Breaking News
Home / 2021 / ಮಾರ್ಚ್ (page 3)

Monthly Archives: ಮಾರ್ಚ್ 2021

ಸಿದ್ದುಗೆ ಇನ್ನೂ ಮೆಚ್ಯುರಿಟಿ ಬಂದಿಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ

ಬೆಳಗಾವಿ: ನಿಜವಾಗಿ ಸೈಡ್‌ ಆಯಕ್ಟರ್‌ ಯಾರು ಎಂಬುದು ಸಿದ್ದರಾಮಯ್ಯಗೆ ಚೆನ್ನಾಗಿ ಗೊತ್ತಿದೆ. ಅವರಿಗೆ 60 ವರ್ಷ ಮೇಲ್ಪಟ್ಟಾಗಿದ್ದರೂ ಈಗಲೂ ರಾಹುಲ್‌ ಗಾಂಧಿ ಮುಂದೆ ಕೈ ಕಟ್ಟಿ ನಿಲ್ಲುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ನಲ್ಲಿ ಎಂತಹ ವ್ಯವಸ್ಥೆ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸಿದ್ದರಾಮಯ್ಯಗೆ ಇನ್ನೂ ಮೆಚ್ಯುರಿಟಿ ಬಂದಿಲ್ಲ. ಅವರು ಈಗಲೂ ತಮಗಿಂತ ಕಿರಿಯರಾದ, ಏನೂ …

Read More »

ಬೆಳಗಾವಿ ಲೋಕಸಭಾ ಉಪಚುನಾವಣೆ : 23 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಗೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಸೇರಿದಂತೆ ಒಟ್ಟು 23 ಜನರು ನಾಮಪತ್ರ ಸಲ್ಲಿಸಿದ್ದಾರೆ. ಅಂತಿಮ ದಿನವಾದ ಮಂಗಳವಾರ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಸೇರಿದಂತೆ 15 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ನಾಳೆ ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಪ ಚುನಾವಣೆಗೆ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ಮುಕ್ತಾಯವಾದ ನಂತರ ಒಟ್ಟು 23 ಮಂದಿ 33 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಕೊನೆಯ ದಿನವಾದ ಮಂಗಳವಾರ …

Read More »

ಯುವತಿ ಹೇಳಿಕೆ ದಾಖಲು ; ನ್ಯಾಯಾಧೀಶರ ಮುಂದೆ ಹಾಜರು

ಬೆಂಗಳೂರು: ಇಪ್ಪತ್ತೂಂಬತ್ತು ದಿನಗಳಿಂದ ರಾಷ್ಟ್ರಾದ್ಯಂತ ಸುದ್ದಿಯಾಗಿರುವ ರಮೇಶ್‌ ಜಾರಕಿಹೊಳಿ ಅವರ ವಿವಾದಿತ ಸಿ.ಡಿ. ಪ್ರಕರಣದ ಕಣ್ಣಾಮುಚ್ಚಾಲೆ ಆಟಕ್ಕೆ ಮಂಗಳವಾರ ಬಹುತೇಕ ತೆರೆಬಿದ್ದಿದೆ. ಸಿ.ಡಿ.ಯಲ್ಲಿದ್ದಳು ಎನ್ನಲಾದ ಯುವತಿ ಮಂಗಳವಾರ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಎಸ್‌ಐಟಿ ಸಂಜೆ ವೇಳೆಗೆ ಯುವತಿಯನ್ನು ಆಡುಗೋಡಿಯಲ್ಲಿ ಇರುವ ಟೆಕ್ನಿಕಲ್‌ ಸೆಲ್‌ಗೆ ಕರೆದೊಯ್ದು ವಿಚಾರಣೆ ನಡೆಸಿತು. ಈ ವೇಳೆ ಅವರು ರಮೇಶ್‌ ಜಾರಕಿಹೊಳಿ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಬುಧವಾರ ಬೆಳಗ್ಗೆ 10 ಗಂಟೆಗೆ …

Read More »

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ನಾಳೆಯಿಂದ ಟಿವಿ, ಎಸಿ, ರೆಫ್ರಿಜರೇಟರ್ ಬೆಲೆ ಏರಿಕೆ!

ನವದೆಹಲಿ: ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಏಪ್ರಿಲ್ 1 ರಿಂದ ಏರ್ ಕಂಡೀಷನರ್, ರೆಫ್ರಿಜರೇಟರ್, ಕೂಲರ್, ಟಿವಿಗಳ ಬೆಲೆ ಹೆಚ್ಚಿಸಲು ಕಂಪನಿಗಳು ನಿರ್ಧರಿಸಿವೆ ಎನ್ನಲಾಗಿದೆ.   ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಪನಿಗಳು ಎಲೆಕ್ಟ್ರಾನಿಕ್ ವಸ್ತುಗಳ ಬೆಲೆಗಳನ್ನು ಹೆಚ್ಚಿಸಲು ಮುಂದಾಗಿವೆ. ಬಹುತೇಕ ಎಲ್ಲ ಕಂಪನಿಗಳು ಏಪ್ರಿಲ್ ನಿಂದ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿವೆ. 2021ರಲ್ಲಿ ಉಪಕರಣಗಳ ಬೆಲೆಯಲ್ಲಿ ಇದು ಎರಡನೇ ಏರಿಕೆ ಯಾಗಿದೆ. …

Read More »

ಇನ್​ಸ್ಟಾಗ್ರಾಂನಲ್ಲಿ ಹುಟ್ಟಿದ ಪ್ರೀತಿ ಮದ್ವೆ ಬಳಿಕ ಆತ್ಮಹತ್ಯೆ

ಹೈದರಾಬಾದ್​: ಪ್ರೀತಿ ಮತ್ತು ಮದುವೆ ಹೆಸರಿನಲ್ಲಿ ಪ್ರಿಯಕರನಿಂದ ಮೋಸ ಹೋದ ಯುವತಿ ತಂದೆಗೆ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಐಶ್ವರ್ಯಾ (25) ಮೃತ ಯುವತಿ. ಸೂರ್ಯಪೇಟ್​ ಮೂಲದ ಐಶ್ವರ್ಯಾ, ಖಾಸಗಿ ಕಂಪನಿಯೊಂದರ ಉದ್ಯೋಗಿ ಆಗಿದ್ದಳು. ಇನ್​ಸ್ಟಾಗ್ರಾಂ ಮೂಲಕ ಮಿಯಾಪುರ್​ ಮೂಲದ ಆಶಿರ್​ ಕುಮಾರ್​ (26) ಎಂಬಾತನ ಪರಿಚಯ ಆಗಿತ್ತು. ಆಶಿರ್​ ಖೈರಾತಬಾದ್​ನ ಖಾಸಗಿ ಕಂಪನಿಯ ಉದ್ಯೋಗಿ. ಸ್ನೇಹದ ಹೆಸರಿನಲ್ಲಿ ಐಶ್ವರ್ಯಾಳನ್ನು ಆಶಿರ್​ ಪರಿಚಯ ಮಾಡಿಕೊಂಡಿದ್ದಾನೆ. …

Read More »

“ಅಭಿವೃದ್ಧಿಯೇ ಬಿಜೆಪಿಯ ಮೂಲ ಮಂತ್ರ”

ಬೆಳಗಾವಿ :ಇಂದು ಬೆಳಗಾವಿಯಲ್ಲಿ, ಲೋಕಸಭಾ ಉಪಚುನಾವಣೆ ನಿಮಿತ್ತ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಜಿ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಜಿ, ಅವರ ಮುಖ್ಯ ಉಪಸ್ಥಿತಿಯಲ್ಲಿ, ನಮ್ಮ ಪಕ್ಷದ ಅಭ್ಯರ್ಥಿ ಶ್ರೀಮತಿ ಮಂಗಲಾ ಸುರೇಶ್ ಅಂಗಡಿ ಅವರ ಪರವಾಗಿ ನಡೆದ ಪ್ರಚಾರ ಸಮಾವೇಶದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ …

Read More »

ಏರ್​ಪೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಗಳೂರು: ದಿನಪೂರ್ತಿ ದುಡಿದರೂ ಹಸಿವು ನೀಗುವಷ್ಟು ಸಂಪಾದಿಸಲಾಗದಿರುವ ಸಂಕಷ್ಟದಿಂದ ನೊಂದು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್​ಪೋರ್ಟ್​ನಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ.70 ಸುಟ್ಟ ಗಾಯಗಳಿಂದ ಪ್ರತಾಪ್ ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಡರಾತ್ರಿ‌ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್​​ಪೋರ್ಟ್​ನ​ ಟ್ಯಾಕ್ಸಿ …

Read More »

ಬೆಳಗಾವಿಗೆ ಬನ್ನಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ- ಜಾರಕಿಹೊಳಿಗೆ ಸಿಎಂ ಬುಲಾವ್

ಬೆಳಗಾವಿ: ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದುರುದ್ದೇಶಪೂರಿತ ಆರೋಪ ಮಾಡಲಾಗುತ್ತಿದೆ. ರಮೇಶ್ ಜಾರಕಿಹೊಳಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಬೇಕೆಂದು ಅವರಲ್ಲಿ ವಿನಂತಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಲಾಗುತ್ತಿದ್ದು, ಎಸ್‍ಐಟಿ ಸಮರ್ಪಕವಾಗಿ ನಡೆಸುತ್ತಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರ ಬರಲಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಅನಗತ್ಯ, ರಾಜಕೀಯ ದುರುದ್ದೇಶಪೂರಿತ ಆರೋಪಗಳನ್ನು ಮಾಡುತ್ತಿದ್ದಾರೆ. …

Read More »

ಮಹಾರಾಷ್ಟ್ರದ ಕೋಲ್ಹಾಪುರ ಮಹಾಲಕ್ಷ್ಮೀ ದೇವಾಲಯಕ್ಕೆ ರಮೇಶ್ ಜಾರಕಿಹೊಳಿ ಭೇಟಿ

ಬೆಳಗಾವಿ: ಸಿಡಿ ಲೇಡಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಟೆಂಪಲ್ ರನ್ ಶುರು ಮಾಡಿದ್ದು, ಮಹಾರಾಷ್ಟ್ರದ ಕೋಲ್ಹಾಪುರದ ಮಹಾಲಕ್ಷ್ಮೀ ದೇವಾಲಯಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಸಂತ್ರಸ್ತ ಯುವತಿ ಇಂದು ನ್ಯಾಯಾಧೀಶರ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದು, ಇದರಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದ್ದು, ಕೊಲ್ಹಾಪುರದ ಮಹಾಲಕ್ಷ್ಮೀ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ. …

Read More »

ಏ. 7ರಿಂದ ಸರ್ಕಾರಿ ಬಸ್ ಸಂಚಾರವಿಲ್ಲ; ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಮಾರ್ಚ್ 30; “ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದರೂ ನಾವು ಭಯ ಪಡುವುದಿಲ್ಲ. ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ” ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, “ಏಪ್ರಿಲ್ 1 ರಿಂದ 6ರ ತನಕ ಸಾರಿಗೆ ಸಂಸ್ಥೆಗಳ ನೌಕರರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಸ ಮಾಡಲಿದ್ದಾರೆ” ಎಂದರು.   “ಏಪ್ರಿಲ್ 2ರಂದು …

Read More »