ಪಾಟ್ನಾ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ , ಕೊಲೆಗೈದಿದ್ದ ಆರೋಪಿಗೆ ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಸ್ಥಳೀಯ ನ್ಯಾಯಾಲಯವೊಂದು ಮರಣ ದಂಡನೆ ಶಿಕ್ಷೆಯನ್ನು ಶನಿವಾರ ಪ್ರಕಟಿಸಿದೆ. ಕೇಸ್ ದಾಖಲಾದ ಆರು ತಿಂಗಳೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ನ್ಯಾಯಾಲಯ ಈ ಮಹತ್ವದ ಶಿಕ್ಷೆ ಪ್ರಕಟಿಸಿದೆ. ಪಾಟ್ನಾದಿಂದ 140 ಕಿ.ಮೀ. ದೂರದಲ್ಲಿರುವ ಬಾಕ್ರೌರು ಹಳ್ಳಿಯಲ್ಲಿನ ಪ್ರಮುಖ ಶಂಕಿತನ ಮನೆಯಿಂದ ಬ್ಯಾಂಗ್ ವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹವನ್ನು ಆಗಸ್ಟ್ 25 ರಂದು ಗೋಪಾಲ್ ಗಂಜ್ …
Read More »Monthly Archives: ಫೆಬ್ರವರಿ 2021
ಬೆಳಗಾವಿ ಪೊಲೀಸರ ಕಾರ್ಯಾಚರಣೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ : ಬೆಳಗಾವಿ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದಾಳಿ ವೇಳೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಡಿಸಿಪಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ಯಡಿಯೂರಪ್ಪ ಮಾರ್ಗದಲ್ಲಿ ನಡೆದ ದಾಳಿಯಲ್ಲಿ ಗಾಂಜಾ ಮಾರುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದು, ಸುಮಾರು ಒಂದುವರೆ ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಜ್ಞಾನೇಶ್ವರ ಪಾಟೀಲ ಬಂಧಿತ ಆರೋಪಿ. ಬೆಳಗಾವಿಯ ಪೊಲೀಸರು ಮಟಕಾ ಜೂಜಾಟ,ಗಾಂಜಾ ವಿರುದ್ಧ ದೊಡ್ಡ ಹೋರಾಟವನ್ನೇ ಮಾಡುತ್ತಿದ್ದು,ಡಿಸಿಪಿ ವಿಕ್ರಂ ಅಮಟೆ …
Read More »ಚಿವ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಕಣ್ಣೀರಿಟ್ಟ ಘನಟೆ
ಬೆಂಗಳೂರು: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸಮಾವೇಶದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಕಣ್ಣೀರಿಟ್ಟ ಘನಟೆ ನಡೆದಿದೆ. ಕಾರ್ಯಕ್ರಮ ಆರಂಭವಾಗಿ ಕೆಲ ಹೊತ್ತಿನ ನಂತರ ವೇದಿಕೆಯ ಮುಂಬಾಗಕ್ಕೆ ಶಿವಲೀಲಾ ಕುಲಕರ್ಣಿ ಅವರನ್ನು ಸಂಘಟಕರು ಕರೆ ತಂದರು. ಈ ವೇಳೆ ಸಂಘಟಕರು ಶಿವಲೀಲಾ ಅವರಿಗೆ ಮೈಕ್ ಕೊಟ್ಟು ಮಾತನಾಡಲು ಹೇಳಿದರು. ಆದರೆ ಅವರು ಕಣ್ಣೀರಿಡುವ …
Read More »ರೈಲ್ವೆ ನಿಲ್ದಾಣ ನೂತನ ಕಟ್ಟಡ ಉದ್ಘಾಟನೆ ಶೀಘ್ರ
ದಾವಣಗೆರೆ: ರೈಲ್ವೆ ನಿಲ್ದಾಣದ ನೂತನ ಕಟ್ಟಡ ಮತ್ತುಡಿಸಿಎಂ ರೈಲ್ವೆ ಗೇಟ್ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ ಅಂತ್ಯ ಇಲ್ಲವೇ ಏಪ್ರಿಲ್ ಮೊದಲ ವಾರದಲ್ಲಿ ನೆರವೇರಿಸಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ಶುಕ್ರವಾರ ನೂತನ ರೈಲ್ವೆ ನಿಲ್ದಾಣ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೊದಲ ಹಂತದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ನೂತನ ಕಟ್ಟಡದ ಕಾಮಗಾರಿ ಶೇ. 80ಕ್ಕಿಂತಲೂ ಹೆಚ್ಚು ಮುಗಿದಿದೆ. ಮಾ. …
Read More »ಬಜೆಟ್ ಪೂರ್ವಭಾವಿ ಸಭೆಗಳು ಮುಕ್ತಾಯ: ಸಿಎಂ ಯಡಿಯೂರಪ್ಪ
ಬೆಂಗಳೂರು, ಫೆ. 19: ಬರುವ ಮಾರ್ಚ್ 8ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ಬಜೆಟ್ ಪೂರ್ವ ತಯಾರಿ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಗಳು ಮುಗಿದಿವೆ ಎಂದು ಅವರು ಹೇಳಿದ್ದಾರೆ. ಗೃಹ ಇಲಾಖೆ ಸೇರಿದಂತೆ ಇನ್ನೆರಡು ಇಲಾಖೆಗಳು ಬಾಕಿ ಇವೆ. ಇನ್ನು ಅರ್ಧ ದಿನ ಸಭೆ ಮಾಡಿದರೆ ಬಜೆಟ್ ಪೂರ್ವ ತಯಾರಿ ಮುಗಿಯುತ್ತದೆ. ಇದಾದ ನಂತರ ಬಜೆಟ್ …
Read More »ಜುಲೈ 7, 8ರಂದು ಸಿಇಟಿ ಪರೀಕ್ಷೆ, ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು, ಫೆ. 20: ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ. ವೇಳಾಪಟ್ಟಿ ಹೀಗಿದೆ: * 07.07. 2021 ಬುಧವಾರ ಬೆಳಗ್ಗೆ 10.30ರಿಂದ 11.50: ಜೀವಶಾಸ್ತ್ರ * 07.07. 2021 ಬುಧವಾರ ಮಧ್ಯಾಹ್ನ 2.30ರಿಂದ 3.50: ಗಣಿತ * 08.07. 2021 ಗುರುವಾರ ಬೆಳಗ್ಗೆ 10.30ರಿಂದ 11.50: ಭೌತಶಾಸ್ತ್ರ * …
Read More »ಡ್ರಗ್ಸ್ ಜೊತೆ ಸಿಕ್ಕಿಬಿದ್ದ ಪ್ರಕರಣ; ಸಿಐಡಿ ತನಿಖೆಗೆ ಪಮೇಲಾ ಗೋಸ್ವಾಮಿ ಒತ್ತಾಯ
ಕೋಲ್ಕತ್ತಾ, ಫೆಬ್ರವರಿ 20: ಪಶ್ಚಿಮ ಬಂಗಾಳದ ಬಿಜೆಪಿ ಯುವ ಘಟಕದ ನಾಯಕಿ ಪಮೇಲಾ ಗೋಸ್ವಾಮಿ, ಮಾದಕವಸ್ತುವಿನ ಸಮೇತ ಶುಕ್ರವಾರ ಸಿಕ್ಕಿಬಿದ್ದಿದ್ದು, ಕಾರ್‌ನಲ್ಲಿದ್ದ ಸುಮಾರು 10 ಲಕ್ಷ ರೂ ಮೌಲ್ಯದ 90 ಗ್ರಾಂ ಕೊಕೇನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪಮೇಲಾ ಗೋಸ್ವಾಮಿ ಅವರನ್ನು ಶನಿವಾರ ಕೋಲ್ಕತ್ತಾದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಲಾಗಿದೆ. ಈ ಸಂದರ್ಭ ಮಾತನಾಡಿರುವ ಪಮೇಲಾ ಗೋಸ್ವಾಮಿ, “ಇದು ನನ್ನ ವಿರುದ್ಧದ ಸಂಚು. ಇದರಲ್ಲಿ ಪಕ್ಷದ …
Read More »ದಂಡ ಕಟ್ಟಿಸಿಕೊಳ್ಳುವ ಬದಲು ಯುವತಿಗೆ ಕಿಸ್ ಕೊಟ್ಟ ಪೊಲೀಸ್ ಅಧಿಕಾರಿ.!
ಪೆರು:ವಿಲಕ್ಷಣ ಘಟನೆಯೊಂದರಲ್ಲಿ,ಪೆರುವಿನಲ್ಲಿ ದಂಡ ವಿಧಿಸುವ ಬದಲು ಪೊಲೀಸ್ ಅಧಿಕಾರಿ ಮಹಿಳೆಯೊಬ್ಬಳನ್ನು ಚುಂಬಿಸಿದ ಕಾರಣಕ್ಕಾಗಿ ಅಮಾನತುಗೊಳಿಸಲಾಗಿದೆ. ಈಗ ವೈರಲ್ ಆಗಿರುವ ಸಿಸಿಟಿವಿ ವಿಡಿಯೋ ತುಣುಕಿನಲ್ಲಿ, ಲಿಮಾದಲ್ಲಿ ಕೋವಿಡ್ ಕರ್ಫ್ಯೂ ಉಲ್ಲಂಘಿಸಿದ್ದಕ್ಕಾಗಿ ಅಧಿಕಾರಿ ಮಹಿಳೆಗೆ ದಂಡ ವಿಧಿಸುವುದಕ್ಕೆ ನಿಲ್ಲಿಸಿರುವುದನ್ನು ಕಾಣಬಹುದು. ದಂಡ ಕೊಡದೆ ಚುಂಬನ ಕೊಡುವಂತೆ ಅಧಿಕಾರಿ ಆಕೆಯ ಮನವೊಲಿಸಿದ್ದು ವೀಡಿಯೋದಲ್ಲಿ ಕಾಣುತ್ತದೆ. ದಂಡದ ಶುಲ್ಕ ವಿಧಿಸಲು ಪ್ರಾರಂಭಿಸಿದಾಗ ಮಹಿಳೆ ಅಧಿಕಾರಿಗೆ ಹತ್ತಿರವಾಗುವುದನ್ನು ಕಾಣಬಹುದು, ಆದರೆ ಕೆಲವು ಸೆಕೆಂಡುಗಳ ಹಿಂಜರಿಕೆಯ ನಂತರ, ಅಧಿಕಾರಿ …
Read More »‘ಪೊಗರು ಚಿತ್ರ’ ವಿವಾದವೊಂದಕ್ಕೆ ಗುರಿ
ಬೆಂಗಳೂರು: ಮೊನ್ನೆಯಷ್ಟೆ ಭರ್ಜರಿ ಓಪನಿಂಗ್ ಕಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ‘ಪೊಗರು ಚಿತ್ರ’ ವಿವಾದವೊಂದಕ್ಕೆ ಗುರಿಯಾಗಿದೆ. ಈ ಚಿತ್ರದಲ್ಲಿ ಅರ್ಚಕರು ಹಾಗೂ ಪುರೋಹಿತರನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಿ ಪ್ರದರ್ಶಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದು ಖಂಡನೀಯವಾದದ್ದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಹೇಳಿದ್ದಾರೆ. ಯಾವುದೇ ಜಾತಿ ಧರ್ಮವನ್ನು ಅವಹೇಳನಕಾರಿಯಾಗಿ ತೋರಿಸುವುದು ಸರಿಯಾದ ಕ್ರಮವಲ್ಲ ಅದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳು …
Read More »ಎಂಬಿಬಿಎಸ್ ವಿದ್ಯಾರ್ಥಿನಿ ಸಾವಿನ ಮನೆಯ ಕದ ತಟ್ಟಿದ್ದೇಕೆ?
ಬಾಗಲಕೋಟೆ: ನಗರದ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಸಿ.ಎಸ್.ಸಿಂಧುರೇಖಾ(25) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಬಾಗಲಕೋಟೆಯ ನವನಗರದ ಕುಮಾರೇಶ್ವರ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದಳು. ಕಾಲೇಜು ಆವರಣದಲ್ಲಿ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ನೆಲೆಸಿದ್ದ ಸಿಂಧುರೇಖಾ, ತಡರಾತ್ರಿ ಸಾವಿನ ಮನೆಯ ಕದ ತಟ್ಟಿದ್ದಾಳೆ. ಸಿಂಧುರೇಖಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ತನಿಖೆ ಬಳಿಕ ನಿಖರ ಕಾರಣ ತಿಳಿಯಲಿದೆ. ಈಕೆಯ …
Read More »