Breaking News
Home / 2021 / ಮಾರ್ಚ್ / 20 (page 3)

Daily Archives: ಮಾರ್ಚ್ 20, 2021

ಸಿದ್ದರಾಮಯ್ಯ ವಿರುದ್ಧ ಮತ್ತೆ ಭುಗಿಲೆದ್ದ ಅಸಮಾಧಾನ.. ತವರು ಜಿಲ್ಲೆಯಲ್ಲಿ ತನ್ವೀರ್ ಸೇಠ್ ಬೆಂಬಲಿಗರ ಸಿಟ್ಟು..!

ಮೈಸೂರು: ಅದ್ಯಾಕೋ ಮೈಸೂರು ಮೇಯರ್ ಆಯ್ಕೆ ನಂತ್ರ ಕಾಂಗ್ರೆಸ್‌ನಲ್ಲಿ ಆರಂಭವಾದ ಒಳಬೇಗುದಿ ಆರುವ ಲಕ್ಷಣಗಳೇ ಕಾಣುತ್ತಿಲ್ಲ. ಎಲ್ಲವೂ ಸರಿ ಆಯ್ತು ಅನ್ನೋ ವೇಳೆಗೆ ತನ್ವೀರ್‌ ಬೆಂಬಲಿಗರ ಅಮಾನತು ಮತ್ತೆ ಮೈಸೂರು ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಮೈಸೂರು ಮೇಯರ್‌ ಸ್ಥಾನ ಬಿಟ್ಟುಕೊಟ್ಟ ನಂತ್ರ ಆದ ಬೆಳವಣಿಗೆಯಲ್ಲಿ ತನ್ವೀರ್‌ ಸೇಠ್ ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿತ್ತು. ಇದಕ್ಕೆ ತುಪ್ಪ ಸುರಿಯುವಂತೆ ಸಿದ್ದು ಆಪ್ತ ಶಾಸಕ ರಮೇಶ್‌ಕುಮಾರ್‌ ಎನ್. ಆರ್ …

Read More »

ಇಂದು ಮಸ್ಕಿಯಲ್ಲಿ ಸಿಎಂ ಬಿಎಸ್​ವೈ ಸಮಾವೇಶ-ಸಂಭಾವ್ಯ ಅಭ್ಯರ್ಥಿಗಳನ್ನೂ ವರಿಷ್ಠರಿಗೆ ಶಿಫಾರಸ್ಸು ಮಾಡುವ ನಿರೀಕ್ಷೆ|

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉಪ ಚುನಾವಣೆಗಳ ಕಹಳೆ ಮೊಳಗಿದೆ. ಈಗಾಗಲೇ ಮಸ್ಕಿ ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಅಂತಿಮವಾಗಿದ್ದು, ಬಿರುಸಿನ ಪ್ರಚಾರ ನಡೆದಿದೆ. ಉಪಚುನಾವಣೆಯಲ್ಲಿ ಗೆಲುವಿಗಾಗಿ ಉಭಯ ಪಕ್ಷಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿವೆ. ಇಂದು ರಾಯಚೂರಿನ ಮಸ್ಕಿಯಲ್ಲಿ ಬೃಹತ್ ಸಮಾವೇಶ ನಡೆಸಲಿದೆ. ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಭಾಗವಹಿಸಿ ಪ್ರತಾಪಗೌಡ ಪಾಟೀಲ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಇತ್ತ ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಬದಲಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಚಿಂತನೆ?

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಿಡಿ ಪ್ರಕರಣದ ಬಳಿಕ ರಾಜ್ಯ ಸರ್ಕಾರಕ್ಕೆ ಹೊಸ ಚೈತನ್ಯ ತುಂಬಲು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ‘ ಬೆಳಗಾವಿ ಲೋಕಸಭೆ, ಮಸ್ಕಿ, ವಿಧಾನಸಭಾ ಸ್ಥಾನಗಳಿಗೆ ಈಗಾಗಲೇ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅದಕ್ಕೂ ಮೊದಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.   ಸಿಡಿ ಪ್ರಕರಣದ …

Read More »

ರಾಯಚೂರು ವಿಮಾನ ನಿಲ್ದಾಣ: ಎಎಐ ತಂಡದಿಂದ ಸ್ಥಳ ಪರಿಶೀಲನೆ

ರಾಯಚೂರು: ನಗರ ಹೊರವಲಯದಲ್ಲಿರುವ ಯರಮರಸ್ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿಮಾನ ನಿಲ್ದಾಣಕ್ಕೆ ಅನುಮತಿ ದೊರೆಯುವ ಸಾಧ್ಯತೆಗಳ ಬಗ್ಗೆ ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಂಡವು ಶುಕ್ರವಾರ ಭೇಟಿ ನೀಡಿದ ಬಳಿಕ ಆಶಾಭಾವ ವ್ಯಕ್ತಪಡಿಸಿತು. ಆನಂತರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿತು. ರಾಯಚೂರು ವಿಮಾನ ನಿಲ್ದಾಣಕ್ಕೆ ಮೀಸಲಿಟ್ಟಿರುವ 400 ಎಕರೆ ಪ್ರದೇಶ ಸೂಕ್ತವೂ, ಉತ್ತಮವೂ ಆಗಿದೆ, ಅದರೊಂದಿಗೆ ಹೆಚ್ಚುವರಿ ಭೂಮಿಯೂ ಬೇಕಾಗಬಹುದು ಎಂದು ನವದೆಹಲಿಯ ವಿಮಾನಯಾನ …

Read More »

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ರೆ, ಮುಲಾಜಿಲ್ಲದೇ ಕ್ರಮ ಕೈಗೊಳ್ತೇವೆ: ಜಗದೀಶ್ ಶೆಟ್ಟರ್‌ ಎಚ್ಚರಿಕೆ

ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆ ಮಾಡುವ ವೇಳೆ ಸ್ಥಳೀಯರಿಗೆ ಉದ್ಯೋಗ ನೀಡದೆ ನಿಯಮ ಉಲ್ಲಂಘಿಸಿದ್ರೆ, ಅಂತಹ ಉದ್ಯಮಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕೈಗಾರಿಕೆಗಳಿಗೆ ಜಮೀನು ನೀಡುವ ವೇಳೆಯೇ ಒಪ್ಪಂದ ಮಾಡಿಕೊಳ್ಳಲಾಗುತ್ತೆ. ಜಮೀನು ನೀಡಿದ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕು. ಕಾರಣವೊಡ್ಡಿ ಉದ್ಯೋಗ ನೀಡದಿದ್ರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. …

Read More »

ಸರ್ಕಾರಿ ಬಸ್ ಡಿಕ್ಕಿ: ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್-ಕ್ಯಾಷಿಯರ್ ಇಬ್ಬರೂ ಸ್ಥಳದಲ್ಲೇ ದುರ್ಮರಣ

ವಿಜಯಪುರ: ರಾಜ್ಯ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಡಿ.ಎಸ್.ಬಿರಾದಾರ್ ಮತ್ತು ಕ್ಯಾಷಿಯರ್ ಚೈತನ್ಯ ಕುಮಾರ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಖೇಡಗಿ ಗ್ರಾಮದಲ್ಲಿರುವ ಕೆವಿಜಿ ಬ್ಯಾಂಕ್ ಶಾಖೆಯಲ್ಲಿ ಇವರಿಬ್ಬರೂ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರಿ ಬಸ್ ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂಡಿ …

Read More »

ನಾಲ್ಕು ಗಂಟೆ ವಿಚಾರಣೆ ವೇಳೆ ರಮೇಶ್ ಜಾರಕಿಹೊಳಿಗೆ 56 ಪ್ರಶ್ನೆ:S.I.T.

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಮಾಜಿ ಸಚಿವರ ವಿಚಾರಣೆ ನಡೆಸಿದ್ದಾರೆ. ಸಿಡಿ, ಆಡಿಯೋ ಕ್ಲಿಪ್ ಜೊತೆಗೆ ಸಿಸಿಟಿವಿ ದೃಶ್ಯಾವಳಿಗಳ ಬಗ್ಗೆಯೂ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ರಮೇಶ್ ಜಾರಕಿಹೊಳಿಯವರನ್ನು 4 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಅಧಿಕಾರಿಗಳು ಕೇಳಿದ ಬಹುತೇಕ ಪ್ರಶ್ನೆಗಳಿಗೆ ಉತ್ತರಿಸಲು ರಮೇಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಸಿಡಿಯಲ್ಲಿರುವುದು ನಾನಲ್ಲ, ಅದು ನನ್ನ …

Read More »

ಕಮಲ್‍ಹಾಸನ್ ಪಕ್ಷದ ಖಜಾಂಚಿ ಮನೆಯಲ್ಲಿ 80 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆ..!

ಚೆನ್ನೈ, ಮಾ.19- ನಟ ಕಮಲ್‍ಹಾಸನ್ ಸ್ಥಾಪಿಸಿರುವ ಮಕ್ಕಳ ನಿಧಿ ಮಹಿಮ್ ಪಕ್ಷದ ಖಜಾಂಚಿ ಮನೆ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು 11.50 ಕೋಟಿ ನಗದು ಸೇರಿದಂತೆ 80 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ.  ಬುಧವಾರ ಮತ್ತು ಗುರುವಾರ ತಮಿಳುನಾಡಿನ ತ್ರಿಪುರಾ, ಧರ್ಮಾಪುರಂ, ಚೆನ್ನೈ ಸೇರಿದಂತೆ ಐದು ಜಾಗಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ತ್ರಿಪುರಾದ ಪ್ರಮುಖ ಉದ್ಯಮಿಯೂ ಆಗಿರುವ ಪಕ್ಷದ ಖಜಾಂಚಿ ಚಂದ್ರಶೇಖರ್ …

Read More »

ಸಾರಸ್ವತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಡಿಗ್ರಿ ಆದವರಿಗೆ ‌ಉದ್ಯೋಗವಕಾಶ

ಸಾರಸ್ವತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಡಿಗ್ರಿ ಆದವರಿಗೆ ‌ಉದ್ಯೋಗವಕಾಶ Saakshatv job Saraswat bank ಸಾರಸ್ವತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನ ಸಾರಸ್ವತ್ ಬ್ಯಾಂಕಿನ ವ್ಯವಹಾರ ಅಭಿವೃದ್ಧಿ ಅಧಿಕಾರಿ (ಬಿಡಿಒ) ಗ್ರೇಡ್ ಬಿ ಹುದ್ದೆಗೆ 150 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದವರನ್ನು ಮಹಾರಾಷ್ಟ್ರ, ಗೋವಾ, ಕರ್ನಾಟಕ, ಗುಜರಾತ್ ಮತ್ತು ನವದೆಹಲಿ ಶಾಖೆಗೆ ಮಧ್ಯ ಪೂರ್ಣಾವಧಿ ಆಧಾರದ ಮೇಲೆ …

Read More »

ಕಾಮೆಡ್ ಕೆ ಪದವಿ ಪೂರ್ವ ಪರೀಕ್ಷಾ ದಿನಾಂಕ ಪ್ರಕಟ

ಬೆಂಗಳೂರು:ಕರ್ನಾಟಕದ ವೈದ್ಯಕೀಯ ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (COMEDK UGET 2021) ನಡೆಸುವ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ಪದವಿಪೂರ್ವ ಪ್ರವೇಶ ಪರೀಕ್ಷೆ ಜೂನ್ 20 ರಂದು ನಡೆಯಲಿದೆ. ಆನ್‌ಲೈನ್ ಮೋಡ್‌ನಲ್ಲಿ 400 ಪರೀಕ್ಷಾ ಕೇಂದ್ರಗಳೊಂದಿಗೆ ರಾಷ್ಟ್ರದಾದ್ಯಂತ 150 ನಗರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು. 2020 ರಲ್ಲಿ ನೋಂದಾಯಿತ 63,000 ರಂತೆ ಈ ವರ್ಷ ಸುಮಾರು 80,000 ನೋಂದಣಿಗಳನ್ನು ಸಂಘಟಕರು ನಿರೀಕ್ಷಿಸಿದ್ದಾರೆ. ಕಳೆದ ವರ್ಷ, ಪ್ರವೇಶ ಪರೀಕ್ಷೆಯನ್ನು ಮೂರು ಬಾರಿ ಮುಂದೂಡಲಾಯಿತು ಮತ್ತು …

Read More »