Breaking News

Monthly Archives: ಫೆಬ್ರವರಿ 2021

ಗುಜರಾತ್: ಸ್ಥಳೀಯ ಸಂಸ್ಥೆ ಚುನಾವಣೆ; 31 ಮುಸ್ಲಿಂ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್

ಬರೂಚ್: ಗುಜರಾತ್‌ನ ಬರೂಚ್‌ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಒಟ್ಟು 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮಾರುತಿಸಿನ್ಹಾ ಅಟೊದಾರಿಯಾ ಅವರ ಪ್ರಕಾರ, ಪಕ್ಷ ಇಷ್ಟು ಸಂಖ್ಯೆಯಲ್ಲಿ ಮುಸಲ್ಮಾನರನ್ನು ಚುನಾವಣೆಗೆ ಕಣಕ್ಕಿಳಿಸಿರುವುದು ಇದೇ ಮೊದಲು. ಆದರೆ, ಮುಸಲ್ಮಾನರನ್ನು ಕಣಕ್ಕಿಳಿಸಿರುವುದಕ್ಕೂ, ವಿರೋಧಿ ಪಾಳಯದಲ್ಲಿ ಭಾರತೀಯ ಟ್ರೈಬಲ್ ಪಾರ್ಟಿ (ಬಿಟಿಬಿ) ಮತ್ತು ಅಸಾಸುದ್ದೀನ್ ಒವೈಸಿ ಅವರ ಪಕ್ಷದ ಜೊತೆಗಿನ ಮೈತ್ರಿಗೂ ಸಂಬಂಧವಿಲ್ಲ ಎಂದರು. ಬರೂಚ್ ಜಿಲ್ಲೆಯಲ್ಲಿ ಮುಸಲ್ಮಾನರು …

Read More »

ಸಾರಿಗೆ ನೌಕರರ ಐದು ಬೇಡಿಕೆ ಈಡೇರಿಕೆ: ಸಾರಿಗೆ ಇಲಾಖೆ ಆದೇಶ

ಬೆಂಗಳೂರು: ಆರೋಗ್ಯ ಭಾಗ್ಯ ವಿಮೆ, ಕೋವಿಡ್‌ನಿಂದ ಮೃತಪಟ್ಟ ನೌಕರರಿಗೆ ₹ 30 ಲಕ್ಷ ಪರಿಹಾರ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಐದು ಪ್ರಮುಖ ಬೇಡಿಕೆಗಳನ್ನು ಈಡೇರಿಸಿ ಸಾರಿಗೆ ಇಲಾಖೆ ಬುಧವಾರ ಆದೇಶ ಹೊರಡಿಸಿದೆ. ಸರ್ಕಾರಿ ನೌಕರರಿಗೆ ನೀಡುತ್ತಿರುವ ಆರೋಗ್ಯ ಭಾಗ್ಯ ವಿಮೆ ಸೌಲಭ್ಯವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) …

Read More »

ಲೋಕಾಯುಕ್ತ ವಿಚಾರಣೆಗೆ ಹೈಕೋರ್ಟ್ ಸಮ್ಮತಿ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಸಲ್ಲಿಸುವ ದೋಷಾರೋಪ ಪಟ್ಟಿಗಳು ತಮಗೂ ಲಭ್ಯವಾಗುವಂತೆ ನಿರ್ದೇಶನ ನೀಡಲು ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್‌ ಸಮ್ಮತಿ ಸೂಚಿಸಿದೆ. ಲೋಕಾಯುಕ್ತ ವಕೀಲರ ಮನವಿಗೆ ನ್ಯಾಯಮೂರ್ತಿ ಅರವಿಂದ್‌ಕುಮಾರ್ ನೇತೃತ್ವದ ವಿಭಾಗೀಯ ಪೀಠ ಭಾಗಶಃ ಅವಕಾಶ ನೀಡಿತು. ‘ಕಾನೂನಿನ ಪ್ರಕಾರ ಇರುವ ಅವಕಾಶದಂತೆ ದೋಷಾರೋಪ ಪಟ್ಟಿ ಆಧರಿಸಿ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಮುಂದುವರಿಯಬಹುದು. ದೋಷಾರೋಪ ಪಟ್ಟಿ ಪ್ರತಿಯನ್ನು ಲೋಕಾಯುಕ್ತಕ್ಕೆ ಎಸಿಬಿ ಒದಗಿಸಬೇಕು’ ಎಂದು ತಿಳಿಸಿತು. ‌ ‘ಲೋಕಾಯುಕ್ತ …

Read More »

ದ್ವಿತೀಯ PUC ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: : ದ್ವಿತಿಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಮೇ.24ರಿಂದ ಜೂನ್ 16ರವರೆಗೆ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ನಿಗದಿ ಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಹೀಗಿದೆ.. ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಮೇ 24- ಇತಿಹಾಸ ಮೇ 25- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಮೇ 26- ಭೂಗೋಳ ಶಾಸ್ತ್ರ ಮೇ 27- …

Read More »

ಜೀವನವೆಂಬ ಪರೀಕ್ಷೆಗೆ ಪಠ್ಯವಿಲ್ಲ: ಸುಧಾಮೂರ್ತಿ

ಬೆಂಗಳೂರು: ‘ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಮಾತ್ರಕ್ಕೆ ಎಲ್ಲವೂ ದೊರೆಯುವುದಿಲ್ಲ. ಪ್ರತಿಯೊಬ್ಬರೂ ಜೀವನವೆಂಬ ಪರೀಕ್ಷೆ ಎದುರಿಸಬೇಕಾಗುತ್ತದೆ. ಆದರೆ, ಇಲ್ಲಿ ನಿರ್ದಿಷ್ಟ ಪಠ್ಯ ಇರದ ಕಾರಣ ನಮಗೆ ಎದುರಾಗುವ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಾ ಸಾಗಬೇಕಿದೆ’ ಎಂದು ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ತಿಳಿಸಿದರು. ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು 75ನೇ ಬ್ಯಾಚ್‌ನ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ವೇದಿಕೆಯಲ್ಲಿ ಶುಕ್ರವಾರ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಅಡೆತಡೆಗಳು, ಸವಾಲುಗಳು ಎಲ್ಲರ ಜೀವನದಲ್ಲಿಯೂ ಇರುತ್ತವೆ. ಅದನ್ನು …

Read More »

ಸ್ಪರ್ಧೆಗೆ ಸಿದ್ದ ಎಂದ ಲಕ್ಷ್ಮಿ ಹೆಬ್ಬಾಳಕರ್,ಮೋಸ್ಟ್ ವೆಲ್ ಕಂ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರ ಹಸ್ತಕ್ಷೇಪ ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಗೆ ಗಂಭೀರ ಎಚ್ಚರಿಕೆ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ನಾನೂ ಗೋಕಾಕ ಕ್ಷೇತ್ರದತ್ತ ಹೋಗಬೇಕಾಗುತ್ತದೆ. ಪಕ್ಷ ಬಯಸಿದರೆ ಗೋಕಾಕದಿಂದ ಚುನಾವಣೆಗೆ ಸ್ಪರ್ಧಿಸಲೂ ಸಿದ್ಧ ಎಂದು ಸವಾಲೆಸೆದಿದ್ದಾರೆ ಇದಕ್ಕೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು ಲಕ್ಷ್ಮಿ ಹೆಬ್ಬಾಳಕರ್ ಗೆ ಮೋಸ್ಟ್ ವೆಲ್ ಕಂ ಎಂದಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಇಬ್ಬರೂ ಪರಸ್ಪರರಿಗೆ ಟಾಂಗ್ …

Read More »

ಕಲ್ಲು ಗಣಿಗಾರಿಕೆ: ಬಿರುಕು ಬಿಟ್ಟ ಮನೆ ಗೋಡೆಗಳು, ಸ್ಫೋಟಕ್ಕೆ ಬೆಚ್ಚಿ ಬೀಳುವ ಜನ

ಶಿರಹಟ್ಟಿ (ಗದಗ ಜಿಲ್ಲೆ): ತಾಲ್ಲೂಕಿನ ಮಾಗಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪರಸಾಪುರ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿದ್ದು, ಮನೆಯ ಗೋಡೆಗಳು ಬಿರುಕು ಬಿಡುತ್ತಿವೆ. ಕೊಳವೆಬಾವಿಗಳು ಕುಸಿಯುತ್ತಿದ್ದು ರೈತರಲ್ಲಿ ಆತಂಕ ಹೆಚ್ಚಿಸಿದೆ. ಈ ಭಾಗದಲ್ಲಿ ಬೆಳಿಗ್ಗೆ ಹಾಗೂ ರಾತ್ರಿ ವೇಳೆ ನಡೆಸುವ ಸ್ಫೋಟಕದ ಶಬ್ದಕ್ಕೆ ಮಕ್ಕಳು ಮತ್ತು ವೃದ್ಧರು ಬೆಚ್ಚಿ ಬೀಳುವಂತಾಗಿದೆ. ಆದರೂ, ಸಂಬಂಧಪಟ್ಟ ಅಧಿಕಾರಿ ವರ್ಗ ಕ್ರಮ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ‘ಅಳತೆಗೂ ನಿಲುಕದಷ್ಟು …

Read More »

ಜನಪ್ರತಿನಿಧಿಗಳ ಜತೆ ಸಂವಹನ ಇರಲಿ: ಗದಗ ಜಿ.ಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ಸೂಚನೆ

ಗದಗ: ‘ಎಲ್ಲ ಇಲಾಖೆಗಳ ಅಧಿಕಾರಿಗಳು ಸರ್ಕಾರ ನೀಡುವ ಆದೇಶಗಳು, ನೂತನ ಯೋಜನೆಗಳ ಮಾಹಿತಿ ಹಾಗೂ ಅನುದಾನದ ವಿವರಗಳನ್ನು ಸಂಬಂಧಿಸಿದ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ಈ ಮೂಲಕ ಉತ್ತಮ ಆಡಳಿತಕ್ಕೆ ಸಹಕರಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಈರಪ್ಪ ನಾಡಗೌಡ್ರ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯ ಆರಂಭದಲ್ಲಿ ಡಿಎಚ್‌ಒ ಡಾ.ಸತೀಶ ಬಸರಿಗಿಡದ ಮಾತನಾಡಿ, ‘ಆಂಬುಲೆನ್ಸ್‌ ಖರೀದಿ ಸಲುವಾಗಿ ಸರ್ಕಾರಕ್ಕೆ …

Read More »

ರಸ್ತೆ ಬದಿ ಮತ್ತು ಮನೆ ಬಳಿ ನೀವು ವಾಹನ ನಿಲ್ಲಿಸಲು ಶುಲ್ಕ ಪಾವತಿಸಬೇಕಾಗುವ ದಿನಗಳು ಸಮೀಪದಲ್ಲಿವೆ.

ಬೆಂಗಳೂರು: ಪ್ರತಿಯೊಂದಕ್ಕೂ ದುಪ್ಪಟ್ಟು ತೆರಿಗೆ, ದಂಡ, ಶುಲ್ಕ ಕಟ್ಟಿ ಹೈರಾಣಾಗಿರುವ ಬೆಂಗಳೂರಿನ ಜನರಿಗೆ ಈಗ ಮತ್ತೊಂದು ಶಾಕಿಂಗ್ ಸುದ್ದಿ ಕಾದಿದೆ. ರಸ್ತೆ ಬದಿ ಮತ್ತು ಮನೆ ಬಳಿ ನೀವು ವಾಹನ ನಿಲ್ಲಿಸಲು ಶುಲ್ಕ ಪಾವತಿಸಬೇಕಾಗುವ ದಿನಗಳು ಸಮೀಪದಲ್ಲಿವೆ. ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ರೂಪಿಸಿರುವ ನೂತನ ಪಾರ್ಕಿಂಗ್ ನೀತಿಯಲ್ಲಿ ಹಲವು ಅಂಶಗಳನ್ನ ಶಿಫಾರಸು ಮಾಡಲಾಗಿದೆ. ರಾಜ್ಯ ಸರ್ಕಾರದ ನಗರ ಅಭಿವೃದ್ಧಿ ಇಲಾಖೆಯು ಈ ಹೊಸ ನೀತಿಯ ಕರಡನ್ನ ಅಂಗೀಕರಿಸಿದೆ. …

Read More »

ಮೀಸಲಾತಿ ಹೋರಾಟ ಎತ್ತಸಾಗಿದೆ ಎಂದ ಹೈಕೋರ್ಟ್ ವಕೀಲ ಎಸ್.ವಿ.ಎಸ್

ಬೆಂಗಳೂರು: ಇತ್ತೀಚೆಗೆ ಸಮಾಜದಲ್ಲಿ ಜಾತಿ ಜಾತಿಗಳಿಗೂ ಮೀಸಲಾತಿ ನೀಡಬೇಕೆಂದು ಸಮಾಜವನ್ನು ಮಾರ್ಗದರ್ಶನ ಮಾಡುವ ಸ್ವಾಮೀಜಿಗಳು ಹೋರಾಟಕ್ಕೆ ಇಳಿದಿರುವುದು ಬಹು ಚರ್ಚಿತ ಅಂಶವಾಗಿದೆ. ಧರ್ಮದ ಅನುಯಾಯಿಗಳಾದ ಪೂಜ್ಯರುಗಳೇ ಈ ರೀತಿಯ ಹಾದಿಯಲ್ಲಿ ಹೊರಟಿರುವುದು ಬೇಸರತರಿಸಿದೆ ಎಂದು ಹೈಕೋರ್ಟ್ ವಕೀಲ ಎಸ್.ವಿ.ಶ್ರೀನಿವಾಸ್ ಕಳವಳ ವ್ಯಕ್ತಪಡಿಸಿದ್ದಾರೆ. ಸನ್ಯಾಸತ್ವದ ಮೂಲತ್ವವೇ ಸರ್ವಸಂಘ ಪರಿತ್ಯಾಗ ಎಂಬ ಅರ್ಥವನ್ನು ವೇದಗಳ ಕಾಲದಿಂದಲೂ ಅಳವಡಿಕೆಯಾಗಿದೆ. ಧರ್ಮದ ತಳಹದಿಯೇ ಜಾತಿ. ಈ ಜಾತಿ ಜಾತಿಗಳ ಸಮಷ್ಟಿಯೇ ಧರ್ಮ. ಆದರೆ ಈ ಜಾತಿ …

Read More »