Breaking News
Home / 2021 / ಫೆಬ್ರವರಿ (page 22)

Monthly Archives: ಫೆಬ್ರವರಿ 2021

ಪ್ರತಿ ಹಳ್ಳಿಗೂ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ: ದುರ್ಯೋಧನ ಐಹೊಳೆ

ಚಿಕ್ಕೋಡಿ: ಹಿಂದಿನ ಸರ್ಕಾರಗಳು ಹಳ್ಳಿಯ ಜನರಿಗೆ ಶುದ್ದ ಕುಡಿಯುವ ನೀರು ಕೊಡುವಲ್ಲಿ ವಿಫಲವಾಗಿದ್ದು, ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರಕಾರಗಳು ಗ್ರಾಮೀಣ ಪ್ರದೇಶದ ಎಲ್ಲ ಜನರಿಗೂ ಶುದ್ದ ಕುಡಿಯುವ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಶಾಸಕ ದುರ್ಯೋಧನ ಐಹೋಳೆ ಹೇಳಿದರು. ತಾಲೂಕಿನ ಕಮತೇನಹಟ್ಟಿ ಹಾಗೂ ಮುಗಳಿ ಗ್ರಾಮದಲ್ಲಿ ಜೀವಜಲ ಯೋಜನೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೀವಜಲ ಯೋಜನೆಯಡಿ ಶೀಘ್ರ ರಾಯಬಾಗ …

Read More »

ಕಾಂಗ್ರೆಸ್ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಾರ್ಯ ಕೈಗೊಳ್ಳಿ: ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಸತೀಶ್ ಜಾರಕಿಹೊಳಿ

ಬೆಳಗಾವಿ : ‘ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಹಲವಾರು ವಿಚಾರಗಳನ್ನು ಮಾಡಲಾಗುತ್ತಿದೆ. ಕಿಸಾನ್ ಕಾಂಗ್ರೆಸ್ ನೂತನ ಪದಾಧಿಕಾರಿಗಳು ಸಹ ವಿಶೇಷ ಆಸಕ್ತಿ ಬೆಳೆಸಿಕೊಂಡು ಪಕ್ಷಕ್ಕೆ ಶಕ್ತಿ ತುಂಬವ ಕೆಲಸ ಮಾಡಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಬೆಳಗಾವಿ‌ ಜಿಲ್ಲಾ ಕಿಸಾನ್ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿದರು. ಬಳಿಕ ಮಾತನಾಡಿ, ‘ಕಾಂಗ್ರೆಸ್ ಪಕ್ಷವನ್ನು …

Read More »

ನೀನು ಮೊದಲು ರಾಜೀನಾಮೆ ನೀಡು : ಯತ್ನಾಳ್ ಗೆ ಸಚಿವ ನಿರಾಣಿ ಸವಾಲ್

ಬೆಂಗಳೂರು : ಶಾಸಕ ಬಸವರಾಜ್ ಯತ್ನಾಳ್ ಪಕ್ಷದ ವಿರುದ್ಧ ಕೆಲಸ ಮಾಡುತ್ತಿದ್ದೀಯಾ. ಮೊದಲು ನೀನು  ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡು ಅಂತಾ ಸಚಿವ ಮುರಗೇಶ್ ನಿರಾಣಿ ಕಿಡಿ ಕಾರಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೇ ನಡೆದ ಸಮಾವೇಶದಲ್ಲಿ ಬಹಿರಂಗವಾಗಿ ಯತ್ನಾಳ್ ಅವರು , ಸಚಿವರು ರಾಜೀನಾಮೆ ನೀಡಬೇಕು ಎಂದು ಹೇಳುತ್ತಾರೆ. ನಮಗೆ ರಾಜೀನಾಮೆ ನೀಡು ಎನ್ನುವುದಕ್ಕೆ ಇವರು ಯಾರು ಎಂದು ಪ್ರಶ್ನ ಮಾಡಿದ್ದಾರೆ. ಮೊದಲು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ …

Read More »

ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ಅವರ ಕ್ಷೇತ್ರಕ್ಕೆ ಅವರೇ ಬಾಸ್, ಸುಪ್ರೀಂ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಬಾಸ್!!

ಬೆಳಗಾವಿ:  ಕ್ಷೇತ್ರವಾರು ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಅವರವರ ಕ್ಷೇತ್ರದ  ವಿಚಾರ ಬಂದಾಗ ಅಲ್ಲಿನ ನಾಯಕರೇ ಸುಪ್ರೀಂ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ  ಹೇಳಿದರು. ಕಾಂಗ್ರೆಸ್ ನಲ್ಲಿ  ಮೂರು ಗುಂಪುಗಳಿವೆ ಎಂದು ಮಾಧ್ಯಮದವರ ಪ್ರಶ್ನೆಗೆ  ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಲ್ಲರು ಒಂದೇ. ಚಿಕ್ಕೋಡಿ ಭಾಗಕ್ಕೆ ಪ್ರಕಾಶ ಹುಕ್ಕೇರಿ ಅವರು ಬಾಸ್, ಬೇರೆ ಬೇರೆ ವಿಷಯಗಳಿಗೆ ಮನಸ್ಥಾಪವಿರಬಹುದು ಆದ್ರೆ ಪಕ್ಷದಲ್ಲಿ …

Read More »

ನೋಟಿಸ್ ಕೊಟ್ಟರೆ ಅಂಜುವ ಮಗ ನಾನಲ್ಲ:ಕುರ್ಚಿ ಖಾಲಿ ಮಾಡಿಸಬೇಕಾಗುತ್ತೆ; ಸಿಎಂಗೆ ಯತ್ನಾಳ್ ತಿರುಗೇಟು

ಬೆಂಗಳೂರು: ನೋಟಿಸ್ ಕೊಟ್ಟರೆ ಅಂಜುವ ಮಗ ನಾನಲ್ಲ.  ನನಗೆ ನೋಟಿಸ್ ಕೊಟ್ಟರೂ ನನ್ನ ಬಾಯಿ ಬಂದ್ ಆಗುವುದಿಲ್ಲ. ನಾನು ಯಾರಿಗೂ ಪಂಪ್ ಹೊಡೆಯೋ ರಾಜಕಾರಣಿ ಅಲ್ಲ. ನನ್ನನ್ನು ಅಂಜಿಸುತ್ತೇನೆ ಎಂದು ತಿಳಿದಿದ್ದರೆ,  ಆದಷ್ಟು ಬೇಗ ಕುರ್ಚಿ ಖಾಲಿ ಮಾಡಿಸಬೇಕಾಗುತ್ತೆ ಎಂದು ಶಾಸಕ ಬಸಗೌಡ ರಾ.ಪಾಟೀಲ್ ಯತ್ನಾಳ್​ ಸಿಎಂ ಬಿಎಸ್​ ಯಡಿಯೂರಪ್ಪನವರಿಗೆ ನೇರವಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಪಂಚಮಸಾಲಿ ಸಮಾವೇಶದಲ್ಲಿ ಮಾತನಾಡಿದ ಯತ್ನಾಳ್, ಸಿಎಂ ಬಿಎಸ್​ವೈ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 2ಎ …

Read More »

ಪಂಚಮಸಾಲಿ ಪಟ್ಟು ತಂದ ಇಕ್ಕಟ್ಟು: ಮಾರ್ಚ್ 4ರ ವರೆಗೆ ಗಡುವು

ಬೆಂಗಳೂರು: ಹಿಂದುಳಿದ ವರ್ಗಗಳ ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಆರಂಭಿಸಿರುವ ಹೋರಾಟವನ್ನು ತಾತ್ಕಾಲಿಕವಾಗಿ ಕೈಬಿಡುವಂತೆ ಪಂಚಮಸಾಲಿ ಸಮುದಾಯದ ಮಠಾಧೀಶರು ಮತ್ತು ಮುಖಂಡರ ಮನವೊಲಿಸುವ ರಾಜ್ಯ ಸರ್ಕಾರದ ಪ್ರಯತ್ನ ವಿಫಲವಾಗಿದೆ. ಮೀಸಲಾತಿ ಘೋಷಣೆಗೆ ಮಾರ್ಚ್‌ 4 ರ ಗಡುವು ನೀಡಿರುವ ಸಮುದಾಯದ ಜನರು, ನಗರದ ಮೌರ್ಯ ವೃತ್ತದಲ್ಲಿ ಧರಣಿ ಆರಂಭಿಸಿದ್ದಾರೆ. ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಜನವರಿ 14ರಂದು ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಆರಂಭವಾದ ಪಾದಯಾತ್ರೆಗೆ ಅರಮನೆ ಮೈದಾನದಲ್ಲಿ …

Read More »

ದೇಶದ ಅಭಿವೃದ್ಧಿಗೆ ಖಾಸಗೀಕರಣ ಅನಿವಾರ್ಯ: ನಿರ್ಮಲಾ ಸೀತಾರಾಮನ್

ಬೆಂಗಳೂರು: ‘ಉತ್ತಮವಾಗಿ ಕಾರ್ಯ ನಿರ್ವಹಿಸದೇ ಇರುವ ಸಾರ್ವಜನಿಕ ಸಂಸ್ಥೆಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಮಾಡಲು ಮತ್ತು ದೇಶದ ಅಭಿವೃದ್ಧಿ ಸಾಧಿಸಲು ಖಾಸಗೀಕರಣ ಅನಿವಾರ್ಯ’ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟರು. ಬಿಜೆಪಿ ಆರ್ಥಿಕ ಪ್ರಕೋಷ್ಠವು ಕೇಂದ್ರ ಬಜೆಟ್‌ ಕುರಿತು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘ಭಾರತವೆಂದರೆ ಮೂಲಸೌಕರ್ಯಗಳ ಕೊರತೆ ಇರುವ ದೇಶ ಎಂಬ ಮಾತಿತ್ತು. ದೀನದಯಾಳ್‌ ಉಪಾಧ್ಯಾಯರ ‘ಅಂತ್ಯೋದಯ’ ಚಿಂತನೆಗಳೊಂದಿಗೆ ಇಂತಹ ಮಾತುಗಳನ್ನು ತೊಡೆದು ಹಾಕಲು …

Read More »

ಮೀಸಲಾತಿ ದೊರಕದೇ ಪೀಠಕ್ಕೆ ಮರಳುವುದಿಲ್ಲ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ‘ಪಂಚಮಸಾಲಿ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ ‘2ಎ’ ಅಡಿಯಲ್ಲಿ ಮೀಸಲಾತಿ ಸೌಲಭ್ಯ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ’ ಎಂದು ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದರು. ಮೀಸಲಾತಿಗಾಗಿ ಆಗ್ರಹಿಸಿ ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಪಂಚಮಸಾಲಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಮಗೆ ನಿಗಮ, ಮಂಡಳಿ ಅಥವಾ ಅನುದಾನ ಬೇಡ. ‘2ಎ’ ಮೀಸಲಾತಿಯೇ ನಮ್ಮ ಬೇಡಿಕೆ. ಅದು ದೊರೆಯುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದರು. ಮೀಸಲಾತಿಗಾಗಿ 2012ರಿಂದಲೂ …

Read More »

ವಿದ್ಯಾರ್ಥಿಗಳು ಬಸ್‌ಪಾಸ್‌ ಇದ್ದರೂ ಹಣ ನೀಡಿ ಟಿಕೆಟ್‌ ಖರೀದಿಸಬೇಕಾದ ಪರಿಸ್ಥಿತಿ

ಚಿಂತಾಮಣಿ: ಪ್ರಸಿದ್ಧ ವಾಣಿಜ್ಯ ಮತ್ತು ಶೈಕ್ಷಣಿಕ ಕ್ಷೇತ್ರ ಚಿಂತಾಮಣಿಯ ಗ್ರಾಮೀಣ ಮತ್ತು ಪಟ್ಟಣ ವಿದ್ಯಾರ್ಥಿಗಳು ಬಸ್‌ಪಾಸ್‌ ಇದ್ದರೂ ಹಣ ನೀಡಿ ಟಿಕೆಟ್‌ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾ ಕೇಂದ್ರ ಹಾಗೂ ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯಿಂದ ತಾಲೂಕಿನ ಬಸ್‌ ನಿಲ್ದಾಣಕ್ಕೆಬರುವ ಬಸ್‌ಗಳಲ್ಲಿ ವಿದ್ಯಾರ್ಥಿಗಳ ಬಳಿ ಪಾಸ್‌ ಇದ್ದರೂ ಹಣ ಪಡೆದು ಟಿಕೆಟ್‌ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಅಳಲೇನು?: ತಾಲೂಕಿನಿಂದ ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರಿಗೆವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ತೆರಳುತ್ತಾರೆ.ಆದರೆ, ಬಸ್‌ ನಿಲ್ದಾಣದಲ್ಲಿ …

Read More »

ಫಾಸ್ಟ್ಯಾಗ್ ಎಂಬುದು ಖಾಸಗಿ ಕಂಪನಿಗಳ ಕ್ರಿಮಿನಲ್ ‍ಷಡ್ಯಂತ್ರ..!

ಬೆಂಗಳೂರು, ಫೆಬ್ರವರಿ 22: ಫಾಸ್ಟ್ಯಾಗ್ ಎಂಬುದು ಖಾಸಗಿ ಕಂಪನಿಗಳ ಕ್ರಿಮಿನಲ್ ‍ಷಡ್ಯಂತ್ರ..! ಫಾಸ್ಟ್ಯಾಗ್ ಇಲ್ಲದಿದ್ದರೆ ದುಪ್ಟಟ್ಟು ದಂಡ ಎಂಬುದು ದಂಡದ ಹೆಸರಿನಲ್ಲಿ ಮಾಡುತ್ತಿರುವ ದಂಧೆ..! ವಾಸ್ತವದಲ್ಲಿ ಫಾಸ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ದಂಡ ಹಾಕಲಿಕ್ಕೆ ಕಾನೂನಿನಲ್ಲಿ ಅವಕಾಶವೇ ಇಲ್ಲ! ಸಂವಿಧಾನದತ್ತವಾಗಿ ಪ್ರಜೆಗಳಿಗೆ ಸಿಕ್ಕಿರುವ ಮೂಲಭೂತ ಹಕ್ಕುಗಳ ದಮನ. ಇದರ ವಿರುದ್ಧ ಜನರು ಧ್ವನಿಯೆತ್ತದಿದ್ದರೆ ಭವಿಷ್ಯದ ದಿನಗಳು ಇನ್ನೂ ಕರಾಳವಾಗಲಿವೆ..! ಫಾಸ್ಟ್ಯಾಗ್ ಕಡ್ಡಾಯ, ಫಾಸ್ಟ್ಯಾಗ್ ಇಲ್ಲದಿದ್ದರೆ ದಂಡ ವಿಧಿಸುತ್ತಿರುವ ಖಾಸಗಿ ಕಂಪನಿಗಳ ನೀತಿ, …

Read More »