Breaking News

Monthly Archives: ಫೆಬ್ರವರಿ 2021

ಕರ್ತವ್ಯನಿರತ ಕೆಎಸ್‌ಆರ್​ಟಿಸಿ ಬಸ್​ ಕಂಡಕ್ಟರ್​ಗೆ ಹೃದಯಾಘಾತ, ಸಾವು

ನೆಲಮಂಗಲ: ಕರ್ತವ್ಯನಿರತ ಕೆಎಸ್‌ಆರ್​ಡಿಸಿ ಬಸ್ ನಿರ್ವಾಹಕರೊಬ್ಬರಿಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಗರದಲ್ಲಿ ಸಂಭವಿಸಿದೆ. ಹೊಳೆನರಸೀಪುರ ಮೂಲದ ಟಿ.ಎನ್.ಸೋಮೇಶ್(32) ಮೃತ. ನೆಲಮಂಗಲ ಡಿಪೋ ಬಸ್​ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೋಮೇಶ್​, ಇಂದು ನೆಲಮಂಗಲದ ಬಳಗೆರೆಯಿಂದ ಕೆ.ಆರ್.ಮಾರ್ಕೆಟ್​ಗೆ ಹೊರಟ ಬಸ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಸ್​ನಲ್ಲೇ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತ್ತಾದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದರು. ಸಾವು ಯಾವಾಗ? ಯಾವ ರೂಪದಲ್ಲಿ? ಬರುತ್ತೆ ಎಂದು …

Read More »

ಕರ್ನಾಟಕಕ್ಕೆ ಇಂದು ಕರಾಳ ಸೋಮವಾರ: ರಾಜ್ಯದ 4 ಜಿಲ್ಲೆಗಳಲ್ಲಿ ಅವಘಡ, ಅಪಘಾತ, ದುರಂತ..

ಮನೆಗೆ ಬೆಂಕಿ ಹಚ್ಚಿ ದಂಪತಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಇಂದು ಹುಬ್ಬಳ್ಳಿಯ KIMS ಆಸ್ಪತ್ರೆಯಲ್ಲಿ ಪತಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ಫೆ.10ರಂದು ನಡೆದಿದ್ದ ಘಟನೆ ಬಳಿಕ ಫೆ.12ರಂದು ಚಿಕಿತ್ಸೆ ಫಲಿಸದೆ ಪತ್ನಿ ರೇಖಾ ಮೃತಪಟ್ಟಿದ್ದರು. ಇದೀಗ, ಇಂದು ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಆಕೆಯ ಪತಿಯೂ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರೆಲ್ಲರೂ ಜಾತ್ರೆಗೆ ತೆರಳಿದ್ದ ವೇಳೆ ದಂಪತಿ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ …

Read More »

ಮಹಿಳೆಗೆ ಮೈದುನನ್ನು ಹೆಗಲ ಮೇಲೆ ಹೊತ್ತು 3 ಕಿ.ಮೀ. ನಡೆಯುವ ಶಿಕ್ಷೆ: ವೀಡಿಯೋ ವೈರಲ್!

ಕ್ಷುಲಕ ಕಾರಣಕ್ಕಾಗಿ ಮಹಿಳೆಯೊಬ್ಬರಿಗೆ ಮೈದುನನ್ನು ಬಲವಂತವಾಗಿ ಹೆಗಲ ಮೇಲೆ ಹೊರಿಸಿ ಕನಿಷ್ಠ 3 ಕಿ.ಮೀ. ನಡೆಸಿಕೊಂಡು ಹೋಗುವ ಘೋರ ಶಿಕ್ಷೆ ವಿಧಿಸಿದ ಅಮಾನುಷ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಮಹಿಳೆಯನ್ನು ಕೋಲು-ದೊಣ್ಣೆ ಹಿಡಿದ ಯುವಕರು ಗುಂಪು ಬೆದರಿಕೆ ಹಾಕುತ್ತಾ ಮಹಿಳೆಯನ್ನು ನಡೆಸಿಕೊಂಡು ಹೋಗುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಹಿಳೆ ನಡೆದುಕೊಂಡು ಹೋಗುತ್ತಿದ್ದರೆ ಯುವಕರು ಗೇಲಿ ಮಾಡಿ ನಗುತ್ತಿದ್ದು, ಇನ್ನು …

Read More »

ಟೂಲ್‌ಕಿಟ್‌ ಹಗರಣ ಬಯಲಾಗುತ್ತಿದ್ದಂತೆಯೇ ಹೆಚ್ಚಾಯ್ತು ‘ಮೋದಿಗೋಬ್ಯಾಕ್‌’ ಟ್ರೆಂಡ್‌- ಸಂಕಷ್ಟದಲ್ಲಿ ನಟಿ

ಚೆನ್ನೈ: ಭಾರತದ ವಿರುದ್ಧ ಮಹಾ ಷಡ್ಯಂತ್ರ ರಚಿಸಿರುವ ‘ಟೂಲ್‌ಕಿಟ್‌’ ಹಗರಣ ಬಯಲಾಗುತ್ತಿದ್ದಂತೆಯೇ, ಇತ್ತ ಮೋದಿಗೋಬ್ಯಾಕ್‌ ಟ್ರೆಂಡ್‌ ಮತ್ತೆ ಶುರುವಾಗಿದೆ. ರೈತರ ಪ್ರತಿಭಟನೆಯನ್ನು ನೆಪ ಮಾಡಿಕೊಂಡು ಭಾರತದ ವಿರುದ್ಧ ಮಹಾ ಸಮರ ಸಾರಿರುವ ಕೆಲವು ಕಿಡಿಗೇಡಿಗಳ ಕೃತ್ಯ ಒಂದೊಂದಾಗಿ ಹೊರಕ್ಕೆ ಬರುತ್ತಿದ್ದಂತೆಯೇ ಇತ್ತ ಮೋದಿಗೋಬ್ಯಾಕ್‌ ಎಂದು ಹಲವರು ಟ್ವೀಟ್‌ ಶುರು ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮಿಳುನಾಡಿಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಈ ಹ್ಯಾಷ್‌ಟ್ಯಾಗ್‌ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, …

Read More »

ವರ್ತೂರು ಪ್ರಕಾಶ್ ಕಾಂಗ್ರೆಸ್ ಸೇರಲು ಸಿದ್ಧತೆ

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದು, ಈಗಾಗಲೇ ಮುಖಂಡರ ಜೊತೆ ಮಾತುಕತೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಏನು ಹೇಳಿದರೂ ಮಾಡಲು ಸಿದ್ಧ. ಸಿದ್ದರಾಮಯ್ಯ ಹೋಗುವ ದಾರಿಯಲ್ಲಿ ನಾನು ಹೋಗುತ್ತೇನೆ. ಅವರು ಮಿಸಲಾತಿ ಹೋರಾಟಕ್ಕೆ ಹೋಗಿಲ್ಲ, ನಾನೂ ಕೂಡ ಹೋಗಿಲ್ಲ. ಸಿದ್ದರಾಮಯ್ಯ ಕೋಲಾರದಿಂದಲೇ ಅಹಿಂದ ಸಮಾವೇಶ ಆರಂಭಿಸಲಿ. ನಾನೇ 2 ಲಕ್ಷ ಜನರನ್ನು ಸೇರಿಸುತ್ತೇನೆ. ನಾನು …

Read More »

ಸರ್ಕಾರದ ವೈಫಲ್ಯ ಖಂಡಿಸಿ 18 ಕ್ಕೆ ಬೆಳಿಗ್ಗೆ 11 ಗಂಟೆಗೆ ಕಿತ್ತೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ

ಕಿತ್ತೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ, ತೈಲ, ಗ್ಯಾಸ್ ಬೆಲೆ ಹೆಚ್ಚಿಸಿರುವ ಸರ್ಕಾರದ ವೈಫಲ್ಯ ಖಂಡಿಸಿ ಫೆ. 18 ಕ್ಕೆ ಬೆಳಿಗ್ಗೆ 11 ಗಂಟೆಗೆ ಕಿತ್ತೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನವಲಗಟ್ಟಿ ತಿಳಿಸಿದ್ದಾರೆ. ಪಟ್ಟಣದ ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಲ್ಲಿಯ ಚನ್ನಮ್ಮಾಜಿಯ ವೃತ್ತದಿಂದ ತಹಶೀಲ್ದಾರ …

Read More »

ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಇಲ್ಲಿಗೆ ಸಮೀಪದ ರಾಜಾಪೂರ ಗ್ರಾಮದಲ್ಲಿ 8.17 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ …

Read More »

ರಮೇಶ ಜಾರಕಿಹೊಳಿ ಇನ್ನೂ ಬಿಜೆಪಿಯಲ್ಲಿ ಸೆಟ್ಲ್ ಆದಂತಿಲ್ಲ. ಎರಡೂ ದೋಣಿಯಲ್ಲಿ ಕಾಲಿಟ್ಟಿರುವಂತಿದೆ: ಹೆಬ್ಬಾಳಕರ್

ಬೆಳಗಾವಿ – ಸಿದ್ದರಾಮಯ್ಯ ಇಂದಿಗೂ ನಮ್ಮ ನಾಯಕರು, ದಿನಕ್ಕೆರಡು ಬಾರಿ ಅವರೊಂದಿಗೆ ಮಾತನಾಡುತ್ತೇನೆ ಎನ್ನುವ ಸಚಿವ ರಮೇಶ ಜಾರಕಿಹೊಳಿ ಇನ್ನೂ ಬಿಜೆಪಿಯಲ್ಲಿ ಸೆಟ್ಲ್ ಆದಂತಿಲ್ಲ. ಎರಡೂ ದೋಣಿಯಲ್ಲಿ ಕಾಲಿಟ್ಟಿರುವಂತಿದೆ ಎಂದು ಕೆಪಿಸಿಸಿ ವಕ್ತಾರರೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಟಾಂಗ್ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಮೇಶ ಜಾರಕಿಹೊಳಿ, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಉನ್ನತ ನಾಯಕರು ಇಂದಿಗೂ ತಮ್ಮ ಸಂಪರ್ಕದಲ್ಲಿದ್ದಾರೆ. ಸಿದ್ದರಾಮಯ್ಯ ಜೊತೆ ದಿನಕ್ಕೆರಡು ಬಾರಿ ಮಾತನಾಡುತ್ತೇನೆ …

Read More »

ಹಾವು-ಚೇಳುಗಳು ಯಡಿಯೂರಪ್ಪನವರ ಕುಟುಂಬದಲ್ಲೇ ಇದ್ದಾರೆ’: ಯತ್ನಾಳ್ ತಿರುಗೇಟು

ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ಹರಿಹಾಯ್ದಿದ್ದಾರೆ. ಹಾವು-ಚೇಳುಗಳನ್ನು ಎದುರಿಸಿ ನಮ್ಮ ತಂದೆ ಬಂದಿದ್ದಾರೆ ಎಂದು ಸಿಎಂ ಪುತ್ರ ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಸಿಎಂ ಕುರ್ಚಿಗೆ ಹೈಕಮಾಂಡ್ ನಿಂದ ಕುತ್ತು ಬಂದಾಗಲೆಲ್ಲಾ ರಾಜಕೀಯ ಸ್ಥಿರತೆಗೆ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಬಳಸಿಕೊಳ್ಳುತ್ತಾರೆ. ಅವರ ಉದ್ದೇಶ ಪಂಚಮಸಾಲಿ ಲಿಂಗಾಯತರಿಗೆ ಅವಕಾಶ ನೀಡುವುದಲ್ಲ, …

Read More »

ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಯಡಿಯೂರಪ್ಪ ಕುಟುಂಬದ ಸರ್ಕಾರ: ಎಚ್ ಡಿಕೆ

ಶಿವಮೊಗ್ಗ: ಕರ್ನಾಟಕದಲ್ಲಿರುವುದು ಬಿಜೆಪಿ ಸರ್ಕಾರವಲ್ಲ. ಬಿ.ಎಸ್. ಯಡಿಯೂರಪ್ಪನವರ ಕುಟುಂಬದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಜೆಟ್ ನ ಕಾರ್ಯಕ್ರಮಗಳನ್ನು ವಿಭಜಿಸಿ ಶಿವಮೊಗ್ಗದ ನಗರದ ಅಭಿವೃದ್ದಿಗೆ ನೀಡಲಾಗಿತ್ತು. ನಾನು ಶಿವಮೊಗ್ಗದ ಕೆಲ ಪ್ರದೇಶಗಳನ್ನ ನೋಡಿದ್ದೇನೆ. ಅವುಗಳ ಅಭಿವೃದ್ಧಿ ಆಗಿಲ್ಲ. ಎರಡು ವರ್ಷದ ಬಜೆಟ್ ಹಣ ಎಲ್ಲಿ ಹೋಯಿತು. ರಾಜ್ಯದ ಜನರು ಕಟ್ಟುವ ತೆರಿಗೆ ಹಣ ದುರ್ಬಳಿಕೆ ಆಗುತ್ತಿದೆ ಎಂದರು. ರಾಜ್ಯದ ರಾಜಕಾರಣದಲ್ಲಿ ದೊಡ್ಡಮಟ್ಟದಲ್ಲಿ …

Read More »