ಬೆಳಗಾವಿ : ನಿವೃತ್ತರಾದ ಶಿಕ್ಷಕ ವಸಂತ ಕಟ್ಟಿಯವರ ಬೀಳ್ಕೊಡುಗೆ ಹಾಗೂ ಸತ್ಕಾರ ಸಮಾರಂಭವನ್ನು ರಾಣಿ ಚೆನ್ನಮ್ಮ ನಗರ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಟಿಳಕವಾಡಿ ಕ್ಲಸ್ಟರ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಿತೈಷಿ ಹಾಗೂ ಮಾಜಿ ನಗರಸೇವಕಿ ಶೀಲಾ ದೇಶಪಾಂಡೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಈ ಶಾಲೆಯಿಂದ ಇಬ್ಬರು ಶಿಕ್ಷಕರು ನಿವೃತ್ತಿ ಹೊಂದಿದ್ದಾರೆ. ಈ ವರ್ಷದ ಆರಂಭದಲ್ಲೇ ಕಟ್ಟಿ ಗುರುಗಳು ನಿವೃತ್ತರಾಗಿದ್ದಾರೆ. …
Read More »Monthly Archives: ಫೆಬ್ರವರಿ 2021
ಬೆಂಗಳೂರು ನಗರ ಹೊರತುಪಡಿಸಿ ಬೇರೆ ಜಿಲ್ಲೆಗಳತ್ತ ಗಮನ ಹರಿಸುವಂತೆ ಕೈಗಾರಿಕೋದ್ಯಮಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕರೆ
ಬೆಂಗಳೂರು: ಬೆಂಗಳೂರು ನಗರದಂತೆಯೇ ರಾಜ್ಯದ ಎರಡನೇ ಹಾಗೂ ಮೂರನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ. ನೂತನ ಕೈಗಾರಿಕಾ ನೀತಿಯಲ್ಲಿ ಸಾಕಷ್ಟು ವಿಶೇಷ ಅನುಕೂಲಗಳನ್ನು ಮಾಡಲಾಗಿದ್ದು, ಬೆಂಗಳೂರು ನಗರ ಹೊರತುಪಡಿಸಿ ಬೇರೆ ಜಿಲ್ಲೆಗಳತ್ತ ಗಮನ ಹರಿಸುವಂತೆ ಕೈಗಾರಿಕೋದ್ಯಮಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕರೆ ನೀಡಿದರು. ಇಂದು ಏರೋ ಇಂಡಿಯಾ 2021 ಕಾರ್ಯಕ್ರಮ ದಲ್ಲಿ ಮಾನ್ಯ ಬೃಹತ್ ಮತ್ತು …
Read More »ನಟ-ನಟಿಯರು ಬೀದಿಗಿಳಿದು ರೈತರನ್ನು ಬೆಂಬಲಿಸಿ: ಸಿದ್ದರಾಮಯ್ಯ
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ 71ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿನಿಮಾ ನಟ- ನಟಿಯರು ಕೂಡ ಹೋರಾಟ ನಿರತ ರೈತರನ್ನು ಬೆಂಬಲಿಸುವಂತೆ ಕರೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಸಿಎಂ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ …
Read More »ಉಪ ರಿಜಿಸ್ಟ್ರಾರ್ ಗೆ 70 ಲಕ್ಷ ರೂಪಾಯಿ ವಂಚನೆ ಮಾಡಿ ಪರಾರಿ
ಬೆಂಗಳೂರು: ವಿಧಾನಸೌಧದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡ ದಂಪತಿ, ಸಚಿವರ ಬಳಿ ಹೇಳಿ ಕೆಲಸ ಕೊಡಿಸುವುದಾಗಿ ನಂಬಿಸಿ ರಾಜೀವ್ ಗಾಂಧಿ ಆರೋಗ್ಯ ವಿವಿ ಉಪ ರಿಜಿಸ್ಟ್ರಾರ್ ಗೆ 70 ಲಕ್ಷ ರೂಪಾಯಿ ವಂಚನೆ ಮಾಡಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಂಜುನಾಥ್ ಹಾಗೂ ಲಕ್ಷ್ಮಿಪ್ರಿಯಾ ದಂಪತಿ ವಂಚನೆ ಮಾಡಿರುವ ಆರೋಪಿಗಳು. ವಂಚನೆಗೊಳಗಾದ ಡಾ.ಪ್ರಭಾ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಜುನಾಥ್ ಹಾಗೂ ಲಕ್ಷ್ಮಿಪ್ರಿಯಾ ತಾವು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು …
Read More »k.p.c.c. ಸಾಮಾಜಿಕ ಜಾಲತಾಣ ಮುಖ್ಯಸ್ಥರಾಗಿ ಬಿ.ಆರ್.ನಾಯ್ಡು ನೇಮಕ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರಾಗಿ ಯುವ ಮುಖಂಡ ಬಿ.ಆರ್.ನಾಯ್ಡು ನೇಮಕಗೊಂಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಕರ್ನಾಟಕ ರಾಜ್ಯದ ಸಾಮಾಜಿಕ ಜಾಲತಾಣದ ಜವಾಬ್ದಾರಿಯನ್ನು ಬಿ.ಆರ್.ನಾಯ್ಡು ಅವರಿಗೆ ವಹಿಸಿದ್ದಾರೆ. ಈ ವರೆಗೆ ನಟರಾಜ ಗೌಡ ಈ ಹುದ್ದೆಯನ್ನು ನಿರ್ವಹಿಸುತ್ತಿದ್ದರು. ಇದೀಗ ಇವರನ್ನು ನೇಮಕ ಮಾಡಲಾಗಿದೆ.
Read More »ಸರ್ಕಾರದ ಆದೇಶ ಇಲ್ಲದಿದ್ರೂ ಯಾದಗಿರಿಯಲ್ಲಿ 1-5 ನೇ ತರಗತಿ ಆರಂಭ
ಯಾದಗಿರಿ: ಸರ್ಕಾರದ ಆದೇಶ ಇಲ್ಲದಿದ್ರೂ ಯಾದಗಿರಿಯಲ್ಲಿ ಸದ್ದಿಲ್ಲದೆ 1 ರಿಂದ 5 ನೇ ತರಗತಿ ನಡೆಯುತ್ತಿವೆ. ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಕೆಲ ಖಾಸಗಿ ಶಾಲೆಗಳು ತರಗತಿ ಆರಂಭಿಸಿ, ಮುಗ್ಧ ಮಕ್ಕಳ ಪ್ರಾಣದ ಜೊತೆ ಚೆಲ್ಲಾಟ ಆಡುತ್ತಿವೆ. ಯಾದಗಿರಿ ನಗರದ ಸಪ್ತಗಿರಿ, ನವನಂದಿ, ಆರ್ ವಿ ಸೇರಿದಂತೆ ಬಹುತೇಕ ಖಾಸಗಿ ಶಾಲೆಗಳಲ್ಲಿ ಗಪ್ ಚುಪ್ ಆಗಿ ಕ್ಲಾಸ್ ಆರಂಭವಾಗಿವೆ. ಕ್ಲಾಸ್ ರೂಮ್ ಗಳಲ್ಲಿ ಯಾವುದೇ ಮಕ್ಕಳ ಮಧ್ಯೆ ಸಾಮಾಜಿಕ ಅಂತರ, ಮಾಸ್ಕ್ …
Read More »ಗರ್ಭಿಣಿ ಶ್ವಾನವೊಂದಕ್ಕೆ ಹುಬ್ಬಳ್ಳಿಯಲ್ಲಿ ಸೀಮಂತ ಮಾಡಿ ಪ್ರೀತಿ ತೋರಿದ್ದಾರೆ.
ಹುಬ್ಬಳ್ಳಿ: ಗರ್ಭಿಣಿ ಶ್ವಾನವೊಂದಕ್ಕೆ ಹುಬ್ಬಳ್ಳಿಯಲ್ಲಿ ಕುಟುಂಬಸ್ಥರೆಲ್ಲಾ ಸೇರಿ ಸೀಮಂತ ಮಾಡಿ ಪ್ರೀತಿ ತೋರಿದ್ದಾರೆ.ಸಾಮಾನ್ಯವಾಗಿ ಮೊದಲ ಬಾರಿಗೆ ಗರ್ಭವತಿಯಾದ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಮಾಡುವುದನ್ನು ನೋಡಿದ್ದೇವೆ. ಆದರೆ ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿರುವ ಕುಟುಂಬವೊಂದು ಮನೆಯಲ್ಲಿ ಸಾಕಿದ್ದ ಶ್ವಾನಕ್ಕೆ ಸೀಮಂತ ಕಾರ್ಯಕ್ರಮ ಮಾಡುವ ಮೂಲಕ ಇದೀಗ ಎಲ್ಲರ ಗಮನ ಸೆಳೆದಿದೆ. ಗ್ರಾಮದ ಸಾರಿಗೆ ನೌಕರ ರಮೇಶ್ ಪಡತೇರ್ ಎಂಬವರು ತಮ್ಮ ಮನೆಗೆ ಕಳೆದ ವರ್ಷ ಶ್ವಾನವೊಂದನ್ನು ತಗೆದುಕೊಂಡು ಬಂದಿದ್ದರು. ಅದಕ್ಕೆ ಲೂಸಿ …
Read More »ಅಸೆಂಬ್ಲಿ ನಡೆಸೋದು ಬೇಡ ನಡೀರಿ, ಎಲ್ಲರೂ ಪಿಕ್‍ನಿಕ್‍ಗೆ ಹೋಗೋಣ: ಸಿದ್ದರಾಮಯ್ಯ
ಬೆಂಗಳೂರು: ಕಲಾಪ ನಡೆಸೋದು ಬೇಡ ನಡೀರಿ, ಎಲ್ಲರೂ ಪಿಕ್‍ನಿಕ್‍ಗೆ ಹೋಗೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನಸಭಾ ಕಲಾಪದ ಸಂದರ್ಭದಲ್ಲಿ ಸಚಿವರು ಹಾಗೂ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಗರಂ ಆದ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೀತಿದೆ. ಇಂತಹ ಸಂದರ್ಭದಲ್ಲಿ ಸಚಿವರು, ಅಧಿಕಾರಿಗಳು ಇರಬೇಕು. ಇವರು ಇಲ್ಲದೆ ಚರ್ಚೆ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಹೀಗಂದ ಕೂಡಲೇ ಡಿಸಿಎಂ ಗೋವಿಂದ ಕಾರಜೋಳ ಎದ್ದು ನಿಂತು …
Read More »5 ರೂ. ನೋಟು ಸ್ವೀಕರಿಸಲು ನಿರಕರಿಸಿದ ಕಂಡಕ್ಟರ್ ಗೆ ಒಂದು ಸಾವಿರ ರೂ. ದಂಡ
ಅರಸಿಕೆರೆ – ಪ್ರಯಾಣಿಕರೊಬ್ಬರಿಂದ 5 ರೂ. ನೋಟು ಸ್ವೀಕರಿಸಲು ನಿರಕರಿಸಿದ ಕಂಡಕ್ಟರ್ ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಒಂದು ಸಾವಿರ ರೂ. ದಂಡ ವಿಧಿಸಿದೆ. ಸೋಮಶೇಖರ ಎನ್ನುವವರು ಅರಸಿಕೆರೆಯಿಂದ ತಿಪಟೂರಿಗೆ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. 35 rs. ಟಿಕೆಟ್ ಗೆ 10 ರೂ.ಗಳ 3 ನೋಟು ಮತ್ತು 5 ರೂ.ಗಳಒಂದು ನೋಟನ್ನು ಅವರು ನೀಡಿದರು. ಆದರೆ 5 ರೂ. ನೋಟನ್ನು ನಿರಾಕರಿಸಿದ ಕಂಡಕ್ಟರ್ ಗಲಾಟೆ …
Read More »ದೆಹಲಿ ಹಿಂಸಾಚಾರ: ನ್ಯಾಯಾಂಗ ತನಿಖೆಗೆ ಪೂಜಾರಿ ಒತ್ತಾಯ
ಗೋಕಾಕ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗಳಿಗೆ ರಾಜಕೀಯದ ಬಣ್ಣಕೊಡುತ್ತಿರುವುದು ದುರ್ದೈವದ ಸಂಗತಿ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಯಾವುದೇ ಪ್ರತಿಭಟನೆಗಳಲ್ಲಿ ನಡೆಯುವ ಹಿಂಸಾಕೃತ್ಯಗಳು ಅಕ್ಷಮ್ಯ ಮತ್ತು ಖಂಡನೀಯ. ದೆಹಲಿಯಲ್ಲಿ ಜ.26 ರಂದು ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಕಾಣದ ಕೈಗಳು ದುಷ್ಕೃತ್ಯ ನಡೆಸಿವೆ ಎಂಬ ಅನುಮಾನ ಕಂಡುಬರುತ್ತಿದೆ. …
Read More »