Breaking News
Home / 2021 / ಮಾರ್ಚ್ (page 41)

Monthly Archives: ಮಾರ್ಚ್ 2021

ಬೆಳಗಾವಿ ಗಡಿ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ: ಆರ್.ಅಶೋಕ್

ಬೆಳಗಾವಿ: ಬೆಳಗಾವಿ ಗಡಿ ವಿಷಯದಲ್ಲಿ ಕರ್ನಾಟಕ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ. ಈ ನೆಲ, ಈ ಜಲವನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಣೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ರಕ್ಷಣೆ ಮಾಡುತ್ತದೆ. ಶಿವಸೇನೆ ಪುಂಡಾಟಿಕೆ ನಿಲ್ಲಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಶಿವಸೇನೆ ಪುಂಡಾಟಿಕೆ ನಿರಂತರವಾಗಿ ನಡೆಯುತ್ತಿದೆ. ಕಠಿಣ ಕ್ರಮ ಜರುಗಿಸಿ ನಾವು ನಿಲ್ಲಿಸಬೇಕಿದೆ …

Read More »

ನಂಗೇನೂ ಗೊತ್ತಿಲ್ಲ, ಸಿಡಿ ನಂದಲ್ಲ, ಯುವತಿ ಯಾರು ಅಂತಾನೂ ಗೊತ್ತಿಲ್ಲ, ನೀವೇ ತನಿಖೆ ಮಾಡಿ: ಎಸ್​ಐಟಿ ತನಿಖೆಗೆ ರಮೇಶ್​ ಜಾರಕಿಹೊಳಿ ಉತ್ತರ

ಬೆಂಗಳೂರು: ರಾಜ್ಯದಲ್ಲಿ ಬಹುದೊಡ್ಡ ಸಂಚಲನಕ್ಕೆ ಕಾರಣವಾಗಿರುವ ಅಶ್ಲೀಲ ಸಿಡಿ ಪ್ರಕರಣ ದಿನೇ ದಿನೇ ಮಹತ್ವದ ತಿರುವು ಪಡೆದುಕೊಳ್ಳುತ್ತಿದ್ದು, ಎಸ್​ಐಟಿ ಅಧಿಕಾರಿಗಳು ಸಿಡಿ ಬಗ್ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಡಿ ಹಾಗೂ ಆಡಿಯೋ ಕ್ಲಿಪ್​ ಜೊತೆಗೆ ಕೆಲ ಸಿಸಿಟಿವಿ ದೃಶ್ಯಾವಳಿಗಳ ಬಗ್ಗೆಯೂ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಸತತ ನಾಲ್ಕು ಗಂಟೆ ವಿಚಾರಣೆ ನಡೆಸಿ ದಾಖಲೆಗಳನ್ನು ಮುಂದಿಟ್ಟು ಮಾಜಿ ಸಚಿವರಿಂದ …

Read More »

ಥಿಯೇಟರ್ ಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಮುಂದುವರಿಕೆ :ಸಿನಿಮಾ ಮಂದಿಗೆ ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು : ಕೊರೊನಾ ಹೆಚ್ಚಳದಿಂದ ಸಿನಿಮಾ ಮಂದಿರಗಳಲ್ಲಿ ಶೇ.50 ರಷ್ಟು ಆಸನ ಭರ್ತಿಗೆ ಮಾತ್ರ ಸರ್ಕಾರ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ಭೀತಿಗೆ ಸಿಲುಕಿದ್ದ ಸಿನಿಮಾ ಉದ್ಯಮಕ್ಕೆ ಸಿಎಂ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಥಿಯೇಟರ್​ಗಳಲ್ಲಿ ಪೂರ್ಣ ಆಸನ ಭರ್ತಿಗೆ ಇರುವ ಅವಕಾಶದಲ್ಲಿ ಬದಲಾವಣೆ ಇಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು …

Read More »

ಸಿಎಂ ಭೇಟಿ ಮಾಡಿದ ಜಾರಕಿಹೊಳಿ ಸಹೋದರರು..

ಬೆಂಗಳೂರು, ಮಾ.20- ಸಿಡಿ ವಿವಾದದಿಂದ ತೀವ್ರ ಮುಜುಗರಕ್ಕೆ ಸಿಲುಕಿರುವ ಜಾರಕಿಹೊಳಿ ಸಹೋದರರು ನಿನ್ನೆ ತಡರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಾವೇರಿಯಲ್ಲಿ ತಡರಾತ್ರಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ತೆರಳಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಿಎಂ ಜತೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಸಿದಂತೆ ಸಿಎಂ ಹಾಗೂ ಗೃಹ ಸಚಿವರಿಗೆ ಎಲ್ಲ ಮಾಹಿತಿಯನ್ನು ನೀಡಿರುವ ಜಾರಕಿಹೊಳಿ ಸಹೋದರರು ಕಾನೂನಾತ್ಮಕವಾಗಿಯೇ …

Read More »

ಸಿದ್ದರಾಮಯ್ಯ ವಿರುದ್ಧ ಮತ್ತೆ ಭುಗಿಲೆದ್ದ ಅಸಮಾಧಾನ.. ತವರು ಜಿಲ್ಲೆಯಲ್ಲಿ ತನ್ವೀರ್ ಸೇಠ್ ಬೆಂಬಲಿಗರ ಸಿಟ್ಟು..!

ಮೈಸೂರು: ಅದ್ಯಾಕೋ ಮೈಸೂರು ಮೇಯರ್ ಆಯ್ಕೆ ನಂತ್ರ ಕಾಂಗ್ರೆಸ್‌ನಲ್ಲಿ ಆರಂಭವಾದ ಒಳಬೇಗುದಿ ಆರುವ ಲಕ್ಷಣಗಳೇ ಕಾಣುತ್ತಿಲ್ಲ. ಎಲ್ಲವೂ ಸರಿ ಆಯ್ತು ಅನ್ನೋ ವೇಳೆಗೆ ತನ್ವೀರ್‌ ಬೆಂಬಲಿಗರ ಅಮಾನತು ಮತ್ತೆ ಮೈಸೂರು ಕಾಂಗ್ರೆಸ್‌ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಮೈಸೂರು ಮೇಯರ್‌ ಸ್ಥಾನ ಬಿಟ್ಟುಕೊಟ್ಟ ನಂತ್ರ ಆದ ಬೆಳವಣಿಗೆಯಲ್ಲಿ ತನ್ವೀರ್‌ ಸೇಠ್ ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿತ್ತು. ಇದಕ್ಕೆ ತುಪ್ಪ ಸುರಿಯುವಂತೆ ಸಿದ್ದು ಆಪ್ತ ಶಾಸಕ ರಮೇಶ್‌ಕುಮಾರ್‌ ಎನ್. ಆರ್ …

Read More »

ಇಂದು ಮಸ್ಕಿಯಲ್ಲಿ ಸಿಎಂ ಬಿಎಸ್​ವೈ ಸಮಾವೇಶ-ಸಂಭಾವ್ಯ ಅಭ್ಯರ್ಥಿಗಳನ್ನೂ ವರಿಷ್ಠರಿಗೆ ಶಿಫಾರಸ್ಸು ಮಾಡುವ ನಿರೀಕ್ಷೆ|

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉಪ ಚುನಾವಣೆಗಳ ಕಹಳೆ ಮೊಳಗಿದೆ. ಈಗಾಗಲೇ ಮಸ್ಕಿ ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಅಂತಿಮವಾಗಿದ್ದು, ಬಿರುಸಿನ ಪ್ರಚಾರ ನಡೆದಿದೆ. ಉಪಚುನಾವಣೆಯಲ್ಲಿ ಗೆಲುವಿಗಾಗಿ ಉಭಯ ಪಕ್ಷಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿವೆ. ಇಂದು ರಾಯಚೂರಿನ ಮಸ್ಕಿಯಲ್ಲಿ ಬೃಹತ್ ಸಮಾವೇಶ ನಡೆಸಲಿದೆ. ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಭಾಗವಹಿಸಿ ಪ್ರತಾಪಗೌಡ ಪಾಟೀಲ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಇತ್ತ ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಬದಲಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಚಿಂತನೆ?

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಿಡಿ ಪ್ರಕರಣದ ಬಳಿಕ ರಾಜ್ಯ ಸರ್ಕಾರಕ್ಕೆ ಹೊಸ ಚೈತನ್ಯ ತುಂಬಲು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ‘ ಬೆಳಗಾವಿ ಲೋಕಸಭೆ, ಮಸ್ಕಿ, ವಿಧಾನಸಭಾ ಸ್ಥಾನಗಳಿಗೆ ಈಗಾಗಲೇ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅದಕ್ಕೂ ಮೊದಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.   ಸಿಡಿ ಪ್ರಕರಣದ …

Read More »

ರಾಯಚೂರು ವಿಮಾನ ನಿಲ್ದಾಣ: ಎಎಐ ತಂಡದಿಂದ ಸ್ಥಳ ಪರಿಶೀಲನೆ

ರಾಯಚೂರು: ನಗರ ಹೊರವಲಯದಲ್ಲಿರುವ ಯರಮರಸ್ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿಮಾನ ನಿಲ್ದಾಣಕ್ಕೆ ಅನುಮತಿ ದೊರೆಯುವ ಸಾಧ್ಯತೆಗಳ ಬಗ್ಗೆ ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಂಡವು ಶುಕ್ರವಾರ ಭೇಟಿ ನೀಡಿದ ಬಳಿಕ ಆಶಾಭಾವ ವ್ಯಕ್ತಪಡಿಸಿತು. ಆನಂತರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿತು. ರಾಯಚೂರು ವಿಮಾನ ನಿಲ್ದಾಣಕ್ಕೆ ಮೀಸಲಿಟ್ಟಿರುವ 400 ಎಕರೆ ಪ್ರದೇಶ ಸೂಕ್ತವೂ, ಉತ್ತಮವೂ ಆಗಿದೆ, ಅದರೊಂದಿಗೆ ಹೆಚ್ಚುವರಿ ಭೂಮಿಯೂ ಬೇಕಾಗಬಹುದು ಎಂದು ನವದೆಹಲಿಯ ವಿಮಾನಯಾನ …

Read More »

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ರೆ, ಮುಲಾಜಿಲ್ಲದೇ ಕ್ರಮ ಕೈಗೊಳ್ತೇವೆ: ಜಗದೀಶ್ ಶೆಟ್ಟರ್‌ ಎಚ್ಚರಿಕೆ

ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆ ಮಾಡುವ ವೇಳೆ ಸ್ಥಳೀಯರಿಗೆ ಉದ್ಯೋಗ ನೀಡದೆ ನಿಯಮ ಉಲ್ಲಂಘಿಸಿದ್ರೆ, ಅಂತಹ ಉದ್ಯಮಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕೈಗಾರಿಕೆಗಳಿಗೆ ಜಮೀನು ನೀಡುವ ವೇಳೆಯೇ ಒಪ್ಪಂದ ಮಾಡಿಕೊಳ್ಳಲಾಗುತ್ತೆ. ಜಮೀನು ನೀಡಿದ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕು. ಕಾರಣವೊಡ್ಡಿ ಉದ್ಯೋಗ ನೀಡದಿದ್ರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. …

Read More »

ಸರ್ಕಾರಿ ಬಸ್ ಡಿಕ್ಕಿ: ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್-ಕ್ಯಾಷಿಯರ್ ಇಬ್ಬರೂ ಸ್ಥಳದಲ್ಲೇ ದುರ್ಮರಣ

ವಿಜಯಪುರ: ರಾಜ್ಯ ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಡಿ.ಎಸ್.ಬಿರಾದಾರ್ ಮತ್ತು ಕ್ಯಾಷಿಯರ್ ಚೈತನ್ಯ ಕುಮಾರ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಖೇಡಗಿ ಗ್ರಾಮದಲ್ಲಿರುವ ಕೆವಿಜಿ ಬ್ಯಾಂಕ್ ಶಾಖೆಯಲ್ಲಿ ಇವರಿಬ್ಬರೂ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರಿ ಬಸ್ ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂಡಿ …

Read More »