Breaking News
Home / 2021 / ಮಾರ್ಚ್ / 24 (page 2)

Daily Archives: ಮಾರ್ಚ್ 24, 2021

ಮಸ್ಕಿ ಉಪ ಚುನಾವಣೆ; ಪ್ರತಾಪ್ ಗೌಡ ಪಾಟೀಲ್ ನಾಮಪತ್ರ

ರಾಯಚೂರು, ಮಾರ್ಚ್ 24: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದೆ. ಪ್ರತಾಪ್ ಗೌಡ ಪಾಟೀಲ್ ಬುಧವಾರ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬಿಜೆಪಿ ಇನ್ನೂ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿಲ್ಲ. ಬುಧವಾರ ಪ್ರತಾಪ್ ಗೌಡ ಪಾಟೀಲ್ ಅಂಕಲಿಮಠಕ್ಕೆ ಭೇಟಿ ನೀಡಿದರು. ಗಚ್ಚಿನಮಠಕ್ಕೆ ಭೇಟಿ ಕೊಟ್ಟರು. ಬಳಿಕ ಬಿಜೆಪಿ ಕಚೇರಿಗೆ ಆಗಮಿಸಿದರು. ಅಲ್ಲಿಂದ ಕಾರ್ಯಕರ್ತರ ಜೊತೆ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಬಂದರು.   ಚುನಾವಣಾಧಿಕಾರಿ ಹಾಗೂ …

Read More »

ಹೈಕಮಾಂಡ್ ಟಿಕೆಟ್ ನೀಡಿದರೆ ಬೆಳಗಾವಿ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಶ್ರದ್ಧಾ ಶೆಟ್ಟರ್

ಬೆಳಗಾವಿ, ಮಾರ್ಚ್ 24: ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದರೆ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ದಿ.ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಶ್ರದ್ಧಾ ಶೆಟ್ಟರ್, ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧಳಾಗಿದ್ದೇನೆ ಎಂದರು. ದಿ.ಸುರೇಶ್ ಅಂಗಡಿ ಪುತ್ರಿ ಹಾಗೂ ಸಚಿವ ಜಗದೀಶ್ ಶೆಟ್ಟರ್ ಸೊಸೆ ಅಗಿರುವ ಶ್ರದ್ಧಾ ಶೆಟ್ಟರ್, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ …

Read More »

ಎಫ್‌ಡಿಐ ಆಕರ್ಷಣೆ: ಮೂರನೇ ಸ್ಥಾನದಲ್ಲಿ ರಾಜ್ಯ

ಬೆಂಗಳೂರು: ವಿದೇಶಿ ನೇರ ಬಂಡವಾಳ (ಎಫ್‌ಡಿಐ) ಆಕರ್ಷಣೆಯಲ್ಲಿ ಕರ್ನಾಟಕವು ದೇಶದಲ್ಲಿ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರು ಮಂಗಳವಾರ ವಿಧಾನ ಪರಿಷತ್‌ನಲ್ಲಿ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎFdಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘2017-18ರಲ್ಲಿ ರಾಜ್ಯಕ್ಕೆ ₹55,334 ಕೋಟಿ ಎಫ್‌ಡಿಐ ಬಂದಿದ್ದು, ದೇಶದಲ್ಲಿ ಮೂರನೇ ಸ್ಥಾನದಲ್ಲಿತ್ತು. 2018-19ರಲ್ಲಿ ₹46,963 ಕೋಟಿ ಹೂಡಿಕೆ ಮತ್ತು 2019-20ರಲ್ಲಿ ₹ 63,177 ಕೋಟಿ ಹೂಡಿಕೆಯೊಂದಿಗೆ ಎರಡನೇ …

Read More »

ಸಿ.ಡಿ. ಪ್ರಕರಣ: ಕಾರು ಚಾಲಕನ ಸಮೇತ ಉದ್ಯಮಿ ನಾಪತ್ತೆ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ತಮ್ಮ ಮನೆ ಮೇಲೆ ದಾಳಿ ಮಾಡುತ್ತಿದ್ದಂತೆ ಗ್ರಾನೈಟ್ ಉದ್ಯಮಿ ಶಿವಕುಮಾರ್ ಕಾರು ಚಾಲಕನ ಸಮೇತ ನಾಪತ್ತೆಯಾಗಿದ್ದಾರೆ. ಸಿ.ಡಿ ಸೃಷ್ಟಿಸಿದ್ದ ಆರೋಪಿಗಳಿಗೆ ನೆರವು ನೀಡಿದ್ದ ಮಾಹಿತಿ ಮೇರೆಗೆ ಎಸ್‌ಐಟಿ ಅಧಿಕಾರಿಗಳು, ಜೆ.ಪಿ.ನಗರದಲ್ಲಿರುವ ಶಿವಕುಮಾರ್ ಮನೆ ಮೇಲೆ ಇತ್ತೀಚೆಗೆ ದಾಳಿ ಮಾಡಿದ್ದರು. ಕೆಲ ದಾಖಲೆಗಳನ್ನೂ ಜಪ್ತಿ ಮಾಡಿದ್ದರು. ಅದಾದ ಮರುದಿನದಿಂದಲೇ ಶಿವಕುಮಾರ್ ಹಾಗೂ ಅವರ …

Read More »

ಹುತಾತ್ಮರ ದಿನಾಚರಣೆಯಂದೇ ರಕ್ತದಾನ

ಕಾರವಾರ: ಹುತಾತ್ಮ ದಿನದ ಪ್ರಯುಕ್ತ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಜಿಲ್ಲಾ ಘಟಕ ಕಾರವಾರ, ನಿಫಾ, ಕ್ರಿಮ್ಸ್‌ ಕಾರವಾರ, ಪಹರೆ ವೇದಿಕೆ ಹಾಗೂ ಇತರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದೇಶಾದ್ಯಂತ ನಡೆದ ರಕ್ತದಾನದ ಕಾರ್ಯಕ್ರಮ ಜಿಲ್ಲಾ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ರೆಡ್‌ಕ್ರಾಸ್‌ ಸಂಸ್ಥೆ ನೇತೃತ್ವದಲ್ಲಿ ನಡೆಯಿತು. ಡಿಸಿ ಮುಲ್ಲೈ ಮುಹಿಲನ್‌ ಅಧ್ಯಕ್ಷತೆ ವಹಿಸಿ ಇಂದು ರೆಡ್‌ಕ್ರಾಸ್‌ ಸಂಸ್ಥೆ ಜಗತ್ತಿನಾದ್ಯಾಂತ ಅತ್ಯಂತ ಪ್ರಭಾವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಜಗತ್ತಿನಾದ್ಯಂತ ರಕ್ತದ ಅವಶ್ಯಕತೆ …

Read More »

45+ ಎಲ್ಲರಿಗೂ ಲಸಿಕೆ : ಎ. 1ರಿಂದಲೇ ಜಾರಿಗೆ ಕೇಂದ್ರ ಸಂಪುಟ ನಿರ್ಧಾರ

ಹೊಸದಿಲ್ಲಿ: ನಿಮಗೆ 45 ವರ್ಷ ತುಂಬಿದ್ದರೆ ಎ. 1ರಿಂದ ನೀವು ಕೂಡ ಕೊರೊನಾ ಲಸಿಕೆ ಹಾಕಿಸಿಕೊಳ್ಳಬಹುದು. ಇದು ಕೇಂದ್ರ ಸಚಿವ ಸಂಪುಟ ಸಭೆಯ ನಿರ್ಣಯ. ಇದುವರೆಗೆ 45 ವರ್ಷಕ್ಕಿಂತ ಮೇಲ್ಪಟ್ಟ ಇತರ ರೋಗಪೀಡಿತರು ಮಾತ್ರ ಲಸಿಕೆ ಪಡೆಯಬಹುದಾಗಿತ್ತು. ಆದರೆ ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸಲು ಮತ್ತು ಲಸಿಕೆಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 45 ವರ್ಷ ತುಂಬಿದ ಆರೋಗ್ಯವಂತರಿಗೂ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಕೇಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌ …

Read More »

ಪ್ರಚೋದನಕಾರಿ ಭಾಷಣದ ಆರೋಪ: ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲು

ಶಿವಮೊಗ್ಗ: ಮಾರ್ಚ್‌ 20ರಂದು ಇಲ್ಲಿನ ಬಿ.ಎಚ್‌.ರಸ್ತೆಯ ಸೈನ್ಸ್ ಮೈದಾನದಲ್ಲಿ ನಡೆದ ದಕ್ಷಿಣ ಭಾರತದ ಮೊದಲ ರೈತರ ಮಹಾ ಪಂಚಾಯತ್‌ನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದ ರೈತರು ಬೆಂಗಳೂರಿಗೆ ದಿಗ್ಬಂಧನ ಹಾಕಬೇಕು. ಟ್ರ್ಯಾಕ್ಟರ್‌ಗಳನ್ನೇ ಅಸ್ತ್ರವಾಗಿ ಬಳಸಬೇಕು ಎಂದು ನೀಡಿದ್ದ ಹೇಳಿಕೆ ಆಧಾರಿಸಿ …

Read More »

ಮಹಾರಾಷ್ಟ್ರದಲ್ಲಿ ‘ಸಾರ್ಸ್‌-ಕೋವ್-2′(SARS-CoV-2) ಕೊರೊನಾ ವೈರಸ್‌ನ ರೂಪಾಂತರ ತಳಿಗಳು ಪತ್ತೆ

ಬೆಂಗಳೂರು: ಮಹಾರಾಷ್ಟ್ರದಲ್ಲಿ ‘ಸಾರ್ಸ್‌-ಕೋವ್-2′(SARS-CoV-2) ಕೊರೊನಾ ವೈರಸ್‌ನ ರೂಪಾಂತರ ತಳಿಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ‘ಮಹಾರಾಷ್ಟ್ರದಿಂದ ಕಳುಹಿಸಲಾದ ಕೋವಿಡ್‌-19 ದೃಢಪಟ್ಟ ಮಾದರಿಗಳ ವಂಶವಾಹಿ ರಚನೆಗಳ ವಿಶ್ಲೇಷಣೆ ನಡೆಸಲಾಗಿದ್ದು, 2020ರ ಡಿಸೆಂಬರ್‌ನಲ್ಲಿ ವೈರಸ್‌ ರಚನೆಗಳಿಗೂ ಈಗಿನ ಮಾದರಿಗಳಲ್ಲಿನ ರಚನೆಗಳಿಗೂ ಹೋಲಿಕೆ ಮಾಡಲಾಗಿದೆ. ಕೊರೊನಾ ವೈರಸ್‌ನ ಇ484ಕ್ಯು ಮತ್ತು ಎಲ್‌452ಆರ್‌ ರೂಪಾಂತರಗಳು ಹೆಚ್ಚಿರುವುದು ಪತ್ತೆಯಾಗಿದೆ. ವಿಶ್ಲೇಷಣೆಗೆ ಒಳಪಡಿಸಲಾದ ಮಾದರಿಗಳ ಪೈಕಿ ಶೇ 15ರಿಂದ 20ರಷ್ಟು ಮಾದರಿಗಳಲ್ಲಿ ಈ ಹೊಸ ರೂಪಾಂತರಿ ವೈರಸ್‌ಗಳು ಪತ್ತೆಯಾಗಿವೆ. ಈ …

Read More »

ʼಕೊರೊನಾʼ ಲಾಕ್ ಡೌನ್ ನಂತ್ರದ ವೈಯಕ್ತಿಕ ಸಾಲ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಕೊರೊನಾದಿಂದ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕುಸಿದಿದ್ದು, ಇದ್ರ ಮಧ್ಯೆ ವೈಯಕ್ತಿಕ ಸಾಲಗಳ ಬೇಡಿಕೆ ವೇಗವಾಗಿ ಹೆಚ್ಚುತ್ತಿದೆ. ಮುಂಬೈನಲ್ಲಿ ಶೇಕಡಾ 25ರಷ್ಟು ಜನರು ಸ್ವಂತ ಉದ್ಯಮವನ್ನು ಪ್ರಾರಂಭಿಸಲು ವೈಯಕ್ತಿಕ ಸಾಲವನ್ನು ತೆಗೆದುಕೊಂಡಿದ್ದಾರೆ. ಶೇಕಡಾ 17 ರಷ್ಟು ಜನರು ದ್ವಿಚಕ್ರ ವಾಹನ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ತೆಗೆದುಕೊಂಡಿದ್ದಾರೆ. ಮನೆಯಿಂದ ಕೆಲಸ ಮಾಡ್ತಿರುವ ಶೇಕಡಾ 15ರಷ್ಟು ಮಂದಿ ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳಂತಹ ಎಲೆಕ್ಟ್ರಾನಿಕ್ ಉಪಕರಣಗಳನ್ನು ಖರೀದಿಸಲು ಸಾಲ ಪಡೆದಿದ್ದಾರೆ. ಇಂಡಿಯಾ ಲ್ಯಾಂಡ್ಸ್ ಈ …

Read More »

ಭಾರತದ ರಾಷ್ಟ್ರೀಯ ಹೆದ್ದಾರಿಯಿಂದ 34000 ಕೋಟಿ ಆದಾಯ: ಗಡ್ಕರಿ

ನವದೆಹಲಿ, ಮಾರ್ಚ್ 24: ಭಾರತದ ರಾಷ್ಟ್ರೀಯ ಹೆದ್ದಾರಿ ಟೋಲ್‌ನಿಂದ ತಿಂಗಳಾಂತ್ಯದ ವೇಳೆಗೆ 34,000 ಕೋಟಿ ರೂಪಾಯಿ ತೆರಿಗೆ ಸಂಗ್ರಹಿಸಲಾಗುವುದು ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ನವದೆಹಲಿ ಮೂಲದ ಕೈಗಾರಿಕಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ. “ನಾವು ರಸ್ತೆಗಳಿಂದ ಹಣ ಗಳಿಸುತ್ತಿದ್ದೇವೆ. ಸಾರ್ವಜನಿಕರಿಂದಲೂ ಈ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 2021ನೇ ಆರ್ಥಿಕ ಸಾಲಿನ ಅಂತ್ಯದ ವೇಳೆಗೆ ಅಂದರೆ ಮಾರ್ಚ್ 31ರ …

Read More »