Breaking News
Home / 2021 / ಮಾರ್ಚ್ (page 32)

Monthly Archives: ಮಾರ್ಚ್ 2021

ಪಕ್ಷಕ್ಕೆ ಮುಜುಗರ; ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಕಮಾಂಡ್​ಗೆ ಲಿಖಿತ ದೂರು ನೀಡಲು ಬಿಜೆಪಿ ಶಾಸಕರ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಅಧಿಕೃತ ನಿವಾಸದಲ್ಲಿ ಬಿ.ಎಸ್. ಯಡಿಯೂರಪ್ಪ ಜೊತೆ 40 ಶಾಸಕರು ಇಂದು (ಮಾರ್ಚ್ 22) ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ 6-7 ಸಚಿವರ ಕಾರ್ಯವೈಖರಿ ಬಗ್ಗೆ ದೂರು ನೀಡಿದ್ದಾರೆ. ಸಚಿವರು, ಅಧಿಕಾರಿಗಳನ್ನೊಳಗೊಂಡಂತೆ ಶಾಸಕರ ಜತೆ ಮಾತುಕತೆಯಲ್ಲಿ ಮಾರ್ಚ್ 25ರಂದು ಮತ್ತೊಮ್ಮೆ ಸಭೆ ನಡೆಸುವುದಾಗಿ ಭರವಸೆ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಜೊತೆ ನಡೆದ ಸಭೆಯಲ್ಲಿ ಮುಖ್ಯವಾಗಿ, ಪಕ್ಷಕ್ಕೆ ಮುಜುಗರ ತರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿಕೆ …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿಗೆ ಲಕ್ಷ್ಮಣ್ ಸವದಿ- ಉಮೇಶ್ ಕತ್ತಿ ಪೈಪೋಟಿ

ಬೆಳಗಾವಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ‌ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲಾ ಉಸ್ತುವಾರಿ ಪಟ್ಟಕ್ಕಾಗಿ ಜಟಾಪಟಿ ಶುರುವಾಗಿದೆ. ಬೆಳಗಾವಿಯ ಇಬ್ಬರು ಸಚಿವರಿಂದ ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ದೊಡ್ಡ ಮಟ್ಟದಲ್ಲಿ ಲಾಬಿ ನಡೆದಿದ್ದು, ಬೆಳಗಾವಿ ಜಿಲ್ಲೆಯನ್ನು ತಮ್ಮ ಕಂಟ್ರೋಲ್​ಗೆ ತೆಗೆದುಕೊಳ್ಳಲು ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಉಮೇಶ್ ಕತ್ತಿಯಿಂದ ದೆಹಲಿ ಮಟ್ಟದಲ್ಲೂ ಲಾಬಿ ನಡೆದಿದೆ. ಸಚಿವ ಉಮೇಶ್ ಕತ್ತಿ ಯಡಿಯೂರಪ್ಪ ಮಟ್ಟದಲ್ಲಿ ವರ್ಕೌಟ್ ಮಾಡುತ್ತಿದ್ದರೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೆಹಲಿ …

Read More »

15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್‌ 1ರ ಬಳಿಕ ಸಾಧ್ಯವಾಗುವುದಿಲ್ಲ…?

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿರುವ ಪ್ರಸ್ತಾವನೆಯು ಅಂತಿಮಗೊಂಡರೆ, 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್‌ 1ರ ಬಳಿಕ ಸಾಧ್ಯವಾಗುವುದಿಲ್ಲ. ಸರ್ಕಾರದ ಎಲ್ಲಾ ವಾಹನಗಳಿಗೆ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರೋದ್ಯಮಗಳು, ಮಹಾನಗರ ಪಾಲಿಕೆ ಮತ್ತು ಸ್ವಾಯತ್ತ ಸಂಸ್ಥೆಗಳ ಎಲ್ಲಾ ವಾಹನಗಳಿಗೂ ಇದು ಅನ್ವಯವಾಗಲಿದೆ. ಈ ಕುರಿತು ಸಚಿವಾಲಯವು ಶನಿವಾರ ಟ್ವೀಟ್ ಮಾಡಿದೆ. ಕರಡು ನಿಯಮಗಳ ಕುರಿತು ಪ್ರತಿಕ್ರಿಯೆ, ಸಲಹೆ, …

Read More »

ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಕಣ್ಣಿನ ಮೇಲೆ ಪರಿಣಾಮ ಬೀರುತ್ತಿರುವ ವಿಷಯ ಗಮನಕ್ಕೆ ಬಂದಿದೆ: ಸುರೇಶ್ ಕುಮಾರ್

ಬೆಂಗಳೂರು: ‘ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಕಣ್ಣಿನ ಮೇಲೆ ಪರಿಣಾಮ ಬೀರುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಈ ಬಗ್ಗೆ ಆರೋಗ್ಯ ಸಚಿವರ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ಸಿನ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಖಾಸಗಿ ಶಾಲೆಗಳು ಎಲ್‌ಕೆಜಿ, ಯುಕೆಜಿ ಮಕ್ಕಳಿಗೂ ಆನ್‌ಲೈನ್ ಶಿಕ್ಷಣ ಆರಂಭಿಸಿವೆ. ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಬಗ್ಗೆ …

Read More »

ರಾಜ್ಯದ ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿ : ಶೀಘ್ರದಲ್ಲೇ ಪಿಂಚಣಿ ಸೌಲಭ್ಯ

ಬೆಂಗಳೂರು : ರಾಜ್ಯ ಸರ್ಕಾರವು ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾರೆ.   ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯದಲ್ಲಿರುವ ವಿಶೇಷ ಮಕ್ಕಳ ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ …

Read More »

ಬೆಳಗಾವಿ ಲೋಕಸಭಾ ಉಪ ಚುನಾವಣೆ ಕ್ಷೇತ್ರದಲ್ಲಿ ಒಟ್ಟು 18.07 ಲಕ್ಷ ಮತದಾರರು:

ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ  ನಾಮಪತ್ರ ಸಲ್ಲಿಸಲು ಮಾರ್ಚ್ 30 ಕಡೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದರು. ಲೋಕಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ (ಮಾ.22) ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ನಾಮಪತ್ರಗಳ ಪರಿಶೀಲನೆ ಮಾರ್ಚ್ 31 ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಏಪ್ರಿಲ್ 3 ಕಡೆಯ ದಿನವಾಗಿದೆ. ಏಪ್ರಿಲ್ 17, 2021 ರಂದು ಮತದಾನ ನಡೆಯಲಿದ್ದು, …

Read More »

ಕೂಡ್ಲಿಗಿ:ಪಪಂ ಚುನಾವಣೆ ಮತಯಾಚಿಸಿದ,ಶಾಸಕ ಎನ್.ವೈ.ಗೋಪಾಲಕೃಷ್ಣ

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಶಾಸಕ ಎನ್.ವೈ.ಗೋಪಾಲಕೃಷ್ಣ ರವರು,ಪಪಂನ 1ಮತ್ತು 12ನೇ ವಾರ್ಡ್ ಗಳ ಚುನಾವಣಾ ಪ್ರಯುಕ್ತ.ಅಭ್ಯರ್ಥಿಗಳಾದ ಪ್ರಕಾಶ ನಾಯ್ಕ ಹಾಗೂ ಶ್ರೀಮತಿ ಮಲ್ಲಮ್ಮ ಪರ ಮತಯಾಚನೆ ಮಾಡಿ ಮಾತನಾಡಿದರು,12ನೇವಾರ್ಡ್ ನಲ್ಲಿ ಶ್ರೀಸೊಲ್ಲಮ್ಮ ದೇವಿ ದೇವಸ್ಥಾನದ ಆವರಣದಲ್ಲಿ,ಮತದಾರರನ್ನು ಉದ್ದೇಶಿಸಿ ಮಾತನಾಡಿ ಮತಯಾಚನೆ ಮಾಡಿದರು. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇವೆ.ಪಟ್ಟಣದ ಹಿತಕ್ಕಾಗಿ ಹಾಗೂ ನಾಗರೀಕರ ಸಮಸ್ಥ ಶ್ರೇಯೋಭಿವೃದ್ಧಿಗಾಗಿ, ಬಿ.ಜೆ.ಪಿ ಶ್ರಮಿಸುತ್ತಿದೆ ಕಾರಣ ಬಿಜೆಪಿ ಅಭ್ಯರ್ಥಿಗಳನ್ನ ಆರಿಸಿ ಎಂದರು.ಬಿಜೆಪಿ ಜಿಲ್ಲಾ …

Read More »

ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೆಶದಿಂದ ’ಫೊನ್ ಇನ್ ಕಾರ್ಯಕ್ರಮ’ಕ್ಕೆ  ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಚಾಲನೆ

ಖಾನಾಪುರ –  ಕೊವಿಡ್ -೧೯ ಹಿನ್ನೆಲೆಯಲ್ಲಿ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಜೂನ್ ತಿಂಗಳಲ್ಲಿ ನಡೆಯುತ್ತಿದ್ದು ಖಾನಾಪುರ ತಾಲೂಕಿನಲ್ಲಿ ಕಲಿಯುತ್ತಿರುವ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳು ನಿರ್ಭಯವಾಗಿ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಲು ಸಹಯವಾಗುವ ನಿಟ್ಟಿನಲ್ಲಿ ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೆಶದಿಂದ ’ಫೊನ್ ಇನ್ ಕಾರ್ಯಕ್ರಮ’ಕ್ಕೆ  ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಚಾಲನೆ ನೀಡಿದರು. ಆಯ್ದ ಸಂಪನ್ಮೂಲ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ …

Read More »

ತಾನೂ ಬೆಳಗಾವಿ ಬಿಜೆಪಿ ಟಿಕೆಟ್ ಆಕಾಂಕ್ಷಿ: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ತಾವು ಟಿಕೆಟ್ ಆಕಾಂಕ್ಷಿ ಆಗಿದ್ದು, ತಮಗೆ ಟಿಕೆಟ್ ದೊರೆಯುವ ವಿಶ್ವಾಸವಿದೆ ಎಂದು ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಷಯವಾಗಿ ಹಲವು ನಾಯಕರೊಂದಿಗೆ ಚರ್ಚಿಸಿದ್ದೇನೆ. ಸಕಾರಾತ್ಮಕ ಸ್ಪಂದನೆ ವ್ಯಕ್ತವಾಗಿದೆ. ನನಗೀಗ 66 ವರ್ಷ, ಇದು ಕೊನೆಯ ಯತ್ನ. ದೊರೆತರೆ ಸರಿ ಇಲ್ಲವಾದರೆ ಇಲ್ಲ. ಪಕ್ಷೇತರನಾಗಿ ಸ್ಪರ್ಧಿಸುವುದಿಲ್ಲ ಎಂದರು. …

Read More »

ಲೋಕಸಭಾ ಉಪಚುನಾವಣೆ ಹಿನ್ನೆಲೆ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು – ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರನ್ನು ವರ್ಗಾವಣೆ ಮಾಡಲಾಗಿದೆ. ಡಾ.ಕೆ.ಹರೀಶ್ ಕುಮಾರ ಬೆಳಗಾವಿಯ ನೂತನ ಜಿಲ್ಲಾಧಿಕಾರಿಗಳಾಗಿದ್ದಾರೆ. ಹರೀಶ್ ಕುಮಾರ ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಆಯುಕ್ತರಾಗಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಕಾರವಾರ ಜಿಲ್ಲಾಧಿಕಾರಿಗಳಾಗಿಯೂ ಕೆಲಸಮಾಡಿದ್ದಾರೆ     ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಎಂ.ಜಿ.ಹಿರೇಮಠ ಬೆಳಗಾವಿ ಜಿಲ್ಲೆಯವರಾಗಿರುವುದರಿಂದ ಅವರನ್ನು ಚುನಾವಣೆ ಸಂದರ್ಭದಲ್ಲಿ ವರ್ಗಾಯಿಸಲಾಗಿದೆ.

Read More »