ಶಿರಸಿ: ಶ್ರೀಗಂಧ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಶಿರಸಿಯ ಹುಲೇಕಲ್ ವಲಯದ ಅರಣ್ಯ ಅಧಿಕಾರಿಗಳು ಮಾಲು ಸಮೇತವಾಗಿ ಬಂಧಿಸಿದ್ದಾರೆ. ಮನಜವಳ್ಳಿಯ ಕೃಷ್ಣ ಗೌಡ ಬಂಧಿತ ಆರೊಪಿ. ಬಂಧಿತನಿಂದ 12. ಕೆ.ಜಿ. ತೂಕದ ಶ್ರೀಗಂಧ ಹಾಗೂ ಕೃತ್ಯಕ್ಕೆ ಬಳಸಲಾದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿರಸಿ ತಾಲೂಕಿನ ಹುಲೆಕಲ್ ವಲಯದ ಶೀಗೆಹಳ್ಳಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಈತ ಶ್ರೀಗಂಧವನ್ನು ಕಳ್ಳತನ ಮಾಡುತ್ತಿದ್ದ. ಗ್ರಾಮಸ್ಥರು ಹಾಗೂ ಗ್ರಾಮ ಅರಣ್ಯ ಸಮೀತಿಯ ಖಚಿತ ಮಾಹಿತಿ ಮೇರೆಗೆ ಅರಣ್ಯ …
Read More »Monthly Archives: ಫೆಬ್ರವರಿ 2021
ಬೆಳಗಾವಿಯಲ್ಲಿ ಹೈಟೆಕ್ ಐಟಿ, ಬಿಟಿ ಪಾರ್ಕ್ ..?
ಬೆಳಗಾವಿ: ಬೆಳಗಾವಿಯಲ್ಲಿ ಹೈಟೆಕ್ ಐಟಿ, ಬಿಟಿ ಪಾರ್ಕ್ ನಿರ್ಮಿಸಲು ಸಂಕಲ್ಪ ಮಾಡಿರುವ ಶಾಸಕ ಅಭಯ ಪಾಟೀಲ ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಬೆಳಗಾವಿಯ ರಕ್ಷಣಾ ಇಲಾಖೆಗೆ ಸೇರಿದ ಜಮೀನನ್ನು ಐಟಿ, ಬಿಟಿ ಪಾರ್ಕ್ ನಿರ್ಮಾಣಕ್ಕೆ ಹಸ್ತಾಂತರ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಐಟಿ,ಬಿಟಿ ಸಚಿವ ಅಶ್ವಥ್ ನಾರಾಯಣ ಮತ್ತು ಶಾಸಕ ಅಭಯ ಪಾಟೀಲ ಅವರು ಇಂದು ದೆಹಲಿಯಲ್ಲಿ ಭೇಟಿಯಾಗಿ, ಬೆಳಗಾವಿ …
Read More »ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಪರವಾನಗಿಗೆ ಸಲ್ಲಿಸಿದ ಅರ್ಜಿಗಳನ್ನು ಆಯಾ ತಿಂಗಳಲ್ಲೇ ಪರಿಶೀಲನೆ
ಹುಬ್ಬಳ್ಳಿ: ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಪರವಾನಗಿಗೆ ಸಲ್ಲಿಸಿದ ಅರ್ಜಿಗಳನ್ನು ಆಯಾ ತಿಂಗಳಲ್ಲೇ ಪರಿಶೀಲನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳು ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು ‘ಮೊದಲು ಎರಡ್ಮೂರು ತಿಂಗಳಿಗೊಮ್ಮೆ ಅರ್ಜಿಗಳ ಪರಿಶೀಲನೆ ನಡೆಯುತ್ತಿತ್ತು. ಈಗ ಪ್ರತಿ ತಿಂಗಳು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ …
Read More »‘ಮುಜುಗರ ತಪ್ಪಿಸಿಕೊಳ್ಳಲು ಆರ್‌ಎಸ್‌ಎಸ್ ಹೆಸರು ಹೇಳುತ್ತಿರುವ ಸಿದ್ದರಾಮಯ್ಯ’
ಹುಬ್ಬಳ್ಳಿ: ತಮ್ಮ ನಾಯಕತ್ವಕ್ಕೆ ಎದುರಾಗಿರುವ ಸಂಕಷ್ಟದಿಂದ ತಪ್ಪಿಸಿಕೊಳ್ಳಲು ಕುರುಬ ಸಮಾಜದ ಹೋರಾಟದ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವಿದೆಯೆಂದು ಸಿದ್ದರಾಮಯ್ಯನವರು ಹೇಳುತ್ತಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ್ ತಿರುಗೇಟು ನೀಡಿದರು. ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳು ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೂ ಮೊದಲು ಶನಿವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯ ಅವರಿಗೆ ಅಭದ್ರತೆ ಕಾಡುತ್ತಿದೆ. ಕುರುಬರ ನಾಯಕ ಎಂದು ಬಿಂಬಿಸಿಕೊಂಡಿದ್ದ ಅವರಿಗೆ ಲಕ್ಷಾಂತರ ಜನ …
Read More »ವಿಚಿತ್ರ ಸಮಸ್ಯೆಯಿಂದ ಬಳಲುತ್ತಿರುವ 11ತಿಂಗಳ ಕಂದ; ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿಗೆ ಪತ್ರ ಬರೆದ ಸಂಸದ
ಬೆಂಗಳೂರು: ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆಯಿಂದ ಬಳಲುತ್ತಿರುವ 11 ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. 11 ತಿಂಗಳ ಮಗು ಜನೀಶ್ ಚಿಕಿತ್ಸೆಗೆ 16 ಕೋಟಿ ರೂ.ಇಂಜಕ್ಷನ್ ಅಗತ್ಯವಿದ್ದು, ಇದನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಿದೆ. ಹೀಗಾಗಿ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯ ನೀಡುವಂತೆ ಮನವಿ ಮಾಡಿದ್ದು, ಔಷಧದ ಮೇಲಿನ ಎಲ್ಲಾ ತೆರಿಗೆಗಳನ್ನು ಮನ್ನಾ ಮಾಡುವ ಮೂಲಕ ಮಗುವಿಗೆ ನೆರವಾಗುವಂತೆ ಪತ್ರದಲ್ಲಿ …
Read More »ಬೆಲೆ ಏರಿಕೆ ಎಫೆಕ್ಟ್ , ಭಾರವಾಯ್ತು ಜನರ ಬದುಕು..!
ಬೆಂಗಳೂರು, ಫೆ.12- ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನಸಿ, ತರಕಾರಿ ಬೆಲೆಗಳ ನಿರಂತರ ಏರಿಕೆಯಿಂದ ಜನರ ಬದುಕು ದುಸ್ತರವಾಗಿದೆ. ಕೊರೊನಾ ಸೋಂಕಿನಿಂದ ಆರ್ಥಿಕವಾಗಿ ಕಂಗೆಟ್ಟು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಜನ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಕೆಲವು ವಾರಗಳಿಂದ ಬೇಳೆಕಾಳು, ಆಹಾರ ಪದಾರ್ಥ, ಹಣ್ಣು-ತರಕಾರಿಗಳ ಬೆಲೆ ಗಗನ ಮುಖಿಯಾಗಿದ್ದು, ಜನ ತತ್ತರಗೊಂಡಿದ್ದಾರೆ. ಕೆಳ ಹಾಗೂ ಮಧ್ಯಮ ವರ್ಗದ ಜನರ ಬದುಕಂತೂ ಹೇಳತೀರದಾಗಿದೆ. ಬೆಲೆ ಏರಿಕೆಗಳ ಹುಚ್ಚಾಟದಿಂದ ಪ್ರತಿದಿನ ಬಡವರ ಪರದಾಟ ಹೆಚ್ಚಾಗಿದೆ. ಪೆಟ್ರೋಲ್, …
Read More »ಜನ್ ಧನ್ ಖಾತೆ ಹೊಂದಿ: ಪಡೆಯಿರಿ 2 ಲಕ್ಷ ರೂ. ಅಪಘಾತ ವಿಮೆ
ನವದೆಹಲಿ: ಅಪಘಾತ ವಿಮೆ ಮಾಡಿಸಬೇಕೆಂದರೆ ನೂರೆಂಟು ತಾಪತ್ರಯ. ವಯಸ್ಸು, ದಾಖಲೆ, ಕಂತು ಹೀಗೆ ಹಲವು ಹಂತಗಳಿರುತ್ತವೆ. ಆದರೆ, ಜನಧನ್ ಖಾತೆ ಹೊಂದಿದ್ದರೆ ಇನ್ನು ಸುಲಭ. ಅದೂ 2 ಲಕ್ಷ ರೂಪಾಯಿ ವಿಮಾ ಸೌಲಭ್ಯ ಸಿಗಲಿದೆ. ಒಂದು ವೇಳೆ ನಿಮ್ಮ ಎಸ್ ಬಿ ಐ ಸಾಮಾನ್ಯ ಖಾತೆಯನ್ನು ಜನ್ ಧನ್ ಖಾತೆಯನ್ನಾಗಿ ಪರಿವರ್ತಿಸಿಕೊಂಡರೂ ಈ ಸೇವೆ ಲಭ್ಯ ಎಂದು ಎಸ್ ಬಿ ಐ ಹೇಳಿದೆ. ಇದಕ್ಕಾಗಿ ನೀವು ಮಾಡಬೇಕಾಗಿದ್ದು ಇಷ್ಟೇ. ಜನ್ ಧನ್ …
Read More »ನಿಮ್ಮಲ್ಲಿರುವ 50, 200 ರೂ. ನೋಟುಗಳು ನಕಲಿ ಇರಬಹುದು ಪರಿಶೀಲಿಸಿಕೊಳ್ಳಿ : ಆರ್ ಬಿ ಐ
ನವ ದೆಹಲಿ : ಸಾರ್ವ ಜನಿಕ ವಲಯದಲ್ಲಿ ಇತ್ತೀಚೆಗೆ 50 ಹಾಗೂ 200 ರೂ.ಗಳ ನಕಲಿ ನೋಟುಗಳು ಭಾರಿ ಪ್ರಮಾಣದಲ್ಲಿ ಹರಿದಾಡುತ್ತಿವೆ ಎಂಬ ಸ್ಫೋಟಕ ಮಾಹಿತಯೊಂದು ಹೊರಬಂದಿದೆ. ನಕಲಿ ನೋಟುಗಳ ಹಾವಳಿ ಹೆಚ್ಚಾಗಿರುವುದರಿಂದ ಆರ್ ಬಿ ಐ ಜನರಿಗೆ ನಕಲಿ ನೋಟುಗಳ ಬಗ್ಗೆ ಅರಿವು ಮೂಡಿಸಲು ಮುಂದಾಗಿದೆ. ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ನಕಲಿ ನೋಟುಗಳ ಬಗ್ಗೆ ಎಚ್ಚರ ವಹಿಸಿ ಎಂದು ಆರ್ ಬಿ ಐ ಸಾರ್ವಜನಿಕರಿಗೆ ಮನವಿ ಮಾಡಿದೆ. ನಮ್ಮಲ್ಲಿರುವ ನೋಟುಗಳು …
Read More »ಲಕ್ಷ್ಮಿ ಹೆಬ್ಬಾಳಕರ ಔಟ್ ಆಫ್ ಮೈಂಡ್ ಆಗಿದ್ದಾರೆ: ರಮೇಶ ಜಾರಕಿಹೊಳಿ ವ್ಯಂಗ್ಯ
ಬೆಳಗಾವಿ: ‘ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಔಟ್ ಆಫ್ ಮೈಂಡ್ ಆಗಿದ್ದಾರೆ. ಹತಾಶರಾಗಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅವರನ್ನು ಬಸ್ ನಿಲ್ದಾಣದಲ್ಲಿ ಹುಡುಕಬೇಕು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಇಲ್ಲಿ ಶನಿವಾರ ವ್ಯಂಗ್ಯವಾಡಿದರು. ‘ಪಕ್ಷ ಸೂಚಿಸಿದರೆ ಮುಂದಿನ ಚುನಾವಣೆಯಲ್ಲಿ ಗೋಕಾಕದಲ್ಲಿ ಸ್ಪರ್ಧಿಸುವೆ’ ಎಂಬ ಲಕ್ಷ್ಮಿ ಹೇಳಿಕೆಗೆ ಸಚಿವರು ಮೇಲಿನಂತೆ ಪ್ರತಿಕ್ರಿಯಿಸಿದರು. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಕೈಗೊಳ್ಳುವ ನಿರ್ಣಯಕ್ಕೆ ಮತ್ತು …
Read More »ಯಡಿಯೂರಪ್ಪ ಮೇಲೆ ಮತ್ತೆ ಹೆಚ್ಚಿದ ಮೀಸಲಾತಿ ಒತ್ತಡ: ಸಭೆ ನಡೆಸಿದ ಲಿಂಗಾಯಿತ ಮಠಾಧೀಶರು, ಒಬಿಸಿ ಸೇರ್ಪಡೆಗೆ ಆಗ್ರಹ
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರುತ್ತಿರುವ ಬೆನ್ನಲ್ಲೇ ಯಡಿಯೂರಪ್ಪ ಪರವಾಗಿ ನಿಂತಿರುವ ಮಠಾಧೀಶರ ಬಣ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತಿರುಗಿಬಿದ್ದಿದೆ. ಈ ಬೆಳವಣಿಗೆ ನಡುವೆ ವಿರಕ್ತ ವೀರಶೈವ ಸಮುದಾಯದ ಎಲ್ಲಾ ಮಠಗಳು ಒಂದೇ ಎಂಬುದನ್ನು ಎತ್ತಿ ತೋರಿಸಲು ನಗರದಲ್ಲಿಂದು ಸಭೆ ನಡೆಸಿದರು. ರಾಷ್ಟ್ರೀಯ ವೀರಶೈವ ಲಿಂಗಾಯಿತ ಮಠಾಧೀಶರ ಒಕ್ಕೂಟದಿಂದ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ …
Read More »