Breaking News
Home / 2021 / ಮಾರ್ಚ್ / 24 (page 5)

Daily Archives: ಮಾರ್ಚ್ 24, 2021

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಕಠಿಣ ಕ್ರಮ : ಸಚಿವ ಜಗದೀಶ್ ಶೆಟ್ಟರ್

ಬೆಂಗಳೂರು : ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಕೈಗಾರಿಕಾ ನೀತಿ 2020-25 ರ ಅನ್ವಯ ಸರ್ಕಾರದ ಸೌಲಭ್ಯ ಪಡೆದು ಸ್ಥಾಪಿಸಿರುವ ಕೈಗಾರಿಕೆಗಳಲ್ಲಿ ಅರ್ಹತೆ ಇರುವ ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.   ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ. 100 …

Read More »

ಪೊಲೀಸರಿಗೆ ಭರ್ಜರಿ ಸಿಹಿಸುದ್ದಿ : ಕಡ್ಡಾಯ ವಾರದ ರಜೆಗೆ ಮತ್ತೊಮ್ಮೆ ಆದೇಶ

ಬೆಂಗಳೂರು : ಪೊಲೀಸರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗೆ ಕಡ್ಡಾಯ ವಾರದ ರಜೆ ನೀಡುವಂತೆ ಎಲ್ಲ ಠಾಣಾಧಿಕಾರಿಗಳಿಗೆ ನಗರ ಪೊಲೀಸ್ ಆಯುಕ್ತ ಕಚೇರಿ ಆಡಳಿತ ವಿಭಾಗ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ.   ಡಿಸಿಪಿ ನಿಶಾ ಜೇಮ್ಸ್ ಹೊರಡಿಸಿರುವ ಆದೇಶದ ಪ್ರಕಾರ, ವಿಪತ್ತು, ಚುನಾವಣೆ ಮತ್ತು ಬಂದೋಬಸ್ತ್ ಕರ್ತವ್ಯ ಹೊರತು ಪಡಿಸಿ ಉಳಿದ ಎಲ್ಲ ಸಮಯದಲ್ಲಿ ಸಿಬ್ಬಂದಿಗೆ ಕಡ್ಡಾಯವಾಗಿ ರಜೆ ನೀಡಬೇಕು. ಇದಕ್ಕಾಗಿ ಆಯಾ ಠಾಣಾಧಿಕಾರಿಗಳು ಸಿಬ್ಬಂದಿಯ …

Read More »

ರೈಲಿನಲ್ಲಿ ಸ್ಮೋಕ್ ಮಾಡಿದ್ರೆ 1000 ರೂ. ದಂಡ, 3 ವರ್ಷ ಜೈಲು ಶಿಕ್ಷೆ!

ನವದೆಹಲಿ : ಧೂಮಪಾನಿಗಳಿಗೆ ರೈಲ್ವೆ ಇಲಾಖೆ ಬಿಗ್ ಶಾಕ್ ನೀಡಿದ್ದು, ರೈಲಿನಲ್ಲಿ ಪ್ರಯಾಣಿಸುವಾಗ ಧೂಮಪಾನ ಮಾಡಿದರೆ 1000 ರೂ. ದಂಡ ಹಾಗೂ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಮುಂದಾಗಿದ್ದು, ಈ ನಿಯಮ ಸೋಮವಾರದಿಂದಲೇ ಕಟ್ಟುನಿಟ್ಟಾಗಿ ಜಾರಿಗೆ ಬಂದಿದೆ. ರೈಲುಗಳಲ್ಲಿ ಸಂಭವಿಸುತ್ತಿರುವ ಅಗ್ನಿ ದುರಂತ ತಡೆಯುವುದಕ್ಕಾಗಿ ರೈಲ್ವೆ ಇಲಾಖೆ ಈ ಆದೇಶ ಹೊರಡಿಸಿದ್ದು, ಧೂಮಪಾನ ಮಾಡುವುದು ಮತ್ತು ಉರಿಯುವಂತಹ ವಸ್ತುಗಳ ಸಾಗಣೆಗೆ ರೈಲಿನಲ್ಲಿ ಸಂಪೂರ್ಣ ನಿಷೇಧ ಮಾಡಲಾಗಿದೆ. ರೈಲ್ವೆ ಕಾಯ್ದೆಯ …

Read More »

BPL’ ಕಾರ್ಡ್ : ಟ್ಯಾಕ್ಸಿ, ಟ್ರ್ಯಾಕ್ಟರ್ ಹೊಂದಿದವರಿಗೆ ರಾಜ್ಯ ಸರ್ಕಾರದಿಂದ ಶುಭಸುದ್ದಿ

ಬೆಂಗಳೂರು : ಜೀವನೋಪಾಯಕ್ಕಾಗಿ ಟ್ಯಾಕ್ಸಿ, ಟ್ರಾಕ್ಟರ್ ಹೊಂದಿರುವವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಟ್ಯಾಕ್ಸಿ, ಟ್ರಾಕ್ಟರ್ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ವಿತರಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸುವುದಾಗಿ ತಿಳಿಸಿದೆ.   ವಿಧಾನಪರಿಷತ್ ನಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಶಾಂತರಾಮ ಸಿದ್ದಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಜೀವನೋಪಾಯಕ್ಕಾಗಿ ಟ್ಯಾಕ್ಸಿ, ಟ್ರಾಕ್ಟರ್ ಇರುವ ಕುಟುಂಬಸ್ಥರಿಗೆ ಬಿಪಿಎಲ್ ಕಾರ್ಡ್ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದಾಗಿ ಈ ಕುಟುಂಬಗಳು ಸಂಕಷ್ಟದಲ್ಲಿ …

Read More »