Breaking News
Home / 2021 / ಮಾರ್ಚ್ / 12 (page 2)

Daily Archives: ಮಾರ್ಚ್ 12, 2021

ಗೀತಾ ಶಿವರಾಜ್‌ಕುಮಾರ್ ಸಾಧಾರಣ ಮಹಿಳೆಯಲ್ಲ, ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು: DK ಶಿವಕುಮಾರ್

ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಅವರ ಜತೆ ಸದಾಶಿವನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಸಮಾಲೋಚನೆ ನಡೆಸಿದ ಬಳಿಕ ಅವರ ಜತೆ ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಮಧು ಬಂಗಾರಪ್ಪ ಅವರು ತಮ್ಮ ಸಹೋದರಿ ಗೀತಾ ಶಿವರಾಜ್‌ಕುಮಾರ್‌ ಕಾಂಗ್ರೆಸ್‌ ಸೇರುವುದನ್ನು ಸ್ಪಷ್ಟಪಡಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್‌ ಗೀತಾ ಅವರು ಸಾಧಾರಣ ಮಹಿಳೆ ಅಲ್ಲ, ಅವರಿಗೆ ಸೂಕ್ತ ಗೌರವ ನೀಡಬೇಕು ಎಂದು ಹೇಳಿದ್ದಾರೆ. …

Read More »

ರಮೇಶ್ ಜಾರಕಿಹೊಳಿ ಅವರಿಗೆ “ನಾನು ಧೈರ್ಯ ಹೇಳಿದ್ದು ನಿಜ: ಎಚ್ ಡಿ ರೇವಣ್ಣ

ಹಾಸನ, ಮಾರ್ಚ್.12: ಸಿಡಿ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ “ನಾನು ಧೈರ್ಯ ಹೇಳಿದ್ದು ನಿಜ ಕಣ್ರಿ.. ರಾಜಕಾರಣಿಗಳಿಗೆ ಮನುಷ್ಯತ್ವ ಇರಬೇಕು” ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಎಚ್ ಡಿ ರೇವಣ್ಣ, ನಾವು ಮೊದಲು ಮನುಷ್ಯತ್ವನ್ನು ಹೊಂದಿರಬೇಕು ಎಂದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬಹಳ ಕಷ್ಟಪಟ್ಟು ಮೇಲೆ ಬಂದವರು. ಒಳ್ಳೆಯದ್ದು ಮತ್ತು ಕೆಟ್ಟದ್ದನ್ನು ದೇವರಿಗೆ …

Read More »

ಸಹೋದರನ ಹಾದಿಯನ್ನೇ ಹಿಡಿದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸಗೆ ಸೇರ್ಪಡೆ…

ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್‌ ಕುಮಾರ್ ಅವರು ಸಹ ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ …

Read More »

ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ 100 ಅಡಿ ಅಗಲದ ಜಲಪಾತ

ಬೆಂಗಳೂರು, ಮಾರ್ಚ್ 11: ಐಟಿ ಸಿಟಿ, ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರು ಮಹಾ ಶಿವರಾತ್ರಿ ದಿನದಂದು ಆ ಯೋಜನೆ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಉದ್ಯಾನನಗರಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸ್ಯಾಂಕಿ ಕೆರೆಯ ಈಜುಕೊಳದ ಪಕ್ಕದಲ್ಲಿ ಜಲಪಾತ ನಿರ್ಮಿಸುವ ಸಂಬಂಧ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರು ಸ್ಥಳ ಪರಿಶೀಲನೆ ನಡೆಸಿದರು. ಈ ಮೂಲಕ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ …

Read More »

ಕರ್ನಾಟಕ ಪ್ರವೇಶಿಸಲು ಕೋವಿಡ್ ಟೆಸ್ಟ್‌ ನೆಗೆಟಿವ್ ರಿಪೋರ್ಟ್ ಕಡ್ಡಾಯ

ಮಂಗಳೂರು, ಮಾರ್ಚ್ 11: ಕೇರಳದಿಂದ ಮಂಗಳೂರಿಗೆ ತೆರಳುವವರು ಆರ್‌ಟಿ-ಪಿಸಿಆರ್ ನೆಗೆಟಿವ್‌ ಸರ್ಟಿಫಿಕೇಟ್‌ ಹೊಂದಿರಬೇಕೆಂದು ದಕ್ಷಿಣ ಕನ್ನಡ ಆರೋಗ್ಯ ಮತ್ತು ಕುಟುಂಬ ಆರೋಗ್ಯ ಕಚೇರಿಯು ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿಗೆ ಪತ್ರ ಬರೆದಿದೆ. ಕೇರಳದಿಂದ ಕರ್ನಾಟಕ ಪ್ರವೇಶಿಸುವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್‌ ಸರ್ಟಿಫಿಕೆಟ್ ಹೊಂದಿರಬೇಕು, ಈ ಬಗ್ಗೆ ಈಗಾಗಲೇ ಪ್ರಚಾರ ನೀಡಲಾಗಿದ್ದು, ಆದರೆ ಸಾರ್ವಜನಿಕರು ಈ ಕುರಿತು ಸರಿಯಾದ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ. ಆದ್ದರಿಂದ ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿ ಮೂಲಕ …

Read More »

ಬ್ಯಾಂಕ್ ಕೆಲಸ ಇದ್ರೆ ಇಂದೇ ಮುಗಿಸಿಕೊಳ್ಳಿ.. ನಾಳೆಯಿಂದ 4 ದಿನ ತೆರೆಯಲ್ಲ ಬಾಗಿಲು

ನವದೆಹಲಿ: ನಿಮಗೇನಾದರೂ ಬ್ಯಾಂಕ್​ನಲ್ಲಿ ಕೆಲಸಗಳಿದ್ದರೆ ಇಂದೇ ಮುಗಿಸಿಕೊಂಡುಬಿಡಿ.. ಯಾಕಂದ್ರೆ ನಾಳೆಯಿಂದ 4 ದಿನಗಳ ಕಾಲ ಬ್ಯಾಂಕ್​ಗಳು ಬಾಗಿಲು ತೆರೆಯಲ್ಲ. ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, ಮಾರ್ಚ್​ 15 ಮತ್ತು 16ರಂದು ಭಾರತದಾದ್ಯಂತ ಬ್ಯಾಂಕ್​ ಬಂದ್​ ಮಾಡುವಂತೆ ಕರೆ ನೀಡಿದೆ. ಕೇಂದ್ರ ಸರ್ಕಾರ ಈಗಾಗಲೇ ಹಲವು ಬ್ಯಾಂಕ್​ಗಳನ್ನ ಖಾಸಗೀಕರಣ ಮಾಡಿದೆ, ಇನ್ನು ಹಲವು ಬ್ಯಾಂಕ್​ಗಳನ್ನ ಖಾಸಗೀಕರಣ ಮಾಡುವುದಾಗಿ ತಿಳಿಸಿದೆ. ಈ ವಿಚಾರವಾಗಿ ಆಕ್ರೋಶಗೊಂಡಿರುವ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, …

Read More »

ಮಹಾರಾಷ್ಟ್ರದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೊನಾ; ದೇಶದ ಅರ್ಧಕ್ಕಿಂತ ಹೆಚ್ಚು ಕೇಸ್​ ಒಂದೇ ರಾಜ್ಯದಲ್ಲಿ ದಾಖಲು

ಮಹಾರಾಷ್ಟ್ರ: ನೆರೆರಾಜ್ಯ ಮಹಾರಾಷ್ಟ್ರದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈಗಾಗಲೇ ದೇಶದ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ದಾಖಲಾಗಿದ್ದು, ರಾಜ್ಯದ ಜನತೆಯಲ್ಲಿ ಆತಂಕ ಮೂಡುವಂತಾಗಿದೆ. ಮೊನ್ನೆ ಸುಮಾರು13,000 ನಿನ್ನೆ ಸುಮಾರು 14,000 ಕೊರೊನಾ ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ದೇಶದ ಅರ್ಧಕ್ಕಿಂತ ಹೆಚ್ಚು ಕೇಸ್​ಗಳು ಇದೊಂದೇ ರಾಜ್ಯದಲ್ಲಿ ದಾಖಲಾಗಲು ಮೂರು ಮುಖ್ಯ ಕಾರಣಗಳನ್ನ ಆರೋಗ್ಯ ಇಲಾಖೆ ತಿಳಿಸಿದೆ. ಕಡಿಮೆ ಟೆಸ್ಟಿಂಗ್ :​- …

Read More »

ED ಹೆಸರಲ್ಲಿ ಬ್ಯಾಂಕ್​ಗಳಿಗೆ ನಕಲಿ ಪತ್ರಗಳನ್ನು ಕಳುಹಿಸುತ್ತಿದ್ದ ಖತರ್ನಾಕ್ ವಂಚಕನೊಬ್ಬನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ED ಹೆಸರಲ್ಲಿ ಬ್ಯಾಂಕ್​ಗಳಿಗೆ ನಕಲಿ ಪತ್ರಗಳನ್ನು ಕಳುಹಿಸುತ್ತಿದ್ದ ಖತರ್ನಾಕ್ ವಂಚಕನೊಬ್ಬನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಮದುಕರ್​ ಸಪಳೆ ಬಂಧಿತ ಆರೋಪಿ. ಬೆಳಗಾವಿಯ ಶಾಸ್ತ್ರೀನಗರದ ನಿವಾಸಿಯಾದ ಆರೋಪಿ ಖಾಸಗಿ ಇನ್ಶೂರೆನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇವನ ಬಳಿ ಬರುವ ಗ್ರಾಹಕರಿಗೆ ಬಣ್ಣ, ಬಣ್ಣದ ಮಾತುಗಳನ್ನ ಹೇಳಿ ಅವರ ಇನ್ಶೂರೆನ್ಸ್​ ಹಣವನ್ನ ತನ್ನ ಅಕೌಂಟ್​ಗೆ ಹಾಕಿಸಿಕೊಂಡು ವಂಚನೆ ಮಾಡುತ್ತಿದ್ದ ಅನ್ನೋ ಆರೋಪ ಕೇಳಿ ಬಂದಿದೆ. ಹಣ ಕಳೆದುಕೊಂಡವರು ಬಂದು ಹಣ ಕೇಳಿದರೆ …

Read More »

ಕಿವಿ ಕೇಳದೇ-ಮಾತೂ ಬಾರದೇ ಪಾಕ್​ನಲ್ಲಿ ಸಿಲುಕಿದ್ದ ಗೀತಾ; ಕೊನೆಗೂ ತಾಯಿ ಮಡಿಲು ಸೇರಿದ್ರು

2015ರಲ್ಲಿ ತೆರೆ ಕಂಡಿದ್ದ ಸಲ್ಮಾನ್ ಖಾನ್ ಅಭಿನಯದ ‘ಭಜರಂಗಿ ಭಾಯಿಜಾನ್’ ಸಿನಿಮಾದ ಮುನ್ನಿ ಕ್ಯಾರೆಕ್ಟರ್​ಗೆ ಇಡೀ ದೇಶವೇ ಸಲಾಂ ಹೊಡೆದಿತ್ತು. ಸಿನಿಮಾ ರಿಲೀಸ್ ಆದ ಕೆಲವೇ ತಿಂಗಳಲ್ಲಿ ಅದಕ್ಕಿಂತ ಹೆಚ್ಚು ಸದ್ದು ಮಾಡಿದ್ದು, ಭಾರತದಿಂದ ಆಕಸ್ಮಿವಾಗಿ ಪಾಕ್ ಸೇರಿ ಅಲ್ಲಿನ ಎನ್​ಜಿಓ ಒಂದರಲ್ಲಿ ರಕ್ಷಣೆ ಪಡೆದಿದ್ದ ಗೀತಾ ಎಂಬ ಹೆಸರಿನ ರಿಯಲ್ ಮುನ್ನಿ. ಈಕೆಗೆ ನಿಜವಾದ ಭಾಯಿಜಾನ್ ಆಗಿದ್ದು ಅಂದಿನ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್. ಪಾಕಿಸ್ತಾನದಲ್ಲಿದ್ದ ಕಿವುಡ …

Read More »

ಶಿವರಾತ್ರಿಯ ವಿಶೇಷ ಪೂಜೆ ವೇಳೆ ನಾಗರಾಜ ಪ್ರತ್ಯಕ್ಷ; ಭಕ್ತಿ, ಭಾವದಿಂದ ಕೈಮುಗಿದ ಭಕ್ತರು

ಕೊಪ್ಪಳ: ಶಿವರಾತ್ರಿಯ ದಿನವಾದ ಇಂದು ಕೊಪ್ಪಳದ ಹೊರವಲಯದಲ್ಲಿರುವ ಮಳೆ ಮಲ್ಲೇಶ್ವರ ದೇವಾಲಯದಲ್ಲಿ ಅಚ್ಚರಿಯೊಂದು ನಡೆದಿದೆ. ಶಿವರಾತ್ರಿಯ ಹಿನ್ನೆಲೆಯಲ್ಲಿ ಇಂದು ದೇವಾಲಯಕ್ಕೆ ಸಾಕಷ್ಟು ಭಕ್ತರು ಆಗಮಿಸಿದ್ದರು. ಶಿವನಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದೇವಾಲಯದ ಹೊರಗಿನಿಂದ ಬಂದ ನಾಗರ ಹಾವೊಂದು ಗರ್ಭಗುಡಿಯ ಒಳಗಡೆ ಪ್ರವೇಶಿಸಿದೆ. ಲಿಂಗದ ಕಡೆಗೆ ತೆರಳಿದ ಹಾವು ಅಲ್ಲಿಂದ ಕಾಣೆಯಾಗಿದೆ. ಹಾವನ್ನು ಕಂಡ ಭಕ್ತರು ಧನ್ಯತಾಭಾವದಿಂದ ಕೈಮುಗಿದಿದ್ದಾರೆ.

Read More »