Breaking News

Monthly Archives: ಫೆಬ್ರವರಿ 2021

ಪೆಟ್ರೋಲ್ ದರದಲ್ಲಿ ಇಂದೂ ಕೂಡ ಹೆಚ್ಚಳ

ಬೆಂಗಳೂರು: ಪೆಟ್ರೋಲ್ ದರದಲ್ಲಿ ಇಂದೂ ಕೂಡ ಹೆಚ್ಚಳವಾಗಿದ್ದು, ಪೆಟ್ರೋಲ್ ದರ ಲೀಟರ್ ಗೆ 70 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 27 ಪೈಸೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಪ್ರತಿ ಲೀಟರ್ ಗೆ 90.53 ರೂ ಹಾಗೂ ಡೀಸೆಲ್ ಲೀಟರ್ ಗೆ 82.40 ರೂ ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 87.60 ಹಾಗೂ ಡೀಸೆಲ್ 77.73 ರೂ ಆಗಿದೆ. ಮುಂಬೈ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ …

Read More »

ಬೆಲೆ ಏರಿಕೆ ಖಂಡಿಸಿ ಅಕ್ಕಿ ಮುಕ್ಕಿ ಪ್ರತಿಭಟನೆ

ಮಂಡ್ಯ: ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಆಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಅಕ್ಕಿ ಮುಕ್ಕುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ ಗಮನ ಸೆಳೆದರು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಒಂದು ಕೈಯಲ್ಲಿ ಅಕ್ಕಿ ಮತ್ತು ಮತ್ತೊಂದು ಕೈಯಲ್ಲಿ ನೀರಿನ ಬಾಟಲಿಯಿಂದ ನೀರು ಕುಡಿದು …

Read More »

ಎಲ್ಲಾ ಉದ್ಯೋಗಿಗಳಿಗೆ ವಾರಕ್ಕೆ ನಾಲ್ಕು ದಿನಗಳ ಕೆಲಸ ಮತ್ತು ಮೂರು ದಿನಗಳ ವೇತನ ಸಹಿತ ರಜೆ‌ ?

ಹೊಸದಿಲ್ಲಿ, ಫೆಬ್ರವರಿ10: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹೊಸ ಕಾರ್ಮಿಕ ಸಂಹಿತೆಗಳನ್ನು ಹೊರತರುವ ನಿರೀಕ್ಷೆಯಿದೆ. ಇದು ಕಂಪೆನಿಗಳಿಗೆ ವಾರದಲ್ಲಿ ನಾಲ್ಕು ಕೆಲಸದ ದಿನಗಳ ಜೊತೆಗೆ ರಾಜ್ಯ ವಿಮೆಯ ಮೂಲಕ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆಗಳನ್ನು ಒದಗಿಸುತ್ತದೆ. ಆದರೆ, ವಾರದಲ್ಲಿ 48 ಗಂಟೆಗಳ ಕಾಲ ಕೆಲಸದ ಅವಧಿಯನ್ನು ಒದಗಿಸುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಕಾರ್ಯದರ್ಶಿ ಅಪೂರ್ವಾ ಚಂದ್ರ ಅವರು, ದಿನಕ್ಕೆ 12 ಗಂಟೆಗಳ ಕೆಲಸದ ಅವಧಿ ಮತ್ತು ಮೂರು ದಿನಗಳ …

Read More »

ಸರ್ಕಾರಿ ನೌಕರರಿಗೆ ಇಲ್ಲಿದೆ ಶುಭ ಸುದ್ದಿ: ಶೇಕಡ 4 ರಷ್ಟು ಡಿಎ ಘೋಷಣೆಗೆ ಮುಂದಾದ ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಇದೇ ತಿಂಗಳಲ್ಲಿ ಸಿಹಿ ಸುದ್ದಿ ಸಿಗುವ ಸಾಧ್ಯತೆಯಿದೆ. ಕೇಂದ್ರದ 50 ಲಕ್ಷ ಉದ್ಯೋಗಿಗಳು ಮತ್ತು 61 ಲಕ್ಷ ಪಿಂಚಣಿದಾರರಿಗೆ ಸರ್ಕಾರ ಉಡುಗೊರೆ ನೀಡಲಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಡಿಎ ಈ ತಿಂಗಳು ಘೋಷಣೆಯಾಗಲಿದೆ. ಡಿಎ ನೀಡುವ ಬಗ್ಗೆ ದೀರ್ಘ ಸಮಯದಿಂದ ಚರ್ಚೆಯಾಗ್ತಿದೆ. ಶೇಕಡ 4 ರಷ್ಟು ಡಿಎ ಹೆಚ್ಚಳವನ್ನು ಕೇಂದ್ರ ಘೋಷಿಸಬಹುದು ಎನ್ನಲಾಗಿದೆ. ಇದು ಕೇಂದ್ರ ನೌಕರರ ವೇತನದ ಮೇಲೆ ನೇರ ಪರಿಣಾಮ ಬೀರಲಿದೆ. …

Read More »

ಭೂಮಾಪನ ಅಧಿಕಾರಿ ಎಸಿಬಿ ಬಲೆಗೆ

ಯಾದಗಿರಿ: ಭೂಮಾಪನ ಇಲಾಖೆಯ ಅಧಿಕಾರಿ ರಘುರಾಮ ಜಮೀನು ಅಳತೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಜೀವ ಚವ್ಹಾಣ ಅವರಿಂದ ₹2 ಸಾವಿರ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ಪಡೆಯ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ನಗರದ ಹೊಸಳ್ಳಿ ಕ್ರಾಸ್‌ ಹೋಟೆಲೊಂದರಲ್ಲಿ ₹2 ಸಾವಿರ ಹಣ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ‘ಜಮೀನು ಅಳತೆ ಮಾಡುವ ವಿಚಾರದಲ್ಲಿ ₹5 ಸಾವಿರ ಬೇಡಿಕೆ ಇಟ್ಟಿದ್ದರು. ಮೊದಲಿಗೆ ₹2 ಸಾವಿರ ಪಡೆಯಲು ಒಪ್ಪಿದ್ದರು. ಆದರಂತೆ ಲಂಚ ಸ್ವೀಕರಿಸುವಾಗ …

Read More »

ಕೋಟಿ ಚೆನ್ನಯರ ಅವಹೇಳನ| ಗರಡಿಯಲ್ಲಿ ಕ್ಷಮೆಯಾಚಿಸಿದ ಜಗದೀಶ್ ಅಧಿಕಾರಿ

ಮೂಡುಬಿದಿರೆ: ಬಿಲ್ಲವರ ಆರಾಧ್ಯ ದೈವಗಳಾದ ಕೋಟಿ ಚೆನ್ನಯರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಮಂಗಳವಾರ ಕೆಲ್ಲಪುತ್ತಿಗೆಯ ಪುರಾತನ ಕ್ಷೇತ್ರ ಭೂತರಾಜಗುಡ್ಡೆಯ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ, ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚಿಸಿದರು. ‘ನನ್ನಿಂದಾದ ತಪ್ಪಿಗೆ ಕೋಟಿ ಚೆನ್ನಯರ ಗರಡಿಯಲ್ಲಿ ಕ್ಷಮೆಯಾಚಿಸಿ, ತಪ್ಪು ಕಾಣಿಕೆ ಸಲ್ಲಿಸಿ ವಿವಾದಗಳಿಗೆ ಇತಿಶ್ರೀ ನೀಡಲು ನಿರ್ಧರಿಸಿದ್ದೇನೆ. ಕಾಂಗ್ರೆಸ್ …

Read More »

ಜಾತ್ರೆ, ಉತ್ಸವಗಳಿಗೆ ನಿರ್ಬಂಧ ತೆರವು

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರೆ, ಉತ್ಸವ, ವಿಶೇಷ ಪೂಜೆ, ಅನ್ನದಾಸೋಹ, ಪ್ರಸಾದ ವಿತರಣೆಗೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಿ ಧಾರ್ಮಿಕ ದತ್ತಿ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ಕೋವಿಡ್‌ ಕಾರಣದಿಂದ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ 2020ರ ಮಾರ್ಚ್‌ 20ರಂದು ಆದೇಶ ಹೊರಡಿಸಲಾಗಿತ್ತು. ಸೆಪ್ಟೆಂಬರ್‌ 1ರಿಂದ ಕೆಲವು ಷರತ್ತಿಗಳೊಂದಿಗೆ ದೇವಾಲಯಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಸೇವೆ ಆರಂಭಿಸಲು ಅವಕಾಶ …

Read More »

ಜಾನುವಾರು ಹತ್ಯೆ ಪ್ರತಿಬಂಧಕ ಮಸೂದೆ ಅಂಗೀಕಾರ ಸರಿಯಾಗಿದೆ: ಸಭಾಪತಿ ರೂಲಿಂಗ್‌

ಬೆಂಗಳೂರು: ಕಾಂಗ್ರೆಸ್‌ ಸದಸ್ಯರ ಧರಣಿ ಮಧ್ಯೆಯೇ, ‘ಧ್ವನಿ ಮತದಿಂದ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಮಸೂದೆಗೆ ನೀಡಿರುವ ಅನುಮೋದನೆ ಸರಿಯಾಗಿದೆ’ ಎಂದು ಸಭಾಪತಿ ಬಸವರಾಜ ಹೊರಟ್ಟಿ ರೂಲಿಂಗ್‌ ನೀಡಿದರು. ಅಲ್ಲದೆ, ಕಾಂಗ್ರೆಸ್‌ ಸದಸ್ಯ ಧಿಕ್ಕಾರ ಘೋಷಣೆಯ ನಡುವೆಯೇ ರಾಜ್ಯಪಾಲರ ಭಾಷಣ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಉತ್ತರ ನೀಡಿದರು. ಆ ಬಳಿಕ, ಕಲಾಪವನ್ನು ಸಭಾಪತಿ ಅನಿರ್ದಿಷ್ಟ ಅವಧಿಗೆ ಮುಂದೂಡಿದರು. …

Read More »

ನರ್ಸಿಂಗ್‌: ಸಿಗದ ಆನ್‌ಲೈನ್‌ ಅರ್ಜಿ, ‘ಸರ್ಕಾರಿ ಕೋಟ’ ವಿದ್ಯಾರ್ಥಿಗಳಿಗೆ ಅನ್ಯಾಯ!

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯು ನರ್ಸಿಂಗ್‌ ಕೋರ್ಸ್‌ಗ ಳಿಗಾಗಿ ‘ಸರ್ಕಾರಿ ಕೋಟಾ’ದಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆದರೆ, ಅರ್ಜಿ ಸಲ್ಲಿಕೆಗೆ ಎರಡೇ ದಿನಗಳು ಬಾಕಿ ಉಳಿದಿದ್ದರೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ (kea.kar.nic.in) ಆನ್‌ಲೈನ್‌ ಅರ್ಜಿ ನಮೂನೆ, ಮಾಹಿತಿ ಪತ್ರ ಸೇರಿ ಯಾವುದೂ ಲಭ್ಯವಿಲ್ಲ! ಇದರಿಂದ ನರ್ಸಿಂಗ್‌ ಕೋರ್ಸ್‌ಗಳಿಗೆ ದಾಖಲಾಗಬೇಕು ಎಂದು ಬಯಸಿರುವ ರಾಜ್ಯದ ಗ್ರಾಮಾಂತರ ಪ್ರದೇಶದ ಸಾವಿರಾರು ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ. ಪರೀಕ್ಷಾ ಪ್ರಾಧಿಕಾರದ ಸಿಬ್ಬಂದಿ ತಮ್ಮ ಅಳಲಿಗೆ ಕಿವಿಗೊಡುತ್ತಿಲ್ಲ …

Read More »

ಕೃಷಿ ಕಾಯ್ದೆ ವಿರುದ್ಧ ನಕಲಿ ರೈತರ ಹೋರಾಟ

ಶಿವಮೊಗ್ಗ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವುದು ನಕಲಿ ರೈತರ ಹೋರಾಟ. ವಿದೇಶಿ ಶಕ್ತಿಗಳ ಕಪಿಮುಷ್ಠಿಯಲ್ಲಿ ರೈತ ಮುಖಂಡರು ಸಿಲುಕಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. ನಿಜವಾದ ರೈತರು ಹೋರಾಟ ನಡೆಸುತ್ತಿಲ್ಲ. ಕೆಲವು ಹಿತಾಸಕ್ತಿಗಳು ರೈತರ ದಾರಿ ತಪ್ಪಿಸುತ್ತಿವೆ. ಕೃಷಿ ಕಾಯ್ದೆಯಿಂದ ರೈತರಿಗೆ ಆಗುವ ಅನುಕೂಲಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ. ರೈತರ ಗೊಂದಲಗಳನ್ನು ನಿವಾರಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಮುಂದುವರಿಸುವ ಭರವಸೆ ನೀಡಿದ್ದಾರೆ …

Read More »