ್ರಾಮ ಪಂಚಾಯಿತಿಯಲ್ಲಿ ಕುಟುಂಬಶ್ರೀ ಸಂಗಮಮ್‌ ಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ …

Read More »

ಜಗ್ಗೇಶ್ ವಿರುದ್ಧ ಸಿಡಿದೆದ್ದ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು

ಮೈಸೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ನಟ ಜಗ್ಗೇಶ್ ಅಭಿನಯದ ತೋತಾಪುರಿ ಚಿತ್ರದ ಶೂಟಿಂಗ್ ಸ್ಪಾಟ್ ಗೆ ತೆರಳಿ, ಜಗ್ಗೇಶ್ ಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮೈಸೂರಿನ ಬನ್ನೂರು ಬಳಿಯ ಗ್ರಾಮದಲ್ಲಿ ಜಗ್ಗೇಶ್ ಅಭಿನಯದ ತೋತಾಪುರಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಶೂಟಿಂಗ್ ಸ್ಪಾಟ್ ಗೆ ಬಂದ ದರ್ಶನ್ ಅಭಿಮಾನಿಗಳು ಏಕಾಏಕಿ ಜಗ್ಗೇಶ್ ಗೆ ಘೇರಾವ್ ಹಾಕಿದ್ದಾರೆ. ದರ್ಶನ್ ಅಭಿಮಾನಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. …

Read More »

ಇಂಧನ ಬೆಲೆ ಗಗನಕ್ಕೆ: 108 ಕಿಮೀ ಕಾಲ್ನಡಿಗೆ ಜಾಥಾಗೆ ಸಿದ್ದರಾಮಯ್ಯ ಚಾಲನೆ

ಉಡುಪಿ: ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಾಥಾ ಹಮ್ಮಿಕೊಳ್ಳಲಾಗಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಾಥಗೆ ಚಾಲನೆ ನೀಡದರು. ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಿಂದ ಉತ್ತರ ಕನ್ನಡ ಜಿಲ್ಲೆಯ ಗಡಿಯವರೆಗೆ ಈ ಪಾದಯಾತ್ರೆ ನಡೆಯಲಿದೆ. ಒಟ್ಟು ಏಳು ದಿನಗಳ ಕಾಲ ಬರೋಬ್ಬರಿ 108 ಕಿಲೋಮೀಟರ್ ಪಾದಯಾತ್ರೆ ನಡೆಯಲಿದ್ದು, ಕಾಂಗ್ರೆಸ್‌ನ ರಾಜ್ಯ, ರಾಷ್ಟ್ರ ಮಟ್ಟದ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಮಾಜಿ …

Read More »

ಗಾಂಜಾ ಮಾರಾಟ : ಆರೋಪಿ ಬಂಧನ

ಬೆಳಗಾವಿ : ಮಹಾರಾಷ್ಟ್ರ ರಾಜ್ಯದಿಂದ ಬೆಳಗಾವಿ ನಗರಕ್ಕೆ ಗಾಂಜಾ ಮಾರಾಟ ಮಾಡಲು ಬಂದಿದ್ದ ಆರೋಪಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಮೀರಜದ ಶಬ್ಬೀರ ಇಬ್ರಾಹಿಂ ಪಠಾಣ (33) ಬಂಧಿತ ಆರೋಪಿ. ನಗರದ ಧರ್ಮನಾಥ ಸರ್ಕಲ್ ಬಳಿ ದಾಳಿ ಮಾಡಿ, ಆರೋಪಿ ಬಳಿ ಇದ್ದ ಒಟ್ಟು 5 ಕೆ.ಜಿ 400 ಗ್ರಾಂ, ಗಾಂಜಾ ಮಾದಕ ವಸ್ತು, ಅಂದಾಜು ಮೌಲ್ಯ ಒಟ್ಟು ರೂ. 1,50,000 ಹಾಗೂ ಒಂದು ಟಿವ್ಹಿಎಸ್ ಕಂಪನಿಯ ಸ್ಪೋರ್ಟ್ಸ್ ಮೋಟಾರು ಬೈಕ್ …

Read More »

ಯಮಕನಮರಡಿ : ವಿವಿಧ ಕಾಮಗಾರಿಗೆ ಗ್ರಾಪಂ.ಅಧ್ಯಕ್ಷೆ ಚಾಲನೆ

ಬೆಳಗಾವಿ : ಯಮಕನಮರಡಿ ಕ್ಷೇತ್ರದ ಮಾವನೂರು ಗ್ರಾಮದಲ್ಲಿ ವಿವಿಧ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ ಶಿವಕುಮಾರ್ ಗುಡಗನಟ್ಟಿ ಇಂದು ಭೂಮಿ ಪೂಜೆ ನೆರವೇರಿಸಿದರು. ನರೇಗಾ ಯೋಜನೆಯಲ್ಲಿ ಬಿಡುಗಡೆಯಾದ 18 ಲಕ್ಷ ರೂಪಾಯಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಇದೇ ವೇಳೆ ಅಧ್ಯಕ್ಷೆ ಮಾತನಾಡಿ, ಯಮಕನಮರಡಿ ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಶಾಸಕರು ಪಣ ತೊಟ್ಟಿದ್ದಾರೆ. ಅವರ ಆಸೆಯಂತೆ ಇಂದು ರಸ್ತೆ , ಶಾಲೆ ಕೊಠಡಿ ನಿರ್ಮಾಣ ಸೇರಿ ವಿವಿಧ …

Read More »

ಪಂಚಾಕ್ಷರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆ ಉದ್ಘಾಟಿಸಿದ ಮಹಾಂತೇಶ ಕವಟಗಿಮಠ

ಚಿಕ್ಕೋಡಿ: ಬಡ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ವಿತರಿಸುವ ಮುಖಾಂತರ ಸಾಮಾನ್ಯ ಜನರ ಆರ್ಥಿಕ ಪ್ರಗತಿಗೆ ಸಹಕಾರಿ ಸಂಸ್ಥೆಗಳು ನೆರವಾಗಬೇಕು ಎಂದು ವಿಧಾನ ಪರಿಷತ್‍ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು. ತಾಲೂಕಿನ ಮುಗಳಿ ಗ್ರಾಮದಲ್ಲಿ ನೂತನವಾಗಿ ಆರಂಭಿಸಿದ ಓಂ ಶ್ರೀ ಪಂಚಾಕ್ಷರಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರಿ ಸಂಸ್ಥೆಗಳಲ್ಲಿ ಠೇವಣಿದಾರರಿಗೂ ಕಡಿಮೆ ಬಡ್ಡಿ ನೀಡುವ ಜತೆಗೆ ಸಾಲಗಾರರಿಗೂ ಕಡಿಮೆ …

Read More »