Breaking News
Home / 2021 / ಮಾರ್ಚ್ / 05 (page 4)

Daily Archives: ಮಾರ್ಚ್ 5, 2021

ಕಮಲ ಹಾಸನ್ ಪಕ್ಷಕ್ಕೆ ಸೇರ್ಪಡೆಗೊಂಡ ಅಬ್ದುಲ್ ಕಲಾಂ ಆಪ್ತ

ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ತಮಿಳುನಾಡು ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಆಡಳಿತರೂಢ ಎಐಎಡಿಎಂಕೆ ಹಾಗೂ ಪ್ರತಿಪಕ್ಷ ಡಿಎಂಕೆ ಚುನಾವಣೆ ತಯಾರಿಯಲ್ಲಿ ತೊಡಗಿದ್ದು, ಸೀಟು ಹಂಚಿಕೆ ಕುರಿತಂತೆ ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿವೆ. ಖ್ಯಾತ ನಟ ಕಮಲಹಾಸನ್ ನೇತೃತ್ವದ ಮಕ್ಕಳ್ ನೀಧಿ ಮಯ್ಯಂ (ಎಂಎನ್‌ಎಂ) ಪಕ್ಷವೂ ಕೂಡ ಚುನಾವಣಾ ಸಿದ್ಧತೆಯಲ್ಲಿ ತೊಡಗಿದ್ದು, ಇದೀಗ ಅವರ ಪಕ್ಷಕ್ಕೆ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಆಪ್ತರೊಬ್ಬರು …

Read More »

ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇಮಕವಾಗುವ ಸಾಧ್ಯತೆ ಇದೆ

ಬೆಳಗಾವಿ(ಮಾ. 5): ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಿಲುಕಿ ರಾಜೀನಾಮೆ ನೀಡಿದ್ದಾರೆ. ಇದೀಗ ಬೆಳಗಾವಿ ಉಸ್ತುವಾರಿ ಹೊಣೆ ಯಾರ ಹೆಗಲು ಏರಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪ್ರಮುಖವಾಗಿ ಜಿಲ್ಲೆಯಲ್ಲಿ ನಾಲ್ವರು ಸಚಿವರು ಇದ್ದರೂ ಇಬ್ಬರು ನಡುವೆ ನೇರ ಪೈಪೋಟಿ ಕಂಡು ಬರುತ್ತಿದೆ. ಅಷ್ಟಕ್ಕೂ ಉಸ್ತುವಾರಿ ಸಚಿವ ಸ್ಥಾನ ಸಿಕ್ಕರೆ ಜಿಲ್ಲಾ ರಾಜಕಾರಣದ ಮೇಲೆ ಹಿಡಿತ ಸಾಧಿಸಲು ಸಾಧ್ಯವಾಗಲಿದೆ ಎಂಬುದು ರಾಜಕೀಯ ಲೆಕ್ಕಾಚಾರ. ರಾಜ್ಯದಲ್ಲಿ ರಾಜಕೀಯ …

Read More »

ಡಿ.ಕೆ. ಶಿವಕುಮಾರ್ ಮತ್ತು ಬಾಲಚಂದ್ರ ಜಾರಕಿಹೊಳಿ ಚರ್ಚೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆಗೆ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ. ಕೆಎಂಎಫ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಅವರ ಸಹೋದರ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ವಿಡಿಯೋ ಬಹಿರಂಗವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇಂದು ವಿಧಾನಸೌಧದ ಮೊಗಸಾಲೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಬಾಲಚಂದ್ರ ಜಾರಕಿಹೊಳಿ ಸಮಾಲೋಚನೆ ನಡೆಸಿದ್ದಾರೆ. ಸಿಡಿ ಬಹಿರಂಗ ಹಿನ್ನೆಲೆಯಲ್ಲಿ ಇವರ ಭೇಟಿ …

Read More »

ಸಚಿವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರು ಯಾರು, ಆ ವ್ಯಕ್ತಿಯನ್ನು ಪತ್ತೆ ಮಾಡಬೇಕೆಂದು ಸರ್ಕಾರ ಸೂಚನೆ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ವಿಚಾರ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿಡಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಸಂತ್ರಸ್ತೆಯ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ, ಇನ್ನೊಂದು ಕಡೆ ಪೊಲೀಸರು ರಮೇಶ್ ಜಾರಕಿಹೊಳಿ ವಿಡಿಯೋ ಹಿಂದೆ ಬಿದ್ದಿದ್ದಾರೆ. ಸಚಿವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟವರು ಯಾರು, ಆ ವ್ಯಕ್ತಿಯನ್ನು ಪತ್ತೆ ಮಾಡಬೇಕೆಂದು ಸರ್ಕಾರ ಸೂಚನೆ ನೀಡಿದೆ. ಸದ್ಯ ವೈರಲ್ ಆಗಿರುವ ವಿಡಿಯೋ ಮೂಲ ಪತ್ತೆಗಾಗಿ ಹುಡುಕಾಟ …

Read More »

ದುಬೈನಲ್ಲಿ 24 ಕೋಟಿ ರೂ. ಲಾಟರಿ ಗೆದ್ದಅದೃಷ್ಟವಂತ!

ದುಬೈ: ಮೆಕ್ಯಾನಿಕಲ್‌ ಎಂಜಿನಿಯರ್‌ ಆಗಿ ಕಳೆದ 15 ವರ್ಷಗಳಿಂದ ದುಬೈನಲ್ಲಿ ನೆಲೆಸಿರುವ ಶಿವಮೊಗ್ಗ ಮೂಲದ ವ್ಯಕ್ತಿ “ಲಕ್ಕಿ ಡ್ರಾ’ ಲಾಟರಿಯಲ್ಲಿ ಬರೋಬ್ಬರಿ 24 ಕೋಟಿ ರೂ. ಗೆದ್ದಿದ್ದಾರೆ! ಶಿವಮೊಗ್ಗ ಜಿಲ್ಲೆಯ ಶಿವಮೂರ್ತಿ ಕೃಷ್ಣಪ್ಪ ಈ ಅದೃಷ್ಟವಂತ. ಇವರ 202511 ನಂಬರಿನ ಲಾಟರಿ ಟಿಕೆಟ್‌ಗೆ ಈ ಬಹುಮಾನ ಸಿಕ್ಕಿದೆ ಎಂದು ಗಲ್ಫ್ ನ್ಯೂಸ್‌ ವರದಿಮಾಡಿದೆ. ಮನೆಯಲ್ಲಿ ಕುಳಿತು ಲಕ್ಕಿ ಡ್ರಾ ಫ‌ಲಿತಾಂಶವನ್ನು ಟಿವಿಯಲ್ಲಿ ವೀಕ್ಷಿಸುತ್ತಿದ್ದ ಶಿವಮೂರ್ತಿ ಅವರಿಗೆ ಇವರ ನಂಬರ್‌ ಆಯ್ಕೆಯಾದಾಗ …

Read More »

ವಿಸ್ಕಿ ಡಿಸ್ಟ್ರಿಬ್ಯೂಟರ್​ವೊಬ್ಬರ ಮೇಲೆ ಹಲ್ಲೆಗೈದು, ಕಿಡ್ನ್ಯಾಪ್ ಮಾಡಲು ಯತ್ನ

ಬೆಂಗಳೂರು: ನಗರದಲ್ಲಿ ವಿಸ್ಕಿ ಡಿಸ್ಟ್ರಿಬ್ಯೂಟರ್​ವೊಬ್ಬರ ಮೇಲೆ ಹಲ್ಲೆಗೈದು, ಕಿಡ್ನ್ಯಾಪ್ ಮಾಡಲು ಯತ್ನಿಸಿರೋ ಘಟನೆ ನಿನ್ನೆ ಸಂಜೆ ನಾಗರಭಾವಿ ಎರಡನೇ ಹಂತದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೋನ್ ಸ್ಟಾಗ್ ವಿಸ್ಕಿ ಡಿಸ್ಟ್ರಿಬ್ಯೂಟರ್ ಅವಿನಾಶ್ ಹಲ್ಲೆಗೊಳಗಾದವರು. ಅವಿನಾಶ್​ರಿಂದ, ಪ್ರವೀಣ್ ಶೆಟ್ಟಿ ಎಂಬುವವರು ₹35 ಲಕ್ಷ ‌ಮೌಲ್ಯದ ಮದ್ಯವನ್ನ ಪಡೆದಿದ್ರು. ಆದ್ರೆ ಕೊರೊನಾ ಶುರುವಾದ ಹಿನ್ನೆಲೆ ವಿಸ್ಕಿ ಡಿಸ್ಟ್ರಿಬ್ಯೂಟ್ ಮಾಡಲಾಗಿಲ್ಲ ಅಂತ ಪ್ರವೀಣ್ ಶೆಟ್ಟಿ ಅವಿನಾಶ್​ಗೆ ಹಣ ನೀಡಿಲ್ಲ ಎನ್ನಲಾಗಿದೆ. ಈ ಹಿನ್ನೆಲೆ …

Read More »

ನಿರ್ದೋಷಿ ರಮೇಶ್​ ಜಾರಕಿಹೊಳಿಯನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಿ: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

ಬೆಂಗಳೂರು: ಅಶ್ಲೀಲ ವಿಡಿಯೋ ಕಾರಣದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವಂತೆ ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿ, ರಮೇಶ್ ಜಾರಕಿಹೊಳಿ ನಿರ್ದೋಷಿಯಾಗಿದ್ರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ ಇಷ್ಟು ತರಾತುರಿಯಲ್ಲಿ ಅವರ ರಾಜಿನಾಮೆ ಅಂಗೀಕರಿಸಬಾರದಿತ್ತು. ಹೀಗಾಗಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ …

Read More »

ದೂರು ನೀಡಿರುವ ದಿನೇಶ್ ಕಲ್ಲಹಳ್ಳಿ 3ನೇ ವ್ಯಕ್ತಿ,ಸಂತ್ರಸ್ತೆ ಅಥವಾ ರಕ್ತ ಸಂಬಂಧಿಗಳು ದೂರು ಸಲ್ಲಿಸದ ಹೊರತು ಪ್ರಕರಣಕ್ಕೆ ಕಾನೂನಾತ್ಮಕವಾಗಿ ಮಾನ್ಯತೆ ಸಿಗುವುದಿಲ್ಲ..?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ  ಸಿಡಿ ವಿವಾದ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಶುಕ್ರವಾರ ಎಫ್​ಐಆರ್ ದಾಖಲಿಸುವ ಸಾಧ್ಯತೆ ಇದೆ. ಆದರೆ ಯಾವ ಸೆಕ್ಷನ್​ಗಳಡಿ ಪ್ರಕರಣ ದಾಖಲಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ದೂರು ನೀಡಿರುವ ದಿನೇಶ್ ಕಲ್ಲಹಳ್ಳಿ 3ನೇ ವ್ಯಕ್ತಿ ಆಗಿದ್ದಾರೆ. ಈತ ಕೊಟ್ಟಿರುವ ದೂರಿನ ಮೇಲೆ ಅಥವಾ ಸಾಮಾಜಿಕ ಜಾಲತಾಣಗಳು ಮತ್ತು ಮಾಧ್ಯಮಗಳಲ್ಲಿ ಬಿತ್ತರವಾಗಿರುವ ಆಶ್ಲೀಲ ದೃಶ್ಯಾವಳಿ ಆಧರಿಸಿ ಎಫ್​ಐಆರ್ ದಾಖಲಿಸಹುದೇ ಎಂಬ ಜಿಜ್ಞಾಸೆ ಪೊಲೀಸ್ ಅಧಿಕಾರಿಗಳಲ್ಲಿ …

Read More »

ಮಗಳನ್ನು ಕತ್ತರಿಸಿ, ರುಂಡ ಸಮೇತ ಸ್ವಯಂ ಪೊಲೀಸರಿಗೆ ಶರಣಾದ ತಂದೆ

ಲಖನೌ: ಉತ್ತರ ಪ್ರದೇಶದ ಹರದೋಯಿ ಜಿಲ್ಲೆಯ ಮಾಜ್ ಹಿಲಾದಲ್ಲಿ ತಂದೆಯೊಬ್ಬ ತನ್ನ 17 ವರ್ಷದ ಮಗಳ ರುಂಡ ಕತ್ತರಿಸಿರುವ ಭಯಾನಕ ಘಟನೆ ನಡೆದಿದೆ. ತರಕಾರಿ ಮಾರಾಟ ಮಾಡುವ ಸರ್ವೇಶ್ ಕುಮಾರ್ ಮಗಳು ಯುವಕನೊಂದಿಗೆ ಸಂಬಂಧ ಹೊಂದಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದ. ನಿನ್ನೆ ಸುಮಾರು ಮೂರು ಗಂಟೆಯ ಹೊತ್ತಿಗೆ ಮಗಳು ಪ್ರಿಯತಮನ ಜತೆಗೆ ಇರುವುದನ್ನು ಕಂಡು ಸಿಟ್ಟುಗೊಂಡಿದ್ದಾನೆ. ಇದರಿಂದ ಆಕ್ರೋಶಗೊಂಡ ಆತ ಹರಿತವಾದ ಚಾಕು ತಂದು ಮಗಳ ತಲೆ ಕತ್ತರಿಸಿದ್ದಾನೆ. ಅಷ್ಟೇ …

Read More »

1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಉತ್ತಿರ್ಣರನ್ನಾಗಿಸುವ ಚಿಂತನೆಯತ್ತ ಶಿಕ್ಷಣ ಇಲಾಖೆ!

ಬೆಂಗಳೂರು : ದೇಶದಲ್ಲಿ ಮತ್ತೆ ಹೇಳುತ್ತಿರುವ ಕೋರೋನ ಎರಡನೇ ಅಲೆ ಭೀತಿ ಕರ್ನಾಟಕ ರಾಜ್ಯಕ್ಕೂ ತಟ್ಟಿದ್ದು, 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ ಲೈನ್ ಕ್ಲಾಸ್ ಪ್ರಾರಂಭಿಸಲು ಹಿಂದೇಟು ಹಾಕುತ್ತಿರುವ ಸರ್ಕಾರ, ಈ ಚಿಕ್ಕ ಮಕ್ಕಳಿಗೆ ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ . ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೊರೋನಾ ಎರಡನೇ ಅಲೆ ತೀವ್ರವಾಗಿದ್ದು , ರಾಜ್ಯದಲ್ಲಿಯೂ ಸೋಂಕು ಹೆಚ್ಚುವ ಆತಂಕ ಸೃಷ್ಟಿಯಾಗಿದ್ದರ …

Read More »