ಮೈಸೂರು (ಫೆ. 10): ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ ಮಾಡುವುದಾಗಿ ಮೈಸೂರಿನ ಸುತ್ತೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ರಾಜ್ಯ ಬಿಜೆಪಿ ಸರ್ಕಾರಗಳು ಮೀಸಲಾತಿ ವಿರುದ್ದ ಇವೆ. ಖಾಸಗೀಕರಣದ ಹೆಸರಿನಲ್ಲಿ ಮೀಸಲಾತಿಯನ್ನು ಕಿತ್ತುಕೊಳ್ಳುತ್ತಿವೆ. ಅಂತಹ ಪರಿಸ್ಥಿತಿ ಬಂದರೆ ಅಹಿಂದ ಪರವಾಗಿ ಹೋರಾಟ ನಡೆಸಲು ಸಿದ್ಧನಿದ್ದೇನೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಕುರುಬರಿರಲಿ ಅಥವಾ ಯಾರೇ ಇರಲಿ ಅವರಿಗೆ ಸಂವಿಧಾನಾತ್ಮಕವಾಗಿ ಮೀಸಲಾತಿ …
Read More »Monthly Archives: ಫೆಬ್ರವರಿ 2021
ಸವದತ್ತಿ ಯಲ್ಲಮ್ಮ ಭಕ್ತರ ದರ್ಶನಕ್ಕೆ ಮುಕ್ತ , ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ.
ಬೆಳಗಾವಿ (ಫೆ. 9); ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ. 11 ತಿಂಗಳ ಬಳಿಕ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಭಕ್ತ ಸಾಗರ ಹರಿದು ಬರುತ್ತಿದೆ. ಪ್ರತಿ ಮಂಗಳವಾರ, ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ. ಪ್ರತಿ ದಿನ ದೇವಿಯ ದರ್ಶನ ಪಡೆಯಲು 20 ಸಾವಿರ ಜನ ಬರುತ್ತಿದ್ದಾರೆ. ಭಕ್ತರನ್ನು ನಿಯಂತ್ರಿಸಲು ಆಡಳಿತ ಮಂಡಳಿ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದೆ. ಬೆಳಗಾವಿ ಜಿಲ್ಲೆಯ …
Read More »ಮತ್ತೆ 10 ದಿನ ಪ್ರಕೃತಿ ಚಿಕಿತ್ಸೆ ಕೇಂದ್ರ ಸೇರಲಿದ್ದಾರೆ ಸಿದ್ದರಾಮಯ್ಯ..!
ಬೆಂಗಳೂರು, ಫೆ.10- ವಿಧಾನ ಮಂಡಲ ಅವೇಶನದ ಬಳಿಕ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅದಕ್ಕೂ ಮೊದಲು ಸದೃಢ ಆರೋಗ್ಯಕ್ಕಾಗಿ 10 ದಿನಗಳ ಕಾಲ ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಇಂದು ಸಂಜೆಯಿಂದ ಎರಡು ದಿನಗಳ ಕಾಲ ಸ್ವಕ್ಷೇತ್ರ ಬಾದಾಮಿಯಲ್ಲಿ ಪ್ರವಾಸ ನಡೆಸಲಿರುವ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅನಂತರ ಫೆ.25ರಿಂದ 10 ದಿನಗಳ ಕಾಲ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ …
Read More »ರಾಜ್ಯ ಸರ್ಕಾರದಿಂದಲೂ ತೆರಿಗೆ ಬರೆ..! ಬಿಎಸ್‌ವೈ ಬಜೆಟ್‌ನಲ್ಲಿ ಕಾದಿದೆ ಶಾಕ್..?
ಬೆಂಗಳೂರು,ಫೆ.10- ಈ ಬಾರಿ ಕೋವಿಡ್-19 ಬಂದ ಹಿನ್ನೆಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ನಿರೀಕ್ಷಿತ ಪ್ರಮಾಣದ ತೆರಿಗೆ ಸಂಗ್ರಹವಾಗದಿರುವ ಕಾರಣ ಈ ಬಾರಿಯ ಬಜೆಟ್‍ನಲ್ಲಿ ತೆರಿಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದೆ. ಮಾರ್ಚ್ ತಿಂಗಳ ಎರಡನೇ ವಾರದಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು ಈಗಾಗಲೇ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಕಳೆದ ವರ್ಷ ಸರ್ಕಾರ ಇಟ್ಟುಕೊಂಡಿದ್ದ ತೆರಿಗೆ ಸಂಗ್ರಹಣೆ …
Read More »ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಬೆಳಗಾವಿ ಹುಕ್ಕೇರಿ ಹಿರೇಮಠದಿಂದ ಗೌರವ
ಹರಿಹರ (ರಾಜನಹಳ್ಳಿ): ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಸಂಘಟಿಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಬೆಳಗಾವಿಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಸ್ವಾಮೀಜಿ ಯವರನ್ನು ಸನ್ಮಾನಿಸಿ ಮಾತನಾಡಿ, “ಬೆಳಗಾವಿ ಹುಕ್ಕೇರಿ ಹಿರೇಮಠ ಎಲ್ಲ ಸಮುದಾಯದೊಂದಿಗೆ ಬೆರೆತು ಕಾರ್ಯವನ್ನು ಮಾಡುತ್ತಿದೆ. ವಾಲ್ಮೀಕಿ ಪೀಠದ ಗುರುಗಳಿಗೆ ಗೌರವಿಸಿದ್ದು ನನಗೆ ಅತೀವ ಸಂತಸ ತಂದಿದೆ” ಎಂದು ಹೇಳಿದರು. ಹುಕ್ಕೇರಿ ಹಿರೇಮಠದ …
Read More »ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು : ಪೊಲೀಸರಿಂದ ಲಾಠಿ ಪ್ರಹಾರ, ಖುರ್ಚಿ, ಸೋಫಾ ಪೀಸ್ ಪೀಸ್
ದಾವಣಗೆರೆ : ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಂಗಳವಾರ ನಟ ಸುದೀಪ ಅವರಿಗೆ ಪ್ರಸನ್ನಾನಂದ ಸ್ವಾಮೀಜಿ ‘ ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು. ಈ ಮೊದಲು ನಟ ಕಿಚ್ಚ ಸುದೀಪ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನ ನೋಡಲು ಹಾಗೂ ಸೆಲ್ಫಿ ತೆಗೆಸಿಕೊಳ್ಳಲು ಜಮಾಯಿಸಿದಾಗ ನೂಕು ನುಗ್ಗಲು ಸಂಭವಿಸಿದೆ. ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಸುದೀಪ್ …
Read More »ಪೊಲೀಸ್ ದಾಳಿಗೆ ಹೆದರಿ ನದಿಗೆ ಹಾರಿದ ಯುವಕರ ಮೃತದೇಹ ಪತ್ತೆ!!
ರಾಮದುರ್ಗ: ಜೂಟಾಟ ವೇಳೆ ಪೊಲೀಸರು ದಾಳಿ ನಡೆಸಿದ ವೇಳೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರ ಮೃತದೇಹ ಪತ್ತೆಯಾಗಿವೆ. ಮಂಜು ಬಂಡಿವಡ್ಡರ್(30), ಸಮೀರ್ ಬಟಕುರ್ಕಿ(22) ಮೃತರು. ಮಲಪ್ರಭಾ ನದಿ ದಡದಲ್ಲಿ ಜೂಜಾಡುತ್ತಿದ್ದ ಯುವಕರ ಗುಂಪಿನ ಮೇಲೆ ರಾಮದುರ್ಗ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬಂಧನ ಭೀತಿಯಿಂದ ಆರು ಜನರು ಮಲಪ್ರಭಾ ನದಿಗೆ ಹಾರಿದ್ದರು. ಈ ವೇಳೆ ನಾಲ್ವರು ಈಜಿ ದಡ ಸೇರಿದ್ರೆ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಬೆಳಗ್ಗೆಯಿಂದ …
Read More »ಮೀಸಲು ಸವಾಲು : ಇನ್ನಷ್ಟು ಜಾತಿಗಳಿಂದ ಮುಖ್ಯಮಂತ್ರಿಗೆ ಹೆಚ್ಚಿದ ಒತ್ತಡ
ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಕೂಗು ಬಲವಾಗಿದೆ. ಕುರುಬ ಮತ್ತು ಪಂಚಮಸಾಲಿ ಜನಾಂಗದವರು ಪಾದಯಾತ್ರೆ ನಡೆಸಿ ಹೋರಾಟ ತೀವ್ರಗೊಳಿಸಿದ್ದಾರೆ. ಇದರ ಮಧ್ಯೆ ಇನ್ನಷ್ಟು ಜಾತಿಗಳು ವಿವಿಧ ಬೇಡಿಕೆಗಳೊಂದಿಗೆ ಹೋರಾಟಕ್ಕಿಳಿಯಲು ಸಜ್ಜಾಗಿವೆ. ಮೀಸಲಾತಿಯು ರಾಜ್ಯ ಸರಕಾರಕ್ಕೆ ಬಿಡಿಸಲಾರದ ಕಗ್ಗಂಟಾಗಿ ಪರಿಣಮಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಯಾರ ಬೇಡಿಕೆ ಏನು? ಪಂಚಮಸಾಲಿ ವೀರಶೈವ ಲಿಂಗಾಯತ ಸಮುದಾಯದ ಒಂದು ಒಳ ಪಂಗಡ. ಸದ್ಯ 3ಬಿ ಪ್ರವರ್ಗದಲ್ಲಿದೆ. ಈಗ 2ಎಗೆ ಸೇರಿಸಿ ಎಂಬುದು ಆಗ್ರಹ. ಸರಕಾರವು ಈ ಬಗ್ಗೆ ಅಧ್ಯಯನ …
Read More »BIG NEWS : ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಮಾರ್ಚ್ 15, 16ರಂದು ‘ಭಾರತದಾದ್ಯಂತ ಬ್ಯಾಂಕ್‌ಗಳ ಮುಷ್ಕರ
ನವದೆಹಲಿ: ಒಂಬತ್ತು ಒಕ್ಕೂಟಗಳ ಒಕ್ಕೂಟವಾದ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಪ್ರಸ್ತಾಪವನ್ನು ವಿರೋಧಿಸಿ ಮಾರ್ಚ್ ನಲ್ಲಿ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. ಮಾರ್ಚ್ 15ರಿಂದ ಎರಡು ದಿನಗಳ ಮುಷ್ಕರ ಆರಂಭಿಸಲಾಗುತ್ತದೆ ಎಂದು ಯುಎಫ್ ಬಿಯು ತಿಳಿಸಿದೆ. ಮಂಗಳವಾರ ನಡೆದ ಯುಎಫ್ ಬಿಯು ಸಭೆಯಲ್ಲಿ ಬ್ಯಾಂಕ್ ಗಳ ಖಾಸಗೀಕರಣದ ಸರ್ಕಾರದ ನಿರ್ಧಾರವನ್ನು ವಿರೋಧಿಸಲು ನಿರ್ಧರಿಸಲಾಗಿದೆ ಎಂದು ಅಖಿಲ ಭಾರತ …
Read More »ಬನ್ನಿ, ಸೈಬರ್ ಸ್ವಯಂ ಸೇವಕರಾಗಿ :ದೇಶದ್ರೋಹಿ ಪೋಸ್ಟ್ ಮೇಲೆ ಕಣ್ಣಿಡಲು ಜನರಿಗೆ ಕೇಂದ್ರ ಕರೆ
ಹೊಸದಿಲ್ಲಿ: ಟ್ವಿಟರ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿನ ದೇಶ ವಿದ್ರೋಹಿ ಪೋಸ್ಟ್‌ಗಳ ಮೇಲೆ ಹದ್ದಿನ ಕಣ್ಣಿಡಲು ಜನರನ್ನೇ ಬಳಸಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ. ಈ ಸಂಬಂಧ “ಸೈಬರ್ ಕ್ರೈಮ್ ಸ್ವಯಂ ಸೇವಕರಾಗಿ ಬನ್ನಿ’ ಎಂದು ಜನರಿಗೆ ಕರೆ ನೀಡಿದೆ. ಇದರಲ್ಲಿ ಸ್ವಯಂ ಸೇವಕರಾಗುವವರು ಮಹಿಳೆಯರು, ಮಕ್ಕಳ ವಿರುದ್ಧದ ಕೆಟ್ಟ ರೀತಿಯ ಪೋಸ್ಟ್‌ಗಳು ಹಾಗೂ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತೆ ಪೋಸ್ಟ್ಗಳ ಬಗ್ಗೆ ಸರಕಾರಕ್ಕೆ ವರದಿ ಮಾಡಬಹುದಾಗಿದೆ. ಕಳೆದ ವಾರವಷ್ಟೇ …
Read More »