Breaking News
Home / 2021 / ಮಾರ್ಚ್ / 19 (page 3)

Daily Archives: ಮಾರ್ಚ್ 19, 2021

“ಕೊರೊನಾವೈರಸ್‌ಗೆ ಲಸಿಕೆ ಉಂಟು, ಬಿಜೆಪಿಯ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಇಲ್ಲ”

ಬೆಂಗಳೂರು, ಮಾರ್ಚ್ 19: ”ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ನಿಯಂತ್ರಣವೇ ತಪ್ಪಿ ಹೋಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದರಲ್ಲಿ ಸೋತಿದೆ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ ಸೋಂಕಿತ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟುತ್ತಿದೆ. ನಾಲ್ಕು ತಿಂಗಳಿನಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ 1400ಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 1488 …

Read More »

ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಭ್ರಷ್ಟಾಚಾರ: ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್ ನಿಯಂತ್ರಣ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್. ಮುಖ್ಯಮಂತ್ರಿಯವರೇ, ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ’ ಎಂದು ಪ್ರಶ್ನಿಸಿದ್ದಾರೆ. ‘ಕೊರೊನಾ …

Read More »

ಚೇಂಬರ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅಧ್ಯಾಪಕನಿಂದ ಅತ್ಯಾಚಾರ: ಫೇಲ್ ಮಾಡುವುದಾಗಿ ಬೆದರಿಸಿ ಕೃತ್ಯ

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಅಧ್ಯಾಪಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬಗ್ಗೆ ದೂರು ದಾಖಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಸಹಾಯಕ ಅಧ್ಯಾಪಕ 2019 ರಿಂದ ನೀನು ನನಗೆ ಇಷ್ಟ, ನನಗೆ ಸಹಕರಿಸಿದರೆ ನನ್ನ ವಿಷಯದ ಪರೀಕ್ಷೆಯಲ್ಲಿ ಪಾಸ್ ಮಾಡುತ್ತೇನೆ. ಇಲ್ಲದಿದ್ದರೆ ಫೇಲ್ ಮಾಡುತ್ತೇನೆ ಎಂದು ಬೆದರಿಸಿ ಚೇಂಬರ್ ನಲ್ಲಿಯೇ ಅತ್ಯಾಚಾರ ಎಸಗಿರುವುದಾಗಿ ವಿದ್ಯಾರ್ಥಿನಿ …

Read More »

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಗುಡ್ ನ್ಯೂಸ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಕುರಿತಾಗಿ ಕ್ರಮಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಅವರು ಅಂಗನವಾಡಿ ಕಾರ್ಯಕರ್ತೆಯರ ಹೋರಾಟದ ಬಗ್ಗೆ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದಾಗ ಸಚಿವರು ಈ ಬಗ್ಗೆ ಮಾಹಿತಿ ನೀಡಿ, ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ …

Read More »

ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್‌ ವಾಸ್ತವ್ಯ

ಹುಬ್ಬಳ್ಳಿ: ಕಂದಾಯ ಸಚಿವ ಆರ್​ ಅಶೋಕ್ ಮತ್ತೊಂದು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಅಂಗವಾಗಿ ಮಾರ್ಚ್​ 20ರಂದು ಕಂದಾಯ ಸಚಿವ ಅಶೋಕ್ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. Grama Vastavya ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ಮೆರವಣಿಗೆ ಮುಖಾಂತರ ಕಂದಾಯ ಸಚಿವ ಅರ್. ಅಶೋಕ ‌ಅವರಿಗೆ ಸ್ವಾಗತ ‌ಮಾಡಿಕೊಳ್ಳಲು ಸಿದ್ದತೆ ನಡೆದಿದೆ. …

Read More »

‘ರಮೇಶ್ CD ಮಾಹಿತಿ ಕೊಟ್ಟಿದ್ದು ನಾನು; ಮಹಾನಾಯಕ ಯಾರೆಂದು ಗೊತ್ತು’ ?

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀ ಸಿ.ಡಿ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಕೊಟ್ಟಿದ್ದೇ ನಾನು. ಈ ಪ್ರಕರಣ ಐದು ಕೋಟಿ ರೂ.ಗೆ ಡೀಲ್ ಆಗಿದೆ. ನರೇಶ್ ಗೌಡ ಭಾಗಿಯಾಗಿದ್ದಾನೆ ಎಂದು ಹೆಸರು ಹೇಳಿದ್ದೇ ನಾನು ಎಂದು ಮಾಜಿ ಸಿಎಂ ಹೆಚ್ ‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ(HD Kumaraswamy), ಸಿ.ಡಿ ಪ್ರಕರಣದಲ್ಲಿ ಕೈವಾಡವಿರುವ ಮಹಾನ್ ನಾಯಕ ಯಾರು ಎಂಬುದರ ಬಗ್ಗೆ ನನಗೆ ಮಾಹಿತಿ …

Read More »

ಸಿಡಿ ಸ್ಫೋಟ ಹಿಂದಿನ ಸತ್ಯಾಂಶ,,?ದೊಡ್ಡ ರಾಜಕಾರಣಿಗಳ ನೆರಳು ಇರುವುದು ಕಾಣುತ್ತಿದೆ?.

ಬೆಂಗಳೂರು, ಮಾರ್ಚ್ 18: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿ ಸ್ಫೋಟ ಹಿಂದಿನ ಸತ್ಯಾಂಶ ಕುರಿತು ವಿಶೇಷ ತನಿಖಾ ತಂಡ ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿದೆ. ಎರಡು ರಾಜಕೀಯ ಪಕ್ಷಗಳ ನಡುವಿನ ಸಮರವೂ ಮುಂದುವರೆದಿದೆ. ಇದರ ಬೆನ್ನಲ್ಲೇ ಈ ಪ್ರಕರಣದಲ್ಲಿ ತಳಕು ಹಾಕಿಕೊಂಡಿರುವ ಇಬ್ಬರು ವ್ಯಕ್ತಿಗಳು ವಿಡಿಯೋ ಬಿಡುಗಡೆ ಮಾಡುವ ಮೂಲಕ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಯಾರು ಸತ್ಯ ? …

Read More »

ಆರು ಸಚಿವರು ಹೈಕೋರ್ಟ್‌ ಮೊರೆ ಹೋಗಿರುವುದನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್‌ ಮುಂದಾಗಿದೆ.

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಿ.ಡಿ. ಪ್ರಕರಣ ಹಾಗೂ ಆರು ಸಚಿವರು ಹೈಕೋರ್ಟ್‌ ಮೊರೆ ಹೋಗಿರುವುದನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್‌ ಮುಂದಾಗಿದೆ. ಪ್ರಶ್ನೋತ್ತರ ಹಾಗೂ ಶೂನ್ಯ ವೇಳೆ ತರುವಾಯ ಈ ವಿಷಯದಲ್ಲಿ ನಿಲುವಳಿ ಸೂಚನೆ ಮಂಡಿಸಲು ಅವಕಾಶ ಕೋರಿ ವಿಧಾನಸಭೆ ಕಾರ್ಯದರ್ಶಿಯವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ನೀಡಿದ್ದಾರೆ. ರಮೇಶ್‌ ಜಾರಕಿಹೊಳಿ ಅವರ ಲೈಂಗಿಕ ಸಿ.ಡಿ. ಪ್ರಕರಣ ಹಾಗೂ ಇಂಥದ್ದೇ ಭೀತಿಯಿಂದ ಆರು ಮಂದಿ ಸಚಿವರು ಕೋರ್ಟಿಗೆ …

Read More »

ವಿಜಯಪುರದಲ್ಲೂ ಕೋವಿಡ್ ಎರಡನೇ ಅಲೆ ಸ್ಫೋಟ; ಆತಂಕ

ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ -19 ಎರಡನೇ ಅಲೆ ಪ್ರಾರಂಭವಾಗಿರುವ ಲಕ್ಷಣಗಳು ಕಂಡು ಬಂದಿದೆ. ಗುರುವಾರ ಒಂದೇ ದಿನ 46 ಕೋವಿಡ್ ಪಾಸಿಟಿವ್‌ ಪ್ರಕರಣಗಳು ವರದಿಯಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 14,719 ಜನರಲ್ಲಿ ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು, 14,403 ಜನ ಗುಣಮುಖವಾಗಿದ್ದಾರೆ. 206 ಜನ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಸದ್ಯ 110 ಸಕ್ರಿಯ ಪ್ರಕರಣಗಳು ಇವೆ. ಕಳೆದ ನಾಲ್ಕೈದು ತಿಂಗಳಿಂದ ಈಚೆಗೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಪಾಸಿಟಿವ್‌ ಪ‍್ರಕರಣಗಳು …

Read More »

ಪತ್ತೆಯಾಗದ ಸೋಂಕಿತರ ಸಂಪರ್ಕಿತರು; ಆರೋಗ್ಯ ಸಿಬ್ಬಂದಿಗೆ ಸವಾಲಾದ ಇಲಾಖೆ ಗುರಿ

ಬೆಂಗಳೂರು: ಪ್ರತಿಯೊಬ್ಬ ಕೋವಿಡ್‌ ಸೋಂಕಿತ ವ್ಯಕ್ತಿಯ ಜತೆ 20 ಮಂದಿ ನೇರ ಮತ್ತು ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲು ಸಾಧ್ಯವಾಗದೇ ಆರೋಗ್ಯ ಇಲಾಖೆ ಇಕ್ಕಟ್ಟಿಗೆ ಸಿಲುಕಿದೆ. ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ 20 ಮಂದಿ ನೇರ ಮತ್ತು ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡುವ ಗುರಿಯನ್ನು ನಿಗದಿ ಮಾಡಿತ್ತು. ಆದರೆ, ಆರೋಗ್ಯ ಸಿಬ್ಬಂದಿಗೆ ಸೋಂಕಿತರ ಪ್ರಯಾಣದ ಇತಿಹಾಸ ಹಾಗೂ ಸಂಪರ್ಕದ ಜಾಡನ್ನು ಭೇದಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಸದ್ಯ ಪ್ರತಿ ಕೋವಿಡ್ ಪೀಡಿತ …

Read More »