Breaking News
Home / 2021 / ಮಾರ್ಚ್ / 28 (page 4)

Daily Archives: ಮಾರ್ಚ್ 28, 2021

ಡಿಕೆಎಸ್​ ವಿರುದ್ಧದ ಆರೋಪದ ಗಂಭೀರ ತನಿಖೆ ನಡೆಸಬೇಕು- ಪ್ರಹ್ಲಾದ್ ಜೋಶಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿ ಪ್ರಕರಣದ ಸಂತ್ರಸ್ತೆಯ ಯುವತಿಯ ಪೋಷಕರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು.. ಯುವತಿಯ ಪೋಷಕರು ಡಿ.ಕೆ. ಶಿವಕುಮಾರ್ ಮೇಲೆ ಮಾಡಿರುವ ಆರೋಪ ವಿಚಾರ ಗಂಭೀರದುದ್ದು. ಈಗಾಗಲೇ ಸಿಡಿ ವಿಚಾರವಾಗಿ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಗೆ ಸಂಪೂರ್ಣವಾಗಿ ಅಧಿಕಾರ ನೀಡಲಾಗಿದೆ. ಎಸ್ ಐ ಟಿ ಡಿ.ಕೆ. ಶಿವಕುಮಾರ್ ವಿರುದ್ಧ …

Read More »

ಕೇಂದ್ರ ಸರ್ಕಾರ ರೈತರ ಬೇಡಿಕೆ ಈಡೇರಿಸದಿದ್ರೆ 16 ರಾಜ್ಯಗಳ ವಿದ್ಯುತ್ ಸಂಪರ್ಕ ಕಟ್- ರಾಕೇಶ್ ಟಿಕಾಯತ್

ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸದಿದ್ದರೆ 16 ರಾಜ್ಯಗಳ ವಿದ್ಯುತ್ ಸಂಪರ್ಕವನ್ನೇ ಕಟ್ ಮಾಡ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರೈತ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. ರಾಜಸ್ಥಾನದಲ್ಲಿ ನಡೆಯುತ್ತಿದ್ದ ಮಹಾಪಂಚಾಯತ್​​ನಲ್ಲಿ ಪಾಲ್ಗೊಳ್ಳಲು ತೆರಳುವ ವೇಳೆ ರಾಕೇಶ್ ಟಿಕಾಯತ್ ಈ ಹೇಳಿಕೆ ನೀಡಿದ್ದಾರೆ. ಮುಂದುವರೆದು ಕೇಂದ್ರದಲ್ಲಿ ಸರ್ಕಾರವೇ ಇಲ್ಲ. ವ್ಯಾಪಾರಿಗಳು ದೇಶವನ್ನ ಆಳುತ್ತಿದ್ದಾರೆ. ಅವರು ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡಿದ್ದಾರೆ. ದೇಶದ ಜನರು ಅವರನ್ನ ಸರ್ಕಾರದಿಂದ …

Read More »

; ಕಲುಷಿತ ಗಾಳಿ ಶುದ್ಧೀಕರಿಸಲಿದೆ ಈ ಯಂತ್ರ

ಬೆಂಗಳೂರು, ಮಾರ್ಚ್ 28: ಮಲಿನಗಾಳಿಯನ್ನು ಶುದ್ಧೀಕರಿಸಲು ಯಂತ್ರವನ್ನು ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರು ನಗರದ ಹಡ್ಸನ್ ವೃತ್ತದ ಬಳಿ ಇದನ್ನು ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗಿದೆ. ನೂತನ್ ಲ್ಯಾಬ್ಸ್ ಕರ್ನಾಟಕ ಎಂಬ ಸ್ಟಾರ್ಟ್‌ ಅಪ್ ಕಂಪನಿ ಹೊಂಜು ಗೋಪುರ (Smog tower) ಅಭಿವೃದ್ಧಿಪಡಿಸಿದೆ. ಭಾರತೀಯ ವಿಜ್ಞಾನ ಸಂಸ್ಥೆಯು ಇದಕ್ಕೆ ಸಹಕಾರ ನೀಡಿದೆ. ವಿದೇಶದಿಂದ ಈಗಾಗಲೇ ಯಂತ್ರಕ್ಕೆ ಬೇಡಿಕೆಯೂ ಬರುತ್ತಿದೆ. ಗೋಪುರ ಯಂತ್ರವು 15 ಅಡಿ ಎತ್ತರ, 6 ಅಡಿ ಸುತ್ತಳತೆ ಹೊಂದಿದೆ. ಯಂತ್ರ ಕಾರ್ಯ …

Read More »

40ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ: ಹಳಸಿದ ಆಹಾರ ಸೇವನೆಯಿಂದ ವಾಂತಿಭೇದಿ ಶಂಕೆ

ಗುಂಡ್ಲುಪೇಟೆ/ಚಾಮರಾಜನಗರ: ತಾಲ್ಲೂಕಿನ ಚೆನ್ನವಡೆಯನಪುರದಲ್ಲಿ ಶುಕ್ರವಾರ 40ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿರುವುದು ಕಲುಷಿತ ನೀರು ಸೇವನೆಯಿಂದಲ್ಲ, ಹಳಸಿದ ಆಹಾರ ಸೇವನೆಯಿಂದ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಶಂಕೆ ವ್ಯಕ್ತಪಡಿಸಿದ್ದಾರೆ. ಗ್ರಾಮದ ನಾಗಯ್ಯ ಅವರ ನೂತನ ಮನೆಯ ಗೃಹ ಪ್ರವೇಶ ಸಮಾರಂಭ ಮಾ.25ರಂದು ಗುರುವಾರ ನಡೆದಿದೆ. ಈ ಕಾರ್ಯಕ್ರಮದಲ್ಲಿ ಮಧ್ಯಾಹ್ನದಿಂದ ರಾತ್ರಿವರೆಗೂ ಸುಮಾರು 300 ಜನ ಊಟ ಮಾಡಿದ್ದಾರೆ. ಆದರೆ ರಾತ್ರಿ ವೇಳೆ ಊಟ ಮಾಡಿದ 40 ಜನರಿಗೆ …

Read More »

ಪೊಲೀಸರೆದುರೇ ಬಿಜೆಪಿ ಶಾಸಕನ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಹಾಕಿದ ರೈತರ ಗುಂಪು!

ಮುಕ್ತ್ಸಾರ್: ಉದ್ರಿಕ್ತ ರೈತರ ಗುಂಪೊಂದು ಬಿಜೆಪಿ ಶಾಸಕನ ಮೇಲೆ ಮುತ್ತಿಗೆ ಹಾಕಿ ಬಟ್ಟೆ ಹಾರಿದು ಹಾಕಿದ ಘಟನೆ ಪಂಜಾಬ್ ರಾಜ್ಯದ ಮುಕ್ತ್ಸಾರ್ ಜಿಲ್ಲೆಯ ಮಾಲೌಟ್ ನಲ್ಲಿ ಶನಿವಾರ ನಡೆದಿದೆ. ಅಬೋಹರ್ ಬಿಜೆಪಿ ಶಾಸಕ ಅರುಣ್ ನಾರಂಗ್ ಹಲ್ಲೆಗೊಳಗಾದವರು. ಮಲೌಟ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲು ಶಾಸಕ ಹೋದಾಗ ರೈತರ ಗುಂಪು ಹಲ್ಲೆ ನಡೆಸಿದೆ. ಪ್ರತಿಭಟನಾ ನಿರತ ರೈತರು, ಶಾಸಕ ಅರುಣ್ ನಾರಂಗ್ ಗಾಗಿ ಬಿಜೆಪಿ ಕಚೇರಿಯ ಮುಂದೆ ಕಾದು ಕುಳಿತಿದ್ದರು. ಅರುಣ್ …

Read More »

ಸಿಡಿ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಏನು.?

ಹಾವೇರಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಷಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಹಾನಾಯಕ ಮತ್ತು ಬಿಜೆಪಿ ಯುವರಾಜನ ಬಳಿ ಸಿಡಿ ತಯಾರಿಸುವ ಕಾರ್ಖಾನೆಗಳಿವೆ. ಇವರು ಸಿಡಿಗಳನ್ನು ಖರೀದಿ ಮಾಡುತ್ತಾರೆ. ಈಗಾಗಲೇ ಕಾಂಗ್ರೆಸ್ ಮಹಾನಾಯಕನ ಹೆಸರು ಹೊರಬಿದ್ದಿದೆ. ಕೆಲವೇ ದಿನಗಳಲ್ಲಿ ಬಿಜೆಪಿ ಯುವರಾಜನ ಹೆಸರು ಹೊರಬರಲಿದೆ ಎಂದು ಹೇಳಿದ್ದಾರೆ. ಮಹಾನಾಯಕ ಮತ್ತು ಯುವರಾಜರು ಹೆಣ್ಣುಮಕ್ಕಳನ್ನು ಬಿಟ್ಟು …

Read More »

‘ರಾಜ್ಯದಲ್ಲಿ 17 ಕಾಂಗ್ರೆಸ್, ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟರು; ತಮ್ಮನ್ನು ಗೆಲ್ಲಿಸಿದ ಪಕ್ಷಕ್ಕೆ ದ್ರೋಹ ಬಗೆದರು’

ಶಿವಮೊಗ್ಗ: ರಮೇಶ್ ಜಾರಕಿಹೊಳಿ​ ಸಿಡಿ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ಸಚಿವ ಕೆ.ಎಸ್​.ಈಶ್ವರಪ್ಪ ನಿರಾಕರಿಸಿದ್ದಾರೆ. ಜೊತೆಗೆ, ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಗರಂ ಸಹ ಆದರು. ಒಂದು ದೇಶ ಒಂದು ಚುನಾವಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಒಳ್ಳೇ ವಿಚಾರ ಕೇಳಿದ್ದೇನೆ. ಆ ದರಿದ್ರ ಸಿಡಿ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಈಶ್ವರಪ್ಪ ಹೇಳಿ ಹೊರಟು ಹೋದರು. ಇದಕ್ಕೂ ಮುಂಚೆ, ನಗರದಲ್ಲಿ ನಡೆದ ಒಂದು ದೇಶ ಒಂದು ಚುನಾವಣೆ …

Read More »

ಅಚ್ಛೇ ದಿನ್‌ ಬರುತ್ತದೆ ಎಂದು ಕಾಯುತ್ತಾ ಕೂರಬೇಡಿ, ಅಚ್ಛೇ ದಿನ್‌ ಬರುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಅಚ್ಛೇ ದಿನ್‌ ಬರುತ್ತದೆ ಎಂದು ಕಾಯುತ್ತಾ ಕೂರಬೇಡಿ. ಅಚ್ಛೇ ದಿನ್‌ ಯಾವತ್ತೂ ಬರುವುದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ. ತಮಿಳುನಾಡಿನ ಥಳಿ, ಹೊಸೂರು ಹಾಗೂ ವೇಪನಪಲ್ಲಿ ವಿಧಾನಸಭೆ ಕ್ಷೇತ್ರಗಳಲ್ಲಿ ಶನಿವಾರ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮಿಳುನಾಡಿನ ಜನತೆ ಈವರೆಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅವರಿಗೆ ನಮೋ ನಮಃ ಎಂದು ತಿಳಿಸಿದರು. ಎಐಎಡಿಎಂಕೆ ಹೆಗಲ ಮೇಲೆ ಕುಳಿತು ಬಿಜೆಪಿ ತಮಿಳುನಾಡಿನಲ್ಲಿ …

Read More »

ಯಶಸ್ವಿ ಶಸ್ತ್ರಚಿಕಿತ್ಸೆ: ಯುವತಿ ಹೊಟ್ಟೆಯಲ್ಲಿದ್ದ 8 ಕೆ.ಜಿ. ಗಡ್ಡೆ ಹೊರಕ್ಕೆ

ಸಾಗರ: ಇಲ್ಲಿನ ತಾಯಿ ಮಗು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು 21 ವರ್ಷದ ಯುವತಿಯ ಹೊಟ್ಟೆಯಲ್ಲಿದ್ದ 8 ಕೆ.ಜಿ. ಗಡ್ಡೆಯನ್ನು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಪ್ರಸೂತಿ ತಜ್ಞರಾದ ಡಾ. ಪ್ರತಿಮಾ ಅವರ ಬಳಿ ಸೊರಬ ತಾಲ್ಲೂಕಿನ ಯುವತಿಯೊಬ್ಬರು ತೀವ್ರವಾಗಿ ಕಾಡುತ್ತಿದ್ದ ಹೊಟ್ಟೆನೋವಿಗೆ ಚಿಕಿತ್ಸೆ ಪಡೆಯಲು ಬಂದಿದ್ದರು. ಯುವತಿಯನ್ನು ಸ್ಕ್ಯಾನಿಂಗ್‌ಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ದೊಡ್ಡ ಗಾತ್ರದ ಗಡ್ಡೆ ಬೆಳೆದಿರುವುದು ಪತ್ತೆಯಾಗಿದೆ. ಅದನ್ನು ಹಾಗೆಯೇ ಬಿಟ್ಟರೆ ಮುಂದಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತಿರುಗುವ …

Read More »

ಶೀಘ್ರವೇ `ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್’ ರೈಲು

ಹುಬ್ಬಳ್ಳಿ : ರಾಜ್ಯದ ರೈಲು ಪ್ರಯಾಣಿಕರಿಗೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ರೈಲು ಆರಂಭಕ್ಕೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಮ್ಮತಿ ಸೂಚಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹುಬ್ಬಳ್ಳಿ ಬೆಂಗಳೂರು ಮಧ್ಯೆ ಸೂಪರ್ ಫಾಸ್ಟ್ ರೈಲು ಆರಂಭಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಹುಬ್ಬಳ್ಳಿಯಿಂದ ಬೆಂಗಳೂರಿಗೆ ರೈಲು ಪ್ರಯಾಣದ ಅವಧಿ 8 …

Read More »