Breaking News
Home / 2021 / ಮಾರ್ಚ್ (page 39)

Monthly Archives: ಮಾರ್ಚ್ 2021

ಶೀಘ್ರವೇ ಸಿಎಂ ಬದಲಾವಣೆ ಖಚಿತ : ಶಾಸಕ ಯತ್ನಾಳ್ ಹೊಸ ಬಾಂಬ್

ವಿಜಯಪುರ : ಪಂಚರಾಜ್ಯಗಳ ಚುನಾವಣೆ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಸಿಎಂ ಇಟ್ಟುಕೊಂಡು ಮುಂದಿನ ಚುನಾವಣೆಗೆ ಹೋದ್ರೆ ಏನಂತ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗೂ ಗೊತ್ತಿದೆ. ಬಿಜೆಪಿ ಉಳಿಯಬೇಕಾದರೆ ಈ ಸಿಎಂ ಬದಲಾವಣೆ ಅವಶ್ಯಕ ಎಂದು ಹೇಳುವ ಮೂಲಕ ಮತ್ತೊಮ್ಮೆ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.   ಸಿಎಂ ಬಿ.ಎಸ್. …

Read More »

ಬೆಳಗಾವಿ ಲೋಕಸಭಾ ಉಪಚುನಾವಣೆ : ಕೈ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್

ಮೈಸೂರು : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಬಹುತೇಕ ಫೈನಲ್ ಆಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸತೀಶ್ ಜಾರಕಿಹೊಳಿ ಹೆಸರನ್ನು ಶಿಫಾರಸ್ಸು ಮಾಡಿದ್ದೇವೆ. ಬಹುತೇಕ ಸತೀಶ್ ಜಾರಕಿಹೊಳಿಗೆ ಟಿಕೆಟ್ ಫೈನಲ್ ಆಗಲಿದೆ ಎಂದಿದ್ದಾರೆ.   ಉಪಚುನಾವಣೆಗಳಲ್ಲಿ ನಾವೇ ಗೆಲ್ಲುತ್ತೀವಿ ಎಂಬ ಸಿಎಂ ಸವಾಲು ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಯಡಿಯೂರಪ್ಪ ಇನ್ನೇನು ಸೋಲುತ್ತೀನಿ …

Read More »

ಮಸ್ಕಿಯಲ್ಲಿ ರಾಜ್ಯ ಬಿಜೆಪಿಯ ಅತಿರಥರ ಭರ್ಜರಿ ಪ್ರಚಾರ; ಕೊರೋನಾ ನಿಯಮಗಳಿಗೂ ಡೋಂಟ್ ಕೇರ್

ರಾಯಚೂರು: ರಾಜ್ಯದಲ್ಲಿ ಬೈ ಎಲೆಕ್ಷನ್ ಘೋಷಣೆ ಆಗ್ತಿದ್ದಂತೆ ಅಲರ್ಟ್ ಆಗಿರುವ ಬಿಜೆಪಿ ನಿನ್ನೆ ಮಸ್ಕಿ ಕ್ಷೇತ್ರದಲ್ಲಿ ಪ್ರತಾಪ್ ಗೌಡ ಪಾಟೀಲ್ ಪರವಾಗಿ ಬೃಹತ್ ಚುನಾವಣಾ ಸಮಾವೇಶ ನಡೆಸಿತು. ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ 30ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾದರು. ಈ ಸಂದರ್ಭದಲ್ಲಿ ತಾವೇ ರೂಪಿಸಿದ ಕೊರೋನಾ ನಿಯಮಾವಳಿಗಳ ಉಲ್ಲಂಘನೆ ಮಾಡಿದ್ದರೆ, ಇನ್ನೊಂದು ಕಡೆ ಜಾತಿವಾರು ಮತ ಸಮೀಕರಣ ಮಾಡುವ ಯತ್ನ ನಡೆಯಿತು. ರಾಜ್ಯದಲ್ಲಿ ಎರಡು ವಿಧಾನಸಭೆ …

Read More »

ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ : ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ ಕಣಕ್ಕೆ?

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.   ಬಸವಕಲ್ಯಾಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ಶಾಸಕ ಬಿ. ನಾರಾಯಣ ರಾವ್ ಅವರ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಈ ಉಪಚುನಾವಣೆಗೆ ಬಿಜೆಪಿ ಬಿ.ವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಪಕ್ಷದ ಪ್ರಮುಖ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. …

Read More »

ಸಿಡಿ ಪ್ರಕರಣ: ಯುವತಿ ಕುಟುಂಬಸ್ಥರು ವಾಸವಿದ್ದ ಬಾಡಿಗೆ ಮನೆಗೆ ತೆರಳಿ ಮಾಹಿತಿ ಪಡೆದ ಎಸ್‌ಐಟಿ ತಂಡ

ಬೆಳಗಾವಿ, ಮಾರ್ಚ್ 20: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಎಸ್‌ಐಟಿ ತಂಡ ಬೆಳಗಾವಿಗೆ ಆಗಮಿಸಿ, ಯುವತಿ ಕುಟುಂಬಸ್ಥರು ವಾಸವಿದ್ದ ಬಾಡಿಗೆ ಮನೆಗೆ ತೆರಳಿ ಮಾಹಿತಿ ಪಡೆದರು. ಬಾಡಿಗೆ ಮನೆ ಮಾಲೀಕರಿಂದ ಯುವತಿ ಕುಟುಂಬದ ಬಗ್ಗೆ ಎಸ್‌ಐಟಿ ಅಧಿಕಾರಿ ಮಾಹಿತಿ ಪಡೆದಿದ್ದು, ಯುವತಿಯ ಕುಟುಂಬದ ಬಗ್ಗೆ ಗೊತ್ತಿರುವ ಮಾಹಿತಿಯನ್ನು ಮನೆ ಮಾಲೀಕರು ಹೇಳಿದ್ದಾರೆ ಎನ್ನಲಾಗಿದೆ. ಮಗಳು ಕಿಡ್ನಾಪ್ ಆಗಿದ್ದಾಳೆಂದು ಯುವತಿಯ ತಂದೆ ದೂರು ನೀಡಿದ್ದರು. ಮಾರ್ಚ್ …

Read More »

ರಮೇಶ್ ಜಾರಕಿಹೊಳಿ ಸಿಡಿ ಕೇಸ್ : ನಿರೀಕ್ಷಣಾ ಜಾಮೀನು ಕೋರಿ ಶಂಕಿತ ‘ಲಕ್ಷ್ಮೀಪತಿ’ ಅರ್ಜಿ

ಬೆಂಗಳೂರು : ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದಂತ ರಾಸಲೀಲೆ ಸಿಡಿ ಪ್ರಕರಣದಲ್ಲಿ, ದಿನೇಶ್ ಕಲ್ಲಹಳ್ಳಿಗೆ ಸಿಡಿ ತಲುಪಿಸಿದ್ದಂತ ಆರೋಪಿಯಾಗಿ ಲಕ್ಷ್ಮೀಪತಿ ಎಂದು ತಿಳಿದು ಬಂದಿತ್ತು. ಇಂತಹ ಪ್ರಕರಣದ ತನಿಖೆಯನ್ನು ಎಸ್‌ಐಟಿ ನಡೆಸುತ್ತಿರುವುದಾಗೇ, ಇದೀಗ ಆರೋಪಿ ಲಕ್ಷ್ಮೀಪತಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.   ದಿನದಿಂದ ದಿನಕ್ಕೆ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ತಿರುವು ಪಡೆಯುತ್ತಿದೆ. ಒಂದೆಡೆ ಎಸ್‌ಐಟಿ ಆರೋಪಿಗಳ ಪತ್ತೆಗೆ ಗಾಳ ಹಾಕುತ್ತಿದ್ದರೇ, …

Read More »

ಹೊಸ ದಾಖಲೆ ಬರೆದ ‘ಕಂಬಳ ವೀರ ಶ್ರೀನಿವಾಸ ಗೌಡ’ : ಏನದು ಗೊತ್ತಾ.?

ಮಂಗಳೂರು : ಈಗಾಗಲೇ ಉಸೇನ್ ಬೋಲ್ಟ್ ಓಡಿದಂತ ಮಾದರಿಯಲ್ಲಿಯೇ, ಕಂಬಳ ಅಂಗಳದಲ್ಲಿ ಓದಿ, ಕಂಬಳ ವೀರನೆಂದೇ ಖ್ಯಾತಿಯಾಗಿರುವಂತ, ಶ್ರೀನಿವಾಸ ಗೌಡ, ಇಂದು ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಅದೇನೆಂದ್ರೇ.. 8.96 ಸೆಕೆಂಡ್ ನಲ್ಲಿ 100 ಮೀಟರ್ ಕಂಬಳ ಕೆರೆಯಲ್ಲಿ ಓಡುವ ಮೂಲಕ, ಈ ಹಿಂದಿನ ಎಲ್ಲಾ ದಾಖಲೆಗಳನ್ನು ಅಳಿಸಿ ಹಾಕಿದ್ದಾರೆ. ‘ ಇಂದು ಬೆಳ್ತಂಗಡಿ ತಾಲೂಕಿನ ವೇಣೂರು-ಪೆರ್ಮುಡದಲ್ಲಿ ಸೂರ್ಯ-ಚಂದ್ರ ಜೋಡುಕೆರೆ ಕಂಬಳ ನಡೆಯಿತು. ಇಂತಹ ಕಂಬಳದಲ್ಲಿ ಭಾಗವಹಿಸಿದಂತ ಶ್ರೀನಿವಾಸಗೌಡ, 125 …

Read More »

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ: B.S.Y.

ರಾಯಚೂರು: ಉಪಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಶಗಳು ಬಿರುಸಿನ ಪ್ರಚಾರ ಆರಂಭಿಸಿವೆ. ಈ ನಡುವೆ ರಮೇಶ್ ಜಾರಕಿಹೊಳಿ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಶೀಘ್ರದಲ್ಲಿ ಅಭ್ಯರ್ಥಿ ಘೋಷಿಸಲಾಗುತ್ತದೆ. ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಖಚಿತ ಎಂದರು. ಸರ್ಕಾರದ ಯೋಜನೆಗಳೇ ಬಿಜೆಪಿ ಗೆಲುವಿನ ಅಸ್ತ್ರವಾಗಲಿದೆ. ಅಭಿವೃದ್ಧಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ …

Read More »

ರಾಗಿ ಕಾಳು ಎಣಿಸಿ ದಾಖಲೆ ಸೃಷ್ಟಿಸಿದ ಶಿವಮೊಗ್ಗ ಯುವಕ

ಶಿವಮೊಗ್ಗ: ಸಾಮಾನ್ಯವಾಗಿ ಒಂದು ಕೆ.ಜಿ ರಾಗಿಯಲ್ಲಿ ಎಷ್ಟು ಕಾಳುಗಳು ಇರುತ್ತವೆ ಎಂದು ಕೇಳಿದರೆ, ನಿನಗೇನು ಹುಚ್ಚಾ ಎಂದು ಪ್ರಶ್ನೆ ಮಾಡುವ ಮಂದಿಯೇ ಹೆಚ್ಚು. ನಗರದ ಯುವಕ ಒಂದು ಕೆ.ಜಿ. ರಾಗಿಯಲ್ಲಿ ಎಷ್ಟು ಕಾಳುಗಳಿವೆ ಎಂದು ಲೆಕ್ಕ ಹಾಕುವ ಮೂಲಕ ಇಂಡಿಯನ್ ವರ್ಲ್ಡ್‌ ರೆಕಾರ್ಡ್‌ನಲ್ಲಿ ದಾಖಲೆ ಸೃಷ್ಟಿಸಿದ್ದಾರೆ. ಶಿವಮೊಗ್ಗದ ಹೊಯ್ಸಳ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ. ವಿಭಾಗದ ವಿದ್ಯಾರ್ಥಿ ಸಚ್ಚಿನ್ ಈ ಸಾಧನೆ ಮಾಡಿದ ಯುವಕ. ಒಂದು ಕೆ.ಜಿ. ರಾಗಿಯಲ್ಲಿ 3,76,083 …

Read More »

ಶಿವಸೇನಾ ಪುಂಡಾಟಿಕೆ ನಿಲ್ಲಿಸಲು ಕಠಿಣ ಕ್ರಮ: ಕಂದಾಯ ಸಚಿವ ಅಶೋಕ್

ಬೆಳಗಾವಿ: ‘ರಾಜ್ಯದಲ್ಲಿ ಶಿವಸೇನಾದವರ ಪುಂಡಾಟಿಕೆ ನಿಲ್ಲಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಕಂದಾಯ ಸಚಿವ ಆರ್. ಅಶೋಕ್‌ ತಿಳಿಸಿದರು. ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಶಿವಸೇನಾದವರು ನಿರಂತರವಾಗಿ ಪುಂಡಾಟಿಕೆ ನಡೆಸುತ್ತಿರುವುದನ್ನು ಗಮನಿಸಿದ್ದೇವೆ. ಕಠಿಣ ಕ್ರಮದ ಮೂಲಕ ಅದನ್ನು ನಿಲ್ಲಿಸಲೇಬೇಕಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗೆ ಸೂಚನೆ ಕೊಡಲಾಗಿದೆ. ಅಂಥವರನ್ನು ಮಟ್ಟ ಹಾಕಬೇಕು. ಆಗ ಮಾತ್ರ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ’ ಎಂದರು. ‘ಬೆಳಗಾವಿಯಲ್ಲಿ ಬಹಳ …

Read More »