Breaking News

Daily Archives: ಮಾರ್ಚ್ 24, 2021

ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ಭಾರಿ ದಂಡದ ಬಿಸಿ ತಟ್ಟಲಿದೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 2,298 ಜನರಲ್ಲಿ ಇಂದು ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಸರ್ಕಾರ ಹೊಸ ಮಾರ್ಗಸೂಚಿ ಜಾರಿ ಮಾಡಿದೆ. ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ಭಾರಿ ದಂಡದ ಬಿಸಿ ತಟ್ಟಲಿದೆ. ಸಭೆ, ಸಮಾರಂಭ, ರ್ಯಾಲಿ ಆಯೋಜಕರಿಗೆ ಹಾಗೂ ಹೋಟೆಲ್ ಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದರೆ 10,000 ರೂ ದಂಡ ವಿಧಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ. * …

Read More »

ಸರಕಾರಕ್ಕೆ 12.99 ಕೋಟಿ ರೂ ರಾಜಸ್ವ ನಷ್ಟ ಬೆಳಗಾವಿ ಸಬ್ ರಜಿಸ್ಟ್ರಾರ್ ವಿಷ್ಣುತೀರ್ಥ ಅಮಾನತು

ಬೆಳಗಾವಿ – ಆಸ್ತಿ ನೊಂದಣಿ ವೇಳೆ ದರವನ್ನು ಅಪಮೌಲ್ಯಗೊಳಿಸಿ ನೊಂದಣಿ ಮಾಡಲಾಗಿದೆ. ಇದರಿಂದ ಸರಕಾರಕ್ಕೆ 12.99 ಕೋಟಿ ರೂ ರಾಜಸ್ವ ನಷ್ಟವಾಗಿದೆ ಎಂದು ಆರೋಪಿಸಿ ಬೆಳಗಾವಿ ಸಬ್ ರಜಿಸ್ಟ್ರಾರ್ ವಿಷ್ಣುತೀರ್ಥ ಅವರನ್ನು ಅಮಾನತುಗೊಳಿಸಲಾಗಿದೆ. 2015-18 ಅವಧಿಯಲ್ಲಿ ಒಟ್ಟೂ 9 ದಸ್ತಾವೇಜುಗಳಿಂದ 1299.12 ಲಕ್ಷ ರೂ. ನಷ್ಟವಾಗಿದೆ ಎಂದು ಆರೋಪಿಸಲಾಗಿದೆ. ಮುದ್ರಾಂಕ ಶುಲ್ಕ 12,78,79,056 ಹಾಗೂ ನೊಂದಣಿ ಶುಲ್ಕ 12,91,707 ರೂ. ಕಡಿಮೆ ಆಕರಿಸಲಾಗಿತ್ತು. ಈ ಬಗ್ಗೆ ವಿಷ್ಣುತೀರ್ಥ ಅವರಿಗೆ ನೋಟೀಸ್ …

Read More »

ಲೋಕಸಭಾ ಉಪಚುನಾವಣಾ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಫೈನಲ್:

ಬೆಂಗಳೂರು: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬೆಳಗಾವಿ ಉಪಚುನಾವಣೆ ಕ್ಷೇತ್ರಕ್ಕೆ ನಿರೀಕ್ಷೆಯಂತೆಯೇ ಸತೀಶ್ ಜಾರಕಿಹೊಳಿಯೇ ಕಾಂಗ್ರೆಸ್ ಅಭ್ಯರ್ಥಿ ಎಂದು ಘೋಷಿಸಿದರು. ಕೆಲ ದಿನಗಳ ಹಿಂದೆ ಬೆಳಗಾವಿ ಲೋಕಸಭಾ ಉಪಚುನಾವಣಾ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಫೈನಲ್ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದೀಗ ಅಧಿಕೃತವಾಗಿ ಸತೀಶ್ ಜಾರಕಿಹೊಳಿ ಹೆಸರನ್ನು ಘೋಷಿಸಿದ್ದಾರೆ. ಇದೇ ವೇಳೆ ಬಜೆಟ್ ಮೇಲಿನ ಚರ್ಚೆ …

Read More »

ಗೋಕಾಕ: ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸುತ್ತಿರುವುದು.

ಗೋಕಾಕ: ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ಮಹಿಳೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಾ ಅಬಲಿ ಎಂಬ ಸ್ಥಿತಿ ಮೀರಿ ಸಾಧನೆಯತ್ತ ದಾಪುಗಾಲು ಹಾಕುತ್ತಿದ್ದಾಳೆ ಎಂದು ಡಾ: ದೀಪಾ ತುಬಾಕಿ ಹೇಳಿದರು. ಬುಧವಾರದಂದು ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಕುಟುಂಬ ಮತ್ತು ವೃತ್ತಿ ನಿಭಾಯಿಸುತ್ತಾ ಮಹಿಳೆ ಸಾಧನೆಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ: ಜ್ಯೋತಿಲಕ್ಷ್ಮೀ ವಾಲಿ, ಡಾ: ವಿಜಯಲಕ್ಷ್ಮೀ ಪಲೋಟಿ, …

Read More »

ಗೋಕಾಕ: ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು.

ಗೋಕಾಕ: ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿಘ್ನಹಾರ ಪಾಟೀಲ, ಸಚೀನಗೌಡ, ರಾಕೇಶ ಕೊಳದುರ್ಗಿ ಇವರು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪ್ರಾಯೋಗಿಕ ವಿಭಾಗದಲ್ಲಿ ಚಿನ್ನ, ಲಿಖಿತ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಚೇರಮನ್ ಲಖನ ಜಾರಕಿಹೊಳಿ, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯಿನಿ ಸಿ.ಬಿ.ಪಾಗದ, ತರಬೇತಿದಾರ ಅಮೃತ ಕದ್ದು ಸೇರಿದಂತೆ …

Read More »

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಶಾಸಕರಿಗಾಗಿ ಭೋಜನಕೂಟ

ಬೆಂಗಳೂರು : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಇಂದು ಕಾಂಗ್ರೆಸ್ ಶಾಸಕರಿಗೆ ಔತಣಕೂಟ ಏರ್ಪಡಿಸಲಾಗಿದೆ. ಬೆಂಗಳೂರಿನ ಶಿವಾನಂದ ವೃತ್ತ ಸಮೀಪ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದಲ್ಲಿ ಏರ್ಪಡಿಸಲಾಗಿರುವ ಔತಣಕೂಟದಲ್ಲಿ ಕೈ ಶಾಸಕರು, ಪರಿಷತ್ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು ಭಾಗಿಯಾಗಿದ್ದರು. ಕಾಂಗ್ರೆಸ್ ಮುಖಂಡರ ಜೊತೆ ನಡೆದ ಭೋಜನಕೂಟದ ಸಮಯದಲ್ಲಿ ಕಲಾಪದ ಬಗ್ಗೆ ಚರ್ಚೆ ನಡೆಯಿತು. ಅಹೋರಾತ್ರಿ ಧರಣಿ ಬಗ್ಗೆ ಗಂಭೀರ ಚರ್ಚೆ : ಇಂದು ಅಹೋರಾತ್ರಿ ಧರಣಿ ಮಾಡಬೇಕೋ, …

Read More »

ಕಮ್ಮರ್ ತೋಡ್, ಪಲ್ಲಂಗ್ ತೋಡ್ ಸರ್ಕಾರವೆಂದು ಕಾಂಗ್ರೆಸ್ ನ ಸಿ.ಎಂ.ಇಬ್ರಾಹಿಂ ಲೇವಡಿ

ಬೆಂಗಳೂರು: ಕಮ್ಮರ್ ತೋಡ್, ಪಲ್ಲಂಗ್ ತೋಡ್ ಸರ್ಕಾರವೆಂದು ಕಾಂಗ್ರೆಸ್ ನ ಸಿ.ಎಂ.ಇಬ್ರಾಹಿಂ ಲೇವಡಿ ಮಾಡಿದರೆ, ಪ್ರತಿಪಕ್ಷಗಳಿಗೆ ತಾಕತ್ತಿದ್ದರೆ ತಮ್ಮ ತಮ್ಮ ಕುಟುಂಬ ಸದಸ್ಯರನ್ನು ಸದನಕ್ಕೆ ಕರೆ ತಂದು ಸಿಡಿ ಪ್ರಕರಣದ ಬಗ್ಗೆ ಚರ್ಚಿಸಲಿ ಎಂದು ಬಿಜೆಪಿಯ ತೇಜಸ್ವಿನಿಗೌಡ ಸವಾಲೆಸೆದರು. ವಿಧಾನ ಪರಿಷತ್ ಅಧಿವೇಶನ ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗುವ ಮುನ್ನ ಈ ಪ್ರಹಸನ ನಡೆಯಿತು. ಭೋಜನ ವಿರಾಮದ ಬಳಿಕ ಸದನ ಮತ್ತೆ ಸೇರುತ್ತಿದ್ದಂತೆಯೇ ಸಭಾಪತಿ ಪೀಠದ ಮುಂದೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ …

Read More »

ಸುಧಾಕರ್ ಕಾಮಿಡಿ ಮಾಡ್ತಿದ್ದಾರಾ : ಸುಧಾಕರ್ ಗೆ ಸೌಮ್ಯ ರೆಡ್ಡಿ ಟಾಂಗ್

ಬೆಂಗಳೂರು : ಡಾ.ಕೆ.ಸುಧಾಕರ್ ಅವರಿಗೆ ಮಾಡೋಕೆ ಏನೂ ಕೆಲಸ ಇಲ್ವಾ. ಜನ ನಗ್ತಾ ಇದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಶಾಸಕ ಸೌಮ್ಯ ರೆಡ್ಡಿ ಟಾಂಗ್ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ಡಾ.ಕೆ.ಸುಧಾಕರ್, ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಮತ್ತು ನನ್ನನ್ನು ಸೇರಿದಂತೆ ಎಲ್ಲ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆ ಆಗಲಿ. ಯಾರಿಗೆ ಅನೈತಿಕ ಸಂಬಂಧ ಇದೆ, ವಿವಾಹವೇತರ ಸಂಬಂಧ ಇದೆ ಎಂಬುವುದು ಗೊತ್ತಾಗಲಿ. ಸಿಎಂ ಆಗಿದ್ದಾಗ …

Read More »

ಕಂಡವರ ಹೆಂಡಿರ ಲೆಕ್ಕ ಹಾಕುವ ಮೊದಲು ಏರುತ್ತಿರುವ ಕೊರೊನಾ ಕೇಸ್‌ ಲೆಕ್ಕ ಹಾಕಿ

ಬೆಂಗಳೂರು, ಮಾರ್ಚ್ 24: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆಯ ಸಚಿವ ಡಾ.ಸುಧಾಕರ್ ಅವರ ‘ಏಕಪತ್ನೀವ್ರತಸ್ಥ’ ಹೇಳಿಕೆ ರಂಪ ರಾಮಾಯಣವಾಗಿ, ಕೊನೆಗೆ ಸಚಿವರು ಕ್ಷಮೆಯಾಚನೆ ಮಾಡಿದ್ದಾರೆ. “ನನ್ನ ಹೇಳಿಕೆ ಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರುಗಳು ಅರ್ಥ ಮಾಡಿಕೊಂಡರೆ ಸಾಕು. ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶ ನನ್ನ ಹೇಳಿಕೆಯ ಹಿಂದೆ ಇತ್ತು ಅಷ್ಟೇ. ನಮ್ಮಗಳ ತೇಜೋವಧೆ ಮಾಡಲು …

Read More »

ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ..?

ಬೆಂಗಳೂರು, ಮಾ.24- ತೀವ್ರ ಹಣಾಹಣಿಗೆ ಸಾಕ್ಷಿಯಾಗಲಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಮಸ್ಕಿಯಿಂದ ಮಾಜಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಬಸವ ಕಲ್ಯಾಣದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಖೂಬಾ, ಸೂರ್ಯವಂಶಿ ನಾಗಮಾರಪಲ್ಲಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಚಿವ ಜಗದೀಶ್ ಶೆಟ್ಟರ್, ಮಾಜಿ ಸಚಿವ ದಿ.ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಇಲ್ಲವೆ ಅವರ ಪತ್ನಿ ಹೆಸರನ್ನು …

Read More »