ಬಾಗಲಕೋಟೆ: ಬಾದಾಮಿ ತಾಲೂಕಿನ ಗಣಿ ಸಚಿವ ಮುರುಗೇಶ್ ನಿರಾಣಿ ಕ್ಷೇತ್ರದ ಕಗಲಗೊಂಬ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಾಲಾ ಅಭಿವೃದ್ಧಿ, ಕಾಂಪೌಂಡ್ ನಿರ್ಮಾಣದ ಹೆಸ್ರಲ್ಲಿ ಕಾಮಗಾರಿ ಮಾಡದೇ ಅಧಿಕಾರಿಗಳು, ಗುತ್ತಿಗೆದಾರರು ಬರೋಬ್ಬರಿ 5.98 ಲಕ್ಷ ಬಿಲ್ ಎತ್ತುವಳಿ ಮಾಡಿರುವ ಆರೋಪ ಕೇಳಿಬಂದಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಮತಕ್ಷೇತ್ರದ ಸೂಳಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗಲಗೊಂಬ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯ …
Read More »Monthly Archives: ಫೆಬ್ರವರಿ 2021
ಆರೋಗ್ಯ ಸಿಬ್ಬಂದಿಗಳ ನಿರ್ಲಕ್ಷ್ಯ ಪೋಲಿಯೋ ಲಸಿಕೆ ಬದಲು 12 ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್ ಬಾಯಿಗೆ ಹಾಕಿ ಬಿಟ್ಟಿದ್ದಾರೆ.
ಯಾವತ್ಮಲ್: ದೇಶಾದ್ಯಂತ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಆರಂಭವಾಗಿದ್ದು, ಲಸಿಕೆ ಹಾಕುವ ವೇಳೆ ಆರೋಗ್ಯ ಸಿಬ್ಬಂದಿಯ ಎಡವಟ್ಟಿನಿಂದಾಗಿ ಮಕ್ಕಳಿಗೆ ಸ್ಯಾನಿಟೈಸರ್ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಲ್ಲಿನ ಯಾವತ್ಮಲ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಪೋಲಿಯೋ ಲಸಿಕೆ ಬದಲು 12 ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್ ಬಾಯಿಗೆ ಹಾಕಿ ಬಿಟ್ಟಿದ್ದಾರೆ. ತಕ್ಷಣ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳಿಗೆ ಯಾವುದೇ ಅಪಾಯವಾಗಿಲ್ಲ. ಎಲ್ಲಾ ಮಕ್ಕಳೂ ಆರೋಗ್ಯದಿಂದ ಇದ್ದಾರೆ. ಆದರೆ ಸಿಬ್ಬಂದಿಗಳ ಬೇಜವಾಬ್ದಾರಿ ಹಾಗೂ …
Read More »ಅಪೌಷ್ಟಿಕತೆ ಮುಕ್ತ ಬೆಳಗಾವಿ ಪೋಷಣ ಅಭಿಯಾನ ಯೋಜನೆಯ ಪ್ರಗತಿ ಪರಿಶೀಲನೆ
ಬೆಳಗಾವಿ : ರಾಜ್ಯದಲ್ಲಿ ೨೦೨೦ ಪೋಷಣಾ ಅಭಿಯಾನ ಯೋಜನೆಯಲ್ಲಿ ಬೆಳಗಾವಿ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ ಎಂಬುದು ಹೆಮ್ಮೆಯ ವಿಷಯ. ಅಪೌಷ್ಟಿಕತೆ ಮುಕ್ತ ಬೆಳಗಾವಿ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಮಾಡಿದ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ(ಫೆ.೨) ನಡೆದ ಎಲ್ಲಾ ಶಕ್ತಿ ಕೇಂದ್ರ ಯೋಜನೆ ಟ್ರಾನ್ಸ್ಜೆಂಡರ್ ರವರ ಸಮನ್ವಯ ಮತ್ತು ಉಸ್ತುವಾರಿ ಸಮಿತಿ, ಪ್ರಧಾನ ಮಂತ್ರಿ ಯೋಜನೆ ಹಾಗೂ ಪೋಷಣ ಅಭಿಯಾನ ಯೋಜನೆಯ …
Read More »ಬೆಂಗಳೂರು ತಲುಪಿದ ಕುರುಬರ ಪಾದಯಾತ್ರೆ; ಎಲ್ಲೆಲ್ಲಿ ಟ್ರಾಫಿಕ್ ಜಾಮ್?
ಬೆಂಗಳೂರು(ಫೆ. 03): ಕುರುಬರಿಗೆ ಎಸ್ಟಿ ಮೀಸಲಾತಿ ಸ್ಥಾನಮಾನ ಕಲ್ಪಿಸುವಂತೆ ಒತ್ತಾಯಿಸಿ ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಕುರುಬ ಸಮುದಾಯದವರು ಜನವರಿ 15ರಂದು ಆರಂಭಿಸಿರುವ ಬೃಹತ್ ಪಾದಯಾತ್ರೆ ಇಂದು ಬೆಂಗಳೂರು ನಗರವನ್ನ ಪ್ರವೇಶಿಸಿದೆ. ‘ಎಸ್ಟಿ ನಮ್ಮ ಹಕ್ಕು’ ಹೆಸರಿನಲ್ಲಿ ನಡೆಯುತ್ತಿರುವ ಈ ಪಾದಯಾತ್ರೆ ಬೆಳಗ್ಗೆ 6ಗಂಟೆ ಬಳಿಕ ನಗರಕ್ಕೆ ಅಡಿ ಇಟ್ಟಿತು. ದಾಸರಹಳ್ಳಿ ಶಾಸಕ ಆರ್ ಮಂಜುನಾಥ್ ಅವರು ನಿರಂಜನಾನಂದಪುರಿ ಸ್ವಾಮಿಗಳಿಗೆ ಹೂ, ಹಾರ ಶಾಲು ಹಾಕಿ ಸ್ವಾಗತಿಸಿ ಆಶೀರ್ವಾದ ಪಡೆದರು. ನೆಲಮಂಗಲ …
Read More »ಲೋಹದ ಹಕ್ಕಿಗಳ ಕಲರವಕ್ಕೆ ಕ್ಷಣಗಣನೆ
ಬೆಂಗಳೂರು,ಫೆ.3- ಕೋವಿಡ್ ಭೀತಿಯಲ್ಲೇ ಆರಂಭಗೊಳ್ಳುತ್ತಿರುವ ಅಂತಾರಾಷ್ಟ್ರೀಯ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಯಲಹಂಕ ವಾಯುನೆಲೆಯಲ್ಲಿ ಈಗಾಗಲೇ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರೋ ಇಂಡಿಯಾಗೆ ಅಧಿಕೃತ ಚಾಲನೆ ನೀಡಲಿದ್ದು, ಈ ಬಾರಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಸುಮಾರು 600ಕ್ಕೂ ಹೆಚ್ಚು ಪ್ರದರ್ಶಕರಿದ್ದು, ಇದರಲ್ಲಿ 78 ವಿದೇಶಿ ಕಂಪನಿಗಳಿವೆ. ದೇಶದ ರಕ್ಷಣಾ ಸಂಸ್ಥೆಗಳಾದ ಡಿಆರ್‍ಡಿಒ, ಎಲ್‍ಆರ್‍ಡಿಇ ಇಸ್ರೋ, ಎನ್‍ಎಎಲ್, ಎಚ್‍ಎಎಲ್, ಬಿಎಚ್‍ಇಎಲ್, ಬಿಇಎಲ್ ಸೇರಿದಂತೆ …
Read More »ಒಂದು ರಾತ್ರಿ ಜೊತೆ ಮಲಗು, ಬಿಡುತ್ತೇನೆ: ಫೇಸ್ಬುಕ್ನಲ್ಲಿ ಪರಿಚಯವಾದ ಯುವತಿಗೆ ಟಾರ್ಚರ್
ಬೆಂಗಳೂರು(ಫೆ. 02): ಫೇಸ್ಬುಕ್ನಲ್ಲಿ ಯುವತಿಯ ಪರಿಚಯ ಮಾಡಿಕೊಂಡು ಸಾವಿನ ನಾಟಕವಾಡಿ ಮೊಬೈಲ್ ನಂಬರ್ ಪಡೆದು ಇನ್ನಿಲ್ಲದಂತೆ ಪೀಡಿಸಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಶ್ರವಣ್ ಕುಮಾರ್ ಎಂಬ ಆರೋಪಿಯನ್ನ ಬಂಧಿಸಿದ್ದಾರೆ. ತನ್ನ ಮೇಲೆ ಈತನಿಂದ ಲೈಂಗಿಕ ಹಲ್ಲೆ, ಮಾನಸಿಕ ಕಾಟ ಆಗಿದೆ ಎಂದು ಯುವತಿ ಜನವರಿ 29ರಂದು ನೀಡಿದ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ. ಘಟನೆ ಏನು? ಯುವತಿ ನೀಡಿರುವ ದೂರಿನ …
Read More »ಶೂಟಿಂಗ್ ಶುರುವಾದ ಮೊದಲ ದಿನವೇ ಆದಿಪುರುಷ್ ಸೆಟ್‌ನಲ್ಲಿ ಬೆಂಕಿ ಅವಘಡ
ಪ್ರಭಾಸ್ ನಟನೆಯ ಪೌರಾಣಿಕ ಚಿತ್ರ ಆದಿಪುರುಷ್ ಅಧಿಕೃತವಾಗಿ ಸೆಟ್ಟೇರಿದೆ. ಸಿನಿಮಾ ಆರಂಭವಾದ ಮೊದಲ ದಿನವೇ ಚಿತ್ರಕ್ಕೆ ವಿಘ್ನ ಎದುರಾಗಿದೆ. ಚಿತ್ರದ ಸೆಟ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಮುಂಬೈನ ಗೋರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್‌ನ ಹಿಂಭಾಗದಲ್ಲಿರುವ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾದ ಚಿತ್ರೀಕರಣ ನಡೆಸಲು ಸಿದ್ಧತೆ ನಡೆದಿತ್ತು. ಸೆಟ್‌ನಲ್ಲಿ ಸುಮಾರು ಐವತ್ತರಿಂದ ಅರವತ್ತು ಜನರು ಹಾಜರಿದ್ದರು. ಸಂಜೆ 4: 13ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಬಾಲಿವುಡ್ …
Read More »ರಾಜ್ಯದಲ್ಲಿ ಗಣಿ ವಿಶ್ವವಿದ್ಯಾಲಯ: ಸಚಿವ ಮುರುಗೇಶ ನಿರಾಣಿ
ಬೆಂಗಳೂರು: ‘ಗಣಿಗಾರಿಕೆಯನ್ನು ವೈಜ್ಞಾನಿಕವಾಗಿ ನಡೆಸುವಂತೆ ಸಾಧ್ಯವಾಗಲು ರಾಜ್ಯದಲ್ಲಿ ಗಣಿ ವಿಶ್ವವಿದ್ಯಾಲಯ ಸ್ಥಾಪಿಸುವ ಚಿಂತನೆ ಇದೆ. ಈ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು. ವಿಧಾನ ಪರಿಷತ್‌ನಲ್ಲಿ ಮಂಗಳವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಜಾರ್ಖಂಡ್ ಮಾದರಿಯಲ್ಲಿ ಈ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು’ ಎಂದರು. ‘ಖನಿಜ ಅಭಿವೃದ್ಧಿ ನಿಧಿ ಮತ್ತು ಗಣಿಗಳಿಂದ ಬರುವ ಬಡ್ಡಿ ಹಣವನ್ನು ಬಳಸಿ ಈ …
Read More »ಫೆ. 28ಕ್ಕೆ F.D.A. ಪರೀಕ್ಷೆ…
ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‍ಡಿಎ) ಹುದ್ದೆಯ ಪರೀಕ್ಷೆಯನ್ನು ಫೆ. 28ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ತೀರ್ಮಾನಿಸಿದೆ. ಕೆಪಿಎಸ್‍ಸಿ ಕಚೇರಿಯಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಜ. 24ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪರೀಕ್ಷೆಯ ಹಿಂದಿನ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ, ಪರೀಕ್ಷೆಯನ್ನು ದಿಢೀರ್ ಮುಂದೂಡಲಾಗಿತ್ತು. ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ …
Read More »ಬೆಳಗಾವಿಯಲ್ಲಿ ಸೈನಿಕ ಶಾಲೆ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ ಒತ್ತಾಯ
ಬೆಳಗಾವಿಯಲ್ಲಿ ಸೈನಿಕ ಶಾಲೆ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ ಒತ್ತಾಯ ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ರಾಜನಾಥ ಸಿಂಗ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು. ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ, ಕಿತ್ತೂರು ರಾಣಿ …
Read More »