Breaking News
Home / 2021 / ಮಾರ್ಚ್ / 08 (page 2)

Daily Archives: ಮಾರ್ಚ್ 8, 2021

ರಾಜ್ಯದಲ್ಲಿ ಮಹಿಳಾ ಉದ್ಯಮಿಗಳು ಹಾಗೂ 2ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಉತ್ತೇಜನ ನೀಡುವ ಬಜೆಟ್ – ಸಚಿವ ಜಗದೀಶ್‌ ಶೆಟ್ಟರ್‌

ಬೆಂಗಳೂರು : ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರು ಇಂದು 8 ನೇ ಬಾರಿಗೆ ಮಂಡಿಸಿರುವ ಬಜೆಟ್‌ನಲ್ಲಿ ರಾಜ್ಯದ ಮಹಿಳಾ ಉದ್ಯಮಿಗಳು ಹಾಗೂ ಎರಡನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಸ್ಪಷ್ಟ ದೂರದರ್ಶಿತ್ವ ಮತ್ತು ಮಾರ್ಗದರ್ಶಿಗಳನ್ನು ನೀಡಿದ್ದಾರೆ. ವಿಶ್ವ ಹೂಡಿಕೆದಾರರ ಸಮ್ಮೇಳನ ಆಯೋಜನೆ ಮತ್ತು ಕೃಷಿ ಭೂಮಿಯನ್ನು ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಭೂ ಕಂದಾಯ ಅಧಿನಿಯಮ ತಿದ್ದುಪಡಿಕೆಯ ಭರವಸೆ ನೀಡುವ ಮೂಲಕ ರಾಜ್ಯ ಕೈಗಾರಿಕಾಭಿವೃದ್ದಿಗೆ ಸಜ್ಜಾಗಿದೆ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ …

Read More »

ಬಜೆಟ್;ತ್ರಾಸಿ, ಸೋಮೇಶ್ವರ ಸೇರಿ ಕರಾವಳಿ ಪ್ರವಾಸೋದ್ಯಮ ಅಭಿವೃದ್ದಿ, ಮತ್ಸ್ಯದರ್ಶಿನಿ ಸ್ಥಾಪನೆ

ಮಣಿಪಾಲ:ಉಡುಪಿ ಜಿಲ್ಲೆಯ ತ್ರಾಸಿ-ಮರವಂತೆ, ಒತ್ತಿನೆಣೆ ಹಾಗೂ ಇತರ ಕಡಲ ತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೆ ಏರಿಸಲು ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೋಮವಾರ(ಮಾರ್ಚ್ 08) ಮಂಡಿಸಿದ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸೋಮೇಶ್ವರ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿರುವುದಾಗಿ ತಿಳಿಸಿದರು. ಮೀನುಗಾರಿಕೆಗೆ ಸಿಕ್ಕಿದ್ದೇನು? ಯಾಂತ್ರೀಕೃತ ದೋಣಿಗಳಿಗೆ 1.5 ಲಕ್ಷ ಕಿಲೋ ಲೀಟರ್ …

Read More »

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …

Read More »

ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ

  ಗೋಕಾಕ : 8ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು 2021-22 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ 8 ರ ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಿರುವ ಮುಖ್ಯಮಂತ್ರಿಗಳು …

Read More »

ರೈತರು ಪ್ರತಿಭಟನೆ ಮಾಡುತ್ತಿರುವ ಸಿಂಘುವಿನಲ್ಲಿ ಗುಂಡಿನ ದಾಳಿ

ದೆಹಲಿ : ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಮತ್ತು ಹರಿಯಾಣ ಗಡಿ ಪ್ರದೇಶ ಸಿಂಘುವಿನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ರಾತ್ರಿ(ಭಾನುವಾರ) ಗುಂಡಿನ ದಾಳಿ ನಡೆದಿದೆ. ಅಪರಿಚಿತ ನಾಲ್ವರು ವ್ಯಕ್ತಿಗಳು ಕಾರಿನಲ್ಲಿ ಬಂದು ಗುಂಡು ಹಾರಿದ್ದಾರೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ರೈತರು ಸಾಮೂಹಿಕವಾಗಿ ಊಟ ಮಾಡುತ್ತಿದ್ದ ವೇಳೆ ಬಿಳಿ ಬಣ್ಣ ಆಡಿ ಕಾರಿನಲ್ಲಿ ಬಂದ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಕಾರು ಚತ್ತೀಸ್ ಘಡದ ನಂಬರನ್ನು …

Read More »

ಕಾರವಾರ DySp ಅರವಿಂದ ಕಲಗುಜ್ಜಿ ವಾಹನಕ್ಕೆ ಓಮ್ನಿ ಡಿಕ್ಕಿ: ಅಡ್ಡ ಬಂದ ಮಗು ಬಚಾವು ಮಾಡಲು ಹೋಗಿ ನಡೆದ ಅಪಘಾತ

ಕಾರವಾರ: ಕಾರವಾರ DYSP ಪಿ. ಅರವಿಂದ ಕಲಗುಜ್ಜಿ ಅವರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ DYSP ಪಿ. ಅರವಿಂದ ಕಲಗುಜ್ಜಿಗೆ ಸಣ್ಣಪುಟ್ಟ ಗಾಯವಾಗಿರುವ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ಕಾರವಾರದಿಂದ ಮುಂಡಗೋಡಿಗೆ ಡಿವೈಎಸ್ಪಿ ಅರವಿಂದ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ವಾಹನಕ್ಕೆ ಅಡ್ಡ ಬಂದ ಮಗುವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಓಮ್ನಿ ಕಾರು ರಸ್ತೆಯಲ್ಲಿಯೇ ಉರುಳಿ ಬಿದ್ದಿದೆ. ಕಾರು …

Read More »

ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

ಭಾನುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಹಾಗೂ ಕುಟುಂಬಸ್ಥರು ಭಾನುವಾರ ಮಧ್ಯಾಹ್ನದಿಂದ ಹುಡುಕಾಟ ನಡೆಸಿದ್ದರೂ ಬಾಲಕರು ಪತ್ತೆಯಾಗಿರಲಿಲ್ಲ. 9 ವರ್ಷದ ವರುಣ್, 5 ವರ್ಷದ ಸಣ್ಣಯ್ಯ ಸಾವನ್ನಪ್ಪಿರುವ ಬಾಲಕರು. ಹಂಪಯ್ಯ ನಾಯಕ್ ಕೊನೆಯ ಪುತ್ರ ಶಿವಾನಂದ ಮಕ್ಕಳಾದ ವರುಣ್ ಹಾಗೂ ಸಣ್ಣಯ್ಯ ಶವವಾಗಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿರವಾರ ಪೊಲೀಸ್ …

Read More »

ಬಜೆಟ್ ಮಂಡಿಸಲು ಯಡಿಯೂರಪ್ಪಗೆ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ನಡೆಸಲು ಮತ್ತು ಬಜೆಟ್ ಮಂಡಿಸಲು ಬಿ ಎಸ್ ಯಡಿಯೂರಪ್ಪಗೆ ನೈತಿಕತೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ ಬಜೆಟ್ ಅಧಿವೇಶನಕ್ಕೂ ಮುನ್ನ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.   26 ಎಕರೆ ಬಡಾವಣೆ ಯೋಜನೆಯಲ್ಲಿ ಡಿನೋಟಿಫೈ ಗೆ ಸಂಬಂಧಿಸಿದ ಅವ್ಯವಹಾರ ಕೇಳಿಬಂದಿತ್ತು. ಈ ವಿಚಾರದಲ್ಲಿ ಬಿಎಸ್ ವೈ ಮತ್ತು ಮುರುಗೇಶ್ ನಿರಾಣಿ ವಿರುದ್ಧ ತನಿಖೆ ನಡೆಸುವಂತೆ …

Read More »

ನಿರ್ದಿಷ್ಟ ಗುರಿ- ಕಾರಣ ಇಲ್ಲದ, ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್: ಪರಮೇಶ್ವರ್ ಟೀಕೆ

ಬೆಂಗಳೂರು: ಯಾವುದೇ ನಿರ್ದಿಷ್ಟ ಗುರಿ, ಕಾರಣ ಇಲ್ಲದಿರುವ ಬಜೆಟ್ ನ್ನು ಸಿಎಂ ಯಡಿಯೂರಪ್ಪ ಬಜೆಟ್ ಮಂಡಿಸಿದ್ದಾರೆ. ಇದು ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್ ಎಂದು ಮಾಜಿ ಸಚಿವ ಪರಮೇಶ್ವರ್ ಟೀಕಿಸಿದ್ದಾರೆ. ಸಿಎಂ ಬಿಎಸ್ ವೈ, 71 ಸಾವಿರ ಕೋಟಿ ಸಾಲ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ. ಫಿಸಿಕಲ್ ಆಕ್ಟ್ ತಂದಿದ್ದರು. ಅವರ ಪ್ರಕಾರ ಸಾಲ 25 ರಷ್ಟು ಮೇಲೆ ಹೋಗದಂತೆ ಸೂಚಿಸಲಾಗಿತ್ತು. ಅದನ್ನು ಮೀರಿ 26% ಸಾಲ ಪಡೆದಿದ್ದಾರೆ. ಮುಂದಿನ ದಿನದಲ್ಲಿ …

Read More »

ಕೃಷಿ ಪೂರಕ ಚಟುವಟಿಕೆಗಳಿಗೆ 31,028 ಕೋಟಿ ಅನುದಾನ

ಬೆಂಗಳೂರು, ಮಾರ್ಚ್ 8: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 2021-22ನೇ ಸಾಲಿನ ಆಯವ್ಯಯ ಮಂಡಿಸಿದ್ದು, ಅದರಲ್ಲಿ ಕೃಷಿ ಕ್ಷೇತ್ರಕ್ಕೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಕೃಷಿ ಹಾಗೂ ಪೂರಕ ಚಟುವಟಿಕೆ ” ಕೃಷಿಕರ ಆದಾಯವನ್ನು 2023ರ ವೇಳೆಗೆ ದ್ವಿಗುಣಗೊಳಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೇಂದ್ರದೊಂದಿಗೆ ಕೈಜೋಡಿಸಿ ಹಲವು ಕ್ರಮಗಳನ್ನು ಕೈಗೊಂಡಿದೆ.” “ಗುಣಮಟ್ಟದ ಬಿತ್ತನೆ ಬೀಜ ಲಭ್ಯತೆ, ಬೆಳೆ ನಿರ್ವಹಣೆ, ಕೊಯ್ಲೋತ್ತರ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ …

Read More »