Breaking News
Home / 2021 / ಮಾರ್ಚ್ / 23 (page 2)

Daily Archives: ಮಾರ್ಚ್ 23, 2021

ಬಿಎಸ್ವೈ ಬೆನ್ನಿಗೆ ನಿಂತರೇ ಡಿಕೆಶಿ? ಏನಿದು ರಮೇಶ್ ಕುಮಾರ್ ಮಾತಿನ ಮರ್ಮ!

ಬೆಂಗಳೂರು ಮಾರ್ಚ್ 23: ಸೋಮವಾರ (ಮಾ 22) ವಿಧಾನಸಭೆಯ ಬಜೆಟ್ ಅಧಿವೇಶನದ ವೇಳೆ, ರಮೇಶ್ ಜಾರಕಿಹೊಳಿ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಬೆಂಕಿಯುಂಡೆಯಂತಹ ಭಾಷಣ ಮಾಡಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು. ಇವರ ಅಬ್ಬರದ ಭಾಷಣದ ಮಧ್ಯೆ ಮಾಜಿ ಸ್ಪೀಕರ್, ಶ್ರೀನಿವಾಸಪುರದ ಶಾಸಕ ರಮೇಶ್ ಕುಮಾರ್ ಆಡಿದ ಮಾತು ಸದನವನ್ನು ನಗೆಗಡಲಲ್ಲಿ ತೇಲಿಸಿದ್ದು ಒಂದು ಕಡೆಯಾದರೆ, ಅವರ ಮಾತಿನ ಹಿಂದಿನ ಮರ್ಮವೇನು ಎನ್ನುವುದು ಸದ್ಯಕ್ಕೆ ಚರ್ಚೆಯ ವಿಷಯವಾಗಿದೆ.   …

Read More »

ಸಿದ್ದು-ಡಿಕೆಶಿ ಜತೆ ಲಕ್ಷ್ಮೀ ಏಕಾಂತ ಮಾತುಕತೆ! ಸಿಎಂಗೆ ಲಕ್ಷ್ಮೀ ಬ್ಲಾಕ್​ಮೇಲ್​ ಮಾಡ್ತಾರಾ..?

ಬೆಂಗಳೂರು: ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಹಾಗೂ 6 ಸಚಿವರು ಕೋರ್ಟ್​ಗೆ ಮೊರೆ ಹೋಗಿ ನಿರ್ಬಂಧಕಾಜ್ಞೆ ತಂದ ವಿಚಾರವಾಗಿ ಮೇಲ್ಮನೆಯಲ್ಲಿ ಸೋಮವಾರ ಪ್ರತಿಪಕ್ಷಗಳ ನಾಯಕರು ಆಕ್ಷೇಪಿಸಿದರು. ಎಸ್​ಐಟಿ ಸಿಡಿ ಪ್ರಚಾರಕರ ಬೆನ್ನುಹಿಂದೆ ಬಿದ್ದಿದೆ, ಸಂತ್ರಸ್ತ ಯುವತಿಗೆ ಅನ್ಯಾಯ ಆಗಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿಲ್ಲ. ಈ ಸಿಡಿ ಅಸಲಿಯೋ- ನಕಲಿಯೋ ಮೊದಲು ಆ ಬಗ್ಗೆ ತನಿಖೆ ಮಾಡಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದರು. ಇದಾದ ಬಳಿಕ ಮಾಜಿ ಸಿಂ …

Read More »

ಸತೀಶ್ ಜಾರಕಿಹೊಳಿ ಮೂಲೆಗುಂಪು ಮಾಡಲು ಪ್ರಯತ್ನ, ಬೆಂಬಲಿಗರ ಆಕ್ರೋಶ: ಬೈಎಲೆಕ್ಷನ್ ಸ್ಪರ್ಧೆಗೆ ವಿರೋಧ

ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಏಪ್ರಿಲ್ 17 ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿದೆ. ಶಾಸಕ ಸತೀಶ್ ಜಾರಕಿಹೊಳಿ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದು, ಸತೀಶ್ ಜಾರಕಿಹೊಳಿ ಅವರಿಗೆ ಒತ್ತಾಯದಿಂದ ಟಿಕೆಟ್ ನೀಡಿ ಕೇಂದ್ರಕ್ಕೆ ಕಳುಹಿಸಲು ಸಂಚು ನಡೆಸಲಾಗಿದೆ. ರಾಜ್ಯದಲ್ಲಿ ಸತೀಶ್ ಅವರಿಗೆ ಹಿಡಿತ ಇಲ್ಲದಂತೆ ಮಾಡಲು ಈ ಮೂಲಕ ಅವರನ್ನು ಮೂಲೆಗುಂಪು ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿಯಾಗಿ …

Read More »

‘ಸಿಡಿ ಹೆಸರು ಹೇಳಿದರೆ ಸಚಿವರು ಬೆಚ್ಚಿ ಬೀಳುತ್ತಾರೆ’

ಬೆಂಗಳೂರು, ಮಾ.23- ಸಿಡಿ ಹೆಸರು ಹೇಳಬೇಡಿ, ಈ ಸರ್ಕಾರದಲ್ಲಿನ ಸಚಿವರು ಬೆಚ್ಚಿ ಬೀಳುತ್ತಾರೆ ಎಂದು ಪ್ರತಿಪಕ್ಷದ ಸದಸ್ಯರು ಲೇವಡಿ ಮಾಡಿದ ಪ್ರಸಂಗ ವಿಧಾನಪರಿಷತ್‍ನಲ್ಲಿಂದು ನಡೆಯಿತು. ಶೂನ್ಯ ವೇಳೆಯಲ್ಲಿ ಸದಸ್ಯ ಶ್ರೀಕಾಂತ್ ಗೊಟ್ನೇಕರ್ ಅವರು ವಿಷಯ ಪ್ರಸ್ತಾಪಿಸುತ್ತ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬೀದರ್‍ನಲ್ಲಿ ಮುಖ್ಯಮಂತ್ರಿ ಭಾಷಣ ಮಾಡುವ ವೇಳೆ ಮರಾಠಿಗರಿಗೆ 3ಬಿ ಯಿಂದ 2ಬಿಗೆ ಮೀಸಲಾತಿ ಬದಲಾವಣೆ ಮಾಡುವ ಭರವಸೆ ನೀಡಿದ್ದರು. ಸಿಎಂ ಭಾಷಣದ ಸಿಡಿ ನನ್ನ ಬಳಿ ಇದೆ …

Read More »

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ – ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಲಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಗೆ ತಕ್ಷಣ ರಕ್ಷಣೆ ನೀಡಬೇಕು. ಆ ಯುವತಿ ತನ್ನನ್ನು ಬಳಸಿಕೊಂಡಿದ್ದಾರೆ ಎಂದು ಹೇಳಿರುವುದರಿಂದ ಅದು ರೇಪ್ ಎಂದಾಗಿರುತ್ತದೆ. ಹಾಗಾಗಿ ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಎಸ್ …

Read More »

ಹಬ್ಬದ ವಿಶೇಷ, ಪ್ಯಾಸೆಂಜರ್ ರೈಲುಗಳು ಜೂನ್ ತನಕ ವಿಸ್ತರಣೆ

ಹುಬ್ಬಳ್ಳಿ, ಮಾರ್ಚ್ 22: ನೈಋತ್ಯ ರೈಲ್ವೆ ಸದ್ಯ ಸಂಚಾರ ನಡೆಸುತ್ತಿರುವ ಹಬ್ಬದ ವಿಶೇಷ ರೈಲು ಮತ್ತು ಪ್ಯಾಸೆಂಜರ್ ವಿಶೇಷ ರೈಲುಗಳ ವೇಳಾಪಟ್ಟಿಯನ್ನು ವಿಸ್ತರಣೆ ಮಾಡಿದೆ. ಮಾರ್ಚ್ ಅಂತ್ಯಕ್ಕೆ ರೈಲುಗಳ ಸಂಚಾರ ಕೊನೆಗೊಳ್ಳಬೇಕಿತ್ತು. ಹಬ್ಬದ ವಿಶೇಷ ಎಕ್ಸ್‌ಪ್ರೆಸ್ ರೈಲು ಮತ್ತು ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ಜೂನ್ ತನಕ ವಿಸ್ತರಣೆ ಮಾಡಲಾಗಿದೆ. ಯಾವ-ಯಾವ ರೈಲುಗಳ ಸೇವೆ ವಿಸ್ತರಣೆ ಮಾಡಲಾಗಿದೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹುಬ್ಬಳ್ಳಿ-ಸಿಕಂದರಾಬಾದ್ ರೈಲು ಮಾರ್ಚ್ 31 ರಿಂದ ಜೂನ್ …

Read More »

ಗೋವಾ ಪ್ರವಾಸಿಗರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆಯ ವೇಗ ಹೆಚ್ಚುತ್ತಿರುವ ಹಿನ್ನೆಲೆ ಗೋವಾಗೆ ತೆರಳುವ ಪ್ರತಿಯೊಬ್ಬ ಪ್ರವಾಸಿಗರು ಕೊವಿಡ್-19 ನೆಗೆಟಿವ್ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ. ಕೊರೊನಾವೈರಸ್ ನೆಗೆಟಿವ್ ವರದಿ ಕಡ್ಡಾಯಕ್ಕೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.   ಕೊವಿಡ್-19 ಶಿಷ್ಟಾಚಾರ ಪಾಲನೆಯ ಉದ್ದೇಶದಿಂದಾಗಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳು ಅಂತರ-ರಾಜ್ಯ ಪ್ರಯಾಣಿಕರಿಗೆ ಕೊವಿಡ್-19 ನೆಗೆಟಿವ್ ವರದಿ …

Read More »

ಬೆಳಗಾವಿ ಉಪಚುನಾವಣೆ; ಇಂದಿನಿಂದ ನಾಮಪತ್ರ ಸಲ್ಲಿಕೆ

: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಚುನಾವಣಾ ಆಯೋಗ ಇಂದು ಅಧಿಸೂಚನೆ ಪ್ರಕಟಿಸಿದೆ. ಅಭ್ಯರ್ಥಿಗಳು ಇಂದಿನಿಂದ ನಾಮಪತ್ರಗಳನ್ನು ಸಲ್ಲಿಕೆ ಮಾಡಬಹುದು. ಮಾರ್ಚ್ 23ರ ಮಂಗಳವಾರದಿಂದ ಮಾರ್ಚ್ 30ರ ತನಕ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ. ಮಾ.31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 3ರಂದು ನಾಮಪತ್ರ ಹಿಂದಕ್ಕೆ ಪಡೆಯಲು ಅಂತಿಮ ದಿನ. ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಮತಗಳ ಎಣಿಕೆ ನಡೆಯಲಿದೆ.   ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ …

Read More »

ಎಸ್‌ಐಟಿ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ: ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣದಲ್ಲಿ ರಾಜಿನಾಮೆ ಸಲ್ಲಿಸಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಅವರ ಸಹೋದರ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್‌ಐಟಿ ತನಿಖೆಯ ಬಗ್ಗೆ ಚರ್ಚೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರಮೇಶ್‌ ಜಾರಕಿಹೊಳಿ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಿಡಿ ಪ್ರಕರಣ ಕುರಿತಂತೆ ಎಸ್‌ ಐ …

Read More »

ಜಿ.ಪಂ., ತಾ.ಪಂ. ಚುನಾವಣೆ ಮುಂದೂಡುವುದಿಲ್ಲ: ಸರಕಾರ ಸ್ಪಷ್ಟನೆ

ಬೆಂಗಳೂರು: ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಮಾರ್ಗಸೂಚಿಗಳ ಬಗ್ಗೆ ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ಸದಸ್ಯರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಗುರುವಾರ ಸಭೆ ನಡೆಸಿ ಪರಿಷ್ಕೃತ ಮಾರ್ಗಸೂಚಿಗಳನ್ನು ರಾಜ್ಯ ಚುನಾವಣ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಸರಕಾರ ಪ್ರಕಟಿಸಿದೆ. ಈ ನಡುವೆ, ಯಾವುದೇ ಕಾರಣಕ್ಕೂ ಜಿ.ಪಂ., ತಾ.ಪಂ. ಚುನಾವಣೆ ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸೋಮವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ವಿ. ಸುನಿಲ್‌ ಕುಮಾರ್‌ ಪ್ರಸ್ತಾವಿಸಿದ ವಿಷಯದ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಜಿ.ಪಂ., ತಾ.ಪಂ. ಕ್ಷೇತ್ರಗಳ …

Read More »